• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಚೆನ್ನಮ್ಮ ಅಂತಿಮ ದರ್ಶನ ಪಡೆದ ಸಿಎಂ ಡಿಕೆಶಿ, ಬೆನ್ನುತಟ್ಟಿ ದೇವೇಗೌಡ ಅವರಿಗೆ ಸಾಂತ್ವನ ಹೇಳಿದ ಸಿದ್ದರಾಮಯ್ಯ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 18, 2026 - 11:12 pm
in ಕರ್ನಾಟಕ
0 0
0
Untitled design 2026 07 18T231121.798

ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ನಿಧನಕ್ಕೆ ರಾಜ್ಯದ ರಾಜಕೀಯ ವಲಯ ಕಂಬನಿ ಮಿಡಿದಿದೆ. ಉಸಿರಾಟದ ತೊಂದರೆಯಿಂದ ಬೆಂಗಳೂರಿನ ಎಚ್‌ಎಎಲ್‌ನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಚೆನ್ನಮ್ಮ ಅವರು ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಸಂಜೆ ಹೃದಯಸ್ತಂಭನದಿಂದ ವಿಧಿವಶರಾದರು. ಅವರ ಪಾರ್ಥೀವ ಶರೀರವನ್ನು ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಇರಿಸಲಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ರಾಜಕೀಯ ನಾಯಕರು ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದರು.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪತ್ನಿ ಉಷಾ ಶಿವಕುಮಾರ್ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಚೆನ್ನಮ್ಮ ಅವರ ಅಂತಿಮ ದರ್ಶನ ಪಡೆದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಮಾತೃಸ್ವರೂಪಿಯಾಗಿದ್ದ ಚೆನ್ನಮ್ಮ ಅವರ ನಿಧನದ ಸುದ್ದಿ ಕೇಳಿ ತೀವ್ರ ದುಃಖವಾಯಿತು. ಅವರ ಆರೋಗ್ಯ ಗಂಭೀರವಾಗಿದೆ ಎಂಬ ಮಾಹಿತಿ ಈಗಾಗಲೇ ಇತ್ತು. ಅವರು ಅಪಾರ ದೈವಭಕ್ತೆಯಾಗಿದ್ದು, ದೊಡ್ಡ ಕುಟುಂಬವನ್ನು ಸುಖ-ದುಃಖಗಳಲ್ಲಿ ಸಮರ್ಥವಾಗಿ ಮುನ್ನಡೆಸಿದ ಧೀಮಂತ ಮಹಿಳೆ” ಎಂದು ಶ್ರದ್ಧಾಂಜಲಿ ಸಲ್ಲಿಸಿದರು.

RelatedPosts

ದೇವೇಗೌಡರ ಕುಟುಂಬಕ್ಕೆ ತುಂಬಲಾರದ ನಷ್ಟ: ಚೆನ್ನಮ್ಮ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

ದೇವೇಗೌಡರ ಕುಟುಂಬದ ಬೆನ್ನೆಲುಬಾಗಿದ್ದ ಚೆನ್ನಮ್ಮ: ಸಿಎಂ ಡಿಕೆ ಶಿವಕುಮಾರ್ ಸಂತಾಪ

HD ದೇವೇಗೌಡರ ಹುಟ್ಟೂರಲ್ಲಿ ನಾಳೆ ಚೆನ್ನಮ್ಮ ಅಂತ್ಯಕ್ರಿಯೆ

ಚೆನ್ನಮ್ಮ ನಿಧನಕ್ಕೆ ರಾಜಕೀಯ ಗಣ್ಯರ ಕಂಬನಿ: ಸಿದ್ದರಾಮಯ್ಯ, ಯಡಿಯೂರಪ್ಪ ಸೇರಿ ಅನೇಕ ನಾಯಕರಿಂದ ಸಂತಾಪ

