• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕರ್ನಾಟಕ ಸಂಪುಟ ವಿಸ್ತರಣೆಗೆ ಕಸರತ್ತು: ಇಂದು ದೆಹಲಿಯಲ್ಲಿ ಹೈಕಮಾಂಡ್ ಸಭೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 27, 2026 - 8:06 am
in Flash News, ಕರ್ನಾಟಕ
0 0
0
ಖರ್ಜೂರನಾ (2)

ಬೆಂಗಳೂರು, ಜುಲೈ 27: ಕರ್ನಾಟಕದ ರಾಜಕೀಯ ವಲಯದಲ್ಲಿ ಸಚಿವ ಸಂಪುಟ ವಿಸ್ತರಣೆ (Karnataka Cabinet Expansion) ಚರ್ಚೆ ಮತ್ತೆ ಜೋರಾಗಿದೆ.. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಖಾಲಿ ಇರುವ ಸಚಿವ ಸ್ಥಾನಗಳನ್ನು ಭರ್ತಿ ಮಾಡುವ ಕುರಿತು ಇಂದು ಹಾಗೂ ನಾಳೆ ದೆಹಲಿಯಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುವ ಸಾಧ್ಯತೆ ಇದೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಸೇರಿದಂತೆ ರಾಜ್ಯ ಕಾಂಗ್ರೆಸ್‌ನ ಪ್ರಮುಖ ನಾಯಕರು ದೆಹಲಿಗೆ ತೆರಳುತ್ತಿರುವ ಹಿನ್ನೆಲೆ ಸಚಿವ ಸಂಪುಟ ವಿಸ್ತರಣೆ ವಿಚಾರ ಅಂತಿಮ ಹಂತ ತಲುಪಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

RelatedPosts

ರಣವೀರ್ ಸಿಂಗ್-ದೀಪಿಕಾ ದಂಪತಿಗೆ ಎರಡನೇ ಹೆಣ್ಣು ಮಗು ಜನನ

ರಾಯಚೂರಿನಲ್ಲಿ ಮಹಿಳೆಯ ಬರ್ಬರ ಹತ್ಯೆ; ಅಮ್ಮನ ಎದೆ ಮೇಲೆ ಮಲಗಿದ್ದ 2 ವರ್ಷದ ಕಂದಮ್ಮ

ರೈತರ ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಬದ್ಧ: ಡಿಸಿಎಂ ಡಾ.ಜಿ. ಪರಮೇಶ್ವರ

ನಕಲಿ ದಾಖಲೆ ನೀಡಿ ಭಾರತೀಯ ನೌಕಾ ಅಕಾಡೆಮಿಯಲ್ಲಿ ಕೆಲಸ ಮಾಡ್ತಿದ್ದ ಬಾಂಗ್ಲಾ ಪ್ರಜೆ ಬಂಧನ

ADVERTISEMENT
ADVERTISEMENT

ಕಳೆದ ವಾರ ನಡೆದ ನೀಟ್ ಪರೀಕ್ಷೆ ಸಂಬಂಧಿತ ಪ್ರತಿಭಟನೆ ಹಾಗೂ ಕಾಂಗ್ರೆಸ್ ಹೈಕಮಾಂಡ್ ನಾಯಕರ ನಿರತ ಕಾರ್ಯಕ್ರಮಗಳ ಕಾರಣ ಸಂಪುಟ ವಿಸ್ತರಣೆ ಕುರಿತ ಚರ್ಚೆ ಮುಂದೂಡಲಾಗಿತ್ತು. ಇದೀಗ ದೆಹಲಿಯಲ್ಲಿ ನಡೆಯಲಿರುವ ಸರಣಿ ಸಭೆಗಳಲ್ಲಿ ಈ ವಿಷಯ ಪ್ರಮುಖ ಅಜೆಂಡಾವಾಗುವ ಸಾಧ್ಯತೆ ಇದೆ. ಹೈಕಮಾಂಡ್ ಒಪ್ಪಿಗೆ ನೀಡಿದರೆ ಇದೇ ವಾರ ಜುಲೈ 29 ಅಥವಾ 30ರಂದು ನೂತನ ಸಚಿವರ ಪ್ರಮಾಣವಚನ ಸಮಾರಂಭ ನಡೆಯಬಹುದು ಎಂಬ ಮಾಹಿತಿ ಕಾಂಗ್ರೆಸ್ ಮೂಲಗಳಿಂದ ಲಭ್ಯವಾಗಿದೆ.

