• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಕಲಿ ಸುಪ್ರೀಂ ಆದೇಶ ಸೃಷ್ಟಿಸಿ ಜೈಲಿನಿಂದ ಎಸ್ಕೇಪ್: 8 ವರ್ಷಗಳ ಬಳಿಕ ಖದೀಮನ ಕಳ್ಳಾಟ ಬಯಲು.!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 24, 2026 - 6:52 pm
in Flash News, ಕರ್ನಾಟಕ, ಬೆಂ. ನಗರ
0 0
0
Untitled design 2026 05 24T185136.809

ಬೆಂಗಳೂರು: ಸುಪ್ರೀಂ ಕೋರ್ಟ್‌ನ ನಕಲಿ ಆದೇಶವನ್ನು ಸೃಷ್ಟಿಸಿ, ಜೈಲು ಅಧಿಕಾರಿಗಳನ್ನೇ ಮೋಸಗೊಳಿಸಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗಿದ್ದ ಖತರ್ನಾಕ್ ಕೈದಿಯ ವಂಚನೆ ಅಂತಿಮವಾಗಿ ಬೆಳಕಿಗೆ ಬಂದಿದೆ. ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿಯೊಬ್ಬ ಪರಾರಿಯಾಗಿದ್ದ ಪ್ರಕರಣ ಇದೀಗ ಎಂಟು ವರ್ಷಗಳ ಬಳಿಕ ಹೊರಬಿದ್ದಿದೆ. 

ತಮಿಳುನಾಡು ಮೂಲದ ಶಂಕರ್ ಆರ್ಮುಗಮ್ ಎಂಬ ಅಪರಾಧಿ ಈ ಪ್ರಕರಣದ ಪ್ರಮುಖ ಆರೋಪಿ. ಈತ 2001ರಲ್ಲಿ ತನ್ನ ಸಹಚರರೊಂದಿಗೆ ಸೇರಿ ಹಣಕ್ಕಾಗಿ ವ್ಯಕ್ತಿಯೊಬ್ಬನನ್ನು ಅಪಹರಿಸಿದ್ದ ಪ್ರಕರಣದಲ್ಲಿ ಬಂಧಿತನಾಗಿದ್ದ. ಪ್ರಕರಣದ ವಿಚಾರಣೆ ನಡೆಸಿದ ಬೆಂಗಳೂರಿನ ಫಾಸ್ಟ್ ಟ್ರ್ಯಾಕ್ ನ್ಯಾಯಾಲಯ, ಆರೋಪ ಸಾಬೀತಾದ ಹಿನ್ನೆಲೆ ಶಂಕರ್‌ಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.

RelatedPosts

ರಾಜ್ಯದಲ್ಲಿ ಬರದ ಛಾಯೆ; ಪ್ರಧಾನಿ ಮೋದಿಗೆ ಸಿಎಂ ಡಿಕೆ ಶಿವಕುಮಾರ್ ಪತ್ರ

ಐಸಿಸ್ ಸಂಪರ್ಕ ಪ್ರಕರಣ: ಪ್ರಮುಖ ಆರೋಪಿಗೆ ಜೀವಾವಧಿ ಶಿಕ್ಷೆ

ದುರ್ಬಲಗೊಂಡ ನೈಋತ್ಯ ಮುಂಗಾರು; ರಾಜ್ಯದಲ್ಲಿ ಹೆಚ್ಚಿದ ತಾಪಮಾನ

ನಾಡಗೀತೆಯಲ್ಲಿ ‘ಬೌದ್ಧ’ ಪದ ಸೇರ್ಪಡೆ? ಸರ್ಕಾರದ ಮುಂದಿದೆ ಮಹತ್ವದ ಪ್ರಸ್ತಾವನೆ

ADVERTISEMENT
ADVERTISEMENT

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 364A ಅಡಿಯಲ್ಲಿ ಅಪಹರಣ ಹಾಗೂ ಸೆಕ್ಷನ್ 120B ಅಡಿಯಲ್ಲಿ ಅಪರಾಧಿಕ ಸಂಚು ಆರೋಪಗಳನ್ನು ನ್ಯಾಯಾಲಯ ಗಂಭೀರವಾಗಿ ಪರಿಗಣಿಸಿತ್ತು. ನಂತರ ನ್ಯಾಯಾಲಯದ ಆದೇಶದಂತೆ ಶಂಕರ್ ಆರ್ಮುಗಮ್‌ನನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿತ್ತು.

