• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, June 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

2028ಕ್ಕೆ ಕರ್ನಾಟಕದಲ್ಲಿ, 2029ಕ್ಕೆ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ: ಡಿ.ಕೆ ಶಿವಕುಮಾರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 28, 2026 - 9:02 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 06 28T205643.531

RelatedPosts

ಮಲೆ ಮಹದೇಶ್ವರ ಬೆಟ್ಟದ ಬಳಿ ಬಸ್ ಪಲ್ಟಿ: ಇಬ್ಬರು ದುರ್ಮರಣ

ಉತ್ತರ ಕನ್ನಡದಲ್ಲಿ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ!

ರಾಜ್ಯದಲ್ಲಿ ಬರದ ಪರಿಸ್ಥಿತಿ: ಕಂಗಾಲಾದ ರೈತರು

ಕರಾವಳಿಯಲ್ಲಿ ಮಳೆ ಮುನ್ಸೂಚನೆ: ಅರೆಂಜ್ ಅಲರ್ಟ್ ಘೋಷಣೆ!

ADVERTISEMENT
ADVERTISEMENT

ಬೆಂಗಳೂರು: 2028ರ ಕರ್ನಾಟಕ ವಿಧಾನಸಭೆ ಚುನಾವಣೆ ಹಾಗೂ 2029ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವ್ಯಕ್ತಪಡಿಸಿದರು. ಈ ಗುರಿ ಸಾಧಿಸಲು ದೇಶದ ಕಾರ್ಮಿಕರು, ಶ್ರಮಿಕರು ಹಾಗೂ ಸಾಮಾನ್ಯ ಜನರ ಬೆಂಬಲ ಅತ್ಯಂತ ಅಗತ್ಯವಾಗಿದೆ ಎಂದು ಅವರು ಹೇಳಿದರು.

ಭಾನುವಾರ ಬೆಂಗಳೂರಿನ ಕಾಂಗ್ರೆಸ್ ಕಚೇರಿಯ ಭಾರತ್ ಜೋಡೊ ಸಭಾಂಗಣದಲ್ಲಿ ನಡೆದ ಇಂಟೆಕ್ (INTUC) 316ನೇ ಅಖಿಲ ಭಾರತ ಕಾರ್ಯಕಾರಿ ಸಮಿತಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಸಂಘಟನೆಯ ಬಲವರ್ಧನೆಯಲ್ಲಿ ಕಾರ್ಮಿಕ ಸಂಘಟನೆಗಳ ಪಾತ್ರ ಮಹತ್ವದ್ದಾಗಿದೆ ಎಂದು ತಿಳಿಸಿದರು.

ಇಂಟೆಕ್ ದೇಶದ ಶ್ರಮಿಕ ವರ್ಗವನ್ನು ಸಂಘಟಿತಗೊಳಿಸುವಲ್ಲಿ ಮಹತ್ವದ ಪಾತ್ರ ವಹಿಸಿದೆ. ಕಾಂಗ್ರೆಸ್ ಪಕ್ಷದ ಯಾವುದೇ ಪ್ರಮುಖ ರಾಜಕೀಯ ನಿರ್ಧಾರಗಳಲ್ಲಿ ಇಂಟೆಕ್ ಕಾರ್ಯಕರ್ತರ ಕೊಡುಗೆ ಸದಾ ಇರುತ್ತದೆ ಎಂದು ಅವರು ಹೇಳಿದರು. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಕಾಲದಲ್ಲೇ ಇಂಟೆಕ್, ಎನ್‌ಎಸ್‌ಯುಐ, ಯುವ ಕಾಂಗ್ರೆಸ್ ಮತ್ತು ಮಹಿಳಾ ಕಾಂಗ್ರೆಸ್ ಪಕ್ಷದ ನಾಲ್ಕು ಬಲಿಷ್ಠ ಆಧಾರ ಸ್ತಂಭಗಳಾಗಿವೆ ಎಂದು ಗುರುತಿಸಲಾಗಿತ್ತು ಎಂದು ಅವರು ಸ್ಮರಿಸಿದರು.

ತಾವು ವಿದ್ಯಾರ್ಥಿ ನಾಯಕನಾಗಿ ರಾಜಕೀಯ ಪ್ರವೇಶ ಮಾಡಿದ್ದು, ಸಂಘಟನೆಯ ಶಕ್ತಿಯನ್ನು ಸಮೀಪದಿಂದ ಅರಿತುಕೊಂಡಿದ್ದೇನೆ ಎಂದು ತಿಳಿಸಿದ ಡಿ.ಕೆ. ಶಿವಕುಮಾರ್, ದೇಶದ ಅಭಿವೃದ್ಧಿಯಲ್ಲಿ ಕಾರ್ಮಿಕರ ಪಾತ್ರ ಅನನ್ಯವಾಗಿದೆ ಎಂದು ಹೇಳಿದರು. ಕೃಷಿಕ, ಶಿಕ್ಷಕ, ಸೈನಿಕ ಹಾಗೂ ಕಾರ್ಮಿಕರಿಲ್ಲದೆ ಯಾವುದೇ ಸಮಾಜ ಅಥವಾ ದೇಶದ ಪ್ರಗತಿ ಸಾಧ್ಯವಿಲ್ಲ. ಉದ್ಯಮಿಗಳು ಬೆಳೆಯಬೇಕಾದರೆ ಕಾರ್ಮಿಕರೂ ಸಮಾನವಾಗಿ ಬಲಿಷ್ಠರಾಗಬೇಕು. ಪರಸ್ಪರ ಸಹಕಾರದಿಂದ ಮಾತ್ರ ಆರ್ಥಿಕ ಬೆಳವಣಿಗೆ ಸಾಧ್ಯ ಎಂದು ತಿಳಿಸಿದರು.

