• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, April 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಡಾ.ರಾಜ್ ಕುಮಾರ್ ಸಮಾಧಿ ವಿವಾದ: “ಕ್ಷಮೆ ಕೇಳಿದ ಮಾತ್ರಕ್ಕೆ ನನ್ನ ಹೇಳಿಕೆ ಸುಳ್ಳಲ್ಲ”; ನಟ ಚೇತನ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 26, 2026 - 4:04 pm
in Flash News, ಸಿನಿಮಾ
0 0
0
Untitled design 2026 04 26T155746.606

ಬೆಂಗಳೂರು: ಕನ್ನಡ ಚಿತ್ರರಂಗದ ನಟ ಡಾ. ರಾಜ್ ಕುಮಾರ್ ಅವರ ಸಮಾಧಿ ಸ್ಮಾರಕಕ್ಕಾಗಿ ರಾಜ್ಯ ಸರ್ಕಾರ ಎರಡೂವರೆ ಎಕರೆ ಜಾಗ ನೀಡಿರುವ ವಿಚಾರಕ್ಕೆ ನಟ ಚೇತನ್ ಅಹಿಂಸಾ ಅವರು ಆಕ್ಷೇಪ ವ್ಯಕ್ತಪಡಿಸಿದ್ದು, ರಾಜ್ಯಾದ್ಯಂತ ತೀವ್ರ ವಿವಾದಕ್ಕೆ ಕಾರಣವಾಗಿದೆ. ಚೇತನ್ ಅವರ ಹೇಳಿಕೆಗಳನ್ನು ಪ್ರತಿಭಟಿಸಿ ರಾಜ್ ಅಭಿಮಾನಿಗಳು ಮತ್ತು ಕನ್ನಡಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಈ ನಡುವೆ, ತಮ್ಮ ಹೇಳಿಕೆಗೆ ಅವರು ಇನ್ನೂ ಬದ್ಧರಾಗಿದ್ದು, ತಮ್ಮ ಮೇಲೆ “ದಬ್ಬಾಳಿಕೆ” ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಚೇತನ್ ಅಹಿಂಸಾ ಸ್ಪಷ್ಟನೆ
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ನಟ ಚೇತನ್ ಅಹಿಂಸಾ, ತಮ್ಮ ಹಿಂದಿನ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಅವರು ಮಾತನಾಡಿ, “ನನ್ನ ಹೇಳಿಕೆಗೆ ನಾನು ಈಗಲೂ ಬದ್ಧನಾಗಿದ್ದೇನೆ. ನಾನು ಹೇಳಿದ ವಿಚಾರದಲ್ಲಿ ಸತ್ಯವಿದೆ. ಆದರೆ ನನ್ನ ಮೇಲೆ ದಬ್ಬಾಳಿಕೆ ನಡೆಸುವುದನ್ನು ನಾನು ಒಪ್ಪುವುದಿಲ್ಲ. ಯಾರ ಭಾವನೆಗೂ ಧಕ್ಕೆ ತರುವ ಉದ್ದೇಶದಿಂದ ನಾನು ಹೇಳಿಕೆ ನೀಡಿಲ್ಲ. ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ. ಆದರೆ ವಿಷಾದ ವ್ಯಕ್ತಪಡಿಸಿದ ಮಾತ್ರಕ್ಕೆ ನಾನು ಹೇಳಿದ ವಿಚಾರ ಸುಳ್ಳಾಗಲ್ಲ“ ಎಂದು ಕಿಡಿಕಾರಿದ್ದಾರೆ.

RelatedPosts

IPL 2026: ಎಂಎಸ್‌ ಧೋನಿ, ಸುರೇಶ್ ರೈನಾ ದಾಖಲೆ ಮುರಿದ ಸಂಜು ಸ್ಯಾಮ್ಸನ್

ಯಾವಾಗ ಏನು ಆಗಬೇಕೋ ಆಗುತ್ತೆ, ಪಕ್ಷದ ಮೇಲೆ ವಿಶ್ವಾಸವಿದೆ: ಡಿ.ಕೆ. ಶಿವಕುಮಾರ್

ಆರ್ಕೆಸ್ಟ್ರಾ ಮಿಮಿಕ್ರಿ To ಮೆಗಾ ಸ್ಟಾರ್ ಗಣೇಶ್ ಸಕ್ಸಸ್ ಸ್ಟೋರಿ..!

