• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಷ್ಟ್ರ ಪ್ರಶಸ್ತಿ ವಿಜೇತ ಮಲಯಾಳಂ ನಟ ಸಲೀಂ ಕುಮಾರ್ ಇನ್ನಿಲ್ಲ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 7, 2026 - 12:13 pm
in Flash News, ಸಿನಿಮಾ
0 0
0
Untitled design 2026 06 07T121217.898

ತಿರುವನಂತಪುರಂ, ಜೂನ್ 7: ಮಲಯಾಳಂ ಚಿತ್ರರಂಗದ ಹಿರಿಯ ನಟ, ಹಾಸ್ಯ ಕಲಾವಿದ ಹಾಗೂ ರಾಷ್ಟ್ರೀಯ ಪ್ರಶಸ್ತಿ ವಿಜೇತಸಲೀಂ ಕುಮಾರ್ (56)ಅವರು ಶನಿವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ. ದೀರ್ಘಕಾಲದಿಂದ ಯಕೃತ್ತಿನ ಕಾಯಿಲೆ (ಲಿವರ್ ಸಿರೋಸಿಸ್) ಸೇರಿದಂತೆ ಗಂಭೀರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು, ಕೊಚ್ಚಿಯ ಅಮೃತಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಕಳೆದ ಕೆಲವು ದಿನಗಳಿಂದ ಗಂಭೀರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಸಲೀಂ ಕುಮಾರ್ ಅವರು ಕೊಚ್ಚಿಯ ಅಮೃತಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ದೀರ್ಘಕಾಲದಿಂದ ಲಿವರ್ ಸಿರೋಸಿಸ್ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದ ಅವರ ಆರೋಗ್ಯ ಇತ್ತೀಚೆಗೆ ಮತ್ತಷ್ಟು ಹದಗೆಟ್ಟಿತ್ತು. ವೈದ್ಯರು ಅವರನ್ನು ವೆಂಟಿಲೇಟರ್‌ನಲ್ಲಿ ಇರಿಸಿ ಚಿಕಿತ್ಸೆ ನೀಡುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಹೃದಯಾಘಾತದಿಂದ ಅವರು ಮೃತಪಟ್ಟಿದ್ದಾರೆ.

RelatedPosts

ಸ್ಪೈಡರ್ ಮ್ಯಾನ್ ಜೊತೆ ರಿಷಬ್.. ಹಾಲಿವುಡ್‌‌ನಲ್ಲಿ ಶೆಟ್ರ ಹವಾ

ಶಿಲ್ಪಾ ಗಣೇಶ್ ಕಾಮಿಡಿ ಟೈಂ.. ಪಿಕ್ಚರ್ ಗುಟ್ಟು ಟ್ರೈಲರ್‌‌ನಲ್ಲಿ ರಟ್ಟು

ಪರಭಾಷೆಗಳತ್ತ ‘ಕರಾವಳಿ’: 3 ದಿನಕ್ಕೆ 5 ಕೋಟಿ ಕ್ಲಬ್ ಸೇರಿದ ಚಿತ್ರ

ನೀಟ್ ಪ್ರತಿಭಟನೆ ವಿಡಿಯೋಗಳ ಬಗ್ಗೆ ಕಂಗನಾ ಅಸಮಾಧಾನ

ADVERTISEMENT
ADVERTISEMENT

ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಕೇರಳ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿರುವ ಅಭಿಮಾನಿಗಳು ಹಾಗೂ ಚಿತ್ರರಂಗದ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಪತ್ನಿ ಸುನಿತಾ ಹಾಗೂ ಪುತ್ರರಾದ ಚಂದು ಮತ್ತು ಆರೋಮಲ್ ಅವರನ್ನು ಸಲೀಂ ಕುಮಾರ್ ಅಗಲಿದ್ದಾರೆ.

1969ರ ಅಕ್ಟೋಬರ್ 10ರಂದು ಕೇರಳದ ನಾರ್ತ್ ಪರವೂರ್‌ನಲ್ಲಿ ಜನಿಸಿದ ಸಲೀಂ ಕುಮಾರ್ ಅವರು ತಮ್ಮ ವಿದ್ಯಾಭ್ಯಾಸವನ್ನು ಎರ್ನಾಕುಲಂನ ಮಹಾರಾಜಾಸ್ ಕಾಲೇಜಿನಲ್ಲಿ ಪೂರ್ಣಗೊಳಿಸಿದ್ದರು. ಬಾಲ್ಯದಿಂದಲೇ ಕಲೆಯತ್ತ ಆಸಕ್ತಿ ಹೊಂದಿದ್ದ ಅವರು ಮಿಮಿಕ್ರಿ ಕಲಾವಿದರಾಗಿ ತಮ್ಮ ವೃತ್ತಿಜೀವನ ಆರಂಭಿಸಿದರು. ನಂತರ ವೇದಿಕೆ ಕಾರ್ಯಕ್ರಮಗಳ ಮೂಲಕ ಜನಪ್ರಿಯತೆ ಗಳಿಸಿ, ಮಲಯಾಳಂ ಚಿತ್ರರಂಗಕ್ಕೆ ಕಾಲಿಟ್ಟರು.

