ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವವನ್ನು ಇಡೀ ದೇಶವೇ ಮೆಚ್ಚುತ್ತಿದೆ. ದೇಶದಾದ್ಯಂತ ಮೋದಿ ಅವರ ಪರ ವಾತಾವರಣ ನಿರ್ಮಾಣವಾಗಿದೆ. 400ಕ್ಕೂ ಹೆಚ್ಚು ಸ್ಥಾನಗಳನ್ನು ಎನ್ಡಿಎ ಪಡೆಯಬೇಕೆಂಬ ಸಂಕಲ್ಪ ಮೋದಿಯವರದು. ಅದು ಜನಸಾಮಾನ್ಯರ ಅಭಿಪ್ರಾಯ ಕೂಡ ಆಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಇಂದು ಮೇರಾ ಬೂತ್ ಸಬ್ ಸೇ ಮಜ್ ಬೂತ್ ಕಾರ್ಯಕ್ರಮವನ್ನು ನರೇಂದ್ರ ಮೋದಿ, App ನಲ್ಲಿ ವೀಕ್ಷಣೆ ಮಾಡಿದರು.


