• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, November 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ತೊಗರಿಬೆಳೆ ಹಾನಿ, ಪರಿಹಾರ ಇತ್ಯರ್ಥ ಪ್ರಕ್ರಿಯೆ ಚುರುಕು : ಕೃಷಿ ಸಚಿವ ಎನ್.ಚಲುವರಾಯಸ್ವಾಮಿ!

admin by admin
March 19, 2025 - 7:45 pm
in Flash News, ಕರ್ನಾಟಕ
0 0
0
Befunky collage 2025 03 19t194434.325

ಕಳೆದ ಸಾಲಿನಲ್ಲಿ ಮಳೆ ಕೊರತೆಯಿಂದ ಉಂಟಾಗಿರುವ ತೊಗರಿ ಬೆಳೆ ಹಾನಿ ಅಂದಾಜಿಸಲಾಗಿದ್ದು, ರಾಜ್ಯಾದ್ಯಂತ ತೊಗರಿ ಬೆಳೆದ 1.86ಲಕ್ಷ ರೈತರಿಗೆ 91.93ಕೋಟಿ ಮೊತ್ತದ ವಿಮಾ ಪರಿಹಾರ ಲೆಕ್ಕಾಚಾರ ಮಾಡಿ ಇತ್ಯರ್ಥಪಡಿಸಲಾಗುತ್ತಿದೆ ಎಂದು ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ.

ವಿಧಾನಪರಿಷತ್ತಿನಲ್ಲಿಂದು ವಿರೋಧಪಕ್ಷದ ನಾಯಕರಾದ ಛಲವಾದಿ ಟಿ. ನಾರಯಾಯಣಸ್ವಾಮಿ, ವಿರೋಧ ಪಕ್ಷದ ಮುಖ್ಯ ಸಚೇತಕರಾದ ಎನ್.ರವಿಕುಮಾರ್ ಮತ್ತು ಸದಸ್ಯರಾದ ಶಶಿಲ್ ಜಿ.ನಮೋಶಿ, ಡಾ: ತಳವಾರ್ ಸಾಬಣ್ಣ, ವೈ.ಎಂ.ಸತೀಶ್, ಹೇಮಲತಾ ನಾಯಕ್ ಹಾಗೂ ನಿಯಮ 330ರ ಪ್ರಕಾರ ಕೃಷಿ ಸಚಿವರು ಉತ್ತರ ನೀಡಿದರು.

RelatedPosts

ಲಕ್ಷ್ಮೀ ಪೂಜೆ ಹೆಸರಿನಲ್ಲಿ ಹೈಟೆಕ್ ವೇಶ್ಯಾವಾಟಿಕೆ: 11 ಮಂದಿ ಬಂಧನ

ನಮ್ಮ ಮೆಟ್ರೋ ಹಣಕಾಸಿನ ಲೆಕ್ಕ ಬಿಚ್ಚಿಟ್ಟ ತೇಜಸ್ವಿ ಸೂರ್ಯ; ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ

ರವೆ ಪ್ಯಾಕೆಟ್‌ನಲ್ಲಿ ಹುಳು ಪತ್ತೆ; ದಿ ಬಿಗ್ ಮಾರ್ಕೆಟ್‌ ವಿರುದ್ಧ ಗ್ರಾಹಕರ ಆಕ್ರೋಶ

ಮಕ್ಕಳಾಗಿಲ್ಲವೆಂದು ನಿತ್ಯ ಕಿರುಕುಳ: ಗಂಡನನ್ನೇ ಚಾಕುವಿನಿಂದ ಇರಿದು ಕೊಂದ ಪತ್ನಿ!

