• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, November 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜ್ಯದಲ್ಲಿ ಮುಂದಿನ 7 ದಿನ ಭಾರೀ ಮಳೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 11, 2026 - 10:40 am
in Flash News, ಕರ್ನಾಟಕ, ಬೆಂ. ನಗರ
0 0
0
Untitled design 2026 06 11T104007.855

ಬೆಂಗಳೂರು, ಜೂನ್ 11: ಕರ್ನಾಟಕದಲ್ಲಿ ನೈಋತ್ಯ ಮುಂಗಾರು ದಿನದಿಂದ ದಿನಕ್ಕೆ ಚುರುಕುಗೊಳ್ಳುತ್ತಿದ್ದು, ಮುಂದಿನ ಒಂದು ವಾರ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಮುನ್ಸೂಚನೆಯ ಪ್ರಕಾರ, ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡು ಕರ್ನಾಟಕದ ಹಲವೆಡೆ ಭಾರಿ ಮಳೆಯೊಂದಿಗೆ ಗುಡುಗು-ಮಿಂಚು ಮತ್ತು ಗಾಳಿಯ ಎಚ್ಚರಿಕೆಯನ್ನು ನೀಡಲಾಗಿದೆ.

ರಾಜ್ಯದ ವಿವಿಧ ಭಾಗಗಳಲ್ಲಿ ಈಗಾಗಲೇ ಮುಂಗಾರು ಚಟುವಟಿಕೆಗಳು ವೇಗ ಪಡೆದುಕೊಂಡಿದ್ದು, ರೈತರು ಹಾಗೂ ಸಾರ್ವಜನಿಕರಲ್ಲಿ ಸಂತಸ ಮೂಡಿಸಿದೆ. ಆದರೆ ಕೆಲವೆಡೆ ಭಾರಿ ಮಳೆ ಹಾಗೂ ಬಿರುಗಾಳಿಯಿಂದಾಗಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಹವಾಮಾನ ಇಲಾಖೆ ಸೂಚಿಸಿದೆ.

RelatedPosts

‘ಆಶಾ ಕಾರ್ಯಕರ್ತೆಯರಿಗೆ ಲಿಖಿತ ರೂಪದಲ್ಲಿ ಭರವಸೆ ಕೊಡಲ್ಲ’: ಪ್ರತಿಭಟನೆ ವಾಪಸ್ ಪಡೆಯಿರಿ ಎಂದ ಡಿಕೆಶಿ

ಬೆಳಗಾವಿಯಲ್ಲಿ ಆಸ್ತಿಗಾಗಿ ಡಬಲ್ ಮರ್ಡರ್: ಅತ್ತೆ, ಅಳಿಯನ ಬರ್ಬರ ಹತ್ಯೆ!

ರೇಣುಕಾಸ್ವಾಮಿ ಕೇಸ್: ಐವರು ಆರೋಪಿಗಳಿಗೆ ರಿಲೀಫ್, ಜಾಮೀನು ರದ್ದು ಕೋರಿದ್ದ ಅರ್ಜಿ ವಜಾ

ಜಮೀನು ಒತ್ತುವರಿ ವಿಚಾರಕ್ಕೆ ಗಲಾಟೆ: ಯುವಕನಿಗೆ ಗುಂಡೇಟು, ಆರೋಪಿ ಅರೆಸ್ಟ್

ADVERTISEMENT
ADVERTISEMENT
ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

ಐಎಂಡಿಯ ಏಳು ದಿನಗಳ ಹವಾಮಾನ ಮುನ್ಸೂಚನೆಯ ಪ್ರಕಾರ, ಕರಾವಳಿ ಕರ್ನಾಟಕದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೂನ್ 11 ಮತ್ತು 12ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ. ಸಮುದ್ರ ತೀರ ಪ್ರದೇಶಗಳಲ್ಲಿ  ಗಾಳಿ ಬೀಸುವ ನಿರೀಕ್ಷೆಯಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯುವ ಮುನ್ನ ಹವಾಮಾನ ಇಲಾಖೆಯ ಸೂಚನೆಗಳನ್ನು ಗಮನಿಸುವಂತೆ ಸಲಹೆ ನೀಡಲಾಗಿದೆ.

ಜೂನ್ 14ರ ನಂತರ ಮಳೆಯ ತೀವ್ರತೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗುವ ಸಾಧ್ಯತೆ ಇದ್ದರೂ, ಕರಾವಳಿ ಭಾಗಗಳಲ್ಲಿ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆ ಮುಂದುವರಿಯಲಿದೆ ಎಂದು ಇಲಾಖೆ ತಿಳಿಸಿದೆ.

ಉತ್ತರ ಕರ್ನಾಟಕದಲ್ಲೂ ಮಳೆರಾಯನ ಅಬ್ಬರ

ಉತ್ತರ ಒಳನಾಡು ಕರ್ನಾಟಕದ ಹಲವು ಜಿಲ್ಲೆಗಳಲ್ಲೂ ಮಳೆಯ ವಾತಾವರಣ ಮುಂದುವರಿಯಲಿದೆ. ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಕೊಪ್ಪಳ, ಗದಗ, ಧಾರವಾಡ, ಬೆಳಗಾವಿ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಗುಡುಗು-ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.

ಕೆಲವು ಪ್ರದೇಶಗಳಲ್ಲಿ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮರಗಳ ಕೆಳಗೆ ನಿಲ್ಲದಂತೆ ಹಾಗೂ ವಿದ್ಯುತ್ ಕಂಬಗಳ ಬಳಿ ಜಾಗರೂಕರಾಗಿರುವಂತೆ ಎಚ್ಚರಿಕೆ ನೀಡಲಾಗಿದೆ. ರೈತರು ಕೃಷಿ ಚಟುವಟಿಕೆಗಳಲ್ಲಿ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸಲಹೆ ನೀಡಿದ್ದಾರೆ.

