• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, October 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಇನ್ಮುಂದೆ ಬಸ್‌ನಲ್ಲಿ ಉಚಿತ ಪ್ರಯಾಣಕ್ಕೆ ಸ್ಮಾರ್ಟ್ ಕಾರ್ಡ್: ಶ್ರೀಘ್ರದಲ್ಲೇ ವಿತರಣೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 9, 2026 - 12:56 pm
in Flash News, ಕರ್ನಾಟಕ
0 0
0
Untitled design 2026 06 09T125519.352

ಬೆಂಗಳೂರು, ಜೂನ್ 09: ರಾಜ್ಯದ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ‘ಶಕ್ತಿ’ ಗ್ಯಾರಂಟಿ ಯೋಜನೆಯಲ್ಲಿ ಸಾರಿಗೆ ಇಲಾಖೆ ಮಹತ್ವದ ಬದಲಾವಣೆ ಮಾಡಿದೆ. ಇದುವರೆಗೆ ಮಹಿಳೆಯರು ಆಧಾರ್ ಕಾರ್ಡ್ ತೋರಿಸಿ ಉಚಿತವಾಗಿ ಪ್ರಯಾಣಿಸುತ್ತಿದ್ದ ಸಾಂಪ್ರದಾಯಿಕ ವ್ಯವಸ್ಥೆಗೆ ತೆರೆ ಎಳೆಯಲಾಗುತ್ತಿದೆ. ಶೀಘ್ರದಲ್ಲೇ ಅರ್ಹ ಮಹಿಳಾ ಪ್ರಯಾಣಿಕರಿಗೆ ಇಲಾಖೆಯ ವತಿಯಿಂದ ಉಚಿತ ಸ್ಮಾರ್ಟ್ ಕಾರ್ಡ್ ವಿತರಿಸಲು ನಿರ್ಧರಿಸಲಾಗಿದೆ.

ನೂತನ ಸಾರಿಗೆ ಸಚಿವರಾಗಿ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸೋಮವಾರ ಅಧಿಕೃತವಾಗಿ ಕಾರ್ಯಾರಂಭ ಮಾಡಿದ ಬೈರತಿ ಸುರೇಶ್ ಅವರು, ನಾಲ್ಕೂ ಸಾರಿಗೆ ನಿಗಮಗಳ ಹಿರಿಯ ಅಧಿಕಾರಿಗಳೊಂದಿಗೆ ನಡೆಸಿದ ಮಹತ್ವದ ಸಭೆಯ ಬಳಿಕ ಈ ವಿಷಯವನ್ನು ಪ್ರಕಟಿಸಿದ್ದಾರೆ.

RelatedPosts

ಸುಪ್ರೀಂ ಕೋರ್ಟ್ ನಕಲಿ ಆದೇಶ, ಜೀವಾವಧಿ ಕೈದಿ ಬಿಡುಗಡೆ; ಡಿಐಜಿ ಅರೆಸ್ಟ್!

ಎರಡು ಬಾರಿ ಸಿಎಂ ಆಗಿದ್ದು ವರುಣಾ ಜನರ ಆಶೀರ್ವಾದದಿಂದ: ಸಿದ್ದರಾಮಯ್ಯ

ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ.2ರಷ್ಟು ಮೀಸಲಾತಿ!

ಮೈಸೂರು ದಸರಾ: ʻಸೂರ್ಯ ಕಿರಣ್ ಏರೋಬ್ಯಾಟಿಕ್ ಶೋಗೆʼ ಕೇಂದ್ರ ಗ್ರೀನ್ ಸಿಗ್ನಲ್

ADVERTISEMENT
ADVERTISEMENT
ಸ್ಮಾರ್ಟ್ ಕಾರ್ಡ್ ಯೋಜನೆಯ ಹಿನ್ನೆಲೆ ಏನು?

ಸರ್ಕಾರಿ ಗ್ಯಾರಂಟಿ ಯೋಜನೆಗಳು ಕೇವಲ ಅರ್ಹರಿಗೆ ಮಾತ್ರ ತಲುಪಬೇಕು ಹಾಗೂ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಬೇಕು ಎಂಬ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆಶಯದಂತೆ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ. ಪ್ರಸ್ತುತ ಕೆಲವು ದುಷ್ಕರ್ಮಿಗಳು ನಕಲಿ ಆಧಾರ್ ಕಾರ್ಡ್ ಬಳಸಿ ಉಚಿತ ಪ್ರಯಾಣ ಮಾಡುತ್ತಿರುವುದು ಪತ್ತೆಯಾಗಿದೆ. ಈ ಅವ್ಯವಹಾರಕ್ಕೆ ಸ್ಮಾರ್ಟ್ ಕಾರ್ಡ್ ಮೂಲಕ ಬ್ರೇಕ್ ಹಾಕಲು ಸರ್ಕಾರ ನಿರ್ಧರಿಸಿದೆ.

