• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಶಿಕ್ಷಕಿ ಬೈದಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹ*ತ್ಯೆ ಕೇಸ್: ಶಿಕ್ಷಕಿ ಸೇರಿ ಇಬ್ಬರು ವಜಾ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 11, 2026 - 5:28 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ಗ್ರಾಮಾಂತರ
0 0
0
Untitled design 2026 07 11T172712.469

ಆನೇಕಲ್: ಶಾಲೆಯಲ್ಲಿ ಶಿಕ್ಷಕಿಯರು ನೀಡಿದ ಮಾನಸಿಕ ಕಿರುಕುಳ ಮತ್ತು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಕ್ಕೆ ಮನನೊಂದು 8ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದೆ. ಶಾಲೆಯ ಮೂವರು ಶಿಕ್ಷಕಿಯರು ಹಾಗೂ ಓರ್ವ ಅಡುಗೆ ಸಹಾಯಕಿ ವಿರುದ್ಧ ಸೂರ್ಯನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಮಧುಶ್ರೀ ಆತ್ಮಹತ್ಯೆಗೂ ಮುನ್ನ ಬರೆದಿದ್ದ ಡೆತ್‌ನೋಟ್ ಹಾಗೂ ಕುಟುಂಬದವರ ದೂರಿನ ಆಧಾರದ ಮೇಲೆ ಶಾಲೆಯ ಮುಖ್ಯ ಶಿಕ್ಷಕಿ ಸುಜಾತ ಈರಪ್ಪ, ಸಹ ಶಿಕ್ಷಕಿಯರಾದ ಕವಿತಾ ಮತ್ತು ರೂಪಾ, ಅಡುಗೆ ಸಹಾಯಕಿ ಕಮಲಮ್ಮ ವಿರುದ್ಧ ಮಾನಸಿಕ ಕಿರುಕುಳ ನೀಡಿದ ಆರೋಪದಡಿ ಪ್ರಕರಣ ದಾಖಲಾಗಿದೆ. ಸದ್ಯ ಪ್ರಕರಣದ ಸಮಗ್ರ ತನಿಖೆಯನ್ನು ಪೊಲೀಸರು ಮುಂದುವರಿಸಿದ್ದಾರೆ.

RelatedPosts

ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆಗೆ GIS ಆಧಾರಿತ ಆಪ್: ಈಶ್ವರ ಖಂಡ್ರೆ

ಮಂಡ್ಯದಲ್ಲಿ ಮತ್ತೊಬ್ಬ ಭಿಕ್ಷುಕಿಯ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆ!

ಮಂಡ್ಯದಲ್ಲಿ ನಾಳೆ ಬರ ಘೋಷಣೆಗೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿಗೆ ರೈತರ ಮುತ್ತಿಗೆ!

ಹುಬ್ಬಳ್ಳಿ ಫೋಟೋಗ್ರಾಫರ್ ಸಂಘದ ವತಿಯಿಂದ ವಿಶ್ವ ಛಾಯಾಗ್ರಹಣ ದಿನ ಆಚರಣೆ

ADVERTISEMENT
ADVERTISEMENT

ಈ ನಡುವೆ ಶಿಕ್ಷಣ ಇಲಾಖೆ ಪ್ರಾಥಮಿಕ ಹಂತದ ಕ್ರಮವಾಗಿ ಓರ್ವ ಶಿಕ್ಷಕಿ ಹಾಗೂ ಅಡುಗೆ ಸಹಾಯಕಿಯನ್ನು ಸೇವೆಯಿಂದ ವಜಾಗೊಳಿಸಿ ಆದೇಶ ಹೊರಡಿಸಿದೆ. ಉಳಿದ ಆರೋಪಗಳ ಕುರಿತು ತನಿಖೆ ನಡೆಯುತ್ತಿದೆ.

