• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹೈದರಾಬಾದ್‌‌ನ ಪ್ರಮುಖ ರಸ್ತೆಗೆ ಟ್ರಂಪ್ ಹೆಸರು: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಕಿಡಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 17, 2026 - 11:41 am
in Flash News, ದೇಶ
0 0
0
Untitled design 2026 06 17T114109.738

RelatedPosts

ಅಭಿನಂದನ್ ವರ್ಧಮಾನ್ ವಾಯುಪಡೆ ಸೇವೆಗೆ ವಿದಾಯ: ಕಮರ್ಷಿಯಲ್ ಪೈಲಟ್ ಆಗಿ ಹೊಸ ಪಯಣ

ಸೆ.4ರಂದು ಆಕಾಶಕ್ಕೆ ಹಾರಲಿದೆ EOS-05: ಇದರ ವಿಶೇಷತೆ ಏನು?

ಜಲಪ್ರಳಯಕ್ಕೆ ನೇಪಾಳ ತತ್ತರ: ಮೃತರ ಸಂಖ್ಯೆ 1,127ಕ್ಕೆ ಏರಿಕೆ, 4,858 ಮಂದಿ ನಾಪತ್ತೆ

ಭಾರತದಲ್ಲಿ ನಡೆಯಲಿದೆ ಮೊದಲ ಮಹಿಳಾ ಟಿ20 ಚಾಂಪಿಯನ್ಸ್ ಟ್ರೋಫಿ: ಫೆ.14ರಿಂದ ಕ್ರಿಕೆಟ್ ಕದನ

ADVERTISEMENT
ADVERTISEMENT

ಹೈದರಾಬಾದ್, ಜೂನ್ 17: ತೆಲಂಗಾಣ ಸರ್ಕಾರ (Telangana) ಅಮೆರಿಕದೊಂದಿಗಿನ (America) ಆರ್ಥಿಕ ಮತ್ತು ರಾಜತಾಂತ್ರಿಕ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯೊಂದನ್ನು ಇಟ್ಟಿದೆ. ಹೈದರಾಬಾದ್ (Hyderabad) ಫೈನಾನ್ಸಿಯಲ್ ಡಿಸ್ಟ್ರಿಕ್ಟ್ ಪ್ರದೇಶದಲ್ಲಿರುವ ಅಮೆರಿಕದ ರಾಯಭಾರ ಕಚೇರಿಗೆ (US Consulate) ಹೊಂದಿಕೊಂಡಿರುವ ಪ್ರಮುಖ ರಸ್ತೆಗೆ ಅಮೆರಿಕದ 45ನೇ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರ ಹೆಸರನ್ನು ಇಡಲಾಗಿದೆ. ಜೂನ್ 23 ರಂದು ‘ಡೊನಾಲ್ಡ್ ಟ್ರಂಪ್ ಅವೆನ್ಯೂ’ (Donald Trump Avenue) ರಸ್ತೆಯನ್ನು ಅಧಿಕೃತವಾಗಿ ಉದ್ಘಾಟಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಯೋಜನೆಯ ಹಿಂದಿನ ಕುತೂಹಲಕಾರಿ ಹಿನ್ನೆಲೆ
ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಅವರು 2025 ರ ಡಿಸೆಂಬರ್‌‌ನಲ್ಲೇ ಈ ರಸ್ತೆಗೆ ಅಮೆರಿಕ ಅಧ್ಯಕ್ಷರ ಹೆಸರಿಡುವ ಪ್ರಸ್ತಾಪವನ್ನು ಮುಂದಿಟ್ಟಿದ್ದರು. ಆದರೆ, ಜಾಗತಿಕ ಮಟ್ಟದಲ್ಲಿ ಉಂಟಾಗಿದ್ದ ಸುಂಕದ ವಿವಾದ ಹಾಗೂ ಪಶ್ಚಿಮ ಏಷ್ಯಾದ ಸಂಘರ್ಷದ ಕಾರಣದಿಂದಾಗಿ ಈ ಯೋಜನೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿತ್ತು. ಈಗ ಜಾಗತಿಕ ಪರಿಸ್ಥಿತಿ ತಿಳಿಗೊಂಡಿರುವ ಹಿನ್ನೆಲೆ ತೆಲಂಗಾಣ ಸರ್ಕಾರ ಈ ಪ್ರಸ್ತಾಪಕ್ಕೆ ಮರುಜೀವ ನೀಡಿದ್ದು, ಉದ್ಘಾಟನೆಗೆ ದಿನಾಂಕ ನಿಗದಿಪಡಿಸಿದೆ. ಅಮೆರಿಕದ ಸ್ವಾತಂತ್ರ್ಯ ದಿನಾಚರಣೆ (ಜುಲೈ 4) ಮತ್ತು 2028ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಹಿನ್ನೆಲೆ ಈ ಉದ್ಘಾಟನೆಗೆ ಮತ್ತಷ್ಟು ಮಹತ್ವ ಬಂದಿದೆ.

