• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮಾನ್ಸೂನ್: ಬಹುತೇಕ ಜಿಲ್ಲೆಗಳಲ್ಲಿ ಈ ವರ್ಷ ವಾಡಿಕೆಗಿಂತ ಅಧಿಕ ಮಳೆ!

admin by admin
March 20, 2025 - 8:53 pm
in Flash News, ಕರ್ನಾಟಕ
0 0
0
Befunky collage 2025 03 20t201046.199
  • ಜೂನ್ ಸೆಪ್ಟೆಂಬರ್ ಅವಧಿಯಲ್ಲಿ ಚುರುಕಾಗಲಿರುವ ಮಾನ್ಸೂನ್

  • ಏಪ್ರಿಲ್-ಮೇ ತಿಂಗಳಲ್ಲೂ ಉತ್ತಮ ಮಳೆ ನಿರೀಕ್ಷೆ

    RelatedPosts

    ‘ನಾವು 100 ಕೋಟಿ ಮಾಡಿದ್ವಿ’: ಚಿತ್ರ ಯಶಸ್ಸಿಗೆ ಸಮಂತಾ ಕ್ಯೂಟ್ ರಿಯಾಕ್ಷನ್..ವಿಡಿಯೋ ವೈರಲ್

    ರಾಜ್ಯಸಭೆ ಮಾಜಿ ಸದಸ್ಯ ಹೆಚ್.ಹನುಮಂತಪ್ಪ ನಿಧನ

    ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

    ಆಂಧ್ರದಲ್ಲಿ ಕೋವಿಡ್‌ಗೆ ಇಬ್ಬರು ಬಲಿ, 8 ಸಕ್ರಿಯ ಪ್ರಕರಣ

    ADVERTISEMENT
    ADVERTISEMENT
  • ಬೇಸಿಗೆಯಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಏರಲಿದೆ ತಾಪಮಾನ

  • ಕುಡಿಯುವ ನೀರಿಗೆ ಕೊರತೆಯಾಗದಂತೆ ಅಧಿಕಾರಿಗಳಿಗೆ ಸೂಚನೆ
  • ಪ್ರಸ್ತುತ ವರ್ಷದ ಮಾನ್ಸೂನ್ನಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗುವ ಸಾಧ್ಯತೆ ಇದೆ.

ಸಚಿವ ಕೃಷ್ಣ ಬೈರೇಗೌಡ ಅವರ ಅಧ್ಯಕ್ಷತೆಯಲ್ಲಿ 2025ನೇ ಸಾಲಿನ ಹವಾಮಾನ ಪರಿಸ್ಥಿತಿ ಕುರಿತು ಗುರುವಾರ ನಡೆದ ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ ಈ ಕುರಿತು ಚರ್ಚಿಸಲಾಯಿತು.

ಈ ವೇಳೆ ಸಚಿವರಿಗೆ ಮಾಹಿತಿ ನೀಡಿದ ಅಧಿಕಾರಿಗಳು, “ಪ್ರಸ್ತುತ ವರ್ಷ ಪೂರ್ವ ಮುಂಗಾರಿನಲ್ಲಿ ಉತ್ತರ ಕರ್ನಾಟಕ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಈಗಾಗಲೇ ವಾಡಿಕೆಗಿಂತ ಅಧಿಕ ಮಳೆಯಾಗಿದೆ. ಏಪ್ರಿಲ್-ಮೇ ತಿಂಗಳಲ್ಲಿ ಕರಾವಳಿ ಭಾಗದಲ್ಲಿ ಉತ್ತಮ ಮಳೆಯ ನಿರೀಕ್ಷೆ ಇದೆ. ಆದರೆ, ಜೂನ್ನಿಂದ ಸೆಪ್ಟೆಂಬರ್ವರೆಗಿನ ಮಾನ್ಸೂನ್ ಅವಧಿಯಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಲಿದ್ದು, ಕೃಷಿ ಚಟುವಟಿಕೆಗಳೂ ಚುರುಕುಗೊಳ್ಳಲಿವೆ ” ಎಂದು ಮಾಹಿತಿ ನೀಡಿದರು.

ಮುಂದುವರೆದು, “ಸೆಪ್ಟೆಂಬರ್ ನಂತರದ ಹಿಂಗಾರಿನಲ್ಲೂ ಈ ವರ್ಷ ವಾಡಿಕೆಯ ಮಳೆ ನಿರೀಕ್ಷಿಸಬಹುದು. ಅಲ್ಲದೆ, ಭಾರತ ಹವಮಾನ ಇಲಾಖೆಯ ತಾಪಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಉತ್ತರ ಒಳನಾಡು, ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗರಿಷ್ಟ ತಾಪಮಾನದ ಸಂಭವನೀಯತೆ ಸಾಮಾನ್ಯಕ್ಕಿಂತ ಹೆಚ್ಚಾಗಿರುವ ಸಾಧ್ಯತೆಗಳಿದೆ. ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಏಪ್ರಿಲ್-ಮೇ ತಿಂಗಳಲ್ಲಿ ತಾಪಮಾನ ಹೆಚ್ಚಾಗಲಿದೆ. ಉಳಿದ ಇತರ ಜಿಲ್ಲೆಗಳಲ್ಲಿ ಸಾಮಾನ್ಯ ತಾಪಮಾನ ಇರುವ ಸಾಧ್ಯತೆಯಿದೆ” ಎಂದು ಅಧಿಕಾರಿಗಳು ತಿಳಿಸಿದರು.

