• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

SIR ಅಕ್ರಮ ಆರೋಪ: ಮುಖ್ಯ ಚುನಾವಣಾಧಿಕಾರಿಗೆ ಎನ್‌ಡಿಎ ನಾಯಕರು ದೂರು

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 6, 2026 - 1:37 pm
in ಕರ್ನಾಟಕ
0 0
0
Web Photo Editor 2026 07 06T114212.130

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿರುವ ಎನ್‌ಡಿಎ ನಾಯಕರು, ತಕ್ಷಣ ತನಿಖೆ ನಡೆಸಿ ಎಲ್ಲಾ ನೋಂದಣಿ ನಮೂನೆಗಳ ಮರುಪರಿಶೀಲನೆಗೆ ನಿರ್ದೇಶನ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಅವರಿಗೆ ಇಂದು ದೂರು ಸಲ್ಲಿಸಿದ್ದಾರೆ.

ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ, ಪ್ರಲ್ಹಾದ್ ಜೋಶಿ, ಶೋಭಾ ಕರಂದ್ಲಾಜೆ, ಪ್ರತಿಪಕ್ಷ ನಾಯಕ ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ನಿಯೋಗವು ಮುಖ್ಯ ಚುನಾವಣಾಧಿಕಾರಿಯನ್ನು ಭೇಟಿ ಮಾಡಿ, ಪುರಾವೆಗಳ ಸಮೇತ ದೂರು ನೀಡಿದೆ..

RelatedPosts

ಹಾಸ್ಟೆಲ್‌ಗಳಿಗೆ ಭೇಟಿ ನೀಡದ ವಾರ್ಡನ್‌ಗಳ ವಿರುದ್ಧ ಕ್ರಮ: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ

ಧ್ವನಿವರ್ಧಕ ಬಳಕೆಗೆ ಬ್ರೇಕ್; ಗಣೇಶನನ್ನು ನಡುರಸ್ತೆಯಲ್ಲೇ ಬಿಟ್ಟು ತೆರಳಿದ ಗ್ರಾಮಸ್ಥರು

ಸರ್ಕಾರಿ ವೇತನ ಪಡೆದು ಪಿಜಿ ಅಧ್ಯಯನ ಆರೋಪ: ವಿಚಾರಣೆಗೆ ಗೈರಾದ ಶಾಸಕ ಮೇಟಿ ಸೊಸೆ

ಗಣೇಶೋತ್ಸವದ ಮೊದಲ ದಿನವೇ ಬೆಂಗಳೂರಿನಲ್ಲಿ 1.84 ಲಕ್ಷಕ್ಕೂ ಹೆಚ್ಚು ಮೂರ್ತಿಗಳ ವಿಸರ್ಜನೆ

ADVERTISEMENT
ADVERTISEMENT

ದೂರಿನಲ್ಲಿ, ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆ ಅನುಮೋದಿತ ಮಾರ್ಗಸೂಚಿಗಳಂತೆ ನಡೆಯುತ್ತಿಲ್ಲ ಎಂಬ ಗಂಭೀರ ಆರೋಪ ಮಾಡಲಾಗಿದೆ. ಈ ಪ್ರಕ್ರಿಯೆ ನಡೆಸಬೇಕಾದ ಅಧಿಕಾರಿಗಳು ನಿಯಮಗಳನ್ನು ಪಾಲಿಸದೇ ಪ್ರಜಾಪ್ರಭುತ್ವದ ಆಶಯವನ್ನೇ ಹಾಳು ಮಾಡುತ್ತಿದ್ದಾರೆ ಎಂದು ಎನ್‌ಡಿಎ ನಾಯಕರು ಕಳವಳ ವ್ಯಕ್ತಪಡಿಸಿದ್ದಾರೆ.

