• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಟ್ರೇಲರ್ ಬಿಡುಗಡೆ: ಜುಲೈ 31ಕ್ಕೆ ಸಿನಿಮಾ ತೆರೆಗೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 22, 2026 - 9:33 pm
in ಸಿನಿಮಾ
0 0
0
ಪ್ರೊಟೆಸ್ಟ್ ಗೆ (9)

‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಹೀಗೊಂದು ಹೆಸರಿನಲ್ಲಿ ಕನ್ನಡದಲ್ಲಿ ಸಿನಿಮಾವೊಂದು ತೆರೆಗೆ ಬರುತ್ತಿರುವುದು ನಿಮಗೆ ಗೊತ್ತಿರಬಹುದು. ಇದೀಗ ಈ ಸಿನಿಮಾ ಸದ್ದಿಲ್ಲದೆ ತನ್ನ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಪೂರೈಸಿ ತೆರೆಗೆ ಬರಲು ಸಿದ್ಧವಾಗಿದೆ. ನಟಿ ರಾಗಿಣಿ ದ್ವಿವೇದಿ, ನಟರಾದ ಕುಮಾರ ಬಂಗಾರಪ್ಪ, ದೊಡ್ಡಣ್ಣ, ನವೀನ್ ಸಜ್ಜು, ಕೃಷ್ಣಪ್ಪ, ರುದ್ರೇಗೌಡ, ಮೊದಲಾದ ಕಲಾವಿದರು ಮುಖ್ಯಭೂಮಿಕೆಯಲ್ಲಿ ಅಭಿನಯಿಸುತ್ತಿರುವ ಈ ಸಿನಿಮಾದ ಟ್ರೇಲರ್ ಇದೀಗ ಬಿಡುಗಡೆಯಾಗಿದೆ.

ಹಿರಿಯ ರಾಜಕಾರಣಿ ಎಲ್. ಆರ್. ಶಿವರಾಮೇಗೌಡ, ಹಿರಿಯ ನಿರ್ಮಾಪಕ ಸಾ. ರಾ. ಗೋವಿಂದು, ‘ಕರ್ನಾಟಕ ಚಲನಚಿತ್ರ ಪ್ರದರ್ಶಕರ ಸಂಘ’ದ ಅಧ್ಯಕ್ಷ ಕೆ. ವಿ. ಚಂದ್ರಶೇಖರ್, ಗಾಯಕಿ ಶಮಿತಾ ಮಲ್ನಾಡ್ ಸೇರಿದಂತೆ ಚಿತ್ರರಂಗ ಮತ್ತು ರಾಜಕೀಯ ರಂಗದ ಹಲವು ಗಣ್ಯರ ಸಮ್ಮುಖದಲ್ಲಿ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ.

RelatedPosts

“ಬೆಂಗಳೂರಿಗೆ ಬಂದರೆ ಸ್ವಂತ ಮನೆಗೆ ಬಂದಂತೆ ಭಾಸವಾಗುತ್ತದೆ”; ನ್ಯಾಚುರಲ್ ಸ್ಟಾರ್ ನಾನಿ

ಪಾ. ರಂಜಿತ್ ನಿರ್ದೇಶನದ ‘ವೆಟ್ಟುವಮ್’ ಸಿನಿಮಾಗೆ ಕನ್ನಡದಲ್ಲಿ ಕಿಚ್ಚ ಸುದೀಪ್ ಧ್ವನಿ

ಅಂದು ಒಕೇ ಒಕ್ಕಡು..ಇಂದು ಕಾಮನ್‌‌ಮ್ಯಾನ್..CM ಕಥೆ

ರಣವೀರ್ ಸಿಂಗ್-ದೀಪಿಕಾ ದಂಪತಿಗೆ ಎರಡನೇ ಹೆಣ್ಣು ಮಗು ಜನನ

ADVERTISEMENT
ADVERTISEMENT

ಇನ್ನು ಸಿನಿಮಾದ ಹೆಸರೇ ಹೇಳುವಂತೆ, ಇದು ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಮತ್ತು ಪಡಿತರ ವ್ಯವಸ್ಥೆಯ ಸುತ್ತ ನಡೆಯುವಂಥ ಕಥಾಹಂದರದ ಚಿತ್ರ. ಪಕ್ಕಾ ಗ್ರಾಮೀಣ ಸೊಗಡಿನ ಕಥಾಹಂದರದ ಈ ಸಿನಿಮಾದ ಸಂಪೂರ್ಣ ಚಿತ್ರೀಕರಣವನ್ನು ಮಂಡ್ಯ ಜಿಲ್ಲೆಯಲ್ಲೇ ನಡೆಸಿರುವುದು ವಿಶೇಷ.

‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಟ್ರೇಲರ್ ಬಿಡುಗಡೆ ವೇಳೆ ಮಾತನಾಡಿದ ಮಾಜಿ ಸಂಸದ ಶಿವರಾಮೇಗೌಡ, ‘ಜನ ಸಾಮಾನ್ಯರು, ಬಡವರು ಹಸಿವಿನಿಂದ ಬಳಲಬಾರದು ಎಂಬ ಉದ್ದೇಶದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ಗಳ ಮೂಲಕ ದಿನಸಿ ಮತ್ತು ಆಹಾರವನ್ನು ಜನರಿಗೆ ತಲುಪಿಸುವ ಕೆಲಸ ಮಾಡುತ್ತಿದೆ. ಆದರೆ, ಈ ವ್ಯವಸ್ಥೆಯಲ್ಲಿರುವ ಕೆಲವು ಲೋಪಗಳಿಂದ ಇದರ ಉದ್ದೇಶ ಪರಿಣಾಮಕಾರಿಯಾಗಿ ಈಡೇರುತ್ತಿಲ್ಲ. ಈಗ ಇದೇ ವಿಷಯವನ್ನು ಸಿನಿಮಾವಾಗಿಸಿ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರತಂಡ ಪ್ರೇಕ್ಷಕರ ಮುಂದೆ ಹೇಳಲು ಹೊರಟಿದೆ. ಚಿತ್ರ ತಂಡದ ಇಂಥದ್ದೊಂದು ಪ್ರಯತ್ನ ನಿಜಕ್ಕೂ ಶ್ಲಾಘನೀಯ. ಸಾಮಾಜಿಕ ಕಳಕಳಿಯ ವಿಷಯಗಳನ್ನು ಸಿನಿಮಾ ಮೂಲಕ ಹೇಳಿದಾಗ, ಅದು ಪರಿಣಾಮಕಾರಿಯಾಗಿ ಪ್ರೇಕ್ಷಕರನ್ನು ತಲುಪುತ್ತದೆ. ಈ ಚಿತ್ರ ಜನ ಜಾಗೃತಿ ಮೂಡಿಸಿ, ಯಶಸ್ವಿಯಾಗಲಿ’ ಎಂದು ಶುಭ ಹಾರೈಸಿದರು.

ಇದೇ ವೇಳೆ ಮಾತನಾಡಿದ ಚಿತ್ರದ ನಾಯಕ ನಟ ಕುಮಾರ್ ಬಂಗಾರಪ್ಪ, ‘ಇಡೀ ದೇಶದಲ್ಲಿಯೇ ಸರ್ಕಾರಿ ನ್ಯಾಯಬೆಲೆ ಅಂಗಡಿ ಮತ್ತು ಪಡಿತರ ವ್ಯವಸ್ಥೆಯ ಮೇಲೆ ಮೂಡಿ ಬರುತ್ತಿರುವ ಮೊಟ್ಟ ಮೊದಲ ಸಿನಿಮಾ ಇದಾಗಿದೆ. ಇಡೀ ಗ್ರಾಮೀಣ ಪರಿಸರದ ಹಿನ್ನೆಲೆಯಲ್ಲಿ ಈ ಸಿನಿಮಾ ಸಾಗುತ್ತದೆ. ಮನರಂಜನೆ ಜೊತೆಗೆ ಒಂದು ಒಳ್ಳೆಯ ಸಂದೇಶ ಕೂಡ ಈ ಸಿನಿಮಾದಲ್ಲಿದೆ. ಸರ್ಕಾರಿ ನ್ಯಾಯಬೆಲೆ ಅಂಗಡಿಯಲ್ಲಿ ಏನೇನು ವ್ಯವಹಾರಗಳು, ಅವ್ಯವಹಾರಗಳು ನಡೆಯುತ್ತದೆ ಎಂಬುದನ್ನು ಸಮಾಜಕ್ಕೆ ತೋರಿಸುವಂಥ ಕಥೆ ಈ ಸಿನಿಮಾದಲ್ಲಿದೆ.