ADVERTISEMENT
ADVERTISEMENT

ಮುಂದುವರಿದು ಮಾತನಾಡಿದ ಸಿಎಂ, “ರಾಜಕೀಯ ಕ್ಷೇತ್ರದ ಅನೇಕ ನಾಯಕರಿಗೆ ಅವರು ತಾಯಿಯಂತಿದ್ದರು. ಮಾಜಿ ಪ್ರಧಾನಿಯ ಪತ್ನಿಯಾಗಿ ಮಾತ್ರವಲ್ಲ, ತ್ಯಾಗ, ಸಹನೆ ಮತ್ತು ಕುಟುಂಬ ಮೌಲ್ಯಗಳ ಪ್ರತೀಕವಾಗಿ ರಾಜ್ಯದ ಮಹಿಳೆಯರಿಗೆ ಮಾದರಿಯಾಗಿದ್ದರು. ಹೆಚ್‌.ಡಿ. ದೇವೇಗೌಡ ಅವರ ರಾಜಕೀಯ ಪಯಣದಲ್ಲಿ ಅವರ ಬೆಂಬಲ ಮಹತ್ವದ ಪಾತ್ರ ವಹಿಸಿತ್ತು. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಕುಟುಂಬದ ಸದಸ್ಯರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ” ಎಂದು ಹೇಳಿದರು.

ಚೆನ್ನಮ್ಮ ಅವರಿಗೆ ಸರ್ಕಾರಿ ಗೌರವದೊಂದಿಗೆ ಅಂತಿಮ ನಮನ ಸಲ್ಲಿಸಲಾಗುವುದು ಎಂದು ತಿಳಿಸಿದ ಡಿ.ಕೆ. ಶಿವಕುಮಾರ್, ಸೋಮವಾರ (ಜುಲೈ 20) ಅಂತ್ಯಕ್ರಿಯೆ ನಡೆಯಲಿದ್ದು, ಸರ್ಕಾರದಿಂದ ಅಗತ್ಯವಿರುವ ಎಲ್ಲ ರೀತಿಯ ವ್ಯವಸ್ಥೆಗಳನ್ನು ಮಾಡಲಾಗುತ್ತದೆ ಎಂದು ಹೇಳಿದರು.

ಇದೇ ವೇಳೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಚೆನ್ನಮ್ಮ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದರು. ಬಳಿಕ ದೇವೇಗೌಡರ ಪಕ್ಕದಲ್ಲಿ ಕೆಲಕಾಲ ಕುಳಿತು ಅವರ ಬೆನ್ನುತಟ್ಟಿ ಸಾಂತ್ವನ ಹೇಳಿದರು. ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಅವರಿಗೂ ಧೈರ್ಯ ತುಂಬಿ ಕುಟುಂಬದ ಸದಸ್ಯರೊಂದಿಗೆ ದುಃಖ ಹಂಚಿಕೊಂಡರು.

ಇದರ ಜೊತೆಗೆ ಕೇಂದ್ರ ಸಚಿವ ವಿ. ಸೋಮಣ್ಣ, ಸಚಿವ ಕೃಷ್ಣ ಭೈರೇಗೌಡ, ಸಚಿವ ಜಮೀರ್ ಅಹ್ಮದ್ ಖಾನ್, ಸಿಎಂ ಇಬ್ರಾಹಿಂ, ಮಾಜಿ ಸಚಿವ ತಮ್ಮಣ್ಣ ಸೇರಿದಂತೆ ವಿವಿಧ ಪಕ್ಷಗಳ ಅನೇಕ ರಾಜಕೀಯ ಗಣ್ಯರು ಪದ್ಮನಾಭನಗರ ನಿವಾಸಕ್ಕೆ ಆಗಮಿಸಿ ಚೆನ್ನಮ್ಮ ಅವರಿಗೆ ಅಂತಿಮ ನಮನ ಸಲ್ಲಿಸಿದರು.

ಕುಟುಂಬದ ಸದಸ್ಯರು ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸುತ್ತಿದ್ದು, ಬಳಿಕ ಪಾರ್ಥೀವ ಶರೀರವನ್ನು ಸಾರ್ವಜನಿಕರ ದರ್ಶನಕ್ಕಾಗಿ ಪದ್ಮನಾಭನಗರದ ಮೈದಾನಕ್ಕೆ ಸ್ಥಳಾಂತರಿಸಲಾಗುತ್ತದೆ. ಭಾನುವಾರ (ಜುಲೈ 19) ಮಧ್ಯಾಹ್ನದವರೆಗೆ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ನಂತರ ಮಧ್ಯಾಹ್ನ 3 ಗಂಟೆಯ ಬಳಿಕ ಪಾರ್ಥೀವ ಶರೀರವನ್ನು ಹಾಸನ ಜಿಲ್ಲೆಗೆ ಕೊಂಡೊಯ್ಯಲಾಗುತ್ತದೆ. ಸೋಮವಾರ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದ್ದು, ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಜನರು ಅಂತಿಮ ನಮನ ಸಲ್ಲಿಸುವ ನಿರೀಕ್ಷೆಯಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design 2026 07 18T231121.798