ಎಸ್‌ಐಆರ್ ಮಾರ್ಗಸೂಚಿಗಳ ಪ್ರಕಾರ, ಬೂತ್ ಮಟ್ಟದ ಅಧಿಕಾರಿಗಳು (BLOs) ಜಿಲ್ಲಾ ಚುನಾವಣಾಧಿಕಾರಿಗಳ ನಿರ್ದೇಶನದ ಮೇರೆಗೆ ಕಡ್ಡಾಯವಾಗಿ ಮನೆ-ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಕುಟುಂಬದ ಪ್ರತಿಯೊಬ್ಬ ಸದಸ್ಯರ ಗುರುತನ್ನು ವೈಯಕ್ತಿಕವಾಗಿ ಖಚಿತಪಡಿಸಿಕೊಳ್ಳಬೇಕಾಗಿದೆ. ಆದರೆ ತಳಮಟ್ಟದಲ್ಲಿ ಈ ನಿಯಮಗಳು ಪಾಲನೆಯಾಗುತ್ತಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಸಮುದಾಯ ಭವನಗಳು, ಮಸೀದಿಗಳು ಮತ್ತು ಕೆಲವೊಮ್ಮೆ ಬಿಎಲ್‌ಒಗಳ ಮನೆಗಳಲ್ಲೇ ಕುಳಿತು ನೋಂದಣಿ ನಮೂನೆಗಳನ್ನು ಭರ್ತಿ ಮಾಡಲಾಗುತ್ತಿದೆ ಎಂಬ ಆರೋಪವೂ ಕೇಳಿಬಂದಿದೆ. ಇದೇ ಉದ್ದೇಶಕ್ಕಾಗಿ ವಾಟ್ಸಾಪ್ ಗುಂಪುಗಳನ್ನು ರಚಿಸಿ, ಜನರನ್ನು ಇಂತಹ ಸ್ಥಳಗಳಿಗೆ ಕರೆಸಿ ನೋಂದಣಿ ಪ್ರಕ್ರಿಯೆ ನಡೆಸಲಾಗುತ್ತಿದೆ ಎಂದು ಎನ್‌ಡಿಎ ನಿಯೋಗ ದೂರಿದೆ. ಇದು ಎಸ್‌ಐಆರ್ ಮಾರ್ಗಸೂಚಿಗಳ ಉಲ್ಲಂಘನೆಯಾಗಿದ್ದು, ಚುನಾವಣಾ ಪ್ರಕ್ರಿಯೆಯ ತಟಸ್ಥತೆ ಹಾಗೂ ಜಾತ್ಯತೀತ ಸ್ವರೂಪದ ಬಗ್ಗೆ ಗಂಭೀರ ಅನುಮಾನ ಹುಟ್ಟಿಸುತ್ತಿದೆ ಎಂದು ನಾಯಕರು ತಿಳಿಸಿದ್ದಾರೆ.

ಈ ರೀತಿಯ ಅಕ್ರಮಗಳಿಂದ ಅಸ್ಥಿರ ಮತ್ತು ನಂಬಿಕೆಗೆ ಅರ್ಹವಲ್ಲದ ಮತದಾರರ ಪಟ್ಟಿ ಸೃಷ್ಟಿಯಾಗುವ ಸಾಧ್ಯತೆ ಇದೆ. ಭಾರತೀಯ ಚುನಾವಣಾ ಆಯೋಗ ನಿಗದಿಪಡಿಸಿರುವ ಕಾರ್ಯವಿಧಾನಗಳಿಂದ ಯಾವುದೇ ವಿಚಲನೆಗೆ ಅವಕಾಶವಿಲ್ಲ ಎಂದು ಎನ್‌ಡಿಎ ನಾಯಕರು ಒತ್ತಿ ಹೇಳಿದ್ದಾರೆ.