ಇದು ಎಲ್ಲಾ ಥರದ ಆಡಿಯನ್ಸ್‌ಗೂ ಕನೆಕ್ಟ್‌ ಆಗುವಂಥ ಸಿನಿಮಾ. ಇಡೀ ಸಿನಿಮಾವನನ್ನು ಮಂಡ್ಯ ಜಿಲ್ಲೆಯ ಗ್ರಾಮೀಣ ಪರಿಸರದಲ್ಲಿ ಚಿತ್ರೀಕರಿಸಿದ್ದು, ಒಂದು ಅದ್ಭುತ ಅನುಭವ. ನಿರ್ಮಾಪಕರು, ನಿರ್ದೇಶಕರು ಮತ್ತು ತಂತ್ರಜ್ಞರ ಸಹಕಾರದಿಂದ ‘ಸರ್ಕಾರಿ ನ್ಯಾಯಬೆಲೆ ಅಂಗಡಿʼ ಚಿತ್ರ ತುಂಬ ಚೆನ್ನಾಗಿ ಮೂಡಿಬರುತ್ತಿದೆ. ಸಿನಿಮಾದ ಚಿತ್ರೀಕರಣ ಮುಗಿದಿದ್ದೇ ಗೊತ್ತಾಗಲಿಲ್ಲ. ಬಹುಕಾಲದ ಬಳಿಕ ಇಂಥದ್ದೊಂದು ಸಾಮಾಜಿಕ ಕಳಕಳಿಯ ಚಿತ್ರದಲ್ಲಿ ಅಭಿನಯಿಸಿರುವುದಕ್ಕೆ ಖುಷಿಯಿದೆ’ ಎಂದರು.

‘ಸರ್ಕಾರಿ ನ್ಯಾಯಬೆಲೆ ಅಂಗಡಿʼ ಚಿತ್ರದಲ್ಲಿ ನಟಿ ರಾಗಿಣಿ ದ್ವಿವೇದಿ ಪಾರ್ವತಿ ಎಂಬ ಗ್ರಾಮೀಣ ಮಹಿಳೆಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ‘ಮೊದಲ ಬಾರಿಗೆ ಅಪ್ಪಟ ಹಳ್ಳಿ ಮಹಿಳೆಯ ಪಾತ್ರ ಈ ಸಿನಿಮಾದಲ್ಲಿ ಸಿಕ್ಕಿದೆ. ಇಡೀ ಸಿನಿಮಾವನ್ನು ಗ್ರಾಮೀಣ ಭಾಗದಲ್ಲಿ ಚಿತ್ರೀಕರಣ ಮಾಡಿದ್ದು ಮತ್ತೊಂದು ಅನುಭವ. ಈ ಚಿತ್ರ ನೋಡುಗರಿಗೆ ಮೆಸೇಜ್ ಜೊತೆಗೆ ಮನರಂಜನೆ ಕೂಡ ನೀಡಲಿದೆ’ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ʼಜಯಶಂಕರ ಟಾಕೀಸ್‌ʼ ಬ್ಯಾನರಿನಲ್ಲಿ ನಿರ್ಮಾಣವಾಗುತ್ತಿರುವ ‘ಸರ್ಕಾರಿ ನ್ಯಾಯಬೆಲೆ ಅಂಗಡಿʼ ಚಿತ್ರವನ್ನು ತೇಜು ಮೂರ್ತಿ ಮತ್ತು ಪದ್ಮಾವತಿ ಚಂದ್ರಶೇಖರ್‌ ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರದ ಹಾಡುಗಳಿಗೆ ಅನಂತ್‌ ಆರ್ಯನ್‌ ಸಂಗೀತ ಸಂಯೋಜಿಸುತ್ತಿದ್ದಾರೆ. ಬಿ. ರಾಮಮೂರ್ತಿ ಕಥೆ, ಚಿತ್ರಕಥೆ ಮತ್ತು ಸಂಭಾಷಣೆಯಿರುವ ‘ಸರ್ಕಾರಿ ನ್ಯಾಯಬೆಲೆ ಅಂಗಡಿʼ ಚಿತ್ರಕ್ಕೆ ಸಾತ್ವಿಕ್‌ ಪವನ್‌ ಕುಮಾರ್‌ ಛಾಯಾಗ್ರಹಣ ಮತ್ತು ನಿರ್ದೇಶನ ಮಾಡುತ್ತಿದ್ದಾರೆ.

ನಿರ್ಮಾಪಕರಾದ ಭಾ. ಮ. ಹರೀಶ್‌, ಭಾ. ಮ. ಗಿರೀಶ್‌, ಚೆಲುವ ಮೂರ್ತಿ, ‘ಕರ್ನಾಟಕ ಪಡಿತರ ವಿತರಕರ ಸಂಘ’ದ ಅಧ್ಯಕ್ಷ ಕೃಷ್ಣಪ್ಪ, ‘ಐಪ್ಲೆಕ್ಸ್’ ಸಂಸ್ಥೆಯ ಮುಖ್ಯಸ್ಥ ಗಿರೀಶ್, ಸೇರಿದಂತೆ ಚಿತ್ರರಂಗ ಮತ್ತು ರಾಜಕೀಯ ರಂಗದ ಅನೇಕ ಗಣ್ಯರು ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಪೋಸ್ಟರ್ ಬಿಡುಗಡೆ ವೇಳೆ ಹಾಜರಿದ್ದರು.