ನೇಟಿವಿಟಿ ಅಧಿಪತಿ ಗಣೇಶ್, ಮಣ್ಣಿನ ಕಥೆಗಳಿಗೆ ಮೊದಲು ಮಣೆ

ADVERTISEMENT
ADVERTISEMENT

ಕ್ಷಮೆ ಯಾಚಿಸುವುದಿಲ್ಲ, ನಿಲುವು ಸ್ಪಷ್ಟ
ರಾಜ್ ಅಭಿಮಾನಿಗಳು ಮತ್ತು ಕನ್ನಡಪರ ಹೋರಾಟಗಾರರು ತಮ್ಮ ಹೇಳಿಕೆಗೆ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ ಹಿನ್ನೆಲೆ, ಚೇತನ್ ಅವರು ತಮ್ಮ ನಿಲುವನ್ನು ಮತ್ತಷ್ಟು ಸ್ಪಷ್ಟಪಡಿಸಿದ್ದಾರೆ. “ನಾನು ವಿಷಾದ ವ್ಯಕ್ತಪಡಿಸಿದ್ದೇನೆ, ಅಷ್ಟೇ. ಆದರೆ ನಾನು ಹೇಳಿದ್ದು ಸುಳ್ಳಲ್ಲ. ಈಗಲೂ ನಾನು ನನ್ನ ಹೇಳಿಕೆಗೆ ಬದ್ಧನಾಗಿದ್ದೇನೆ. ಒಂದು ವೇಳೆ ನನ್ನ ಹೇಳಿಕೆಯಿಂದ ಧಕ್ಕೆ ತಂದಿದ್ದರೆ ಕಾನೂನಿನ ಪ್ರಕಾರ ಕ್ರಮ ತೆಗೆದುಕೊಳ್ಳಿ. ಅದನ್ನು ಎದುರಿಸಲು ನಾನು ಸಿದ್ಧ“ ಎಂದು ಅವರು ಸವಾಲೆಸೆದಿದ್ದಾರೆ.

“ಅಣ್ಣಾವ್ರು ಬೇಡ ಅನ್ನುತ್ತಿದ್ದರು”
ಚೇತನ್ ಅಹಿಂಸಾ ಅವರು ಡಾ. ರಾಜ್ ಕುಮಾರ್ ಅವರ ವ್ಯಕ್ತಿತ್ವವನ್ನು ಮೆಚ್ಚುಗೆಯಿಂದ ನೆನೆಸಿಕೊಂಡರು. ಅವರು ಹೇಳಿದರು, “ಅಣ್ಣಾವ್ರು ಬದುಕಿದ್ದಾಗ ಎರಡೂವರೆ ಎಕರೆ ಜಾಗವನ್ನು ನಿಮ್ಮ ಸ್ಮಾರಕಕ್ಕೆ ನೀಡುತ್ತೇವೆ ಎಂದಿದ್ದರೆ, ಅವರೇ ಬೇಡ ಎನ್ನುತ್ತಿದ್ದರು. ಅಂತಹ ಮೇರು ವ್ಯಕ್ತಿ ಅವರು. ಅವರಿಗೆ ಸ್ಟಾರ್ ಸಂಸ್ಕೃತಿ ಇಷ್ಟವಿರಲಿಲ್ಲ. ನಾನು ಪ್ರಚಾರಕ್ಕೋಸ್ಕರ ಈ ರೀತಿ ಹೇಳಿಲ್ಲ. ಇದು ವಿಚಾರಕ್ಕೋಸ್ಕರ ಮಾತ್ರ.” ಎಂದಿದ್ದಾರೆ. 

ಸ್ಟಾರ್ ಸಂಸ್ಕೃತಿ ವಿರೋಧಿ ಚೇತನ್
ರಾಜ್ ಕುಟುಂಬದ ಬಗ್ಗೆಯೂ ಚೇತನ್ ಸ್ಪಷ್ಟನೆ ನೀಡಿದರು. “ನನಗೆ ಅಣ್ಣಾವ್ರ ಕುಟುಂಬದ ಬಗ್ಗೆ ಯಾವುದೇ ತಕರಾರು ಇಲ್ಲ. ಅವರ ಅಭಿಮಾನಿ ಬಳಗದ ಬಗ್ಗೆಯೂ ತಕರಾರು ಇಲ್ಲ. ಸರ್ಕಾರದ ಯೋಜನೆಗಳಲ್ಲಿ ಒಬ್ಬರಿಗೆ ಜಾಗ ಕೊಟ್ಟು, ಇನ್ನುಳಿದವರಿಗೆ ಕೊಟ್ಟಿಲ್ಲ ಎಂದರೆ ಚಿತ್ರರಂಗದಲ್ಲಿ ಬೇರೆ ಬೇರೆ ಸಮಸ್ಯೆಗಳು ಆಗುತ್ತವೆ. ಇರುವ ಸಮಸ್ಯೆಗೆ ಪರಿಹಾರ ಸಿಗದು. ನಾನು ಸ್ಟಾರ್ ಸಂಸ್ಕೃತಿಯನ್ನು ವಿರೋಧಿಸುತ್ತೇನೆ“ ಎಂದು ತಿಳಿಸಿದರು.