ಜೈಲಿನಲ್ಲಿದ್ದ ಶಂಕರ್ ಬಿಡುಗಡೆಯಾಗಲು ಸಿನಿಮೀಯ ಶೈಲಿಯಲ್ಲಿ ಮಾಸ್ಟರ್ ಪ್ಲಾನ್ ರೂಪಿಸಿದ್ದ ಎನ್ನಲಾಗಿದೆ. ತನಗೆ ಸುಪ್ರೀಂ ಕೋರ್ಟ್‌ನಿಂದ ಬಿಡುಗಡೆ ಆದೇಶ ಬಂದಿದೆ ಎಂದು ನಂಬಿಸುವ ಉದ್ದೇಶದಿಂದ ಆತ ನಕಲಿ ದಾಖಲೆಗಳನ್ನು ಸೃಷ್ಟಿಸಿದ್ದ. ಸುಪ್ರೀಂ ಕೋರ್ಟ್ ಮುದ್ರೆ, ಸಹಿ ಹಾಗೂ ಅಧಿಕೃತ ಆದೇಶದ ಮಾದರಿಯಲ್ಲೇ ತಯಾರಿಸಲಾದ ಈ ದಾಖಲೆಗಳನ್ನು ಜೈಲು ಅಧಿಕಾರಿಗಳ ಮುಂದೆ ಸಲ್ಲಿಸಲಾಗಿತ್ತು.

2018ರ ನವೆಂಬರ್ 13ರಂದು ಶಂಕರ್ ಪರವಾಗಿ ಬಂದ ವ್ಯಕ್ತಿಗಳು ಜೈಲು ಅಧಿಕಾರಿಗಳಿಗೆ ದಾಖಲೆಗಳನ್ನು ನೀಡಿದ್ದರು. ಅಲ್ಲದೆ, ನ್ಯಾಯಾಲಯ ವಿಧಿಸಿದ್ದ ದಂಡ ಮೊತ್ತದ ರೂಪದಲ್ಲಿ 10 ಸಾವಿರ ರೂಪಾಯಿಯನ್ನು ಸಹ ಪಾವತಿಸಿದ್ದರು ಎನ್ನಲಾಗಿದೆ. ದಾಖಲೆಗಳು ಸುಪ್ರೀಂ ಕೋರ್ಟ್‌ನ ಅಧಿಕೃತ ಆದೇಶವೆಂದು ನಂಬಿದ ಜೈಲು ಅಧಿಕಾರಿಗಳು ಯಾವುದೇ ಮರು ಪರಿಶೀಲನೆ ನಡೆಸದೆ ಶಂಕರ್ ಆರ್ಮುಗಮ್ ಬಿಡುಗಡೆಗೆ ಅನುಮತಿ ನೀಡಿದ್ದರು.

ಈ ರೀತಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿ ರಾಜಾರೋಷವಾಗಿ ಜೈಲಿನಿಂದ ಹೊರಬಂದು ಪರಾರಿಯಾಗಿದ್ದಾನೆ. ಪ್ರಕರಣ ಹಲವು ವರ್ಷಗಳ ಕಾಲ ಯಾರ ಗಮನಕ್ಕೂ ಬಂದಿರಲಿಲ್ಲ. ಆದರೆ ಇತ್ತೀಚೆಗೆ ಜೈಲು ಇಲಾಖೆಯ ಮಹಾನಿರ್ದೇಶಕರಿಗೆ ಬಂದ ಅನಾಮಧೇಯ ಪತ್ರದಿಂದ ಈ ಹಗರಣಕ್ಕೆ ಹೊಸ ತಿರುವು ಸಿಕ್ಕಿದೆ.

ಆ ಪತ್ರದಲ್ಲಿ ಶಂಕರ್ ನಕಲಿ ಸುಪ್ರೀಂ ಕೋರ್ಟ್ ಆದೇಶ ಪತ್ರದ ಮೂಲಕ ಜೈಲಿನಿಂದ ಬಿಡುಗಡೆಯಾಗಿದ್ದಾನೆ ಎಂದು ಉಲ್ಲೇಖಿಸಲಾಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ ಜೈಲು ಇಲಾಖೆ ತನಿಖೆ ಆರಂಭಿಸಿತು. ತನಿಖೆಯ ವೇಳೆ ಸುಪ್ರೀಂ ಕೋರ್ಟ್‌ನಿಂದ ಅಂತಹ ಯಾವುದೇ ಬಿಡುಗಡೆ ಆದೇಶ ಹೊರಬಂದಿಲ್ಲ ಎಂಬುದು ಸ್ಪಷ್ಟವಾಯಿತು.