ಸದ್ಯ, ಸುಮಾರು 52 ದಿನಗಳ ಕಾಲ ಮಂಡ್ಯ ಸುತ್ತಮುತ್ತಲಿನ ಸ್ಥಳಗಳಲ್ಲಿ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಚಿತ್ರೀಕರಣ, ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಪೂರ್ಣಗೊಳಿಸಿರುವ ಚಿತ್ರತಂಡ, ಇದೇ ಜುಲೈ 31 ರಂದು ಈ ಸಿನಿಮಾವನ್ನು ಪ್ರೇಕ್ಷಕರ ಮುಂದೆ ತರಲು ಸಿದ್ದತೆ ಮಾಡಿಕೊಂಡಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 19T221248.967

KPSC ಹಗರಣಕ್ಕೆ ಬಿಗ್ ಟ್ವಿಸ್ಟ್; ಐಎಎಸ್ ಅಧಿಕಾರಿ ಜ್ಞಾನೇಂದ್ರ- ಕನ್ನಾಳೆಗೆ ಮತ್ತೊಂದು ಸಂಕಷ್ಟ!

by ಶಾಲಿನಿ ಕೆ. ಡಿ
September 19, 2026 - 10:14 pm
0

Untitled design 2026 09 19T215804.442

“ಬೆಂಗಳೂರಿಗೆ ಬಂದರೆ ಸ್ವಂತ ಮನೆಗೆ ಬಂದಂತೆ ಭಾಸವಾಗುತ್ತದೆ”; ನ್ಯಾಚುರಲ್ ಸ್ಟಾರ್ ನಾನಿ

by ಶಾಲಿನಿ ಕೆ. ಡಿ
September 19, 2026 - 9:59 pm
0

Untitled design 2026 09 19T214531.387

ಮಸೀದಿ ಮುಂದೆ ಪಟಾಕಿ ಸಿಡಿಸಿ ಮೆರವಣಿಗೆ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೇಸ್‌‌ ದಾಖಲು

by ಶಾಲಿನಿ ಕೆ. ಡಿ
September 19, 2026 - 9:46 pm
0

Untitled design 2026 09 19T212541.422

ಪಾ. ರಂಜಿತ್ ನಿರ್ದೇಶನದ ‘ವೆಟ್ಟುವಮ್’ ಸಿನಿಮಾಗೆ ಕನ್ನಡದಲ್ಲಿ ಕಿಚ್ಚ ಸುದೀಪ್ ಧ್ವನಿ

by ಶಾಲಿನಿ ಕೆ. ಡಿ
September 19, 2026 - 9:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 19T215804.442
    “ಬೆಂಗಳೂರಿಗೆ ಬಂದರೆ ಸ್ವಂತ ಮನೆಗೆ ಬಂದಂತೆ ಭಾಸವಾಗುತ್ತದೆ”; ನ್ಯಾಚುರಲ್ ಸ್ಟಾರ್ ನಾನಿ
    September 19, 2026 | 0
  • Untitled design 2026 09 19T212541.422
    ಪಾ. ರಂಜಿತ್ ನಿರ್ದೇಶನದ ‘ವೆಟ್ಟುವಮ್’ ಸಿನಿಮಾಗೆ ಕನ್ನಡದಲ್ಲಿ ಕಿಚ್ಚ ಸುದೀಪ್ ಧ್ವನಿ
    September 19, 2026 | 0
  • Untitled design 2026 09 19T194715.635
    ಅಂದು ಒಕೇ ಒಕ್ಕಡು..ಇಂದು ಕಾಮನ್‌‌ಮ್ಯಾನ್..CM ಕಥೆ
    September 19, 2026 | 0
  • Untitled design 2026 09 19T193349.677
    ರಣವೀರ್ ಸಿಂಗ್-ದೀಪಿಕಾ ದಂಪತಿಗೆ ಎರಡನೇ ಹೆಣ್ಣು ಮಗು ಜನನ
    September 19, 2026 | 0
  • Untitled design 2026 09 19T175841.845
    ಹಾಲಿವುಡ್‌ನತ್ತ ‘ಮಹಾರಾಜ’ ಸೇತುಪತಿ ದಂಡಯಾತ್ರೆ
    September 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version