3 ಕೋಟಿ ಕಾರ್ಡ್ ವಿತರಣೆ: ವಿವರಗಳು

ರಾಜ್ಯಾದ್ಯಂತ ಸುಮಾರು 3 ಕೋಟಿಗೂ ಹೆಚ್ಚು ಜನರಿಗೆ ಈ ಸ್ಮಾರ್ಟ್ ಕಾರ್ಡ್‌ಗಳನ್ನು ವಿತರಿಸುವ ಬೃಹತ್ ಗುರಿ ಹೊಂದಲಾಗಿದೆ. ಪ್ರಮುಖ ವಿಶೇಷತೆಗಳು

  • ಮಹಿಳೆಯರಿಗೆ- ಸ್ಮಾರ್ಟ್ ಕಾರ್ಡ್ ಸಂಪೂರ್ಣ ಉಚಿತ

  • ಪುರುಷ ಪ್ರಯಾಣಿಕರಿಗೆ- ‘ನಮ್ಮ ಮೆಟ್ರೊ’ ಕಾರ್ಡ್ ಮಾದರಿಯಲ್ಲಿ ನಿಗದಿತ ಹಣ ಪಾವತಿಸಿ ಪಡೆಯಬಹುದು

  • ರೀಚಾರ್ಜ್ ಸೌಲಭ್ಯ- ಹಣ ಖಾಲಿಯಾದಾಗ ಆನ್‌ಲೈನ್/ಆಫ್‌ಲೈನ್ ಮೂಲಕ ರೀಚಾರ್ಜ್ ಮಾಡಿಸಿಕೊಳ್ಳಬಹುದು

  • ಜಾಗತಿಕ ಟೆಂಡರ್- ಇಷ್ಟು ದೊಡ್ಡ ಪ್ರಮಾಣದಲ್ಲಿ ಕಾರ್ಡ್ ಸಿದ್ಧಪಡಿಸಲು ಗ್ಲೋಬಲ್ ಟೆಂಡರ್ ಕರೆಯಲಾಗುವುದು

ಪ್ರಾಯೋಗಿಕ ಯೋಜನೆ (Pilot Project)

ಆರಂಭದಲ್ಲಿ ಕೆಲವು ಚುನಾಯಿತ ಮಾರ್ಗಗಳಲ್ಲಿ ಪ್ರಾಯೋಗಿಕವಾಗಿ ಈ ವ್ಯವಸ್ಥೆಯನ್ನು ಜಾರಿಗೆ ತರಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಪ್ರಾಯೋಗಿಕ ಯೋಜನೆ ಯಶಸ್ವಿಯಾದ ಬಳಿಕ ರಾಜ್ಯದ ಎಲ್ಲಾ ಬಸ್‌ಗಳಿಗೆ ವಿಸ್ತರಿಸಲಾಗುವುದು.

ನಕಲಿ ಕಾರ್ಡ್ ಆಟಕ್ಕೆ ಬ್ರೇಕ್

ಹೊಸ ಸ್ಮಾರ್ಟ್ ಕಾರ್ಡ್ ನಕಲಿ ಆಧಾರ್ ಕಾರ್ಡ್ ತೋರಿಸಿ ಉಚಿತ ಪ್ರಯಾಣ ಮಾಡುವ ಖದೀಮರಿಗೆ ತಕ್ಕ ಉತ್ತರವಾಗಿದೆ. ಕಾರ್ಡ್‌ನಲ್ಲಿ ಇ-ಕೆವೈಸಿ (e-KYC) ಮಾಡಲಾಗಿರುತ್ತದೆ. ಕಂಡಕ್ಟರ್‌ಗಳು ಇನ್ನು ಮುಂದೆ ಆಧಾರ್ ಕಾರ್ಡ್ ಪರಿಶೀಲನೆ ಮಾಡಬೇಕಾಗಿಲ್ಲ. ಬದಲಿಗೆ ಟಿಕೆಟ್ ಕೊಡುವ ಇಟಿಎಂ (ETM) ಮಿಷನ್‌ನಲ್ಲಿ ಕಾರ್ಡ್ ಸ್ಟೈಪ್ ಮಾಡಿದರೆ ಸಾಕು, ಟಿಕೆಟ್ ಸ್ವಯಂಚಾಲಿತವಾಗಿ ನೀಡಲಾಗುತ್ತದೆ.