ಭವ್ಯ ಸಮಾರಂಭದಲ್ಲಿ ಯಾರೆಲ್ಲಾ ಭಾಗಿ?
ಜೂನ್ 23 ರಂದು ನಡೆಯಲಿರುವ ಈ ಭವ್ಯ ಸಮಾರಂಭದಲ್ಲಿ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರೊಂದಿಗೆ ಭಾರತಕ್ಕೆ ಅಮೆರಿಕದ ರಾಯಭಾರಿಯಾಗಿರುವ ಸೆರ್ಗಿಯೋ ಗೋರ್ (Sergio Gor) ಅವರು ಭಾಗವಹಿಸಲಿದ್ದಾರೆ. ಅಮೆರಿಕದ ಸ್ವಾತಂತ್ರ್ಯ ದಿನಾಚರಣೆಯ ಮುನ್ನ ಈ ಕಾರ್ಯಕ್ರಮ ನಡೆಯುತ್ತಿರುವುದರಿಂದ, ಇದು ಜಾಗತಿಕ ಮಟ್ಟದಲ್ಲಿ ಹೈದರಾಬಾದ್ ನಗರದತ್ತ ಗಮನ ಸೆಳೆಯುವಂತೆ ಮಾಡಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಸಮಾರಂಭವು ಹೈದರಾಬಾದ್‌‌ನ ಬಹುರಾಷ್ಟ್ರೀಯ ಕಂಪನಿಗಳ ಪ್ರತಿನಿಧಿಗಳು, ಉದ್ಯಮಿಗಳು ಮತ್ತು ರಾಜತಾಂತ್ರಿಕರ ಸಮ್ಮುಖದಲ್ಲಿ ನಡೆಯಲಿದ್ದು, ಇದು ನಗರದ ಅಂತಾರಾಷ್ಟ್ರೀಯ ಪ್ರತಿಷ್ಠೆಯನ್ನು ಮತ್ತಷ್ಟು ಹೆಚ್ಚಿಸಲಿದೆ.

ಆರ್ಥಿಕ ತಂತ್ರವೇ ಹಿಂದೆ?
ಈ ಹೊಸ ಉಪಕ್ರಮವು ಹೈದರಾಬಾದ್ ಮತ್ತು ಅಮೆರಿಕ ನಡುವಿನ ವಾಣಿಜ್ಯ ಪಾಲುದಾರಿಕೆಯನ್ನು ಪ್ರತಿಬಿಂಬಿಸುತ್ತದೆ ಎಂದು ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಸಂಬಂಧದಿಂದಾಗಿ ರಾಜ್ಯದಲ್ಲಿ ಹೂಡಿಕೆ, ಉದ್ಯೋಗಾವಕಾಶ ಹಾಗೂ ಆರ್ಥಿಕ ಪ್ರಗತಿ ಭಾರಿ ಪ್ರಮಾಣದಲ್ಲಿ ಹೆಚ್ಚಾಗಿದೆ. ಇದರ ಮುಂದಿನ ಭಾಗವಾಗಿ ಹೈದರಾಬಾದ್ ನಗರವನ್ನು ಜಾಗತಿಕ ತಂತ್ರಜ್ಞಾನದ ಹಬ್ (Global Tech Hub) ಆಗಿ ಬಿಂಬಿಸಲು ಗೂಗಲ್, ಮೈಕ್ರೋಸಾಫ್ಟ್, ಅಮೆಜಾನ್ನಂತಹ ಜಾಗತಿಕ ದೈತ್ಯ ಸಂಸ್ಥೆಗಳ ಹೆಸರನ್ನು ಕೂಡ ನಗರದ ಪ್ರಮುಖ ರಸ್ತೆಗಳಿಗೆ ಇಡಲು ಸರ್ಕಾರ ಗಂಭೀರವಾಗಿ ಚಿಂತಿಸುತ್ತಿದೆ.