ಆರಂಭದಲ್ಲಿ ಹಾಸ್ಯ ಪಾತ್ರಗಳ ಮೂಲಕ ಜನಪ್ರಿಯರಾದ ಅವರು ತಮ್ಮ ವಿಶಿಷ್ಟ ಸಂಭಾಷಣಾ ಶೈಲಿ ಹಾಗೂ ಸಹಜ ಅಭಿನಯದಿಂದ ಪ್ರೇಕ್ಷಕರ ಮನಸ್ಸಿನಲ್ಲಿ ಅಚ್ಚಳಿಯದ ಸ್ಥಾನ ಪಡೆದರು. ಹಾಸ್ಯ ನಟನಾಗಿ ಮಾತ್ರವಲ್ಲದೆ ಗಂಭೀರ ಪಾತ್ರಗಳಲ್ಲಿಯೂ ತಮ್ಮ ಪ್ರತಿಭೆಯನ್ನು ಸಾಬೀತುಪಡಿಸಿ ಬಹುಮುಖ ನಟ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

2010ರಲ್ಲಿ ಬಿಡುಗಡೆಯಾದ ‘ಅದಾಮಿಂಟೆ ಮಕನ್ ಅಬು’ ಚಿತ್ರದಲ್ಲಿ ಮಹತ್ವದ ಪಾತ್ರದಲ್ಲಿ ಅಭಿನಯಿಸಿದ್ದರು. ಈ ಚಿತ್ರದಲ್ಲಿನ ಅದ್ಭುತ ನಟನೆಯ ಮೂಲಕ ಅವರು ಅತ್ಯುತ್ತಮ ನಟ ವಿಭಾಗದ ರಾಷ್ಟ್ರ ಪ್ರಶಸ್ತಿಯನ್ನು ಪಡೆದರು. ಸಾಮಾನ್ಯ ವ್ಯಕ್ತಿಯ ಜೀವನ ಹೋರಾಟವನ್ನು ಅವರು ತೆರೆ ಮೇಲೆ ಜೀವಂತವಾಗಿ ಮೂಡಿಸಿದ ರೀತಿಗೆ ದೇಶಾದ್ಯಂತ ಮೆಚ್ಚುಗೆ ವ್ಯಕ್ತವಾಗಿತ್ತು.

ಇದಲ್ಲದೆ ‘ಅಚಾನುರಂಗತಾ ವೀಡು’ ಚಿತ್ರದ ಅಭಿನಯಕ್ಕಾಗಿ ಕೇರಳ ರಾಜ್ಯದ ಎರಡನೇ ಅತ್ಯುತ್ತಮ ನಟ ಪ್ರಶಸ್ತಿಯನ್ನೂ ಪಡೆದಿದ್ದರು. ನಟನೆಯ ಜೊತೆಗೆ ನಿರ್ದೇಶನ ಕ್ಷೇತ್ರದಲ್ಲಿಯೂ ತಮ್ಮ ಛಾಪು ಮೂಡಿಸಿದ್ದ ಅವರು, 2017ರಲ್ಲಿ ನಿರ್ದೇಶಿಸಿದ ‘ಕರುತ ಜೂಥನ್’ ಚಿತ್ರಕ್ಕೆ ಅತ್ಯುತ್ತಮ ಕಥೆ ವಿಭಾಗದಲ್ಲಿ ರಾಜ್ಯ ಪ್ರಶಸ್ತಿ ಗಳಿಸಿದ್ದರು.