ಚೆನ್ನಮ್ಮ ಅಂತಿಮ ದರ್ಶನ ಪಡೆದ ಸಿಎಂ ಡಿಕೆಶಿ, ಬೆನ್ನುತಟ್ಟಿ ದೇವೇಗೌಡ ಅವರಿಗೆ ಸಾಂತ್ವನ ಹೇಳಿದ ಸಿದ್ದರಾಮಯ್ಯ

by ದಿಶಾ ಕೆ. ಎಸ್.
July 18, 2026 - 11:12 pm
0

Untitled design 2026 07 18T225258.731

ಅಹಮದಾಬಾದ್ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 8 ಮಂದಿ ಸಾವು, ಹಲವರಿಗೆ ಗಾಯ

by ದಿಶಾ ಕೆ. ಎಸ್.
July 18, 2026 - 10:54 pm
0

Untitled design 2026 07 18T223800.543

ಭಾರತ-ಇಂಗ್ಲೆಂಡ್ ಕದನಕ್ಕೆ ವೇದಿಕೆ ಸಜ್ಜು: ನಾಳೆ ಸರಣಿ ಗೆಲ್ಲೋದು ಯಾರು?

by ದಿಶಾ ಕೆ. ಎಸ್.
July 18, 2026 - 10:39 pm
0

Untitled design 2026 07 18T220310.168

ರಾಷ್ಟ್ರೀಯ ಪ್ರಶಸ್ತಿಯಲ್ಲಿ ‘ಆರ್ಟಿಕಲ್ 370’ ಅಬ್ಬರ; ಮೂರು ಪ್ರಶಸ್ತಿ ತನ್ನದಾಗಿಸಿಕೊಂಡ ಸಿನಿಮಾ

by ದಿಶಾ ಕೆ. ಎಸ್.
July 18, 2026 - 10:04 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 18T202750.716
    ದೇವೇಗೌಡರ ಕುಟುಂಬಕ್ಕೆ ತುಂಬಲಾರದ ನಷ್ಟ: ಚೆನ್ನಮ್ಮ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ
    July 18, 2026 | 0
  • Untitled design 2026 07 18T195637.567
    ದೇವೇಗೌಡರ ಕುಟುಂಬದ ಬೆನ್ನೆಲುಬಾಗಿದ್ದ ಚೆನ್ನಮ್ಮ: ಸಿಎಂ ಡಿಕೆ ಶಿವಕುಮಾರ್ ಸಂತಾಪ
    July 18, 2026 | 0
  • Untitled design 2026 07 18T193249.222
    HD ದೇವೇಗೌಡರ ಹುಟ್ಟೂರಲ್ಲಿ ನಾಳೆ ಚೆನ್ನಮ್ಮ ಅಂತ್ಯಕ್ರಿಯೆ
    July 18, 2026 | 0
  • Untitled design 2026 07 18T190508.552
    ಚೆನ್ನಮ್ಮ ನಿಧನಕ್ಕೆ ರಾಜಕೀಯ ಗಣ್ಯರ ಕಂಬನಿ: ಸಿದ್ದರಾಮಯ್ಯ, ಯಡಿಯೂರಪ್ಪ ಸೇರಿ ಅನೇಕ ನಾಯಕರಿಂದ ಸಂತಾಪ
    July 18, 2026 | 0
  • Untitled design 2026 07 18T180154.651
    ಬಿಡದಿ ಟೌನ್‌ಶಿಪ್ ವಿರೋಧಿಸಿ ಜು.30ರಿಂದ ಜೆಡಿಎಸ್ ಪ್ರತ್ಯೇಕ ಪಾದಯಾತ್ರೆ
    July 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version