• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನನ್ನ ರಾಜಕೀಯ ಮುಗಿಯಿತು, ನೀವು ಎಚ್ಚರ ತಪ್ಪಿದರೆ ನಿಮ್ಮ ರಾಜಕೀಯದ ಮಾರಣಹೋಮ ನಿಶ್ಚಿತ: ಸಿದ್ದರಾಮಯ್ಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 28, 2026 - 6:43 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಮೈಸೂರು
0 0
0
Untitled design 2026 06 28T184215.998

ಮೈಸೂರು: “ನನ್ನ ರಾಜಕೀಯ ಜೀವನ ಬಹುತೇಕ ಮುಗಿದಿದೆ. ಆದರೆ ನಿಮ್ಮ ರಾಜಕೀಯ ಭವಿಷ್ಯ ಸುರಕ್ಷಿತವಾಗಿರಬೇಕಾದರೆ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು. ಒಂದು ತಿಂಗಳು ನಿರ್ಲಕ್ಷ್ಯ ಮಾಡಿದರೂ ನಿಮ್ಮ ರಾಜಕೀಯದ ಮಾರಣಹೋಮ ನಿಶ್ಚಿತ” ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ನಾಯಕರು, ಶಾಸಕರು ಮತ್ತು ಕಾರ್ಯಕರ್ತರಿಗೆ ಎಚ್ಚರಿಕೆ ನೀಡಿದರು.

ಮೈಸೂರಿನಲ್ಲಿ ನಡೆದ Special Intensive Revision (SIR) ಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಸಂವಿಧಾನಬದ್ಧವಾಗಿ ಕಾರ್ಯನಿರ್ವಹಿಸಬೇಕಾದ ಚುನಾವಣಾ ಆಯೋಗ ತನ್ನ ಸ್ವಾಯತ್ತತೆಯನ್ನು ಕಳೆದುಕೊಳ್ಳುತ್ತಿದೆ ಎಂದು ಆರೋಪಿಸಿದರು. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಆಡಳಿತದಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳು ಅಪಾಯದಲ್ಲಿವೆ ಎಂದು ಅವರು ಟೀಕಿಸಿದರು.

RelatedPosts

ಏಷ್ಯನ್ ಗೇಮ್ಸ್: ಪದಕ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ ಭಾರತ, ಒಂದೇ ದಿನ 5 ಚಿನ್ನದ ಬೇಟೆ..!

ಕಟ್ಟಡದ 43ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ; ದೇಹ ಛಿದ್ರ ಛಿದ್ರ!

ಏಷ್ಯನ್ ಗೇಮ್ಸ್‌‌ನಲ್ಲಿ ಚಿನ್ನಕ್ಕೆ ಮುತ್ತಿಟ್ಟ ಹಾಕಿ ತಂಡ: ಮಲೇಷ್ಯಾ ಮಣಿಸಿ ಒಲಿಂಪಿಕ್ಸ್‌ಗೆ ಎಂಟ್ರಿ ಕೊಟ್ಟ ಭಾರತ

ದಸರಾ ಆರಂಭದಲ್ಲೇ ಮುರಿದು ಬಿದ್ದ ದೀಪಾಲಂಕಾರ ಕಟೌಟ್

ADVERTISEMENT
ADVERTISEMENT

ಬಿಜೆಪಿ ದೇಶದಲ್ಲಿ ಸರ್ವಾಧಿಕಾರ ಸ್ಥಾಪಿಸುವ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿದೆ ಎಂದು ಆರೋಪಿಸಿದ ಸಿದ್ದರಾಮಯ್ಯ, “ಸುಳ್ಳನ್ನು ವ್ಯವಸ್ಥಿತವಾಗಿ ಹರಡುವ ಸುಳ್ಳಿನ ಕಾರ್ಖಾನೆಯಾಗಿ ಬಿಜೆಪಿ ಕೆಲಸ ಮಾಡುತ್ತಿದೆ. ಅಧಿಕಾರಕ್ಕಾಗಿ ಯಾವುದೇ ಮಟ್ಟಕ್ಕೂ ಇಳಿಯಲು ಅವರು ಸಿದ್ಧರಾಗಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.