ಜಲಾಶಯಗಳಲ್ಲಿನ ನೀರಿನ ಮಟ್ಟ:

ರಾಜ್ಯದಲ್ಲಿನ ಪ್ರಮುಖ 14 ಜಲಾಶಯಗಳಲ್ಲಿ ಪ್ರಸ್ತುತ ಒಟ್ಟು 422.11 ಟಿ.ಎಂ.ಸಿ ನೀರಿನ ಸಂಗ್ರಹಣೆಯಿದ್ದು, ಕಳೆದ ಸಾಲಿನ ಇದೇ ಸಮಯದಲ್ಲಿ 280.02 ಟಿ.ಎಂ.ಸಿ. ನೀರಿನ ಸಂಗ್ರಹಣೆ ಇತ್ತು.

ಕೆಲವೊಂದು ಜಲಾಶಯಗಳಲ್ಲಿ ನೀರಿನ ಮಟ್ಟ ತೃಪ್ತಿಕರವಾಗಿ ಇಲ್ಲದೆ ಇರುವ ಬಗ್ಗೆ ಅತಂಕ ವ್ಯಕ್ತಪಡಿಸಿದ ಸಚಿವ ಕೃಷ್ಣ ಬೈರೇಗೌಡ ಅವರು,” ನೀರಾವರಿಗಿಂತ (ಬೇಸಿಗೆ ಬೆಳೆಗಳು) ಕುಡಿಯುವ ನೀರಿನ ಪೂರೈಕೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಮುಂದಿನ ದಿನಗಳಲ್ಲಿ ನೀರಿನ ಬಿಡುಗಡೆಗಳು ಹೆಚ್ಚಿನ ತಾಪಮಾನವು ನೀರಿನ ನಷ್ಟಕ್ಕೆ ಕಾರಣವಾಗುತ್ತದೆಂಬ ಅಂಶವನ್ನು ಗಮನದಲ್ಲಿಟ್ಟುಕೊಂಡು ನೀರಿನ ಬಿಡುಗಡೆಯ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕು” ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಅಲ್ಲದೆ, ಮುಂಬರುವ ತಿಂಗಳುಗಳಲ್ಲಿ ಕುಡಿಯುವ ನೀರಿಗಾಗಿ ಲಭ್ಯವಾಗಲಿರುವ ನೀರಿನ ಪ್ರಮಾಣವೆಷ್ಟು? ಎಂಬ ಕುರಿತು ಮುಂದಿನ ಸಭೆಯಲ್ಲಿ ಸ್ಪಷ್ಟ ಮಾಹಿತಿ ನೀಡುವಂತೆ ಜಲಸಂಪ್ಮೂಲ ಇಲಾಖೆಗೆ ಸೂಚಿಸಿದರು. ಕುಡಿಯುವ ನೀರಿಗೆ ಅವಶ್ಯವಿರುವ ನೀರನ್ನು ಕಾಯ್ದಿರಿಸಿದ ನಂತರವೇ ನೀರಾವರಿಗಾಗಿ ನೀರನ್ನು ಬಿಡುಗಡೆಗೊಳಿಸುವ ಕುರಿತು ಸಂಬಂಧಿತ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.

ಯಾವೆಲ್ಲಾ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ?

ಪ್ರಸ್ತುತ ರಾಜ್ಯದ 12 ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ಚಿತ್ರದುರ್ಗ, ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಕಲಬುರಗಿ, ಚಾಮರಾಜನಗರ, ಯಾದಗಿರಿ, ಉತ್ತರಕನ್ನಡ ಕೋಲಾರ ಮತ್ತು ರಾಮನಗರ ಜಿಲ್ಲೆಗಳಲ್ಲಿ 30 ತಾಲ್ಲೂಕುಗಳ ವ್ಯಾಪ್ತಿಯ 115 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ಬಾಡಿಗೆ ಟ್ಯಾಂಕರ್ ಮತ್ತು ಬೋರ್ವೆಲ್ಗಳ ಮುಖಾಂತರ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ.

ಅದೇ ರೀತಿ ನಗರ ವ್ಯಾಪ್ತಿಗೆ ಸಂಬಂಧಿಸಿದಂತೆ 5 ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ರಾಮನಗರ, ದಕ್ಷಿಣ ಕನ್ನಡ ಮತ್ತು ಕೋಲಾರ ಜಿಲ್ಲೆಗಳ 8 ನಗರ ಸ್ಥಳೀಯ ಸಂಸ್ಥೆಗಳ 72 ವಾರ್ಡ್ಗಳಲ್ಲಿ ಟ್ಯಾಂಕರ್ ಮತ್ತು ಬೋರ್ವೆಲ್ಗಳ ಮುಖಾಂತರ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ.