ADVERTISEMENT
ADVERTISEMENT

ರಾಜ್ಯದ ಕಲ್ಬುರ್ಗಿ, ವಿಜಯಪುರ, ಬೆಳಗಾವಿ, ಬೀದರ್, ಯಾದಗಿರಿ ಜಿಲ್ಲೆಗಳಲ್ಲಿ ತೊಗರಿ ಮುಖ್ಯ ಬೆಳೆಯಾಗಿದ್ದು, ಸೆಪ್ಟೆಂಬರ್ ನಿಂದ ನವೆಂಬರ್ ವರೆಗೆ ವಾಡಿಕೆಗಿಂತ ಕಡಿಮೆ ಮಳೆಯಾಗಿ ತೇವಾಂಶ ಕುಸಿತದಿಂದ ಬೆಳೆ ಹಾನಿಯಾಗಿರುವ ಬಗ್ಗೆ ವರದಿಯಾಗಿದೆ. ಇದಕ್ಕೆ ಕಳಪೆ ಬಿತ್ತನೆ ಬೀಜ ಕಾರಣವಲ್ಲ ಎಂಬುದನ್ನು ಪ್ರಯೋಗಾಲಯದ ಮೂಲಕ ಗುಣಮಟ್ಟ ಖಾತರಿ ಮೂಲಕ ಖಚಿತಪಡಿಸಿಕೊಳ್ಳಲಾಗಿದೆ ಎಂದು ಚಲುವರಾಯಸ್ವಾಮಿ ಸ್ಪಷ್ಟಪಡಿಸಿದರು.

ರಾಜ್ಯಾದ್ಯಂತ 2024-25 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ 4.09 ಲಕ್ಷ ರೈತರು ತೊಗರಿ ಬೆಳೆಗೆ ವಿಮೆ ಮಾಡಿಸಿದ್ದಾರೆ. ಇದರ ಪೈಕಿ, ಕಲಬುರಗಿ ಜಿಲ್ಲೆಯಲ್ಲಿ 1.70 ಲಕ್ಷ ರೈತರು, ವಿಜಯಪುರ ಜಿಲ್ಲೆಯಲ್ಲಿ 1.08 ಲಕ್ಷ ರೈತರು, ಬೆಳಗಾವಿ ಜಿಲ್ಲೆಯಲ್ಲಿ 1213 ರೈತರು ಬೀದರ್ ಜಿಲ್ಲೆಯಲ್ಲಿ 82384 ರೈತರು ಮತ್ತು ಯಾದಗಿರಿ ಜಿಲ್ಲೆಯಲ್ಲಿ 6390 ರೈತರು, ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ನೋಂದಾಯಿಸಿದ್ದಾರೆ. ಸ್ಥಳೀಯ ವಿಕೋಪದಡಿ ರಾಜ್ಯಾದ್ಯಂತ ತೊಗರಿ ಬೆಳೆದ 1.86ಲಕ್ಷ ರೈತರಿಗೆ 91.93ಕೋಟಿ ಮೊತ್ತದ ವಿಮಾ ಪರಿಹಾರ ಲೆಕ್ಕಾಚಾರ ಮಾಡಿ ಇತ್ಯರ್ಥಪಡಿಸಲಾಗುತ್ತಿದೆ ಎಂದು ಸಚಿವರು ವಿವರ ಒದಗಿಸಿದರು.
ಕಲಬುರಗಿ ಜಿಲ್ಲೆಯ 1.69ಲಕ್ಷ ರೈತರಿಗೆ ರೂ.70.47 ಕೋಟಿ ವಿಮಾ ಪರಿಹಾರವನ್ನು ಇತ್ಯರ್ಥಪಡಿಸಲಾಗಿದೆ. ಇದಲ್ಲದೇ, ರಾಜ್ಯದಲ್ಲಿ ಕೊಯ್ಲೋತ್ತರ ಬೆಳೆ ನಷ್ಟಕ್ಕಾಗಿ 2.74 ಕೋಟಿ ವಿಮೆ ಪರಿಹಾರ ಇತ್ಯರ್ಥಪಡಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ. ಈ ಪೈಕಿ, ಕಲಬುರಗಿ ಜಿಲ್ಲೆಯ 2.54 ಕೋಟಿ ಒಳಗೊಂಡಿರುತ್ತದೆ ಎಂದು ಅವರು ಸದನಕ್ಕೆ ಉತ್ತರ ನೀಡಿದರು.