ಈ ಮೂಲಕ ಶಂಕರ್ ಸಲ್ಲಿಸಿದ್ದ ದಾಖಲೆ ಸಂಪೂರ್ಣ ನಕಲಿ ಎಂಬ ಸತ್ಯ ಬಹಿರಂಗವಾಗಿದೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ದಾಖಲೆ ಫೋರ್ಜರಿ, ವಂಚನೆ ಹಾಗೂ ಇತರ ಕಾನೂನುಬದ್ಧ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಇದೀಗ ತಲೆಮರೆಸಿಕೊಂಡಿರುವ ಶಂಕರ್ ಆರ್ಮುಗಮ್ ಬಂಧನಕ್ಕಾಗಿ ಪೊಲೀಸರು ವಿಶೇಷ ತಂಡಗಳನ್ನು ರಚಿಸಿ ಹುಡುಕಾಟ ನಡೆಸುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (64)

ರೇಣುಕಾಸ್ವಾಮಿ ಪ್ರಕರಣದಲ್ಲಿ ಸಾಕ್ಷಿಗೆ ಬೆದರಿಕೆ ಆರೋಪ; ಮತ್ತಿಬ್ಬರಿಗಾಗಿ ಹುಡುಕಾಟ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 14, 2026 - 11:22 pm
0

Untitled design (63)

ರಾಜ್ಯದಲ್ಲಿ ಬರದ ಛಾಯೆ; ಪ್ರಧಾನಿ ಮೋದಿಗೆ ಸಿಎಂ ಡಿಕೆ ಶಿವಕುಮಾರ್ ಪತ್ರ

by ಕವಿತಾ
July 14, 2026 - 11:08 pm
0

Untitled design (62)

ಹಾರ್ಮುಜ್ ಜಲಸಂಧಿ ಮೇಲೆ 20% ಶುಲ್ಕ ಇಲ್ಲ; ಟ್ರಂಪ್ ಘೋಷಣೆ

by ಕವಿತಾ
July 14, 2026 - 10:42 pm
0

Untitled design (61)

‘ಪರಾಕ್’ ಟೀಸರ್ ರಿಲೀಸ್; ಸಿನಿಮಾ ತಡವಾದ ಕಾರಣ ಬಹಿರಂಗಪಡಿಸಿದ ಶ್ರೀಮುರಳಿ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 14, 2026 - 10:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಇರ್ತೀರಾ (15)
    ಮೇವು ಹಗರಣದಲ್ಲಿ ಲಾಲು ಯಾದವ್‌ಗೆ ರಿಲೀಫ್: ಸಿಬಿಐ ಸಲ್ಲಿಸಿದ್ದ ಅರ್ಜಿ ವಜಾ
    July 14, 2026 | 0
  • ಇರ್ತೀರಾ (14)
    ತಿರುಪತಿ ಮೊದಲ ಆರತಿ ವಿವಾದ: ಡಿ.ಕೆ ಶಿವಕುಮಾರ್‌‌ ಹೇಳಿಕೆಗೆ ಟಿಟಿಡಿ ತಿರುಗೇಟು
    July 14, 2026 | 0
  • ಇರ್ತೀರಾ (13)
    ಆಟವಾಡುತ್ತಾ ಮೊದಲನೇ ಮಹಡಿಯಿಂದ ಕೆಳಗೆ ಬಿದ್ದ ಮಗು: ಸ್ಥಿತಿ ಗಂಭೀರ
    July 14, 2026 | 0
  • ಇರ್ತೀರಾ (12)
    ಮದುವೆಯಾಗಲು ಇಷ್ಟವಿಲ್ಲದೇ ತಲೆ ಬೋಳಿಸಿಕೊಂಡ ಯುವತಿ..ವಿಡಿಯೋ ವೈರಲ್
    July 14, 2026 | 0
  • ಇರ್ತೀರಾ (11)
    ಕಲಬುರಗಿಯ ಸೆಂಟ್ರಲ್ ಜೈಲಿನಿಂದ ಮೂವರು ಸಜಾ ಕೈದಿಗಳು ಎಸ್ಕೇಪ್.!
    July 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version