• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

9 ಗಿಗಾವ್ಯಾಟ್ ಪವನ ವಿದ್ಯುತ್ ಯೋಜನೆಗಳ ಮೂಲಕ ದೇಶದಲ್ಲೇ ನಂ.1 ಸ್ಥಾನ ಪಡೆದ ಕರ್ನಾಟಕ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 16, 2026 - 5:47 pm
in Flash News, ಕರ್ನಾಟಕ, ಬೆಂ. ನಗರ
0 0
0
Untitled design 2026 06 16T174656.715

ಗೋವಾ/ಬೆಂಗಳೂರು:  ಇಂಧನ ಕ್ಷೇತ್ರದಲ್ಲಿ ಕರ್ನಾಟಕ ರಾಜ್ಯವು ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದೆ. ‘ಅನುಷ್ಠಾನದ ಹಂತದಲ್ಲಿರುವ ಅತ್ಯಧಿಕ ಪವನ ವಿದ್ಯುತ್ ಸಾಮರ್ಥ್ಯ’ ವಿಭಾಗದಲ್ಲಿ ರಾಷ್ಟ್ರೀಯ ಮಟ್ಟದ ಪ್ರತಿಷ್ಠಿತ ಪ್ರಶಸ್ತಿಯನ್ನು ಕರ್ನಾಟಕ ತನ್ನದಾಗಿಸಿಕೊಂಡಿದೆ. ಗೋವಾದಲ್ಲಿ ನಡೆದ 2026ನೇ ಸಾಲಿನ ವಿಶ್ವ ಪವನ ದಿನಾಚರಣೆಯಲ್ಲಿ ಕರ್ನಾಟಕಕ್ಕೆ “ಹೈಯೆಸ್ಟ್ ವಿಂಡ್ ಕ್ಯಾಪಾಸಿಟಿ ಪೈಪ್ಲೈನ್” ಪ್ರಶಸ್ತಿ ಸಂದಿದೆ.

ಪ್ರಶಸ್ತಿ ಸ್ವೀಕಾರ

ಕೇಂದ್ರದ ನವ ಮತ್ತು ನವೀಕರಿಸಬಹುದಾದ ಇಂಧನ ಸಚಿವರಾದ ಪ್ರಲ್ಹಾದ್ ಜೋಶಿ ಅವರಿಂದ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ. ರುದ್ರಪ್ಪಯ್ಯ ಈ ಪ್ರಶಸ್ತಿಯನ್ನು ಸ್ವೀಕರಿಸಿದರು. ನವ ಮತ್ತು ನವೀಕರಿಸಬಹುದಾದ ಇಂಧನ ರಾಜ್ಯ ಸಚಿವ ಶ್ರೀಪಾದ್ ಯೆಸ್ಸೊ ನಾಯಕ್, ನವ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯದ ಕಾರ್ಯದರ್ಶಿ ಸಂತೋಷ್ ಕುಮಾರ್ ಸಾರಂಗಿ ಹಾಗೂ ಗೋವಾದ ನವ ಮತ್ತು ನವೀಕರಿಸಬಹುದಾದ ಇಂಧನ ಸಚಿವ ರಾಮಕೃಷ್ಣ ಧವಳೀಕರ್ ಅವರ ಸಮ್ಮುಖದಲ್ಲಿ ಪ್ರಶಸ್ತಿ ವಿತರಿಸಲಾಯಿತು.

RelatedPosts

ಹಾಸ್ಟೆಲ್‌ಗಳಿಗೆ ಭೇಟಿ ನೀಡದ ವಾರ್ಡನ್‌ಗಳ ವಿರುದ್ಧ ಕ್ರಮ: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ

ಕನ್ನಡದ ಹಿರಿಯ ನಟ ಅನಂತ್ ನಾಗ್‌‌ಗೆ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ

ಧ್ವನಿವರ್ಧಕ ಬಳಕೆಗೆ ಬ್ರೇಕ್; ಗಣೇಶನನ್ನು ನಡುರಸ್ತೆಯಲ್ಲೇ ಬಿಟ್ಟು ತೆರಳಿದ ಗ್ರಾಮಸ್ಥರು

ಸರ್ಕಾರಿ ವೇತನ ಪಡೆದು ಪಿಜಿ ಅಧ್ಯಯನ ಆರೋಪ: ವಿಚಾರಣೆಗೆ ಗೈರಾದ ಶಾಸಕ ಮೇಟಿ ಸೊಸೆ

ADVERTISEMENT
ADVERTISEMENT
9 ಗಿಗಾವ್ಯಾಟ್ ಸಾಮರ್ಥ್ಯದ ಯೋಜನೆಗಳು

ಪ್ರಸ್ತುತ ರಾಜ್ಯದಲ್ಲಿ 9 ಗಿಗಾವ್ಯಾಟ್ ಸಾಮರ್ಥ್ಯದ ಪವನ ವಿದ್ಯುತ್ ಯೋಜನೆಗಳು ಅನುಷ್ಠಾನ ಹಂತದಲ್ಲಿವೆ. ಈ ಬೃಹತ್ ಯೋಜನೆಗಳು ಕಾರ್ಯರೂಪಕ್ಕೆ ಬಂದರೆ ಕರ್ನಾಟಕವು ದೇಶದ ಅತಿದೊಡ್ಡ ಪವನ ವಿದ್ಯುತ್ ಉತ್ಪಾದಕ ರಾಜ್ಯಗಳ ಪಟ್ಟಿಯಲ್ಲಿ ಮತ್ತಷ್ಟು ಪ್ರಬಲ ಸ್ಥಾನ ಪಡೆಯಲಿದೆ. ಈ ಪ್ರಶಸ್ತಿಯೊಂದಿಗೆ ಪವನ ಶಕ್ತಿಯ ಉತ್ಪಾದನೆಯನ್ನು ಹೆಚ್ಚಿಸುವ ಮೂಲಕ ನವೀಕರಿಸಬಹುದಾದ ಇಂಧನ ಪರಿವರ್ತನೆಯನ್ನು ಬಲಪಡಿಸುವಲ್ಲಿ ರಾಜ್ಯದ ನಾಯಕತ್ವ ಹಾಗೂ ಬದ್ಧತೆಯನ್ನು ಸಾಬೀತುಪಡಿಸಿದಂತಾಗಿದೆ.

ಹರ್ಷ ವ್ಯಕ್ತಪಡಿಸಿದ ಸಚಿವ ಜಾರ್ಜ್

ಪವನ ವಿದ್ಯುತ್ ವಲಯದಲ್ಲಿ ಕರ್ನಾಟಕದ ಸಾಧನೆಗೆ ಸಂದಿರುವ ಪ್ರಶಸ್ತಿ ಬಗ್ಗೆ ಹರ್ಷ ವ್ಯಕ್ತಪಡಿಸಿರುವ ಇಂಧನ ಮತ್ತು ಪ್ರವಾಸೋದ್ಯಮ ಸಚಿವ ಕೆ.ಜೆ.ಜಾರ್ಜ್, “ಕಳೆದ ಬಾರಿಯೂ ಕರ್ನಾಟಕ ಈ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತ್ತು. ಅನುಷ್ಠಾನ ಹಂತದಲ್ಲಿರುವ ಪವನ ವಿದ್ಯುತ್ ಸಾಮರ್ಥ್ಯದಲ್ಲಿ ಕರ್ನಾಟಕವು ದೇಶದಲ್ಲೇ ಅಗ್ರಮಾನ್ಯ ಸ್ಥಾನದಲ್ಲಿರುವುದನ್ನು ಗುರುತಿಸಿ ಪ್ರಶಸ್ತಿ ನೀಡಿರುವುದು ಹೆಮ್ಮೆಯ ವಿಷಯ. ಈ ಪ್ರಶಸ್ತಿಯು ನವೀಕರಿಸಬಹುದಾದ ಇಂಧನ ಉತ್ಪಾದನೆ ಮತ್ತು ಸುಸ್ಥಿರ ಅಭಿವೃದ್ಧಿಯ ಬಗ್ಗೆ ನಮ್ಮ ಸರ್ಕಾರಕ್ಕೆ ಇರುವ ಅಚಲ ಬದ್ಧತೆಗೆ ಸಾಕ್ಷಿಯಾಗಿದೆ” ಎಂದು ತಿಳಿಸಿದ್ದಾರೆ.