ನ್ಯಾಸ್ಕಾಂ (NASSCOM) ವರದಿಯ ಪ್ರಕಾರ, ಬ್ಯಾಂಕಿಂಗ್, ಹಣಕಾಸು ಸೇವೆಗಳ ವಲಯದಲ್ಲಿ (BFSI) ಭಾರತದಲ್ಲಿ ಆರಂಭವಾದ ಹೊಸ ಜಾಗತಿಕ ಸಾಮರ್ಥ್ಯ ಕೇಂದ್ರಗಳಲ್ಲಿ (GCCs) ಶೇಕಡಾ 50 ರಷ್ಟು ಕೇಂದ್ರಗಳು ಹೈದರಾಬಾದ್ ನಗರವನ್ನೇ ಆಯ್ದುಕೊಂಡಿವೆ. ಹೀಗಾಗಿ ಈ ರಸ್ತೆ ಉದ್ಘಾಟನೆಯು ಕೇವಲ ರಾಜತಾಂತ್ರಿಕ ನಡೆಯಷ್ಟೇ ಅಲ್ಲದೆ, ಜಾಗತಿಕ ಹೂಡಿಕೆಯನ್ನು ಸೆಳೆಯುವ ದೊಡ್ಡ ಆರ್ಥಿಕ ತಂತ್ರವಾಗಿದೆ.

ರಾಜಕೀಯ ವಿರೋಧ ಮತ್ತು ಬಿಜೆಪಿ ಆಕ್ರೋಶ
ತೆಲಂಗಾಣ ಸರ್ಕಾರದ ಈ ನಿರ್ಧಾರಕ್ಕೆ ರಾಜ್ಯ ರಾಜಕೀಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ತೆಲಂಗಾಣ ಬಿಜೆಪಿ ಅಧ್ಯಕ್ಷ ರಾಮಚಂದರ್ ರಾವ್ (Ramachander Rao) ಅವರು ಕಾಂಗ್ರೆಸ್ ಸರ್ಕಾರದ ಈ ನಡೆಯನ್ನು ತೀವ್ರವಾಗಿ ಪ್ರಶ್ನಿಸಿದ್ದಾರೆ. ಮುಖ್ಯಮಂತ್ರಿ ರೇವಂತ್ ರೆಡ್ಡಿ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನಿಲುವನ್ನು ಲೇವಡಿ ಮಾಡಿರುವ ಅವರು, “ಇತ್ತೀಚೆಗಷ್ಟೇ ರಾಹುಲ್ ಗಾಂಧಿ ಅವರು ಭಾರತವು ಟ್ರಂಪ್ ಎದುರು ಮಣಿದಿದೆ ಎಂದು ಟೀಕಿಸಿದ್ದರು. ಆದರೆ, ಅವರದೇ ಪಕ್ಷದ ಮುಖ್ಯಮಂತ್ರಿ ರೇವಂತ್ ರೆಡ್ಡಿ ಈಗ ‘ಡೊನಾಲ್ಡ್ ಟ್ರಂಪ್ ಅವೆನ್ಯೂ’ ಉದ್ಘಾಟಿಸುತ್ತಿದ್ದಾರೆ. ಹಾಗಾದರೆ ಟ್ರಂಪ್‌ಗೆ ಶರಣಾಗಿರುವುದು ರಾಹುಲ್ ಗಾಂಧಿಯೋ ಅಥವಾ ರೇವಂತ್ ರೆಡ್ಡಿಯೋ? ಎಂಬುದನ್ನು ಕಾಂಗ್ರೆಸ್ ಮೊದಲು ಸ್ಪಷ್ಟಪಡಿಸಬೇಕು” ಎಂದು ವಾಗ್ದಾಳಿ ನಡೆಸಿದ್ದಾರೆ. ಪ್ರತಿಪಕ್ಷಗಳ ಟೀಕೆಗಳ ನಡುವೆಯೂ, ಅಮೆರಿಕದೊಂದಿಗಿನ ಆರ್ಥಿಕ ಬಾಂಧವ್ಯವನ್ನು ಜಗತ್ತಿಗೆ ಸಾರಲು ತೆಲಂಗಾಣ ಸರ್ಕಾರ ಈ ರಸ್ತೆ ಉದ್ಘಾಟನೆಗೆ ಸಜ್ಜಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Shriram Nene Madhuri Dixit