ದಬ್ಬಾಳಿಕೆ ಮತ್ತು ಕಾನೂನು ಎಚ್ಚರಿಕೆ
ತಮ್ಮ ಮೇಲೆ ಒತ್ತಡ ತರಲಾಗುತ್ತಿದೆ ಎಂದು ಚೇತನ್ ಅವರು ಆರೋಪಿಸಿದ್ದಾರೆ. “ಸೌಜನ್ಯದಿಂದ ಮಾತನಾಡಿದರೆ ಮಾತ್ರ ನಾನು ಬದ್ಧನಾಗಿರುತ್ತೇನೆ. ಆದರೆ ಗೂಂಡಾ ವರ್ತನೆ ಮಾಡಿದರೆ, ಮಹಿಳೆ ಬಗ್ಗೆ ನಿಂದನಾತ್ಮಕವಾಗಿ ಮಾತನಾಡಿದರೆ ಅದಕ್ಕೆ ಕಾನೂನಿನ ಕ್ರಮ ತೆಗೆದುಕೊಳ್ಳಬೇಕು. ಪೊಲೀಸರು ಇದನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು. ನನಗೆ ಯಾರ ಮೇಲೂ ವೈಯಕ್ತಿಕ ದ್ವೇಷವಿಲ್ಲ. ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯುತ್ತೇನೆ“ ಎಂದು ಎಚ್ಚರಿಸಿದ್ದಾರೆ.

ಈ ಹೇಳಿಕೆಗಳು ಚಿತ್ರರಂಗದಲ್ಲಿ ಹೊಸ ಚರ್ಚೆಗೆ ನಾಂದಿ ಹಾಡಿವೆ. ಹಲವು ಕನ್ನಡಪರ ಸಂಘಟನೆಗಳು ಚೇತನ್ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸುತ್ತಿವೆ. ರಾಜ್ ಅಭಿಮಾನಿಗಳು ಭಾರೀ ಪ್ರತಿಭಟನೆಗೆ ಕರೆ ನೀಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 26T183139.220

IPL 2026: ಎಂಎಸ್‌ ಧೋನಿ, ಸುರೇಶ್ ರೈನಾ ದಾಖಲೆ ಮುರಿದ ಸಂಜು ಸ್ಯಾಮ್ಸನ್

by ಶಾಲಿನಿ ಕೆ. ಡಿ
April 26, 2026 - 6:38 pm
0

Untitled design 2026 04 26T181720.520

ಯಾವಾಗ ಏನು ಆಗಬೇಕೋ ಆಗುತ್ತೆ, ಪಕ್ಷದ ಮೇಲೆ ವಿಶ್ವಾಸವಿದೆ: ಡಿ.ಕೆ. ಶಿವಕುಮಾರ್

by ಶಾಲಿನಿ ಕೆ. ಡಿ
April 26, 2026 - 6:19 pm
0

Untitled design 2026 04 26T180638.538

ಆರ್ಕೆಸ್ಟ್ರಾ ಮಿಮಿಕ್ರಿ To ಮೆಗಾ ಸ್ಟಾರ್ ಗಣೇಶ್ ಸಕ್ಸಸ್ ಸ್ಟೋರಿ..!

by ಶಾಲಿನಿ ಕೆ. ಡಿ
April 26, 2026 - 6:08 pm
0

Untitled design 2026 04 26T174446.337

ನೇಟಿವಿಟಿ ಅಧಿಪತಿ ಗಣೇಶ್, ಮಣ್ಣಿನ ಕಥೆಗಳಿಗೆ ಮೊದಲು ಮಣೆ

by ಶಾಲಿನಿ ಕೆ. ಡಿ
April 26, 2026 - 5:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 26T183139.220
    IPL 2026: ಎಂಎಸ್‌ ಧೋನಿ, ಸುರೇಶ್ ರೈನಾ ದಾಖಲೆ ಮುರಿದ ಸಂಜು ಸ್ಯಾಮ್ಸನ್
    April 26, 2026 | 0
  • Untitled design 2026 04 26T181720.520
    ಯಾವಾಗ ಏನು ಆಗಬೇಕೋ ಆಗುತ್ತೆ, ಪಕ್ಷದ ಮೇಲೆ ವಿಶ್ವಾಸವಿದೆ: ಡಿ.ಕೆ. ಶಿವಕುಮಾರ್
    April 26, 2026 | 0
  • Untitled design 2026 04 26T180638.538
    ಆರ್ಕೆಸ್ಟ್ರಾ ಮಿಮಿಕ್ರಿ To ಮೆಗಾ ಸ್ಟಾರ್ ಗಣೇಶ್ ಸಕ್ಸಸ್ ಸ್ಟೋರಿ..!
    April 26, 2026 | 0
  • Untitled design 2026 04 26T174446.337
    ನೇಟಿವಿಟಿ ಅಧಿಪತಿ ಗಣೇಶ್, ಮಣ್ಣಿನ ಕಥೆಗಳಿಗೆ ಮೊದಲು ಮಣೆ
    April 26, 2026 | 0
  • Untitled design 2026 04 26T171208.709
    ಬೆಳಗಾವಿಯಲ್ಲಿ ವಕೀಲೆಯ ಮನೆ ಮೇಲೆ ದುಷ್ಕರ್ಮಿಗಳಿಂದ ಮಧ್ಯರಾತ್ರಿ ಗುಂಡಿನ ದಾಳಿ
    April 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version