“ನವೀಕರಿಸಬಹುದಾದ ಇಂಧನ ವಲಯದ ಮೂಲಸೌಕರ್ಯವನ್ನು ಮತ್ತಷ್ಟು ಬಲಪಡಿಸಿ ಹೂಡಿಕೆ ಆಕರ್ಷಿಸುವ ಜತೆಗೆ ದೇಶದ ಇಂಧನ ಪರಿವರ್ತನೆ ಮತ್ತು ನಿವ್ವಳ-ಶೂನ್ಯ ಇಂಗಾಲದ ಗುರಿ ಸಾಧನೆಗೆ ಕೈಜೋಡಿಸಲಿದ್ದೇವೆ,” ಎಂದು ಅವರು ಹೇಳಿದ್ದಾರೆ.

ವಿಶ್ವ ಪವನ ದಿನ 2026 ಆಚರಣೆ

ನವ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯವು ಗೋವಾ ಇಂಧನ ಅಭಿವೃದ್ಧಿ ಸಂಸ್ಥೆಯ ಸಹಯೋಗದೊಂದಿಗೆ ವಿಶ್ವ ಪವನ ದಿನವನ್ನು ಆಯೋಜಿಸಿತ್ತು. “ಪವನ ಶಕ್ತಿ ಮಹತ್ವಾಕಾಂಕ್ಷೆಯಿಂದ ವೇಗವರ್ಧನೆಗೆ” ಎಂಬ ಪರಿಕಲ್ಪನೆಯಡಿ ಆಯೋಜಿಸಿದ್ದ ಈ ರಾಷ್ಟ್ರೀಯ ಮಟ್ಟದ ಕಾರ್ಯಕ್ರಮದಲ್ಲಿ ವಿಂಡ್ ಟರ್ಬೈನ್ ತಯಾರಕರ ಸಂಘ (ಐಡಬ್ಲ್ಯೂಟಿಎಂಎ) ಸೇರಿದಂತೆ ಡಬ್ಲ್ಯೂಐಪಿಪಿಎ, ಐಡಬ್ಲ್ಯೂಪಿಎ ಸಂಸ್ಥೆಗಳು ಭಾಗಿಯಾಗಿದ್ದವು.

ಈ ಕಾರ್ಯಕ್ರಮವು ನೀತಿ ನಿರೂಪಕರು, ತಂತ್ರಜ್ಞಾನ ವಲಯದ ಜಾಗತಿಕ ನಾಯಕರು, ಹೂಡಿಕೆದಾರರು, ಉದ್ಯಮದ ಪಾಲುದಾರರ ಸಂವಾದಕ್ಕೆ ಸೂಕ್ತ ವೇದಿಕೆಯನ್ನು ಕಲ್ಪಿಸಿಕೊಟ್ಟಿತ್ತು. ವಿಶ್ವ ಪವನ ದಿನದ ಆಚರಣೆಯ ಭಾಗವಾಗಿ ನವೀಕರಿಸಬಹುದಾದ ಇಂಧನ, ವಿಶೇಷವಾಗಿ ಪವನ ಶಕ್ತಿಯನ್ನು ಉತ್ತೇಜಿಸುವಲ್ಲಿ ಅನುಕರಣೀಯ ಉಪಕ್ರಮಗಳನ್ನು ಕೈಗೊಂಡ ಹಾಗೂ ವಿಶೇಷ ಸಾಧನೆ ಮಾಡಿರುವ ರಾಜ್ಯಗಳನ್ನು ಗುರುತಿಸಿ ಗೌರವಿಸಲಾಯಿತು.