ದಕ್ಷಿಣ ಒಳನಾಡು ಮತ್ತು ಬೆಂಗಳೂರಿಗೆ ಮಳೆ ಮುನ್ಸೂಚನೆ

ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಒಳನಾಡು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಒಂದು ಅಥವಾ ಎರಡು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ನಗರದಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು-ಮಿಂಚಿನೊಂದಿಗೆ ಮಳೆಯಾಗುವ ನಿರೀಕ್ಷೆಯಿದ್ದು, ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸುವಂತೆ ಸೂಚಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಹಾಸನ, ಕೊಡಗು, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲೂ ಮಳೆಯ ಸಾಧ್ಯತೆ ಇದೆ.

ಇಂದು ಯಾವ ಜಿಲ್ಲೆಗಳಲ್ಲಿ ಮಳೆ?

ಹವಾಮಾನ ಇಲಾಖೆ ನೀಡಿರುವ ಮಾಹಿತಿಯಂತೆ ಇಂದು ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ವಿಜಯಪುರ, ಕೊಪ್ಪಳ, ಗದಗ, ಧಾರವಾಡ, ಬೆಳಗಾವಿ, ಹಾವೇರಿ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ.

ಮಳೆಯ ಜೊತೆಗೆ ಕೆಲವೆಡೆ ಗುಡುಗು-ಮಿಂಚು ಹಾಗೂ ಗಾಳಿ ಬೀಸುವ ನಿರೀಕ್ಷೆ ಇರುವುದರಿಂದ ಸಾರ್ವಜನಿಕರು ಅನಗತ್ಯವಾಗಿ ಹೊರಗಡೆ ಸಂಚರಿಸುವುದನ್ನು ತಪ್ಪಿಸಿ ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು ಎಂದು ಇಲಾಖೆ ಮನವಿ ಮಾಡಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled Design 2026 11 27T153107.504

ಹೃತಿಕ್-ಹೊಂಬಾಳೆ ಜೋಡಿ..ಹೊಸ ವರ್ಷಕ್ಕೆ ಮಾಡತ್ತೆ ಮೋಡಿ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 27, 2026 - 3:32 pm
0

Untitled Design 2026 11 27T151207.642

‘ಆಶಾ ಕಾರ್ಯಕರ್ತೆಯರಿಗೆ ಲಿಖಿತ ರೂಪದಲ್ಲಿ ಭರವಸೆ ಕೊಡಲ್ಲ’: ಪ್ರತಿಭಟನೆ ವಾಪಸ್ ಪಡೆಯಿರಿ ಎಂದ ಡಿಕೆಶಿ

by ಶಾಲಿನಿ ಕೆ. ಡಿ
November 27, 2026 - 3:12 pm
0

Untitled design 2026 11 27T145154.143

ಬ್ಯಾಕ್‌‌ಪೇನ್‌ಗೆ ದರ್ಶನ್‌‌‌‌‌ ಸುಸ್ತು..ವಿಕ್ಟೋರಿಯಾದಲ್ಲಿ ಚಿಕಿತ್ಸೆಗೆ ಅಸ್ತು

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 27, 2026 - 2:52 pm
0

Untitled design 2026 11 27T135827.107

ಮೇಕೆದಾಟು ಅಣೆಕಟ್ಟು ವಿವಾದ: ತಮಿಳುನಾಡು ಸರ್ಕಾರದ ನಡೆಗೆ ಸುಪ್ರೀಂ ಕೋರ್ಟ್ ಗರಂ

by ಶಾಲಿನಿ ಕೆ. ಡಿ
November 27, 2026 - 1:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled Design 2026 11 27T111359.050
    ಇನ್ಮುಂದೆ ಕರೆಂಟ್ ಬಿಲ್‌ನಲ್ಲಿ ಮಹತ್ವದ ಬದಲಾವಣೆ: ಹಗಲು, ರಾತ್ರಿ ಬಳಕೆಗೆ ಪ್ರತ್ಯೇಕ ದರ, ಕೇಂದ್ರದಿಂದ ಹೊಸ ರೂಲ್ಸ್.!
    November 27, 2026 | 0
  • Untitled Design 2026 11 26T114107.128
    ಬಿಹಾರ ಶಾಸಕನ ಮಗಳ ಮದುವೆಗೆ ಜನಸಾಗರ: ಕುದುರೆ ರೇಸ್‌ ನೋಡಲು ವಿದ್ಯುತ್ ಕಂಬವೇರಿದ ಜನ
    November 26, 2026 | 0
  • Untitled Design 2026 11 24T172933.965
    ದೋಹಾದಲ್ಲಿ ಸೂರ್ಯವಂಶಿ ವೈಭವ: 15 ಸಿಕ್ಸರ್, 28 ಎಸೆತಗಳಲ್ಲಿ ಶತಕ ಬಾರಿಸಿದ ‘ಬೇಬಿ ಬಾಸ್’
    November 24, 2026 | 0
  • Untitled Design 2026 11 17T152637.816
    ಎಲ್ಲಾ ಮಾದರಿಯ ಕ್ರಿಕೆಟ್‌ಗೆ ಗುಡ್‌ ಬೈ ಹೇಳಿದ M.S ಧೋನಿ
    November 17, 2026 | 0
  • Untitled Design 2026 11 08T132327.862
    ಯೋಧರೊಂದಿಗೆ ದೀಪಾವಳಿ ಆಚರಿಸಿದ ಪ್ರಧಾನಿ: ನೀವೆಲ್ಲರೂ ನನ್ನ ಕುಟುಂಬದ ಸದಸ್ಯರು ಎಂದ ಮೋದಿ
    November 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version