ಕಲ್ಬುರ್ಗಿ ಜಿಲ್ಲೆಯಲ್ಲಿ 6.27 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ತೊಗರಿ ಬಿತ್ತನೆಯಾಗಿದ್ದು ನವೆಂಬರ್ ನಲ್ಲಿ ವಾಡಿಕೆಗಿಂತ ಅಧಿಕ ಮಳೆ ಕೊರತೆ ಉಂಟಾಗಿದೆ. ಕಂದಾಯ ಹಾಗೂ ಕೃಷಿ ಇಲಾಖೆ ಜಂಟಿ ಸಮೀಕ್ಷೆಗಳ ಪ್ರಕಾರ ಶೇಕಡಾ 1.82 ಲಕ್ಷ ಹೆಕ್ಟೇರ್ ಪ್ರದೇಶಗಳಲ್ಲಿ ಬೆಳೆ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ. ಅದೇ ರೀತಿ ವಿಜಯಪುರ ಜಿಲ್ಲೆಯಲ್ಲಿ ನವೆಂಬರ್ ತಿಂಗಳಿನಲ್ಲಿ ಶೇಕಡಾ 80 ರಷ್ಟು ಮಳೆ ಕೊರತೆಯಾಗಿದ್ದು ಜೊತೆಗೆ ಅಕ್ಟೋಬರ್ ಎರಡನೇ ವಾರದಿಂದ ಮಂಜಿನ ಭಾದೆ ಕೂಡಾ ತೀವ್ರಗೊಂಡು ಹೂವುಗಳು ಉದುರಿವೆ.

ಬೆಳಗಾವಿ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ 14,529 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದ್ದು, ನವೆಂಬರ್ ಮಾಹೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆ ಉಂಟಾಗಿದೆ. ಇದೇ ರೀತಿ ಬೀದರ್ ನಲ್ಲಿ 2236 ಹೆಕ್ಟೇರ್ ಪ್ರದೇಶದಲ್ಲಿ ತೊಗರಿಬೆಳೆ ಒಣಗಿರುವ ಬಗ್ಗೆ ವರದಿಯಾಗಿದೆ. ಯಾದಗಿರಿ ಜಿಲ್ಲೆಯಲ್ಲಿ 194.20 ಹೆಕ್ಟೇರ್ ಪ್ರದೇಶದಲ್ಲಿ ತೊಗರಿಬೆಳೆ ಹಾನಿಯಾಗಿದೆ ಎಂದು ಸಚಿವರು ವಿವರ ಒದಗಿಸಿದರು.

ವಿಜಯಪುರ ಜಿಲ್ಲೆಯಲ್ಲಿ ಅಂದಾಜು 5.35ಲಕ್ಷ ಹೆಕ್ಷೇರ್ ಪ್ರದೇಶದಲ್ಲಿ ಬಿತ್ತನೆಗೊಂಡಿರುತ್ತದೆ. ಜಿಲ್ಲೆಯಲ್ಲಿ ಸಾಮಾನ್ಯವಾಗಿ 2024ರ ನವೆಂಬರ್ ತಿಂಗಳಿನಲ್ಲಿ ವಾಡಿಕೆಯಂತೆ 21 ಮಿ. ಮೀ ಮಳೆಯಾಗಬೇಕಿದ್ದು, ಆದರೆ, ಕೇವಲ ವಾಸ್ತವವಾಗಿ 4.1 ಮಿ.ಮೀ ಮಳೆಯಾಗಿದ್ದು, ವಾಡಿಕೆಗಿಂತ ಶೇ.80 ರಷ್ಟು ಮಳೆ ಕೊರತೆಯಾಗಿರುತ್ತದೆ.

ಬೆಳೆ ಕಟಾವು ಆದ ನಂತರ ಇಳುವರಿ ಆಧಾರದ ಮೇಲೆ ಪ್ರಧಾನ ಮಂತ್ರಿ ಫಸಲ್ ಭಿಮಾ ಯೋಜನೆಯ ಮಾರ್ಗಸೂಚಿ ಅನ್ವಯ ಬೆಳೆ ವಿಮೆ ಇತ್ಯರ್ಥಪಡಿಸಲಾಗುವುದು. ತೊಗರಿ ಬೆಳೆಯ ಬೆಳೆ ಕಟಾವು ಪ್ರಯೋಗಗಳು ಪೂರ್ಣವಾದ ತರುವಾಯ, ಇಳುವರಿಯಲ್ಲಿ ಕುಂಠಿತವಾಗುವ ಪ್ರಮಾಣವನ್ನು ಅಂದಾಜಿಸಬಹುದಾಗಿದೆ ಎಂದು ಕೃಷಿ ಸಚಿವರು ತಿಳಿಸಿದರು.

ತೊಗರಿಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ ಬೆಂಬಲ ಬೆಲೆ:-

ಮಾರುಕಟ್ಟೆ ದರಕ್ಕಿಂತ ತೊಗರಿಗೆ ಕೇಂದ್ರ ಸರ್ಕಾರ ಘೋಷಿಸಿರುವ ಬೆಂಬಲ ಬೆಲೆ ಕಡಿಮೆ ಇರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಪ್ರತಿ ಕ್ವಿಂಟಾಲ್ಗೆ ರೂ.450ಗಳ ಹೆಚ್ಚುವರಿ ಬೆಂಬಲ ಬೆಲೆ ಒದಗಿಸಿ ರೈತರ ನೆರವಿಗೆ ಧಾವಿಸಿದೆ.

2024-25ನೇ ಸಾಲಿನಲ್ಲಿ ಪ್ರತಿ ಕ್ವಿಂಟಾಲ್ ತೊಗರಿಗೆ ರೂ.7,550/- ರಂತೆ ಕೇಂದ್ರ ಸರ್ಕಾರವು ಬೆಂಬಲ ಬೆಲೆಯನ್ನು ಘೋಷಿಸಿರುತ್ತದೆ. ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಬೆಂಬಲ ಬೆಲೆಗಿಂತ ಕಡಿಮೆ ಧಾರಣೆಯಲ್ಲಿ ಮಾರಾಟವಾಗಿದೆ.

ಈ ಹಿನ್ನೆಲೆಯಲ್ಲಿ ಜಿಲ್ಲಾ ಟಾಸ್ಕ್ ಫೋರ್ಸ್ ಶಿಫಾರಸ್ಸಿನ ಅನ್ವಯ, ರಾಜ್ಯ ಸರ್ಕಾರದ ವತಿಯಿಂದ ಕೇಂದ್ರ ಸರ್ಕಾರದ ಅನುಮೋದನೆ ಪಡೆದು ಗರಿಷ್ಠ 3,06,150 ಮೆಟ್ರಿಕ್ ಟನ್ ಎಫ್.ಎ.ಕ್ಯೂ ಗುಣಮಟ್ಟದ ತೊಗರಿಯನ್ನು ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು, ವಿಜಯಪುರ, ಕೊಪ್ಪಳ, ಬೆಳಗಾವಿ, ಬಳ್ಳಾರಿ, ವಿಜಯನಗರ, ಬಾಗಲಕೋಟೆ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಹಾಗೂ ಕೋಲಾರ ಜಿಲ್ಲೆಗಳ ರೈತರಿಂದ ಬೆಂಬಲ ಬೆಲೆ ರೂ.7,550/-ರ ಜೊತೆಗೆ ರಾಜ್ಯ ಸರ್ಕಾರದ ವತಿಯಿಂದ ರೂ.450/- ಗಳ ಪ್ರೋತ್ಸಾಹಧನ ಪ್ರತಿ ಕ್ವಿಂಟಾಲ್ಗೆ ರೂ.8,000/- ರಂತೆ ಪ್ರತಿ ರೈತರಿಂದ ಗರಿಷ್ಟ 40 ಕ್ವಿಂಟಾಲ್ ಖರೀದಿ ಪ್ರಮಾಣವನ್ನು ನಿಗದಿಪಡಿಸಿದೆ.