ಕರ್ನಾಟಕ ಸರ್ಕಾರವು ನವೀಕರಿಸಬಹುದಾದ ಇಂಧನ ಮೂಲಗಳನ್ನು ಪ್ರೋತ್ಸಾಹಿಸುವಲ್ಲಿ ಸದಾ ಮುಂಚೂಣಿಯಲ್ಲಿದೆ. ಪವನ ವಿದ್ಯುತ್ ಜೊತೆಗೆ ಸೌರಶಕ್ತಿ, ಜಲವಿದ್ಯುತ್ ಮತ್ತು ಇತರ ಪರ್ಯಾಯ ಇಂಧನ ಮೂಲಗಳ ಅಭಿವೃದ್ಧಿಗೂ ಆದ್ಯತೆ ನೀಡಲಾಗುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 09 16T202850.831

ಗುರುನಂದನ್ ಅಭಿನಯದ “MR ಜಾಕ್” ಚಿತ್ರದ ಮೊದಲ ಹಾಡು ಬಿಡುಗಡೆ

by ಶಾಲಿನಿ ಕೆ. ಡಿ
September 16, 2026 - 8:29 pm
0

Your paragraph text 2026 09 16T195645.738

ಹಾಸ್ಟೆಲ್‌ಗಳಿಗೆ ಭೇಟಿ ನೀಡದ ವಾರ್ಡನ್‌ಗಳ ವಿರುದ್ಧ ಕ್ರಮ: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ

by ಶಾಲಿನಿ ಕೆ. ಡಿ
September 16, 2026 - 7:57 pm
0

Your paragraph text 2026 09 16T194559.743

ನಟ ದರ್ಶನ್‌ಗೆ ಶಾಕ್: ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕಾರ

by ಶಾಲಿನಿ ಕೆ. ಡಿ
September 16, 2026 - 7:48 pm
0

Your paragraph text 2026 09 16T184121.195

ಪಾನ್ ಮಸಾಲಾ ಜಾಹೀರಾತು..ಮೂವರು ಸ್ಟಾರ್‌‌ಗಳಿಗೆ ಕಾನೂನು ಸಂಕಷ್ಟ

by ಶಾಲಿನಿ ಕೆ. ಡಿ
September 16, 2026 - 6:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 16T195645.738
    ಹಾಸ್ಟೆಲ್‌ಗಳಿಗೆ ಭೇಟಿ ನೀಡದ ವಾರ್ಡನ್‌ಗಳ ವಿರುದ್ಧ ಕ್ರಮ: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ
    September 16, 2026 | 0
  • Your paragraph text 2026 09 16T181158.020
    ಕನ್ನಡದ ಹಿರಿಯ ನಟ ಅನಂತ್ ನಾಗ್‌‌ಗೆ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ
    September 16, 2026 | 0
  • Your paragraph text 2026 09 16T174927.892
    ಧ್ವನಿವರ್ಧಕ ಬಳಕೆಗೆ ಬ್ರೇಕ್; ಗಣೇಶನನ್ನು ನಡುರಸ್ತೆಯಲ್ಲೇ ಬಿಟ್ಟು ತೆರಳಿದ ಗ್ರಾಮಸ್ಥರು
    September 16, 2026 | 0
  • Your paragraph text 2026 09 16T165717.310
    ಸರ್ಕಾರಿ ವೇತನ ಪಡೆದು ಪಿಜಿ ಅಧ್ಯಯನ ಆರೋಪ: ವಿಚಾರಣೆಗೆ ಗೈರಾದ ಶಾಸಕ ಮೇಟಿ ಸೊಸೆ
    September 16, 2026 | 0
  • ಗಣೇಶೋತ್ಸವದ ಮೊದಲ ದಿನವೇ ಬೆಂಗಳೂರಿನಲ್ಲಿ 1.84 ಲಕ್ಷಕ್ಕೂ ಹೆಚ್ಚು ಮೂರ್ತಿಗಳ ವಿಸರ್ಜನೆ
    ಗಣೇಶೋತ್ಸವದ ಮೊದಲ ದಿನವೇ ಬೆಂಗಳೂರಿನಲ್ಲಿ 1.84 ಲಕ್ಷಕ್ಕೂ ಹೆಚ್ಚು ಮೂರ್ತಿಗಳ ವಿಸರ್ಜನೆ
    September 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version