• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಭೋಗಾಪುರಂ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ

ಕವಿತಾ by ಕವಿತಾ
August 1, 2026 - 4:10 pm
in ದೇಶ
0 0
0
ಅನೈತಿಕ (1)

ಅಮರಾವತಿ (ಆಗಸ್ಷ್ 01): ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಶನಿವಾರ ಆಂಧ್ರ ಪ್ರದೇಶದಲ್ಲಿ 17,900 ಕೋಟಿ ರೂ. ಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು. ಭೋಗಾಪುರಂನಲ್ಲಿ ನಿರ್ಮಾಣಗೊಂಡಿರುವ ಅಳ್ಳೂರಿ ಸೀತಾರಾಮ ರಾಜು ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಅಧಿಕೃತವಾಗಿ ಲೋಕಾರ್ಪಣೆಗೊಳಿಸಿದರು. ವಿಜಯನಗರಂ ಜಿಲ್ಲೆಯ ಭೋಗಾಪುರಂನಲ್ಲಿ ನಡೆದ ಬೃಹತ್ ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡಿದ ಪ್ರಧಾನಿ, ಈ ಯೋಜನೆಗಳು ‘ಸ್ವರ್ಣ ಆಂಧ್ರ’ ನಿರ್ಮಾಣದ ಕನಸಿಗೆ ಹೊಸ ವೇಗ ನೀಡಲಿದ್ದು, ಉತ್ತರ ಆಂಧ್ರದ ಅಭಿವೃದ್ಧಿಗೆ ಹೊಸ ಅಧ್ಯಾಯ ಬರೆಯಲಿವೆ ಎಂದು ಹೇಳಿದರು.

ಆಂಧ್ರದ ಮೂರನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ

RelatedPosts

ಸಾರ್ವಜನಿಕವಾಗಿ ಕ್ಷಮೆ ಕೇಳಿದ ಮೋದಿ ವಿರುದ್ಧ ಘೋಷಣೆ ಕೂಗಿದ್ದ ಅಪ್ರಾಪ್ತೆ

ಭಾರತಕ್ಕೆ ಬರಲಿದೆಯೇ ‘ಹಾರುವ ಹಡಗು’? ಶತ್ರು ರಾಷ್ಟ್ರಗಳಿಗೆ ಶುರುವಾಯ್ತು ನಡುಕ!

₹1.2 ಲಕ್ಷ ಕೋಟಿ ಆದಾಯ, 13 ಲಕ್ಷ ಉದ್ಯೋಗ: ದೇಶದ ಆರ್ಥಿಕತೆಯನ್ನೇ ಬದಲಿಸುತ್ತಿವೆ ಫುಡ್ ಡೆಲಿವರಿ ಆಪ್‌ಗಳು!

ಕೇರಳದಲ್ಲಿ ಭೀಕರ ಭೂಕುಸಿತ: ಮೂವರು ದುರ್ಮರಣ, ಹಲವರು ನಾಪತ್ತೆ

ADVERTISEMENT
ADVERTISEMENT

ಸುಮಾರು 5,640 ಕೋಟಿ ರೂ. ವೆಚ್ಚದಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವ (PPP) ಮಾದರಿಯಲ್ಲಿ ನಿರ್ಮಾಣಗೊಂಡಿರುವ ಈ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣವು ಆಂಧ್ರ ಪ್ರದೇಶದ ಮೂರನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವಾಗಿದೆ. ಮೊದಲ ಹಂತದಲ್ಲೇ ವರ್ಷಕ್ಕೆ 60 ಲಕ್ಷ ಪ್ರಯಾಣಿಕರನ್ನು ನಿರ್ವಹಿಸುವ ಸಾಮರ್ಥ್ಯ ಹೊಂದಿರುವ ಈ ವಿಮಾನ ನಿಲ್ದಾಣವನ್ನು ಮುಂದಿನ ಹಂತಗಳಲ್ಲಿ 4 ಕೋಟಿ ಪ್ರಯಾಣಿಕರ ಸಾಮರ್ಥ್ಯಕ್ಕೆ ವಿಸ್ತರಿಸುವ ಯೋಜನೆ ರೂಪಿಸಲಾಗಿದೆ.

