ಬೆಂಗಳೂರು: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಕರ್ನಾಟಕ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಅಂತಿಮ ಹಂತ ತಲುಪಿರುವ ಲಕ್ಷಣಗಳು ಕಂಡುಬಂದಿವೆ. ದೆಹಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಹಿರಿಯ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರೊಂದಿಗೆ ಪ್ರತ್ಯೇಕ ಸಭೆ ನಡೆಸಿದ್ದು, ಸಚಿವರ ಪಟ್ಟಿಗೆ ಅಂತಿಮ ರೂಪ ನೀಡಲಾಗಿದೆ ಎಂಬ ಮಾಹಿತಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ.
ಮೂಲಗಳ ಪ್ರಕಾರ, ಸಚಿವ ಸ್ಥಾನಕ್ಕಾಗಿ ಹಲವು ಶಾಸಕರು ತೀವ್ರ ಲಾಬಿ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಪ್ರಾದೇಶಿಕ ಸಮತೋಲನ, ಜಾತಿ ಸಮೀಕರಣ, ಅನುಭವ ಹಾಗೂ ರಾಜಕೀಯ ಪ್ರಾತಿನಿಧ್ಯ ಸೇರಿದಂತೆ ವಿವಿಧ ಅಂಶಗಳನ್ನು ಪರಿಗಣಿಸಿ ಪಟ್ಟಿ ಸಿದ್ಧಪಡಿಸಲಾಗಿದೆ. ಯಾವುದೇ ಅಸಮಾಧಾನ ಉಂಟಾಗದಂತೆ ಹೈಕಮಾಂಡ್ ಎಚ್ಚರಿಕೆಯಿಂದ ನಿರ್ಧಾರ ಕೈಗೊಂಡಿದೆ ಎನ್ನಲಾಗಿದೆ.
RelatedPosts
ಸಂಪುಟ ವಿಸ್ತರಣೆ ಕುರಿತಂತೆ ಕಳೆದ ಕೆಲವು ವಾರಗಳಿಂದ ನಿರಂತರ ಚರ್ಚೆಗಳು ನಡೆಯುತ್ತಿದ್ದು, ಹಲವು ಸುತ್ತಿನ ಸಭೆಗಳ ಬಳಿಕ ಇದೀಗ ಅಂತಿಮ ನಿರ್ಧಾರಕ್ಕೆ ಬರಲಾಗಿದೆ ಎಂದು ಹೇಳಲಾಗುತ್ತಿದೆ. ಹೊಸ ಸಚಿವರ ಸೇರ್ಪಡೆಯೊಂದಿಗೆ ಕೆಲವು ಇಲಾಖೆಗಳ ಪುನರ್ವಿಂಗಡಣೆಗೂ ಅವಕಾಶ ಇರುವ ಸಾಧ್ಯತೆ ಇದೆ.
ಆದಾಗ್ಯೂ, ಸಚಿವರ ಅಧಿಕೃತ ಪಟ್ಟಿಯನ್ನು ಕಾಂಗ್ರೆಸ್ ಹೈಕಮಾಂಡ್ ಅಥವಾ ರಾಜ್ಯ ಸರ್ಕಾರ ಇನ್ನೂ ಪ್ರಕಟಿಸಿಲ್ಲ. ಹೀಗಾಗಿ ಅಂತಿಮ ಘೋಷಣೆ ಹೊರಬರುವವರೆಗೆ ಹೆಸರುಗಳ ಬಗ್ಗೆ ಅಧಿಕೃತ ದೃಢೀಕರಣವಿಲ್ಲ.
ಸಚಿವ ಸಂಪುಟ ವಿಸ್ತರಣೆಯ ಅಧಿಕೃತ ಘೋಷಣೆ ಶೀಘ್ರದಲ್ಲೇ ಹೊರಬರುವ ನಿರೀಕ್ಷೆ ಇದ್ದು, ಯಾರು ಸಚಿವರಾಗಲಿದ್ದಾರೆ ಎಂಬ ಕುತೂಹಲ ಕಾಂಗ್ರೆಸ್ ವಲಯದಲ್ಲಿ ಹೆಚ್ಚಾಗಿದೆ. ಸಚಿವ ಸ್ಥಾನಕ್ಕಾಗಿ ಕಾಯುತ್ತಿರುವ ಹಲವು ಶಾಸಕರ ಭವಿಷ್ಯವೂ ಈ ವಿಸ್ತರಣೆಯೊಂದಿಗೆ ನಿರ್ಧಾರವಾಗಲಿದೆ.
ಬಹಳ ದಿನಗಳಿಂದ ಸಂಪುಟ ಸೇರಲು ಭಾರೀ ಲಾಬಿ ನೆಡೆಸುತ್ತಿದ್ದ ಸಚಿವರಿಗೆ ಕೊನೆಗೂ ಉತ್ತರ ಸಿಕ್ಕಂತಾಗಿದೆ ಆದರೆ ಯಾರು ಯಾರು ಸಂಪುಟ ಸೇರಲಿದ್ದಾರೆ ಎಂಬ ಪ್ರಶ್ನೆಗೆ ಡಿಕೆ ಶಿವಕುಮಾರ್ ಅವರಿಂದಲೇ ಉತ್ತರ ಲಭಿಸಬೇಕಿದೆ.
ಆದರೂ ಸಹ ಬಾರಿ ದಿನಗಳಿಂದ ಸಂಪುಟ ಸರ್ಜರಿಗೆ ತೊಡಗಿದ್ದ ಸಿಎಂ ಡಿಕೆ ಶಿವಕುಮಾರ್ ಅವರಿಗೆ ಸ್ವಲ್ಪ ನಿರಾಳತೆ ಸಿಕ್ಕಂತಾಗಿದೆ. ಇನ್ನು ಎಷ್ಟು ಜನ ಸಚಿವರುಗಳು ಡಿಕೆ ಸಂಪುಟ ಸೇರಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ. ಆದರೂ ಸಹ ಬಹಳ ದಿನಗಳಿಂದ ನಿರೀಕ್ಷೆಯಲ್ಲಿದ್ದ ಎಲ್ಲರಿಗೂ ಉತ್ತರ ಲಭಿಸಿದಂತಾಗಿದೆ.