ಮತದಾರರ ಪಟ್ಟಿ ಪರಿಷ್ಕರಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಬೆಂಬಲಿಗರಾದ ಬಡವರು, ರೈತರು, ಕಾರ್ಮಿಕರು ಹಾಗೂ ಅಲ್ಪಸಂಖ್ಯಾತರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡುವ ಪ್ರಯತ್ನ ನಡೆಯುತ್ತಿದೆ ಎಂದು ಅವರು ಗಂಭೀರ ಆರೋಪ ಮಾಡಿದರು. “2014ರ ನಂತರ ದೇಶದಲ್ಲಿ ಮತದ್ರೋಹ ನಡೆಯುತ್ತಿದೆ. ಚುನಾವಣಾ ಆಯೋಗಕ್ಕೆ ಅರ್ಹ ಮತದಾರರನ್ನು ಪಟ್ಟಿಯಿಂದ ತೆಗೆದುಹಾಕುವ ಅಧಿಕಾರವೇ ಇಲ್ಲ. ಆದರೂ ಈ ರೀತಿಯ ಬೆಳವಣಿಗೆಗಳು ನಡೆಯುತ್ತಿರುವುದು ಆತಂಕಕಾರಿ” ಎಂದರು.

ದೇಶದಲ್ಲಿ ಬಿಜೆಪಿ ಕೇವಲ ಶೇ.36ರಷ್ಟು ಮತಗಳನ್ನು ಪಡೆದು ಅಧಿಕಾರಕ್ಕೆ ಬಂದಿದೆ. ಉಳಿದ ಶೇ.64ರಷ್ಟು ಜನರು ಬಿಜೆಪಿ ವಿರುದ್ಧ ಮತ ಚಲಾಯಿಸಿದ್ದಾರೆ. ಈಗ ಆ ಮತದಾರರನ್ನೇ ಗುರಿಯಾಗಿಸಿ ಮತದಾರರ ಪಟ್ಟಿಯಿಂದ ಹೊರಗಿಡುವ ಸಂಚು ನಡೆಯುತ್ತಿದೆ ಎಂದು ಅವರು ಆರೋಪಿಸಿದರು.

ಜೂನ್ 30ರಿಂದ ಜುಲೈ 29ರವರೆಗೆ ನಡೆಯಲಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಕಾಂಗ್ರೆಸ್‌ನ ಪ್ರತಿಯೊಬ್ಬ ನಾಯಕ ಮತ್ತು ಕಾರ್ಯಕರ್ತರೂ ಅತ್ಯಂತ ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದು ಕರೆ ನೀಡಿದ ಅವರು, ಪ್ರತಿಯೊಂದು ಬೂತ್‌ನಲ್ಲಿ ಸ್ಥಳೀಯ ಮಟ್ಟದಲ್ಲಿ ಕಾರ್ಯಕರ್ತರನ್ನು ನೇಮಿಸಿ ಮನೆ ಮನೆಗೆ ಭೇಟಿ ನೀಡಿ ಮತದಾರರ ಮಾಹಿತಿಯನ್ನು ಪರಿಶೀಲಿಸಬೇಕು ಎಂದು ಸೂಚಿಸಿದರು.

ಬೂತ್ ಲೆವೆಲ್ ಅಧಿಕಾರಿಗಳ (BLO) ಜೊತೆ ಸಮನ್ವಯ ಸಾಧಿಸಿ, ಎನ್ಯೂಮರೇಷನ್ ಫಾರ್ಮ್‌ಗಳನ್ನು ಸರಿಯಾಗಿ ಭರ್ತಿ ಮಾಡಿಸಿ, ಸಲ್ಲಿಕೆಯ ಸ್ವೀಕೃತಿ ಪತ್ರವನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದರು. ಒಬ್ಬ ಅರ್ಹ ಮತದಾರನ ಹೆಸರೂ ಪಟ್ಟಿಯಿಂದ ಕೈಬಿಡದಂತೆ ಕಾರ್ಯಕರ್ತರು ಎಚ್ಚರಿಕೆಯಿಂದ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ಇದೇ ವೇಳೆ ಬಿಜೆಪಿ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವಿರೋಧಿ ರಾಜಕಾರಣ ಮಾಡುತ್ತಿದೆ ಎಂದು ಟೀಕಿಸಿದ ಸಿದ್ದರಾಮಯ್ಯ, “ದೇಶದ ಪ್ರಜಾಪ್ರಭುತ್ವವನ್ನು ಉಳಿಸುವ ಹೊಣೆಗಾರಿಕೆ ಪ್ರತಿಯೊಬ್ಬ ನಾಗರಿಕನ ಮೇಲಿದೆ. ಮುಂದಿನ ಒಂದು ತಿಂಗಳು ಬೇರೆ ಎಲ್ಲ ಕೆಲಸಗಳಿಗಿಂತ ಮತದಾರರ ಪಟ್ಟಿ ಪರಿಷ್ಕರಣೆಗೆ ಹೆಚ್ಚಿನ ಆದ್ಯತೆ ನೀಡಿ. ಪ್ರತಿಯೊಬ್ಬ ಅರ್ಹ ಮತದಾರನ ಹೆಸರೂ ಪಟ್ಟಿಯಲ್ಲಿ ಉಳಿಯುವಂತೆ ಕಾರ್ಯಕರ್ತರು ಶ್ರಮಿಸಬೇಕು” ಎಂದು ಮನವಿ ಮಾಡಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 10 03T184832.374