ಸ್ವಾತಂತ್ರ್ಯ ಹೋರಾಟಗಾರ ಹಾಗೂ ಆದಿವಾಸಿ ನಾಯಕ ಅಳ್ಳೂರಿ ಸೀತಾರಾಮ ರಾಜು ಅವರ ಹೆಸರನ್ನು ವಿಮಾನ ನಿಲ್ದಾಣಕ್ಕೆ ನಾಮಕರಣ ಮಾಡಿರುವುದನ್ನು ಉಲ್ಲೇಖಿಸಿದ ಪ್ರಧಾನಿ ಮೋದಿ, “ಆದಿವಾಸಿಗಳ ಹಕ್ಕುಗಳಿಗಾಗಿ ಹೋರಾಡಿದ ಮಹಾನ್ ನಾಯಕನ ಹೆಸರಿನಲ್ಲಿ ನಿರ್ಮಾಣವಾಗಿರುವ ಈ ವಿಮಾನ ನಿಲ್ದಾಣ ಉತ್ತರ ಆಂಧ್ರದ ಅಭಿವೃದ್ಧಿಗೆ ಹೊಸ ರನ್‌ವೇ ಹಾಗೂ ಯುವಜನತೆಗೆ ಹೊಸ ಅವಕಾಶಗಳ ಲಾಂಚ್‌ಪ್ಯಾಡ್ ಆಗಲಿದೆ” ಎಂದು ಹೇಳಿದರು.

ಈ ವೇಳೆ ಕಾಂಗ್ರೆಸ್ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ ಮೋದಿ, ಹಿಂದೆ ವಿಮಾನ ನಿಲ್ದಾಣಗಳಿಗೆ ಒಂದೇ ಕುಟುಂಬದ ಹೆಸರನ್ನು ಇಡುವ ಸಂಪ್ರದಾಯವಿತ್ತು. ಆದರೆ ನಮ್ಮ ಸರ್ಕಾರ ದೇಶದ ಮಹನೀಯರ ಹೆಸರನ್ನು ವಿಮಾನ ನಿಲ್ದಾಣಗಳಿಗೆ ನಾಮಕರಣ ಮಾಡುವ ಪರಂಪರೆಯನ್ನು ಆರಂಭಿಸಿದೆ ಎಂದು ಹೇಳಿದರು.

ಅತ್ಯಾಧುನಿಕ ತಂತ್ರಜ್ಞಾನವನ್ನು ಒಳಗೊಂಡ ವಿಮಾನ ನಿಲ್ದಾಣ

ಅತ್ಯಾಧುನಿಕ ತಂತ್ರಜ್ಞಾನವನ್ನು ಒಳಗೊಂಡಿರುವ ಈ ವಿಮಾನ ನಿಲ್ದಾಣದಲ್ಲಿ ಕೃತಕ ಬುದ್ಧಿಮತ್ತೆ (AI), ಬಿಲ್ಡಿಂಗ್ ಇನ್ಫರ್ಮೇಷನ್ ಮಾಡೆಲಿಂಗ್ (BIM), ಬಯೋಮೆಟ್ರಿಕ್ ಪ್ರಯಾಣಿಕರ ಸೇವೆ, ಸ್ವಯಂಚಾಲಿತ ಬ್ಯಾಗೇಜ್ ಹ್ಯಾಂಡ್ಲಿಂಗ್ ವ್ಯವಸ್ಥೆ, 5 ಮೆಗಾವ್ಯಾಟ್ ಸೋಲಾರ್ ವಿದ್ಯುತ್ ಘಟಕ, ಮಳೆನೀರು ಸಂಗ್ರಹ ಹಾಗೂ ಇವಿ ಚಾರ್ಜಿಂಗ್ ಸೌಲಭ್ಯಗಳು ಅಳವಡಿಸಲಾಗಿದೆ. ವಿಮಾನ ನಿಲ್ದಾಣದ ವಿನ್ಯಾಸವು ಅರಕು ಕಣಿವೆಯ ಸಾಂಪ್ರದಾಯಿಕ ಗುಡಿಸಲುಗಳು ಮತ್ತು ಹಾರುವ ಮೀನಿನ ಆಕಾರದಿಂದ ಸ್ಫೂರ್ತಿ ಪಡೆದಿದೆ.

ಕಾರ್ಯಕ್ರಮದ ವೇಳೆ 13,500ಕ್ಕೂ ಹೆಚ್ಚು ಆದಿವಾಸಿ ಮಹಿಳೆಯರು ಮತ್ತು ವಿದ್ಯಾರ್ಥಿಗಳು ಧಿಮ್ಸಾ ನೃತ್ಯ ಪ್ರದರ್ಶಿಸುವ ಮೂಲಕ ಪ್ರಧಾನಿಯನ್ನು ಸ್ವಾಗತಿಸಿದರು. ಈ ಸಾಂಸ್ಕೃತಿಕ ಪ್ರದರ್ಶನವನ್ನು ಮೆಚ್ಚಿದ ಪ್ರಧಾನಿ, ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರ ಅಭಿವೃದ್ಧಿ ಮತ್ತು ಸಂಸ್ಕೃತಿಯ ಸಮತೋಲನದ ದೃಷ್ಟಿಕೋನವನ್ನು ಶ್ಲಾಘಿಸಿದರು.