ಅಭಿನಂದನ್ ವರ್ಧಮಾನ್ ವಾಯುಪಡೆ ಸೇವೆಗೆ ವಿದಾಯ: ಕಮರ್ಷಿಯಲ್ ಪೈಲಟ್ ಆಗಿ ಹೊಸ ಪಯಣ

by ದಿಶಾ ಕೆ. ಎಸ್.
September 3, 2026 - 8:26 am
0

Shriram Nene Madhuri Dixit

ಮಂತ್ರಾಲಯದಲ್ಲಿ ರಾಯರ 355ನೇ ಆರಾಧನಾ ಮಹೋತ್ಸವಕ್ಕೆ ಅದ್ಧೂರಿ ತೆರೆ

by ದಿಶಾ ಕೆ. ಎಸ್.
September 3, 2026 - 8:08 am
0

Shriram Nene Madhuri Dixit

ಸೆ.4ರಂದು ಆಕಾಶಕ್ಕೆ ಹಾರಲಿದೆ EOS-05: ಇದರ ವಿಶೇಷತೆ ಏನು?

by ದಿಶಾ ಕೆ. ಎಸ್.
September 3, 2026 - 7:54 am
0

Untitled design 2026 09 03T071105.309

ಏಷ್ಯಾಕಪ್‌ನಲ್ಲಿ ಭಾರತಕ್ಕೆ ಇಂದು ಹಾಂಗ್ ಕಾಂಗ್ ಸವಾಲು: ಗೆದ್ದರೆ ಸೆಮಿಫೈನಲ್ ಖಚಿತ!

by ದಿಶಾ ಕೆ. ಎಸ್.
September 3, 2026 - 7:15 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (94)
    ಜಲಪ್ರಳಯಕ್ಕೆ ನೇಪಾಳ ತತ್ತರ: ಮೃತರ ಸಂಖ್ಯೆ 1,127ಕ್ಕೆ ಏರಿಕೆ, 4,858 ಮಂದಿ ನಾಪತ್ತೆ
    September 2, 2026 | 0
  • Your paragraph text (93)
    ಭಾರತದಲ್ಲಿ ನಡೆಯಲಿದೆ ಮೊದಲ ಮಹಿಳಾ ಟಿ20 ಚಾಂಪಿಯನ್ಸ್ ಟ್ರೋಫಿ: ಫೆ.14ರಿಂದ ಕ್ರಿಕೆಟ್ ಕದನ
    September 2, 2026 | 0
  • Your paragraph text (91)
    ಅಕ್ರಮ ಆಸ್ತಿ ಆರೋಪ: ತಿರುಮಲ ದೇವಸ್ಥಾನ ಮಂಡಳಿ ಅಧಿಕಾರಿ ಮನೆ, ಕಚೇರಿ ಮೇಲೆ ಎಸಿಬಿ ದಾಳಿ
    September 2, 2026 | 0
  • Your paragraph text (89)
    ಟೈಲ್ಸ್ ತುಂಬಿದ್ದ ಟಾಟಾ ಏಸ್ ಪಲ್ಟಿ: ಯುವಕ ಸ್ಥಳದಲ್ಲೇ ಸಾವು
    September 2, 2026 | 0
  • Untitled design 2026 09 02T210325.400
    ಡಿಸೆಂಬರ್ ವೇಳೆಗೆ ಬಾಂಗ್ಲಾದೇಶಕ್ಕೆ ಮರಳುತ್ತೇನೆ: ಶೇಖ್ ಹಸೀನಾ ಘೋಷಣೆ
    September 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version