ಏಷ್ಯನ್ ಗೇಮ್ಸ್: ಪದಕ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ ಭಾರತ, ಒಂದೇ ದಿನ 5 ಚಿನ್ನದ ಬೇಟೆ..!

by ಶಾಲಿನಿ ಕೆ. ಡಿ
October 3, 2026 - 6:49 pm
0

Your paragraph text 2026 10 03T182243.494

ಕಟ್ಟಡದ 43ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ; ದೇಹ ಛಿದ್ರ ಛಿದ್ರ!

by ಶಾಲಿನಿ ಕೆ. ಡಿ
October 3, 2026 - 6:28 pm
0

Your paragraph text 2026 10 03T180350.357

ಏಷ್ಯನ್ ಗೇಮ್ಸ್‌‌ನಲ್ಲಿ ಚಿನ್ನಕ್ಕೆ ಮುತ್ತಿಟ್ಟ ಹಾಕಿ ತಂಡ: ಮಲೇಷ್ಯಾ ಮಣಿಸಿ ಒಲಿಂಪಿಕ್ಸ್‌ಗೆ ಎಂಟ್ರಿ ಕೊಟ್ಟ ಭಾರತ

by ಶಾಲಿನಿ ಕೆ. ಡಿ
October 3, 2026 - 6:06 pm
0

Your paragraph text 2026 10 03T173336.568

ಶಿವಣ್ಣ ಬೇಲ್‌ಗೆ ಪ್ರಶಂಸೆಗಳ ಸುರಿಮಳೆ..ಫ್ಯಾಮಿಲಿ ಬ್ಲಾಕ್‌ಬಸ್ಟರ್‌

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 3, 2026 - 5:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 10 03T184832.374
    ಏಷ್ಯನ್ ಗೇಮ್ಸ್: ಪದಕ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ ಭಾರತ, ಒಂದೇ ದಿನ 5 ಚಿನ್ನದ ಬೇಟೆ..!
    October 3, 2026 | 0
  • Your paragraph text 2026 10 03T182243.494
    ಕಟ್ಟಡದ 43ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ; ದೇಹ ಛಿದ್ರ ಛಿದ್ರ!
    October 3, 2026 | 0
  • Your paragraph text 2026 10 03T180350.357
    ಏಷ್ಯನ್ ಗೇಮ್ಸ್‌‌ನಲ್ಲಿ ಚಿನ್ನಕ್ಕೆ ಮುತ್ತಿಟ್ಟ ಹಾಕಿ ತಂಡ: ಮಲೇಷ್ಯಾ ಮಣಿಸಿ ಒಲಿಂಪಿಕ್ಸ್‌ಗೆ ಎಂಟ್ರಿ ಕೊಟ್ಟ ಭಾರತ
    October 3, 2026 | 0
  • Your paragraph text 2026 10 03T142934.590
    ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ ಸ್ಮಿತ್ ಮಚ್ಚಾರ್‌ಗೆ ₹1 ಕೋಟಿ ಘೋಷಣೆ
    October 3, 2026 | 0
  • Your paragraph text 2026 10 03T135238.894
    ಆಂಧ್ರದ ಔಷಧ ತಯಾರಿಕಾ ಘಟಕದಲ್ಲಿ ಬಾಯ್ಲರ್ ಸ್ಫೋಟಿಸಿ ನಾಲ್ವರು ಸಾವು
    October 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version