ಮೆಟ್ರೋದಲ್ಲೂ ಉಪಯೋಗ: NCMC ಮಾದರಿ

ಈ ಸ್ಮಾರ್ಟ್ ಕಾರ್ಡ್ ಕೇವಲ ಬಸ್‌ಗಳಿಗೆ ಮಾತ್ರ ಸೀಮಿತವಾಗಿರದೆ, ನ್ಯಾಷನಲ್ ಕಾಮನ್ ಮೊಬಿಲಿಟಿ ಕಾರ್ಡ್ (NCMC) ಮಾದರಿಯಲ್ಲಿರಲಿದೆ. ಅಂದರೆ ನಮ್ಮ ಮೆಟ್ರೋ ಸೇರಿದಂತೆ ಇತರೆ ಸಾರಿಗೆ ವ್ಯವಸ್ಥೆಗಳಲ್ಲೂ ಇದನ್ನು ಬಳಸಬಹುದು. ಒಂದೇ ಕಾರ್ಡ್ ಮೂಲಕ ಬಸ್, ಮೆಟ್ರೋ, ಮತ್ತು ಭವಿಷ್ಯದಲ್ಲಿ ರೈಲ್ವೇ ಪ್ರಯಾಣಕ್ಕೂ ಬಳಸುವ ಸಾಧ್ಯತೆಯಿದೆ.

5,000 ಹೊಸ ಬಸ್‌ಗಳ ಖರೀದಿ

ಶಕ್ತಿ ಯೋಜನೆ ಜಾರಿಯಾದ ನಂತರ ಸರ್ಕಾರಿ ಬಸ್‌ಗಳಲ್ಲಿ ಪ್ರಯಾಣಿಕರ ಸಂಖ್ಯೆ ಶೇ. 40 ರಷ್ಟು ಹೆಚ್ಚಾಗಿದೆ. ಸದ್ಯ ದಿನವೊಂದಕ್ಕೆ ಸರಾಸರಿ 75.68 ಲಕ್ಷ ಮಹಿಳೆಯರು ಈ ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಹೆಚ್ಚುತ್ತಿರುವ ಪ್ರಯಾಣಿಕರ ಒತ್ತಡವನ್ನು ನಿಭಾಯಿಸಲು ಈ ವ್ಯವಸ್ಥೆ ಮಾಡಲಾಗಿದೆ. 

  • 1,000 ಹೊಸ ಡೀಸೆಲ್ ಬಸ್‌ಗಳು – ರಾಜ್ಯ ಸರ್ಕಾರದ ಅನುದಾನ

  • 4,000 ಎಲೆಕ್ಟ್ರಿಕ್ ಬಸ್‌ಗಳು – ಕೇಂದ್ರ ಸರ್ಕಾರದ ಅನುದಾನ

  • ಹಂತ ಹಂತವಾಗಿ ನಾಲ್ಕೂ ಸಾರಿಗೆ ನಿಗಮಗಳಿಗೆ ಹಂಚಿಕೆ

ಮಹಿಳಾ ಸುರಕ್ಷತೆಗೆ ‘ನಿರ್ಭಯ’ ಆದ್ಯತೆ

ಸಚಿವ ಬೈರತಿ ಸುರೇಶ್ ಅವರು ಮಹಿಳೆಯರು ಮತ್ತು ಹೆಣ್ಣು ಮಕ್ಕಳ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಖಾಸಗಿ ವಾಣಿಜ್ಯ ಕಾರುಗಳು ಹಾಗೂ ಟ್ಯಾಕ್ಸಿಗಳಲ್ಲಿ ವೆಹಿಕಲ್ ಲೊಕೇಶನ್ ಟ್ರ್ಯಾಕಿಂಗ್ ಸಿಸ್ಟಮ್ (VLTS) ಅಳವಡಿಕೆಯನ್ನು ಚುರುಕುಗೊಳಿಸಲು ಆದೇಶಿಸಲಾಗಿದೆ.