ಗ್ರಾಮೀಣ ಭಾಗದ ರೈತರಿಗೆ ಅನುಕೂಲವಾಗುವಂತೆ PACS/TAPCMS/ FPO ಗಳ ಮೂಲಕ ಒಟ್ಟು 516 ಖರೀದಿ ಕೇಂದ್ರಗಳನ್ನು ತೆರೆದು ದಿ:05.03.2025 ರ ಅಂತ್ಯಕ್ಕೆ 79,409 ನೋಂದಾಯಿತ ರೈತರ ಪೈಕಿ, 19,323 ರೈತರಿಂದ 25,401 ಮೆಟ್ರಿಕ್ ಟನ್ ಪ್ರಮಾಣದ ತೊಗರಿಯನ್ನು ಖರೀದಿಸಲಾಗಿರುತ್ತದೆ. ಖರೀದಿ ಪ್ರಕ್ರಿಯೆಯು ದಿ:02.04.2025 ರವರೆಗೂ ಚಾಲ್ತಿಯಲ್ಲಿರುತ್ತದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled Design 2026 11 12T184313.118

ಕರೀನಾ ಕೊರಳಲ್ಲಿ ‘ಖುರಾನ್ ಪೆಂಡೆಂಟ್’..ಸ್ಟಾರ್ ನಟಿಗೆ ನೋಟಿಸ್..!

by ಶಾಲಿನಿ ಕೆ. ಡಿ
November 12, 2026 - 6:46 pm
0

Untitled Design 2026 11 12T183318.581

ಟೇಕಾಫ್ ವೇಳೆ ರನ್‌ವೇಯಿಂದ ಜಾರಿದ ವಿಮಾನ: ತಪ್ಪಿದ ಭಾರೀ ಅನಾಹುತ

by ಶಾಲಿನಿ ಕೆ. ಡಿ
November 12, 2026 - 6:34 pm
0

Untitled Design 2026 11 12T181156.092

4.5 ರೇಟಿಂಗ್..ರಾಕಿಭಾಯ್‌‌ಗೆ ಮಹೇಶ್ ಬಾಬು ಪುತ್ರ ರಾಯಲ್ ಸೆಲ್ಯೂಟ್

by ಶಾಲಿನಿ ಕೆ. ಡಿ
November 12, 2026 - 6:16 pm
0

Untitled Design 2026 11 12T175602.430

ಲಕ್ಷ್ಮೀ ಪೂಜೆ ಹೆಸರಿನಲ್ಲಿ ಹೈಟೆಕ್ ವೇಶ್ಯಾವಾಟಿಕೆ: 11 ಮಂದಿ ಬಂಧನ

by ಶಾಲಿನಿ ಕೆ. ಡಿ
November 12, 2026 - 6:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled Design 2026 11 08T132327.862
    ಯೋಧರೊಂದಿಗೆ ದೀಪಾವಳಿ ಆಚರಿಸಿದ ಪ್ರಧಾನಿ: ನೀವೆಲ್ಲರೂ ನನ್ನ ಕುಟುಂಬದ ಸದಸ್ಯರು ಎಂದ ಮೋದಿ
    November 8, 2026 | 0
  • Your paragraph text 2026 11 07T212633.251
    ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಪತ್ನಿ ಮೇಲೆ ಹಲ್ಲೆ: ಉತ್ತರಾಖಂಡ್ ಸಚಿವೆ ರೇಖಾ ಆರ್ಯ ಪತಿ ಅರೆಸ್ಟ್
    November 7, 2026 | 0
  • Your paragraph text 2026 11 07T203122.035
    ಉಪರಾಷ್ಟ್ರಪತಿ ರಾಧಾಕೃಷ್ಣನ್ ನಿವಾಸಕ್ಕೆ ಭೇಟಿ ನೀಡಿದ ಪ್ರಧಾನಿ: ದೀಪಾವಳಿ ಶುಭಾಶಯ ಕೋರಿದ ಮೋದಿ
    November 7, 2026 | 0
  • Your paragraph text 2026 11 07T190338.150
    ವಿದ್ಯಾರ್ಥಿಗಳಿಗೆ ಫ್ರೀ ಲ್ಯಾಪ್‌ಟಾಪ್ ಭಾಗ್ಯ: ವೆಟ್ರಿ ಯೋಜನೆಗೆ ಸಿಎಂ ವಿಜಯ್ ಗ್ರೀನ್ ಸಿಗ್ನಲ್!
    November 7, 2026 | 0
  • Untitled design 2026 11 05T130454.386
    ದೆಹಲಿಯಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿದು ಇಬ್ಬರು ಸಾ*ವು
    November 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version