ಇದೇ ಸಂದರ್ಭದಲ್ಲಿ ಪ್ರಧಾನಿ ಮೋದಿ, ಇಂಡಿಯಾ ಸೆಮಿಕಂಡಕ್ಟರ್ ಮಿಷನ್ ಅಡಿಯಲ್ಲಿ ಆಂಧ್ರ ಪ್ರದೇಶದ ಮೊದಲ ಸೆಮಿಕಂಡಕ್ಟರ್ ಉತ್ಪಾದನಾ ಘಟಕಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. 460 ಕೋಟಿ ರೂ ಗೂ ಅಧಿಕ ವೆಚ್ಚದ ಈ ಘಟಕವು ವರ್ಷಕ್ಕೆ 9.6 ಕೋಟಿ ಚಿಪ್‌ಗಳನ್ನು ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ.

ಇದರ ಜೊತೆಗೆ 9,900 ಕೋಟಿ ರೂ ಗೂ ಅಧಿಕ ಮೌಲ್ಯದ ಪವರ್‌ಗ್ರಿಡ್ ವಿದ್ಯುತ್ ಪ್ರಸರಣ ಯೋಜನೆಗಳು, 5,550 ಕೋಟಿ ರೂ. ವೆಚ್ಚದ ಕರ್ನೂಲ್-ಐವಿ ನವೀಕರಿಸಬಹುದಾದ ಇಂಧನ ಯೋಜನೆ, ಹಾಗೂ 1,880 ಕೋಟಿ ರೂ. ಗೂ ಅಧಿಕ ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ಉದ್ಘಾಟಿಸಿ ಶಂಕುಸ್ಥಾಪನೆ ನೆರವೇರಿಸಲಾಯಿತು. ಈ ಯೋಜನೆಗಳು ರಾಜ್ಯದ ಮೂಲಸೌಕರ್ಯ, ಕೈಗಾರಿಕೆ, ಉದ್ಯೋಗ ಹಾಗೂ ಹೂಡಿಕೆಗೆ ಹೊಸ ಉತ್ತೇಜನ ನೀಡಲಿವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಅನೈತಿಕ (10)

ಯುವಕರ ಮೇಲೆ ಪರಿಣಾಮ ಬೀರುತ್ತಾ ಐ ಆಮ್ ಗೇಮ್..?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 1, 2026 - 6:38 pm
0

ಅನೈತಿಕ (9)

ಬಾಕ್ಸಿಂಗ್‌ನಲ್ಲಿ ಭಾರತದ ಡಬಲ್ ಧಮಾಕಾ: ಪ್ರೀತಿ ಬಳಿಕ ಜಾಸ್ಮಿನ್ ಕೂಡ ಚಿನ್ನದ ಪದಕ

by ಕವಿತಾ
August 1, 2026 - 6:30 pm
0

ಅನೈತಿಕ (8)

ರಿಷಬ್ ಶೆಟ್ಟಿ ಮೆಗಾ ಪ್ಯಾನ್ ಇಂಡಿಯಾ ಸಿನಿಮಾ ಡ್ರಾಪ್..?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 1, 2026 - 6:00 pm
0

ಅನೈತಿಕ (7)

ಕಾವೇರಿ ಕಿಚ್ಚಿಗೆ ಕರ್ನಾಟಕದಲ್ಲಿ ವಿಜಯ್ ಸಿನಿಮಾಗೆ ಬ್ರೇಕ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 1, 2026 - 5:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (39)
    ಸಾರ್ವಜನಿಕವಾಗಿ ಕ್ಷಮೆ ಕೇಳಿದ ಮೋದಿ ವಿರುದ್ಧ ಘೋಷಣೆ ಕೂಗಿದ್ದ ಅಪ್ರಾಪ್ತೆ
    August 1, 2026 | 0
  • Untitled design 2026 08 01T133249.841
    ಭಾರತಕ್ಕೆ ಬರಲಿದೆಯೇ ‘ಹಾರುವ ಹಡಗು’? ಶತ್ರು ರಾಷ್ಟ್ರಗಳಿಗೆ ಶುರುವಾಯ್ತು ನಡುಕ!
    August 1, 2026 | 0
  • Untitled design 2026 08 01T121730.868
    ₹1.2 ಲಕ್ಷ ಕೋಟಿ ಆದಾಯ, 13 ಲಕ್ಷ ಉದ್ಯೋಗ: ದೇಶದ ಆರ್ಥಿಕತೆಯನ್ನೇ ಬದಲಿಸುತ್ತಿವೆ ಫುಡ್ ಡೆಲಿವರಿ ಆಪ್‌ಗಳು!
    August 1, 2026 | 0
  • ಹಂಚಿಕೊಂಡ (5)
    ಕೇರಳದಲ್ಲಿ ಭೀಕರ ಭೂಕುಸಿತ: ಮೂವರು ದುರ್ಮರಣ, ಹಲವರು ನಾಪತ್ತೆ
    August 1, 2026 | 0
  • ಹಂಚಿಕೊಂಡ
    ‘ನಿಂದನೆಯಿಂದ ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ’: ಮತ್ತೊಂದು ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
    August 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version