ಆದ್ದರಿಂದ, ತಕ್ಷಣವೇ ಈ ಅಕ್ರಮಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ಮನೆ-ಮನೆಗೆ ಭೇಟಿ ನೀಡಿ ಎಲ್ಲಾ ನೋಂದಣಿ ನಮೂನೆಗಳ ಮರುಪರಿಶೀಲನೆ ಮಾಡಿಸಬೇಕು. ಜೊತೆಗೆ, ಈ ಅಕ್ರಮಗಳಿಗೆ ಕಾರಣರಾದ ಅಧಿಕಾರಿಗಳು ಮತ್ತು ರಾಜಕೀಯ ಪದಾಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಎನ್‌ಡಿಎ ನಿಯೋಗ ಮುಖ್ಯ ಚುನಾವಣಾಧಿಕಾರಿಯನ್ನು ಒತ್ತಾಯಿಸಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Your paragraph text 2026 09 16T195645.738

ಹಾಸ್ಟೆಲ್‌ಗಳಿಗೆ ಭೇಟಿ ನೀಡದ ವಾರ್ಡನ್‌ಗಳ ವಿರುದ್ಧ ಕ್ರಮ: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ

by ಶಾಲಿನಿ ಕೆ. ಡಿ
September 16, 2026 - 7:57 pm
0

Your paragraph text 2026 09 16T194559.743

ನಟ ದರ್ಶನ್‌ಗೆ ಶಾಕ್: ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕಾರ

by ಶಾಲಿನಿ ಕೆ. ಡಿ
September 16, 2026 - 7:48 pm
0

Your paragraph text 2026 09 16T184121.195

ಪಾನ್ ಮಸಾಲಾ ಜಾಹೀರಾತು..ಮೂವರು ಸ್ಟಾರ್‌‌ಗಳಿಗೆ ಕಾನೂನು ಸಂಕಷ್ಟ

by ಶಾಲಿನಿ ಕೆ. ಡಿ
September 16, 2026 - 6:42 pm
0

Your paragraph text 2026 09 16T181158.020

ಕನ್ನಡದ ಹಿರಿಯ ನಟ ಅನಂತ್ ನಾಗ್‌‌ಗೆ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ

by ಶಾಲಿನಿ ಕೆ. ಡಿ
September 16, 2026 - 6:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 16T195645.738
    ಹಾಸ್ಟೆಲ್‌ಗಳಿಗೆ ಭೇಟಿ ನೀಡದ ವಾರ್ಡನ್‌ಗಳ ವಿರುದ್ಧ ಕ್ರಮ: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ
    September 16, 2026 | 0
  • Your paragraph text 2026 09 16T174927.892
    ಧ್ವನಿವರ್ಧಕ ಬಳಕೆಗೆ ಬ್ರೇಕ್; ಗಣೇಶನನ್ನು ನಡುರಸ್ತೆಯಲ್ಲೇ ಬಿಟ್ಟು ತೆರಳಿದ ಗ್ರಾಮಸ್ಥರು
    September 16, 2026 | 0
  • Your paragraph text 2026 09 16T165717.310
    ಸರ್ಕಾರಿ ವೇತನ ಪಡೆದು ಪಿಜಿ ಅಧ್ಯಯನ ಆರೋಪ: ವಿಚಾರಣೆಗೆ ಗೈರಾದ ಶಾಸಕ ಮೇಟಿ ಸೊಸೆ
    September 16, 2026 | 0
  • ಗಣೇಶೋತ್ಸವದ ಮೊದಲ ದಿನವೇ ಬೆಂಗಳೂರಿನಲ್ಲಿ 1.84 ಲಕ್ಷಕ್ಕೂ ಹೆಚ್ಚು ಮೂರ್ತಿಗಳ ವಿಸರ್ಜನೆ
    ಗಣೇಶೋತ್ಸವದ ಮೊದಲ ದಿನವೇ ಬೆಂಗಳೂರಿನಲ್ಲಿ 1.84 ಲಕ್ಷಕ್ಕೂ ಹೆಚ್ಚು ಮೂರ್ತಿಗಳ ವಿಸರ್ಜನೆ
    September 16, 2026 | 0
  • Untitled design 2026 09 16T155011.294
    ಸೆ.18ರಿಂದ 2 ದಿನ ಕರ್ನಾಟಕದಲ್ಲಿ ಅಮಿತ್ ಶಾ ಪ್ರವಾಸ
    September 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version