• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಚಿನ್ನ ಗೆದ್ದ ಮೀರಾಬಾಯಿ ಚಾನು; ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಭಾರತಕ್ಕೆ ಮೊದಲ ಸ್ವರ್ಣ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 26, 2026 - 9:22 pm
in Flash News, ಕ್ರೀಡೆ
0 0
0
Untitled design 2026 07 26T212145.889

RelatedPosts

ನೀಟ್ ಪ್ರತಿಭಟನಾಕಾರರ ವಿರುದ್ಧದ ಕೇಸ್‌; ಅಧಿಕೃತ ಆದೇಶ ಬಂದರೆ ಮಾತ್ರ FIR ವಾಪಸ್ ಎಂದ ದಿಲ್ಲಿ ಪೊಲೀಸ್

ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹ*ತ್ಯೆ

ನೇಪಾಳದಲ್ಲಿ ಭಾರತೀಯ ₹200, ₹500 ನೋಟುಗಳಿಗೆ ಗ್ರೀನ್ ಸಿಗ್ನಲ್

IND vs ZIM: ಅಂತಿಮ ಪಂದ್ಯದಲ್ಲಿ ಜಿಂಬಾಬ್ವೆ ವಿರುದ್ಧ ಸರಣಿ ಕ್ಲೀನ್ ಸ್ವೀಪ್ ಮಾಡಿದ ಟೀಂ ಇಂಡಿಯಾ

ADVERTISEMENT
ADVERTISEMENT

ಗ್ಲ್ಯಾಸ್ಗೋ, (ಸ್ಕಾಟ್ಲ್ಯಾಂಡ್): ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಖ್ಯಾತ ವೇಟ್ಲಿಫ್ಟರ್ ಮೀರಾಬಾಯಿ ಚಾನು ಅವರು ಐತಿಹಾಸಿಕ ಸಾಧನೆ ಮಾಡಿದ್ದಾರೆ. ಮಹಿಳೆಯರ 48 ಕೆಜಿ ತೂಕದ ವಿಭಾಗದಲ್ಲಿ ಅವರು ಸ್ನ್ಯಾಚ್ ಮತ್ತು ಕ್ಲೀನ್ ಅಂಡ್ ಜರ್ಕ್ ಎರಡೂ ವಿಭಾಗಗಳಲ್ಲಿ ನೂತನ ಗೇಮ್ಸ್ ದಾಖಲೆಗಳನ್ನು ಸ್ಥಾಪಿಸಿ, ಭಾರತಕ್ಕೆ ಈ ಬಾರಿಯ ಮೊದಲ ಚಿನ್ನದ ಪದಕವನ್ನು ತಂದುಕೊಟ್ಟಿದ್ದಾರೆ. ಇದು ಕಾಮನ್ವೆಲ್ತ್ ಗೇಮ್ಸ್‌ನಲ್ಲಿ ಅವರ ಸತತ ಮೂರನೇ ಚಿನ್ನದ ಪದಕವಾಗಿದ್ದು, ‘ಹ್ಯಾಟ್ರಿಕ್ ಸ್ವರ್ಣ’ದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದೇ ವೇಳೆ ಈ ಬಾರಿಯ ಕ್ರೀಡಾಕೂಟದಲ್ಲಿ ಭಾರತದ ಚಿನ್ನದ ಖಾತೆಯನ್ನು ತೆರೆದ ಮೊದಲ ಕ್ರೀಡಾಪಟುವಾಗಿಯೂ ಹೊರಹೊಮ್ಮಿದ್ದಾರೆ.

31 ವರ್ಷದ ಮಣಿಪುರದ ಮೀರಾಬಾಯಿ ಚಾನು ಆರಂಭದಿಂದಲೇ ಆತ್ಮವಿಶ್ವಾಸದಿಂದ ಸ್ಪರ್ಧೆ ನಡೆಸಿದರು. ಸ್ನ್ಯಾಚ್ ಹಾಗೂ ಕ್ಲೀನ್ ಅಂಡ್ ಜರ್ಕ್ ಎರಡೂ ವಿಭಾಗಗಳಲ್ಲಿ ಕಾಮನ್‌ವೆಲ್ತ್ ಗೇಮ್ಸ್ ದಾಖಲೆಯನ್ನು ಮುರಿದು ಒಟ್ಟು 190 ಕೆಜಿ ತೂಕ ಎತ್ತುವ ಮೂಲಕ ತಮ್ಮ ಪ್ರಾಬಲ್ಯವನ್ನು ಪ್ರದರ್ಶಿಸಿದರು. ಸ್ನ್ಯಾಚ್ ವಿಭಾಗದಲ್ಲಿ 85 ಕೆಜಿ ಹಾಗೂ ಕ್ಲೀನ್ ಅಂಡ್ ಜರ್ಕ್‌ನಲ್ಲಿ 105 ಕೆಜಿ ಎತ್ತಿದ ಅವರು ಎರಡೂ ವಿಭಾಗಗಳಲ್ಲಿ ಹೊಸ ಗೇಮ್ಸ್ ದಾಖಲೆಗಳನ್ನು ನಿರ್ಮಿಸಿದರು. ಈ ಸಾಧನೆಯೊಂದಿಗೆ ಅವರು ಕಾಮನ್‌ವೆಲ್ತ್ ವೇದಿಕೆಯಲ್ಲಿ ಮತ್ತೊಂದು ಅಧ್ಯಾಯ ಬರೆದಿದ್ದಾರೆ.