ಸಂಪುಟ ವಿಸ್ತರಣೆಯ ಜೊತೆಗೆ ಇಬ್ಬರು ಉಪಮುಖ್ಯಮಂತ್ರಿಗಳ ನೇಮಕದ ಕುರಿತ ಚರ್ಚೆಯೂ ರಾಜಕೀಯ ವಲಯದಲ್ಲಿ ಸದ್ದು ಮಾಡುತ್ತಿದೆ. ಆದರೆ ಈ ಬಗ್ಗೆ ಕಾಂಗ್ರೆಸ್ ನಾಯಕತ್ವದಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಅಂತಿಮ ನಿರ್ಧಾರ ಹೈಕಮಾಂಡ್ ಸಭೆಯ ಬಳಿಕವೇ ಪ್ರಕಟವಾಗುವ ಸಾಧ್ಯತೆ ಇದೆ.

ಸಚಿವ ಸ್ಥಾನಕ್ಕಾಗಿ ಶಾಸಕರ ಲಾಬಿ ತೀವ್ರ

ಸಂಪುಟ ವಿಸ್ತರಣೆಯ ಸುದ್ದಿ ಬಲವಾಗುತ್ತಿದ್ದಂತೆ ಸಚಿವ ಸ್ಥಾನಾಕಾಂಕ್ಷಿಗಳ ಚಟುವಟಿಕೆಗಳೂ ಹೆಚ್ಚಾಗಿವೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೆಹಲಿಗೆ ತೆರಳುವ ಮುನ್ನವೇ ಬೆಂಗಳೂರಿನ ಅವರ ನಿವಾಸಕ್ಕೆ ಹಲವು ಕಾಂಗ್ರೆಸ್ ಶಾಸಕರು ಭೇಟಿ ನೀಡಿ ಸಚಿವ ಸ್ಥಾನಕ್ಕೆ ಅವಕಾಶ ಕಲ್ಪಿಸುವಂತೆ ಮನವಿ ಮಾಡಿದ್ದಾರೆ.

ಹಂಪನಗೌಡ ಬಾದರ್ಲಿ, ದದ್ದಲ್, ಅಜಯ್ ಸಿಂಗ್, ರಹೀಂ ಖಾನ್ ಸೇರಿದಂತೆ ಹಲವು ಶಾಸಕರು ಖರ್ಗೆ ಅವರನ್ನು ಭೇಟಿ ಮಾಡಿ ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ. ಇನ್ನೊಂದೆಡೆ ಬಿ. ನಾಗೇಂದ್ರ, ವಿಜಯಾನಂದ ಕಾಶಪ್ಪನವರ್ ಹಾಗೂ ರಾಘವೇಂದ್ರ ಹಿಟ್ನಾಳ್ ಸೇರಿದಂತೆ ಕೆಲವು ನಾಯಕರು ನೇರವಾಗಿ ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವ ಮೂಲಕ ತಮ್ಮ ಪರವಾಗಿ ಲಾಬಿ ನಡೆಸುತ್ತಿದ್ದಾರೆ.