ಜೂನ್ 30ರಿಂದ ಆರಂಭವಾಗಲಿರುವ ಎಸ್‌ಐಆರ್ (Special Intensive Revision) ಪ್ರಕ್ರಿಯೆ ಕುರಿತು ಮಾತನಾಡಿದ ಅವರು, ಮತದಾರರ ಪಟ್ಟಿಯಿಂದ ಮತಗಳು ಕೈಬಿಡದಂತೆ ಪ್ರತಿಯೊಬ್ಬರೂ ಎಚ್ಚರಿಕೆಯಿಂದಿರಬೇಕು ಎಂದು ಕರೆ ನೀಡಿದರು. ಕಾರ್ಮಿಕರು ಹಾಗೂ ಶ್ರಮಿಕರ ಮತಗಳನ್ನು ಗುರಿಯಾಗಿಸಲಾಗುತ್ತಿದೆ ಎಂಬ ಆರೋಪ ಮಾಡುತ್ತಾ, ತಮ್ಮ ಮತದಾರರ ನೋಂದಣಿಯನ್ನು ಪರಿಶೀಲಿಸಿಕೊಳ್ಳುವಂತೆ ಮನವಿ ಮಾಡಿದರು.

ಕಾರ್ಮಿಕರ ಕಲ್ಯಾಣಕ್ಕಾಗಿ ಕಾಂಗ್ರೆಸ್ ಸರ್ಕಾರಗಳು ಹಲವು ಐತಿಹಾಸಿಕ ಕ್ರಮಗಳನ್ನು ಕೈಗೊಂಡಿವೆ ಎಂದು ತಿಳಿಸಿದ ಅವರು, ಮಾಜಿ ಕೇಂದ್ರ ಸಚಿವರಾದ ಆಸ್ಕರ್ ಫರ್ನಾಂಡೀಸ್ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರ ಅವಧಿಯಲ್ಲಿ ಕಾರ್ಮಿಕರ ಪರ ಅನೇಕ ಸುಧಾರಣೆಗಳು ಜಾರಿಯಾದವು. ಇಎಸ್‌ಐ ಆಸ್ಪತ್ರೆಗಳ ಸ್ಥಾಪನೆ, ಕಾರ್ಮಿಕರ ಮಕ್ಕಳಿಗೆ ಉಚಿತ ವೈದ್ಯಕೀಯ ಶಿಕ್ಷಣದ ಅವಕಾಶ ಹಾಗೂ ವೈದ್ಯಕೀಯ ಕಾಲೇಜುಗಳ ನಿರ್ಮಾಣ ಸೇರಿದಂತೆ ಹಲವು ಯೋಜನೆಗಳು ಕಾರ್ಮಿಕರ ಬದುಕಿನಲ್ಲಿ ಮಹತ್ವದ ಬದಲಾವಣೆ ತಂದವು ಎಂದು ಹೇಳಿದರು.

ರಾಜ್ಯ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರು, ಮಹಿಳೆಯರು ಹಾಗೂ ಕಾರ್ಮಿಕರ ಹಿತದೃಷ್ಟಿಯಿಂದ ರೂಪಿಸಲ್ಪಟ್ಟಿವೆ ಎಂದು ಅವರು ಹೇಳಿದರು. ಆರಂಭದಲ್ಲಿ ಈ ಯೋಜನೆಗಳ ಬಗ್ಗೆ ಟೀಕೆಗಳು ವ್ಯಕ್ತವಾಗಿದ್ದರೂ, ಬೆಲೆ ಏರಿಕೆಯ ಸಂದರ್ಭದಲ್ಲಿ ಜನರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಅವುಗಳನ್ನು ಜಾರಿಗೊಳಿಸಲಾಗಿದೆ. ಪ್ರತಿವರ್ಷ ಸುಮಾರು ₹50 ಸಾವಿರ ಕೋಟಿ ವೆಚ್ಚ ಮಾಡಲಾಗುತ್ತಿದೆ. ಹಿಂದೆ ಟೀಕಿಸಿದ್ದವರೇ ಈಗ ಇಂತಹ ಯೋಜನೆಗಳನ್ನು ಅನುಸರಿಸುತ್ತಿದ್ದಾರೆ ಎಂದು ಅವರು ಹೇಳಿದರು.