ಸ್ಪರ್ಧೆಯ ಆರಂಭದಲ್ಲಿ ಚಾನುಗೆ ಸಣ್ಣ ಹಿನ್ನಡೆಯೂ ಎದುರಾಯಿತು. ಸ್ನ್ಯಾಚ್ ವಿಭಾಗದ ಮೊದಲ ಪ್ರಯತ್ನದಲ್ಲಿ 82 ಕೆಜಿ ತೂಕ ಎತ್ತುವಲ್ಲಿ ವಿಫಲರಾದ ಅವರು ಕ್ಷಣಕಾಲ ಒತ್ತಡಕ್ಕೆ ಸಿಲುಕಿದಂತೆ ಕಂಡಿತು. ಆದರೆ ಅನುಭವ ಹಾಗೂ ಆತ್ಮಸ್ಥೈರ್ಯವನ್ನು ತೋರಿದ ಚಾನು ನಂತರದ ಪ್ರಯತ್ನಗಳಲ್ಲಿ ಯಶಸ್ವಿಯಾಗಿ ತೂಕ ಎತ್ತಿ ದಾಖಲೆ ನಿರ್ಮಿಸಿದರು. ಕ್ಲೀನ್ ಅಂಡ್ ಜರ್ಕ್ ವಿಭಾಗದಲ್ಲಿಯೂ ಮೊದಲ ಪ್ರಯತ್ನ ವಿಫಲವಾದರೂ, ನಂತರದ ಎರಡು ಪ್ರಯತ್ನಗಳಲ್ಲಿ 105 ಕೆಜಿ ಎತ್ತಿ ಗೇಮ್ಸ್ ದಾಖಲೆಯನ್ನು ತಮ್ಮ ಹೆಸರಿಗೆ ಬರೆಸಿಕೊಂಡರು.

ಬೆಳ್ಳಿ ಪದಕ ಗೆದ್ದ ನೈಜೀರಿಯಾದ ರೂತ್ ಅಸುಕ್ವೊ ನ್ಯಾಂಗ್ ಒಟ್ಟು 168 ಕೆಜಿ ತೂಕ ಎತ್ತಿದರೆ, ಚಾನು ಬರೋಬ್ಬರಿ 190 ಕೆಜಿ ಎತ್ತಿ 22 ಕೆಜಿ ಅಂತರದಿಂದ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡರು. ಈ ಭರ್ಜರಿ ಅಂತರವೇ ಅವರ ಪ್ರಾಬಲ್ಯವನ್ನು ಸ್ಪಷ್ಟವಾಗಿ ತೋರಿಸಿತು.

ಚಿನ್ನದ ಪದಕವನ್ನು ಮೊದಲೇ ಖಚಿತಪಡಿಸಿಕೊಂಡಿದ್ದರಿಂದ, ಇನ್ನೆರಡು ತಿಂಗಳಲ್ಲಿ ನಡೆಯಲಿರುವ ಏಷ್ಯನ್ ಗೇಮ್ಸ್‌ಗೆ ಸಜ್ಜಾಗುವ ದೃಷ್ಟಿಯಿಂದ ಗಾಯದ ಅಪಾಯವನ್ನು ತಪ್ಪಿಸಲು ಕ್ಲೀನ್ ಅಂಡ್ ಜರ್ಕ್‌ನ ಮೂರನೇ ಪ್ರಯತ್ನವನ್ನು ಕೈಬಿಡುವ ನಿರ್ಧಾರವನ್ನು ಚಾನು ತೆಗೆದುಕೊಂಡರು. ಇದು ಅವರ ದೂರದೃಷ್ಟಿಯ ಜೊತೆಗೆ ಪ್ರಮುಖ ಟೂರ್ನಿಗಳನ್ನು ಗಮನದಲ್ಲಿಟ್ಟುಕೊಂಡಿರುವ ತಂತ್ರಕ್ಕೂ ಸಾಕ್ಷಿಯಾಗಿದೆ.