ನಾಯಕರಿಂದ ವಿಭಿನ್ನ ಪ್ರತಿಕ್ರಿಯೆಗಳು

ಸಚಿವ ಸ್ಥಾನ ಕುರಿತು ಕೇಳಲಾದ ಪ್ರಶ್ನೆಗೆ ಚಿತ್ರದುರ್ಗ ಶಾಸಕ ಶಿವಗಂಗಾ ಬಸವರಾಜ ಅವರು ವಿಶಿಷ್ಟವಾಗಿ ಪ್ರತಿಕ್ರಿಯಿಸಿದ್ದಾರೆ. “ನಾನು ಪಕ್ಷದಲ್ಲಿ ಶಿವನ ಮುಂದಿನ ಬಸವನಿದ್ದಂತೆ. ಡಿಕೆ ಶಿವಕುಮಾರ್ ಅವರನ್ನು ಗಣಪತಿಯಂತೆ ಸುತ್ತುತ್ತೇನೆ. ಸಚಿವ ಸ್ಥಾನ ಕೊಟ್ಟರೆ ಗುಡ್, ಕೊಡದಿದ್ದರೆ ವೆರಿ ಗುಡ್” ಎಂದು ಹಾಸ್ಯಮಿಶ್ರಿತವಾಗಿ ಹೇಳುವ ಮೂಲಕ ಪಕ್ಷದ ನಾಯಕತ್ವದ ಮೇಲಿನ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

ಇನ್ನೊಂದೆಡೆ ಸಚಿವ ಎಂ.ಬಿ. ಪಾಟೀಲ್ ವಿಜಯಪುರ ಜಿಲ್ಲೆಗೆ ಮತ್ತೊಂದು ಸಚಿವ ಸ್ಥಾನ ನೀಡಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ ತಮಗೆ ಉಪಮುಖ್ಯಮಂತ್ರಿ ಸ್ಥಾನ ಸಿಗಲಿದೆ ಎಂಬ ಸುದ್ದಿಯನ್ನು ಅವರು ತಳ್ಳಿ ಹಾಕಿದ್ದು, ಈ ಕುರಿತು ಯಾವುದೇ ಮಾಹಿತಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ರಾಜ್ಯದ ಸಂಸದರೊಂದಿಗೆ ಡಿಕೆಶಿ ಸಭೆ

ಸಂಸತ್ ಮುಂಗಾರು ಅಧಿವೇಶನದ ಹಿನ್ನೆಲೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು ಸಂಜೆ 6.30ಕ್ಕೆ ದೆಹಲಿಯ ಕರ್ನಾಟಕ ಭವನದಲ್ಲಿ ರಾಜ್ಯದ ಸಂಸದರ ಸಭೆ ಕರೆದಿದ್ದಾರೆ. ರಾಜ್ಯಕ್ಕೆ ಸಂಬಂಧಿಸಿದ ಅಭಿವೃದ್ಧಿ ಯೋಜನೆಗಳು, ಕೇಂದ್ರದಿಂದ ಬಾಕಿ ಇರುವ ಅನುದಾನಗಳು ಹಾಗೂ ಆಡಳಿತಾತ್ಮಕ ವಿಷಯಗಳ ಕುರಿತು ಚರ್ಚೆ ನಡೆಸುವ ಉದ್ದೇಶದಿಂದ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಸಂಸದರಿಗೆ ಆಹ್ವಾನ ನೀಡಲಾಗಿದೆ.

ಈ ಸಭೆಯ ಬಳಿಕ ಮಂಗಳವಾರ ಕಾಂಗ್ರೆಸ್ ಹೈಕಮಾಂಡ್ ನಾಯಕರೊಂದಿಗೆ ನಡೆಯಲಿರುವ ಚರ್ಚೆಯೇ ಸಚಿವ ಸಂಪುಟ ವಿಸ್ತರಣೆಯ ಭವಿಷ್ಯವನ್ನು ನಿರ್ಧರಿಸುವ ಸಾಧ್ಯತೆ ಇದೆ.