ಮಧುಶ್ರೀ ಶಾಲೆಯಲ್ಲಿ ಕೆಲ ದಿನಗಳಿಂದ ನಿರಂತರ ಮಾನಸಿಕ ಒತ್ತಡ ಅನುಭವಿಸುತ್ತಿದ್ದಳು ಎನ್ನಲಾಗಿದೆ. ಶಾಲೆಯಲ್ಲಿ ಕೆಲವು ವಿದ್ಯಾರ್ಥಿಗಳೊಂದಿಗೆ ನಡೆದ ಘಟನೆಗಳು ಹಾಗೂ ಶಿಕ್ಷಕಿಯರ ವರ್ತನೆಯಿಂದ ಬೇಸತ್ತಿದ್ದ ಆಕೆ, ತನ್ನ ಮೇಲಿನ ಮಾನಸಿಕ ಕಿರುಕುಳದ ಬಗ್ಗೆ ಪತ್ರವೊಂದನ್ನು ಬರೆದಿದ್ದಳು. ಆ ಪತ್ರವನ್ನು ಗ್ರಾಮ ಪಂಚಾಯಿತಿ ಪಿಡಿಒ ಅವರಿಗೆ ಸಲ್ಲಿಸುವ ಉದ್ದೇಶದಿಂದ ತನ್ನ ಶಾಲಾ ಬ್ಯಾಗ್‌ನಲ್ಲಿ ಇಟ್ಟುಕೊಂಡಿದ್ದಳು ಎಂದು ತಿಳಿದುಬಂದಿದೆ.

ಆದರೆ ಈ ವಿಚಾರ ಶಿಕ್ಷಕಿಯರಿಗೆ ತಿಳಿದ ಬಳಿಕ ಮಧುಶ್ರೀ ಮೇಲೆ ಇನ್ನಷ್ಟು ಒತ್ತಡ ಮತ್ತು ಕಿರುಕುಳ ಹೆಚ್ಚಾಗಿದೆ ಎಂಬ ಆರೋಪವನ್ನು ಕುಟುಂಬದವರು ಮಾಡಿದ್ದಾರೆ. ಆತ್ಮಹತ್ಯೆಗೂ ಹಿಂದಿನ ದಿನ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಶ್ರೀನಿವಾಸ್ ಅವರಿಗೆ ತನ್ನ ಸಮಸ್ಯೆಗಳನ್ನು ಮಧುಶ್ರೀ ವಿವರಿಸಿದ್ದಳು ಎನ್ನಲಾಗಿದೆ.

ಅದೇ ದಿನ ಮನೆಗೆ ಮರಳಿದ ಮಧುಶ್ರೀ, ಶಾಲೆಯಲ್ಲಿ ಶಿಕ್ಷಕಿಯರು ತನ್ನನ್ನು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದು, ನಿರಂತರವಾಗಿ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ತನ್ನ ಸಹೋದರಿ ಭಾನುಶ್ರೀಗೆ ವಿವರವಾಗಿ ಹೇಳಿದ್ದಳು. ಬಳಿಕ ಮನನೊಂದಿದ್ದ ಆಕೆ ಡೆತ್‌ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕುಟುಂಬದವರು ತಿಳಿಸಿದ್ದಾರೆ.

ಮಧುಶ್ರೀ ಓರ್ವ ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದು, ರಾಜ್ಯಮಟ್ಟದಲ್ಲಿ ಕಬ್ಬಡಿ ಆಟಗಾರ್ತಿಯಾಗಿ ಗುರುತಿಸಿಕೊಂಡಿದ್ದಳು. ಪೊಲೀಸರ ವಶದಲ್ಲಿರುವ ಡೆತ್‌ನೋಟ್‌ನಲ್ಲಿ ಶಾಲೆಯಲ್ಲಿ ನಡೆದ ಘಟನೆಗಳು ತನ್ನ ಮನಸ್ಸಿಗೆ ತೀವ್ರ ನೋವು ತಂದಿವೆ ಎಂದು ಮಧುಶ್ರೀ ಉಲ್ಲೇಖಿಸಿದ್ದಾಳೆ. ತನ್ನ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಮಾಡಲಾಗಿದೆ, ಆ ಅವಮಾನವನ್ನು ಸಹಿಸಿಕೊಂಡು ಬದುಕಲು ಸಾಧ್ಯವಾಗುತ್ತಿಲ್ಲ ಎಂದು ಬರೆದಿದ್ದಾಳೆ.

ಜೊತೆಗೆ ತನ್ನ ತಾಯಿ, ಅಕ್ಕ, ತಂಗಿ ಹಾಗೂ ತಮ್ಮನಿಗೆ ಯಾವುದೇ ತಪ್ಪಿಲ್ಲ ಎಂದು ಸ್ಪಷ್ಟಪಡಿಸಿ, ಯಾರೂ ತನ್ನ ತಾಯಿಯನ್ನು ದೂಷಿಸಬಾರದು ಎಂದು ಮನವಿ ಮಾಡಿದ್ದಾಳೆ. ಎಲ್ಲರೂ ತನ್ನನ್ನು ಕ್ಷಮಿಸಬೇಕು ಎಂಬ ಭಾವನಾತ್ಮಕ ಮಾತುಗಳನ್ನೂ ದಾಖಲಿಸಿದ್ದಾಳೆ.