ನೀರಿನ ಸಮಸ್ಯೆಗಳನ್ನು ಪರಿಹರಿಸಲು ತಾಲೂಕು ಮತ್ತು ವಾರ್ಡ್ ಮಟ್ಟದಲ್ಲಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸುವುದು. ಎಲ್ಲಾ RO ಸ್ಥಾವರಗಳು (RO Plants) ನಿರಂತರ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಖಚಿತಪಡಿಸಿಕೊಳ್ಳುವುದು. ಹಾಗೂ ಸದರಿ ಸ್ಥಾವರಗಳಿಗೆ 24/7 ನಿರಂತರ ವಿದ್ಯುತ್ ಪೂರೈಸುವುದು. RO ಸ್ಥಾವರಗಳ ತಕ್ಷಣದ ದುರಸ್ತಿಗಾಗಿ ಮತ್ತು ಕುಡಿಯುವ ನೀರು ಸರಬರಾಜು ಸಮಸ್ಯೆಗಳ ಇತ್ಯರ್ಥಕ್ಕಾಗಿ ತ್ವರಿತ ಪರಿಹಾರ ತಂಡಗಳನ್ನು ನಿಯೋಜಿಸುವುದು. ಕುಡಿಯುವ ನೀರಿನ ಕೊರತೆಯ ಅಪಾಯದಲ್ಲಿರುವ ಪ್ರದೇಶಗಳನ್ನು ಗುರುತಿಸಿ ಮತ್ತು ಸಕಾಲಿಕ ತಗ್ಗಿಸುವಿಕೆಗಾಗಿ ಕಾರ್ಯತಂತ್ರಗಳನ್ನು ಅಭಿವೃದ್ಧಿಪಡಿಸುವ ಬಗ್ಗೆ ಸಭೆಯಲ್ಲಿ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಅವರು ಸೂಚನೆ ನೀಡಿದರು.

ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರಾದ ಪ್ರಿಯಾಂಕ್ ಖರ್ಗೆ ಹಾಗೂ ಸಂಬಂಧಿತ ಎಲ್ಲಾ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಹೆಚ್ಚಳ (15)

‘ನಾವು 100 ಕೋಟಿ ಮಾಡಿದ್ವಿ’: ಚಿತ್ರ ಯಶಸ್ಸಿಗೆ ಸಮಂತಾ ಕ್ಯೂಟ್ ರಿಯಾಕ್ಷನ್..ವಿಡಿಯೋ ವೈರಲ್

by ಶಾಲಿನಿ ಕೆ. ಡಿ
July 12, 2026 - 10:56 pm
0

ಹೆಚ್ಚಳ (14)

ರಾಜ್ಯಸಭೆ ಮಾಜಿ ಸದಸ್ಯ ಹೆಚ್.ಹನುಮಂತಪ್ಪ ನಿಧನ

by ಶಾಲಿನಿ ಕೆ. ಡಿ
July 12, 2026 - 10:36 pm
0

ಹೆಚ್ಚಳ (13)

ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

by ಶಾಲಿನಿ ಕೆ. ಡಿ
July 12, 2026 - 10:20 pm
0

ಹೆಚ್ಚಳ (12)

ಆಂಧ್ರದಲ್ಲಿ ಕೋವಿಡ್‌ಗೆ ಇಬ್ಬರು ಬಲಿ, 8 ಸಕ್ರಿಯ ಪ್ರಕರಣ

by ಶಾಲಿನಿ ಕೆ. ಡಿ
July 12, 2026 - 9:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಹೆಚ್ಚಳ (15)
    ‘ನಾವು 100 ಕೋಟಿ ಮಾಡಿದ್ವಿ’: ಚಿತ್ರ ಯಶಸ್ಸಿಗೆ ಸಮಂತಾ ಕ್ಯೂಟ್ ರಿಯಾಕ್ಷನ್..ವಿಡಿಯೋ ವೈರಲ್
    July 12, 2026 | 0
  • ಹೆಚ್ಚಳ (14)
    ರಾಜ್ಯಸಭೆ ಮಾಜಿ ಸದಸ್ಯ ಹೆಚ್.ಹನುಮಂತಪ್ಪ ನಿಧನ
    July 12, 2026 | 0
  • ಹೆಚ್ಚಳ (13)
    ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು
    July 12, 2026 | 0
  • ಹೆಚ್ಚಳ (12)
    ಆಂಧ್ರದಲ್ಲಿ ಕೋವಿಡ್‌ಗೆ ಇಬ್ಬರು ಬಲಿ, 8 ಸಕ್ರಿಯ ಪ್ರಕರಣ
    July 12, 2026 | 0
  • ಹೆಚ್ಚಳ (11)
    ಮುಂಬೈನ ತಾಜ್ ಹೋಟೆಲ್‌ಗೆ ಬಾಂಬ್ ಬೆದರಿಕೆ: ತೀವ್ರ ತಪಾಸಣೆ
    July 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version