ಸಲೀಂ ಕುಮಾರ್ ಅವರ ಹೆಸರಿನ ಹಿಂದೆಯೂ ಒಂದು ವಿಶಿಷ್ಟ ಕಥೆಯಿದೆ. ಅವರ ತಂದೆ ಗಂಗಾಧರನ್ ಅವರು ನಾಸ್ತಿಕ ಚಿಂತನೆಗಳನ್ನು ಹೊಂದಿದ್ದವರು. ಧರ್ಮದ ಗಡಿ ರೇಖೆಗಳನ್ನು ಮೀರಿ ಎಲ್ಲರನ್ನು ಸಮಾನವಾಗಿ ಕಾಣಬೇಕು ಎಂಬ ಉದ್ದೇಶದಿಂದ ಹಿಂದೂ ಮತ್ತು ಮುಸ್ಲಿಂ ಧರ್ಮಗಳ ಪ್ರತೀಕವಾಗಿ ‘ಸಲೀಂ ಕುಮಾರ್’ ಎಂಬ ಹೆಸರನ್ನು ಇಟ್ಟಿದ್ದರು. 

ಸುಮಾರು ಮೂರು ದಶಕಗಳಿಗೂ ಹೆಚ್ಚು ಕಾಲ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಸಲೀಂ ಕುಮಾರ್ ಅವರು ನೂರಾರು ಚಿತ್ರಗಳಲ್ಲಿ ಅಭಿನಯಿಸಿ ತಮ್ಮದೇ ಆದ ಗುರುತನ್ನು ಮೂಡಿಸಿದ್ದರು. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ನಲ್ಲಿ

ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ ಜೋರು

by ಶಾಲಿನಿ ಕೆ. ಡಿ
July 27, 2026 - 6:41 pm
0

Untitled design (56)

ಕಾರ್ಗಿಲ್ ವೀರರಿಗೆ ವಿಶೇಷ ನಮನ:‌ ಹಿಮಾಚಲ, ಲಡಾಖ್ ದಾಟಿ ದ್ರಾಸ್‌ನಲ್ಲಿ ಸಂಪನ್ನಗೊಂಡ 1,900 ಕಿ.ಮೀ. ‘ಶೌರ್ಯ ವಿಜಯ್ ಯಾತ್ರೆ’

by ಕವಿತಾ
July 27, 2026 - 6:37 pm
0

Untitled design (55)

ಬೈ ಒನ್-ಗೆಟ್ ಒನ್ ಆಫರ್‌ನಲ್ಲಿ ಬ್ಲಿಂಕಿಟ್‌ ಮೋಸ: 703 ರೂ. ವಸ್ತುವಿಗೆ 35 ಸಾವಿರ ರೂ. ಪರಿಹಾರ!

by ಕವಿತಾ
July 27, 2026 - 6:25 pm
0

Untitled design (51)

ಸ್ಪೈಡರ್ ಮ್ಯಾನ್ ಜೊತೆ ರಿಷಬ್.. ಹಾಲಿವುಡ್‌‌ನಲ್ಲಿ ಶೆಟ್ರ ಹವಾ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 27, 2026 - 5:56 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಖರ್ಜೂರನಾ (15)
    ಸಾರ್ವಜನಿಕ ಪರೀಕ್ಷೆ ತಿದ್ದುಪಡಿ ಮಸೂದೆಯಲ್ಲೇನಿದೆ? ಅಕ್ರಮ ತಡೆಗಟ್ಟಲು ಕೈಗೊಂಡಿರೋ ಕ್ರಮವೇನು?
    July 27, 2026 | 0
  • ಖರ್ಜೂರನಾ (14)
    ಯೋಧರ ತ್ಯಾಗ-ಬಲಿದಾನ ಮರೆಯಲು ಸಾಧ್ಯವಿಲ್ಲ: ಡಾ. ವಿಎಸ್‍ವಿ ಪ್ರಸಾದ್‌‌
    July 27, 2026 | 0
  • ಖರ್ಜೂರನಾ (12)
    ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ AK47 ತೋರಿಸಿದ ಪೊಲೀಸ್: ವಿಡಿಯೋ ವೈರಲ್ ಬೆನ್ನಲ್ಲೇ ಕಾನ್ಸ್‌ಟೇಬಲ್‌ ಸಸ್ಪೆಂಡ್
    July 27, 2026 | 0
  • ಖರ್ಜೂರನಾ (11)
    ಸಂಸತ್ತಿನಲ್ಲಿ ಸಾರ್ವಜನಿಕ ಪರೀಕ್ಷಾ ತಿದ್ದುಪಡಿ ಮಸೂದೆ ಮಂಡನೆ
    July 27, 2026 | 0
  • ಖರ್ಜೂರನಾ (10)
    ಪ್ರೋಟೆಸ್ಟ್‌ ನಡೆದ ತಕ್ಷಣ ಲಾಠಿಚಾರ್ಜ್ ಮಾಡುವಂತಿಲ್ಲ: ಕೇಂದ್ರಕ್ಕೆ ಸುಪ್ರೀಂ ಮಹತ್ವದ ಆದೇಶ
    July 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version