 ಈ ಪ್ರಕರಣ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆ ಶಾಲಾ ಶಿಕ್ಷಣ ಇಲಾಖೆ ಈಗಾಗಲೇ ತ್ರಿಸದಸ್ಯ ತನಿಖಾ ಸಮಿತಿಯನ್ನು ರಚಿಸಿದೆ. ಸಮಿತಿ ಶಾಲೆಗೆ ಭೇಟಿ ನೀಡಿ ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು ಹಾಗೂ ಅಧಿಕಾರಿಗಳ ಹೇಳಿಕೆಗಳನ್ನು ಸಂಗ್ರಹಿಸುತ್ತಿದ್ದು, ಸಮಗ್ರ ವರದಿ ಸಲ್ಲಿಸಿದ ಬಳಿಕ ಮತ್ತಷ್ಟು ಇಲಾಖಾ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.

ಸದ್ಯ ಪೊಲೀಸರು ಡೆತ್‌ನೋಟ್, ಸಾಕ್ಷ್ಯಗಳು ಹಾಗೂ ಸಂಬಂಧಪಟ್ಟವರ ಹೇಳಿಕೆಗಳನ್ನು ಆಧರಿಸಿ ತನಿಖೆ ಮುಂದುವರಿಸಿದ್ದಾರೆ. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text

ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆಗೆ GIS ಆಧಾರಿತ ಆಪ್: ಈಶ್ವರ ಖಂಡ್ರೆ

by ಕವಿತಾ
August 27, 2026 - 5:03 pm
0

Untitled design (60)

ಮಂಡ್ಯದಲ್ಲಿ ಮತ್ತೊಬ್ಬ ಭಿಕ್ಷುಕಿಯ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆ!

by ಕವಿತಾ
August 27, 2026 - 4:49 pm
0

Untitled design (58)

ಶಿವಣ್ಣನ ಬಾಲಿವುಡ್ ಎಂಟ್ರಿಗೆ ಕೌಂಟ್‌ಡೌನ್; ಮುಂಬೈನಲ್ಲಿ ಟೈಟಲ್, ಫಸ್ಟ್‌ಲುಕ್ ಲಾಂಚ್!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 27, 2026 - 4:27 pm
0

Untitled design (57)

ನೇಪಾಳ ಜಲಪ್ರಳಯ: ಇಶಾ ಫೌಂಡೇಶನ್‌ನ 77 ಯಾತ್ರಿಕರು ನಾಪತ್ತೆ, ಸದ್ಗುರು ಕಳವಳ

by ಕವಿತಾ
August 27, 2026 - 4:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (26)
    ನೇಪಾಳ ಜಲಪ್ರಳಯದ ಎಫೆಕ್ಟ್; ಬಿಹಾರ, ಯುಪಿ, ಉತ್ತರಾಖಂಡದಲ್ಲಿ ಹೈಅಲರ್ಟ್
    August 27, 2026 | 0
  • Your paragraph text (29)
    ಪ್ರಕೃತಿಯ ಕೋಪಕ್ಕೆ ಥಂಡಾ ಹೊಡೆದ ನೇಪಾಳ: ಕೊಚ್ಚಿಹೋದ ಗಡಿ ಗ್ರಾಮಗಳು
    August 27, 2026 | 0
  • Your paragraph text (18)
    ನೇಪಾಳ ಜಲಪ್ರಳಯ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ರಾಜ್ಯ ಸರ್ಕಾರ ಮನವಿ
    August 27, 2026 | 0
  • Your paragraph text (12)
    ಇಂದೇ ರಾಜೀನಾಮೆ ನೀಡ್ತಾರಾ ಸಚಿವ ನಾಗೇಂದ್ರ..? ದೆಹಲಿಗೆ ತೆರಳಿದ ಸಿಎಂ ಡಿಕೆಶಿ
    August 27, 2026 | 0
  • Your paragraph text (11)
    ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ: ಪುನೀತ್ ಕೆರೆಹಳ್ಳಿ ಸೇರಿ ಮೂವರು ಅರೆಸ್ಟ್
    August 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version