  • ಈಗಾಗಲೇ 1 ಲಕ್ಷಕ್ಕೂ ಹೆಚ್ಚು ವಾಹನಗಳಿಗೆ VLTS ಅಳವಡಿಸಲಾಗಿದೆ

  • ಉಳಿದ 4-5 ಲಕ್ಷ ಖಾಸಗಿ ವಾಣಿಜ್ಯ ವಾಹನಗಳಿಗೆ 3-4 ತಿಂಗಳಲ್ಲಿ ಕಡ್ಡಾಯವಾಗಿ ಅಳವಡಿಸಬೇಕು

  • ನೈಜ ಸಮಯದಲ್ಲಿ (Real-time) ವಾಹನಗಳ ಸ್ಥಳ ಪತ್ತೆಗೆ ಈ ವ್ಯವಸ್ಥೆ ನೆರವಾಗಲಿದೆ

ಪ್ರಾಯೋಗಿಕ ಯೋಜನೆಯ ಯಶಸ್ಸಿನ ನಂತರ ಸ್ಮಾರ್ಟ್ ಕಾರ್ಡ್ ವಿತರಣೆ ಪ್ರಕ್ರಿಯೆಗೆ ಚಾಲನೆ ಸಿಗಲಿದೆ. ಸಾರಿಗೆ ಇಲಾಖೆಯ ಅಂದಾಜಿನ ಪ್ರಕಾರ, ಮುಂದಿನ 6-8 ತಿಂಗಳುಗಳಲ್ಲಿ ರಾಜ್ಯದ ಎಲ್ಲಾ ಮಹಿಳಾ ಪ್ರಯಾಣಿಕರಿಗೆ ಸ್ಮಾರ್ಟ್ ಕಾರ್ಡ್ ತಲುಪಿಸುವ ಗುರಿಯನ್ನು ಹೊಂದಲಾಗಿದೆ. ಶಕ್ತಿ ಯೋಜನೆಯ ಈ ಹೊಸ ಅವತಾರ ಸಂಪೂರ್ಣ ಸಾರಿಗೆ ವ್ಯವಸ್ಥೆಗೆ ಆಧುನಿಕತೆ ಮತ್ತು ಪಾರದರ್ಶಕತೆಯನ್ನು ತರಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (27)

ಸುಪ್ರೀಂ ಕೋರ್ಟ್ ನಕಲಿ ಆದೇಶ, ಜೀವಾವಧಿ ಕೈದಿ ಬಿಡುಗಡೆ; ಡಿಐಜಿ ಅರೆಸ್ಟ್!

by ಕವಿತಾ
October 5, 2026 - 10:34 pm
0

Untitled design (26)

ಯುವತಿ ಆತ್ಮಹತ್ಯೆ; ಪತಿ-ಕುಟುಂಬದ ವಿರುದ್ಧ ಕಿರುಕುಳ ಆರೋಪ!

by ಕವಿತಾ
October 5, 2026 - 10:19 pm
0

Untitled design (25)

ಕುನೋ ರಾಷ್ಟ್ರೀಯ ಉದ್ಯಾನ; 5 ಮರಿಗಳಿಗೆ ಜನ್ಮ ನೀಡಿದ ಭಾರತದಲ್ಲಿ ಹುಟ್ಟಿದ ಚೀತಾ!

by ಕವಿತಾ
October 5, 2026 - 8:58 pm
0

Untitled design (24)

ಕಾಂಗೋ ನದಿಯಲ್ಲಿ ಭೀಕರ ದೋಣಿ ಅಪಘಾತ; 30 ಮಂದಿ ಸಾ*ವು

by ಕವಿತಾ
October 5, 2026 - 8:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • 4 ಸಾವಿರ ಮಂದಿಜನಸಾಗರ
    ಸಿಇಸಿ ಜ್ಞಾನೇಶ್ ಕುಮಾರ್ ಅಮಾನತಿಗೆ ಸುಪ್ರೀಂ ಕೋರ್ಟ್ ನಕಾರ: ECIಗೆ ನೋಟಿಸ್ ಜಾರಿ
    October 5, 2026 | 0
  • ಹಬ್ಬದ ವೇಳೆ ಬೀದಿ ವ್ಯಾಪಾರಿಗಳನ್ನು ತೆರವುಗೊಳಿಸಬೇಡಿ
    ಹಬ್ಬದ ವೇಳೆ ಬೀದಿ ವ್ಯಾಪಾರಿಗಳನ್ನು ತೆರವುಗೊಳಿಸಬೇಡಿ: ಎಲ್ಲಾ ರಾಜ್ಯಗಳಿಗೆ NHRC ಮಹತ್ವದ ಆದೇಶ
    October 5, 2026 | 0
  • Untitled design 2026 10 05T110140.014
    ರಷ್ಯಾದಲ್ಲಿ ಪ್ಲೇಗ್ ಭೀತಿ: ಸಂಶೋಧಕಿ ಸಾವು, 200ಕ್ಕೂ ಹೆಚ್ಚು ಜನ ಕ್ವಾರಂಟೈನ್
    October 5, 2026 | 0
  • ಸರ್ಕಾರ (9)
    ಅಮೆರಿಕಕ್ಕೆ ಇರಾನ್ ಖಡಕ್ ಸಂದೇಶ: 7 ಷರತ್ತು ಈಡೇರುವವರೆಗೆ ಹಾರ್ಮುಜ್ ಜಲಸಂಧಿ ಬಂದ್
    October 4, 2026 | 0
  • ಸರ್ಕಾರ (1)
    ಉಕ್ರೇನ್ ಮೇಲೆ ರಷ್ಯಾ ಡ್ರೋನ್ ದಾಳಿ: ಔಷಧ ಘಟಕ ಧ್ವಂಸ, ಓರ್ವ ಸಾ*ವು
    October 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version