ಕಾಂಗ್ರೆಸ್ ಪಕ್ಷದ ಇತಿಹಾಸವೇ ದೇಶದ ಇತಿಹಾಸವಾಗಿದೆ. ಸ್ವಾತಂತ್ರ್ಯ ನಂತರ ದೇಶದ ಅಭಿವೃದ್ಧಿ, ಸಂವಿಧಾನದ ಮೂಲಕ ನಾಗರಿಕರಿಗೆ ಹಕ್ಕುಗಳ ಕಲ್ಪನೆ ಹಾಗೂ ಸಾಮಾಜಿಕ ನ್ಯಾಯದ ಪರ ಕಾಂಗ್ರೆಸ್ ನಿರಂತರವಾಗಿ ಕೆಲಸ ಮಾಡಿದೆ ಎಂದು ಅವರು ಹೇಳಿದರು.

ದೇಶ ಪ್ರಸ್ತುತ ಆರ್ಥಿಕ ಸವಾಲುಗಳನ್ನು ಎದುರಿಸುತ್ತಿದ್ದು, ನೆರೆ ರಾಷ್ಟ್ರಗಳೊಂದಿಗೆ ಸಂಬಂಧದಲ್ಲೂ ಸವಾಲುಗಳಿವೆ. ಆದರೆ ಕರ್ನಾಟಕ ಆರ್ಥಿಕವಾಗಿ ಸದೃಢವಾಗಿದ್ದು, ತೆರಿಗೆ ಸಂಗ್ರಹದ ಮೂಲಕ ದೇಶದ ಅಭಿವೃದ್ಧಿಗೆ ದೊಡ್ಡ ಕೊಡುಗೆ ನೀಡುತ್ತಿದೆ ಎಂದು ಅವರು ಹೇಳಿದರು. ಬೆಂಗಳೂರಿನಲ್ಲಿ ಸುಮಾರು 25 ಲಕ್ಷ ಐಟಿ ಉದ್ಯೋಗಿಗಳಿದ್ದು, ಜಾಗತಿಕ ಮಟ್ಟದಲ್ಲಿ ಪ್ರಮುಖ ತಂತ್ರಜ್ಞಾನ ಕೇಂದ್ರವಾಗಿ ಹೊರಹೊಮ್ಮಿದೆ ಎಂದು ವಿವರಿಸಿದರು.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 29T232555.797

ಮಲೆ ಮಹದೇಶ್ವರ ಬೆಟ್ಟದ ಬಳಿ ಬಸ್ ಪಲ್ಟಿ: ಇಬ್ಬರು ದುರ್ಮರಣ

by ಕವಿತಾ
June 29, 2026 - 11:29 pm
0

Untitled design 2026 06 29T230855.874

ಶ್ರದ್ಧಾಗೆ ಸಂಕಷ್ಟ.. ವಿಘ್ನ ತಂದಿಟ್ಟ ಈಥಾ ಚಿತ್ರದ ಟೈಟಲ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 29, 2026 - 11:10 pm
0

Untitled design 2026 06 29T224114.876

ದೆಹಲಿಯಲ್ಲಿ ಹೊಸ ಇವಿ ಕಾರುಗಳಿಗೆ ಸಿಗಲಿದೆ ರಿಯಾಯಿತಿ

by ಕವಿತಾ
June 29, 2026 - 10:42 pm
0

Untitled design 2026 06 29T215837.953

ಜರ್ಮನಿಯಲ್ಲಿ ಗುಂಡಿನ ದಾಳಿ: 6 ಮಂದಿ ಸಾ*ವು, ಇಬ್ಬರ ಬಂಧನ

by ಕವಿತಾ
June 29, 2026 - 10:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 29T145640.949
    ದೇಶಾದ್ಯಂತ ಜುಲೈನಲ್ಲಿ 13 ದಿನ ಬ್ಯಾಂಕ್ ರಜೆ: ಯಾವ್ಯಾವ ದಿನ? ಇಲ್ಲಿದೆ ಸಂಪೂರ್ಣ ಪಟ್ಟಿ
    June 29, 2026 | 0
  • Untitled design 2026 06 29T143459.440
    ರಾಮಮಂದಿರ ದೇಣಿಗೆ ಲೂಟಿ ಕೇಸ್‌: ರಾಮನ ದುಡ್ಡಿನಲ್ಲಿ ಆರೋಪಿಗಳ ಬಿಂದಾಸ್ ಲೈಫ್.!
    June 29, 2026 | 0
  • Untitled design 2026 06 29T135944.235
    ಬಿ.ವೈ. ವಿಜಯೇಂದ್ರ ವಿರುದ್ಧ ನಡೀತಿದ್ಯಾ ಸಂಚು? ಸದಾನಂದಗೌಡರದ್ದು ಎನ್ನಲಾದ ಆಡಿಯೋ ರಿಲೀಸ್
    June 29, 2026 | 0
  • Untitled design 2026 06 29T122648.814
    ರಾಮ ಮಂದಿರ ದೇಣಿಗೆ ಅಕ್ರಮ ಪ್ರಕರಣ: ಟ್ರಸ್ಟ್ ಮಾಜಿ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ವಿಚಾರಣೆ
    June 29, 2026 | 0
  • Untitled design 2026 06 29T112440.911
    ಜುಲೈ 1ರಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ
    June 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version