ಮೀರಾಬಾಯಿ ಚಾನು ಅವರ ಕಾಮನ್‌ವೆಲ್ತ್ ಗೇಮ್ಸ್ ಪಯಣ ಅತ್ಯಂತ ಯಶಸ್ವಿಯಾಗಿದೆ. ಈ ಚಿನ್ನದೊಂದಿಗೆ ಅವರು ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಒಟ್ಟು ನಾಲ್ಕು ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಇದರಲ್ಲಿ ಮೂರು ಚಿನ್ನ ಹಾಗೂ ಒಂದು ಬೆಳ್ಳಿ ಪದಕ ಸೇರಿವೆ. ಸತತ ಮೂರು ಆವೃತ್ತಿಗಳಲ್ಲಿ ಚಿನ್ನದ ಪದಕ ಗೆದ್ದಿರುವುದು ಭಾರತೀಯ ವೇಟ್‌ಲಿಫ್ಟಿಂಗ್ ಇತಿಹಾಸದಲ್ಲೇ ಅಪರೂಪದ ಸಾಧನೆ ಎನ್ನಬಹುದು.

ಭಾರತಕ್ಕೆ ವೇಟ್‌ಲಿಫ್ಟಿಂಗ್ ವಿಭಾಗದಲ್ಲಿ ಇದು ಎರಡನೇ ಪದಕವಾಗಿದೆ. ಇದಕ್ಕೂ ಮುನ್ನ ಪುರುಷರ ವಿಭಾಗದಲ್ಲಿ ಋಷಿಕಾಂತ್ ಸಿಂಗ್ ಬೆಳ್ಳಿ ಪದಕ ಗೆದ್ದು ಭಾರತದ ಪದಕ ಬೇಟೆಗೆ ಚಾಲನೆ ನೀಡಿದ್ದರು. ಇದೀಗ ಮೀರಾಬಾಯಿ ಚಾನು ಚಿನ್ನ ಗೆಲ್ಲುವ ಮೂಲಕ ಭಾರತೀಯ ತಂಡದ ಆತ್ಮವಿಶ್ವಾಸವನ್ನು ಇನ್ನಷ್ಟು ಹೆಚ್ಚಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಪೊಲೀಸ್

ನೀಟ್ ಪ್ರತಿಭಟನಾಕಾರರ ವಿರುದ್ಧದ ಕೇಸ್‌; ಅಧಿಕೃತ ಆದೇಶ ಬಂದರೆ ಮಾತ್ರ FIR ವಾಪಸ್ ಎಂದ ದಿಲ್ಲಿ ಪೊಲೀಸ್

by ಶಾಲಿನಿ ಕೆ. ಡಿ
July 26, 2026 - 11:05 pm
0

Untitled design 2026 07 26T224718.873

ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹ*ತ್ಯೆ

by ಶಾಲಿನಿ ಕೆ. ಡಿ
July 26, 2026 - 10:48 pm
0

Untitled design 2026 07 26T222725.862

‘ಲವ್ ಕಾಕ್ಟೇಲ್’ ಕೊಡಲು ಬಂದ ಹರೀಶ್ ರಾಜ್

by ಶಾಲಿನಿ ಕೆ. ಡಿ
July 26, 2026 - 10:28 pm
0

Untitled design 2026 07 26T220425.880

ನೇಪಾಳದಲ್ಲಿ ಭಾರತೀಯ ₹200, ₹500 ನೋಟುಗಳಿಗೆ ಗ್ರೀನ್ ಸಿಗ್ನಲ್

by ಶಾಲಿನಿ ಕೆ. ಡಿ
July 26, 2026 - 10:06 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪೊಲೀಸ್
    ನೀಟ್ ಪ್ರತಿಭಟನಾಕಾರರ ವಿರುದ್ಧದ ಕೇಸ್‌; ಅಧಿಕೃತ ಆದೇಶ ಬಂದರೆ ಮಾತ್ರ FIR ವಾಪಸ್ ಎಂದ ದಿಲ್ಲಿ ಪೊಲೀಸ್
    July 26, 2026 | 0
  • Untitled design 2026 07 26T224718.873
    ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹ*ತ್ಯೆ
    July 26, 2026 | 0
  • Untitled design 2026 07 26T220425.880
    ನೇಪಾಳದಲ್ಲಿ ಭಾರತೀಯ ₹200, ₹500 ನೋಟುಗಳಿಗೆ ಗ್ರೀನ್ ಸಿಗ್ನಲ್
    July 26, 2026 | 0
  • Untitled design 2026 07 26T205142.874
    IND vs ZIM: ಅಂತಿಮ ಪಂದ್ಯದಲ್ಲಿ ಜಿಂಬಾಬ್ವೆ ವಿರುದ್ಧ ಸರಣಿ ಕ್ಲೀನ್ ಸ್ವೀಪ್ ಮಾಡಿದ ಟೀಂ ಇಂಡಿಯಾ
    July 26, 2026 | 0
  • Untitled design 2026 07 26T203826.862
    NEET ಹೋರಾಟದ ಬಳಿಕ ವಿದ್ಯಾರ್ಥಿಗಳಿಗೆ ಸಲಾಂ ಹೊಡೆದು ಕ್ಷಮೆ ಕೇಳಿದ ನಟಿ ಸೋನಾಕ್ಷಿ ಸಿನ್ಹಾ
    July 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version