ಇಂದು ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೋಲಾರ ಕ್ಷೇತ್ರದ ಟಿಕೆಟ್ ಹಂಚಿಕೆ ಸಂಬಂಧ ಸಭೆ ನಡೆಸಲಿದ್ದು ಸಮಸ್ಯೆಗೆ ತೆರೆ ಎಳೆಯುವ ಸಾಧ್ಯತೆಗಳಿವೆ. ಸಭೆಯಲ್ಲಿ ಕೋಲಾರ ಜಿಲ್ಲೆಯ ಕಾಂಗ್ರೆಸ್ ನಾಯಕರು, ಶಾಸಕರು, ಎಂಎಲ್ ಸಿಗಳು, ಡಿಸಿಎಂ ಡಿ ಕೆ ಶಿವಕುಮಾರ್ ಭಾಗವಹಿಸಲಿದ್ದಾರೆ.

ಇನ್ನು ಇದೇ ವಿಚಾರವಾಗಿ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್, ಕೋಲಾರದಲ್ಲಿ ಎಲ್ಲಾ ನಾಯಕರು ಒಟ್ಟಾಗಿ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಕೆಲಸ ಮಾಡಲಿದ್ದಾರೆ. ಯಾರ ವೈಯಕ್ತಿಕ ಪ್ರತಿಷ್ಠೆಗೂ ಪಕ್ಷದಲ್ಲಿ ಅವಕಾಶ ನೀಡುವುದಿಲ್ಲ ಎಂದು ಹೇಳಿದರು. ಯಾರೂ ರಾಜೀನಾಮೆ ನೀಡಲ್ಲ. ಟಿಕೆಟ್ ವಿಚಾರವಾಗಿ ಒತ್ತಡ ಇದೆ. ಪಕ್ಷ ಇದುವರೆಗೂ ಯಾರಿಗೂ ಟಿಕೆಟ್ ಘೋಷಣೆ ಮಾಡಿಲ್ಲ. ಇಂದು ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಚರ್ಚೆ ಮಾಡಲಾಗುವುದು ಎಂದು ತಿಳಿಸಿದರು.