ಸಂಪುಟ ವಿಸ್ತರಣೆ, ಸಚಿವ ಸ್ಥಾನಾಕಾಂಕ್ಷಿಗಳ ಲಾಬಿ, ಉಪಮುಖ್ಯಮಂತ್ರಿ ಹುದ್ದೆಗಳ ಕುರಿತು ನಡೆಯುತ್ತಿರುವ ಚರ್ಚೆಗಳು ಹಾಗೂ ದೆಹಲಿಯಲ್ಲಿ ನಡೆಯಲಿರುವ ಸರಣಿ ಸಭೆಗಳ ಹಿನ್ನೆಲೆ ರಾಜ್ಯ ರಾಜಕೀಯದಲ್ಲಿ ಕುತೂಹಲ ಹೆಚ್ಚಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 19T211039.427

ಸಿಎಂ ವಿಜಯ್ ಬಗ್ಗೆ ಟೀಕೆ ಆರೋಪಕ್ಕೆ ವೇದಿಕೆಯಲ್ಲೇ ಸ್ಪಷ್ಟನೆ ನೀಡಿದ ವಿಜಯ್ ಸೇತುಪತಿ

by ಶಾಲಿನಿ ಕೆ. ಡಿ
September 19, 2026 - 9:11 pm
0

Untitled design 2026 09 19T200610.610

BBK 13: ಮಾಡರ್ನ್ ಮಹಾಕವಿ ಮಂಜ ಸೇರಿ ಮನೆಮಂದಿಗೆ ಕಿಚ್ಚನ ಕ್ಲಾಸ್!

by ಶಾಲಿನಿ ಕೆ. ಡಿ
September 19, 2026 - 8:06 pm
0

Untitled design 2026 09 19T194715.635

ಅಂದು ಒಕೇ ಒಕ್ಕಡು..ಇಂದು ಕಾಮನ್‌‌ಮ್ಯಾನ್..CM ಕಥೆ

by ಶಾಲಿನಿ ಕೆ. ಡಿ
September 19, 2026 - 7:47 pm
0

Untitled design 2026 09 19T193349.677

ರಣವೀರ್ ಸಿಂಗ್-ದೀಪಿಕಾ ದಂಪತಿಗೆ ಎರಡನೇ ಹೆಣ್ಣು ಮಗು ಜನನ

by ಶಾಲಿನಿ ಕೆ. ಡಿ
September 19, 2026 - 7:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 19T193349.677
    ರಣವೀರ್ ಸಿಂಗ್-ದೀಪಿಕಾ ದಂಪತಿಗೆ ಎರಡನೇ ಹೆಣ್ಣು ಮಗು ಜನನ
    September 19, 2026 | 0
  • Untitled design 2026 09 19T192255.811
    ರಾಯಚೂರಿನಲ್ಲಿ ಮಹಿಳೆಯ ಬರ್ಬರ ಹತ್ಯೆ; ಅಮ್ಮನ ಎದೆ ಮೇಲೆ ಮಲಗಿದ್ದ 2 ವರ್ಷದ ಕಂದಮ್ಮ
    September 19, 2026 | 0
  • Untitled design 2026 09 19T181256.745
    ರೈತರ ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಬದ್ಧ: ಡಿಸಿಎಂ ಡಾ.ಜಿ. ಪರಮೇಶ್ವರ
    September 19, 2026 | 0
  • Untitled design 2026 09 19T174416.837
    ನಕಲಿ ದಾಖಲೆ ನೀಡಿ ಭಾರತೀಯ ನೌಕಾ ಅಕಾಡೆಮಿಯಲ್ಲಿ ಕೆಲಸ ಮಾಡ್ತಿದ್ದ ಬಾಂಗ್ಲಾ ಪ್ರಜೆ ಬಂಧನ
    September 19, 2026 | 0
  • Untitled design 2026 09 19T162214.553
    ಇರಾನ್‌ನಲ್ಲಿ ಹಿಜಾಬ್‌ ಧರಿಸದೇ ಮ್ಯಾರಥಾನ್‌ನಲ್ಲಿ ಭಾಗವಹಿಸಿದ ಮಹಿಳೆಯರು!
    September 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version