• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

“ಮಹಾನ್” ಚಿತ್ರದ ಪ್ರಮುಖಪಾತ್ರದಲ್ಲಿ ರಾಧಿಕಾ ನಾರಾಯಣ್ ಹಾಗೂ ಮಿತ್ರ: ಫಸ್ಟ್ ಲುಕ್ ಅನಾವರಣ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 4, 2026 - 6:27 pm
in ಸಿನಿಮಾ
0 0
0
Untitled design 2026 08 04T182620.737

ಕನ್ನಡದಲ್ಲಿ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿರುವ ಪಿ.ಸಿ.ಶೇಖರ್ ನಿರ್ದೇಶನದ, ಆಕಾಶ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ಬೂದೂರು ಅವರು ನಿರ್ಮಿಸುತ್ತಿರುವ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಜನಪ್ರಿಯರಾಗಿರುವ ವಿಜಯ ರಾಘವೇಂದ್ರ ನಾಯಕರಾಗಿ ನಟಿಸುತ್ತಿರುವ “ಮಹಾನ್” ಚಿತ್ರದ ಪ್ರಮುಖಪಾತ್ರದಲ್ಲಿ “ರಂಗಿತರಂಗ” ಖ್ಯಾತಿಯ ರಾಧಿಕಾ ನಾರಾಯಣ್ ಹಾಗೂ ಖ್ಯಾತ ನಟ ಮಿತ್ರ ಅಭಿನಯಿಸಿದ್ದಾರೆ. ಇತ್ತೀಚೆಗೆ “ಮಹಾನ್” ಚಿತ್ರತಂಡ ರಾಧಿಕಾ ನಾರಾಯಣ್ ಹಾಗೂ ಮಿತ್ರ ಅವರ ಫಸ್ಟ್ ಲುಕ್ ಬಿಡುಗಡೆ ಮಾಡಿದೆ.

“ಮಹಾನ್” ಚಿತ್ರದಲ್ಲಿ ನನ್ನದು ನರ್ಸ್ ಪಾತ್ರ. ಪಕ್ಕಾ ಗ್ರಾಮೀಣ ಹೆಣ್ಣು ಮಗಳ ಪಾತ್ರದಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡಿದ್ದೇನೆ. ನಾನು ನಗರ ಪ್ರದೇಶದಲ್ಲಿ ಬೆಳೆದವಳು. ಹಳ್ಳಿ ಹುಡುಗಿ ಪಾತ್ರ ಮಾಡಿರುವುದು ಬಹಳ ಖುಷಿಯಾಗಿದೆ. ನಾಯಕನಿಗೆ ಬೆನ್ನೆಲುಬಾಗಿ ನಿಲ್ಲುವ ಪಾತ್ರವೂ ಹೌದು. ಇನ್ನೂ, ಪಿ.ಸಿ.ಶೇಖರ್ ನನ್ನ ನೆಚ್ಚಿನ ನಿರ್ದೇಶಕರಲ್ಲಿ ಒಬ್ಬರು. ಈ ಹಿಂದೆಯೇ ಅವರ ನಿರ್ದೇಶನದ ಚಿತ್ರದಲ್ಲಿ ನಾನು ನಟಿಸಬೇಕಿತ್ತು‌. ಈಗ ಕಾಲ ಕೂಡಿ ಬಂದಿದೆ.

RelatedPosts

ಭಾರತೀಯ ಸಿನಿಮಾರಂಗದ ಇತಿಹಾಸದಲ್ಲಿಯೇ ದಾಖಲೆ ಬರೆದ ರಾಮಾಯಣ

ವಿನಯ್ ಕುಲಕರ್ಣಿಗೆ ಬೇಲ್ ಸಿಕ್ಕ ಬೆನ್ನಲ್ಲೇ ದರ್ಶನ್ ಕೇಸ್ ಮತ್ತೆ ಮುನ್ನೆಲೆಗೆ

’60-70 ಜನರಿಗೆ ಒಂದೇ ಟಾಯ್ಲೆಟ್‌’..ಜೈಲಿನ ಕರಾಳ ಅನುಭವ ಬಿಚ್ಚಿಟ್ಟ ಸಲ್ಮಾನ್ ಖಾನ್

ಗಾಯದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬಿಗ್ ಅಪ್ಡೇಟ್ ನೀಡಿದ ನಟಿ ರಶ್ಮಿಕಾ ಮಂದಣ್ಣ

ADVERTISEMENT
ADVERTISEMENT

ನಿರ್ಮಾಪಕ ಪ್ರಕಾಶ್ ಬೂದೂರು ಅವರಂತೂ ಯಾವುದೇ ಕೊರತೆ ಬಾರದ ಹಾಗೆ ಈ ಚಿತ್ರವನ್ನು ಅದ್ದೂರಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಶಿವರಾಜಕುಮಾರ್ ಅವರು ವಿಶೇಷಪಾತ್ರದಲ್ಲಿ ಅಭಿನಯಿಸಿರುವುದು ಈ ಚಿತ್ರದ ತೂಕವನ್ನು ಮತ್ತಷ್ಟು ಹೆಚ್ಚಿಸಿದೆ. ವಿಜಯ ರಾಘವೇಂದ್ರ, ವರ್ಷ ಬೊಳ್ಳಮ್ಮ, ಮಿತ್ರ ಮುಂತಾದ ಕಲಾವಿದರ ಜೊತೆಗೆ ನಟಿಸಿರುವುದು ಹಾಗೂ ಚಿತ್ರೀಕರಣದ ಅನುಭವ ತುಂಬಾ ಸಂತೋಷ ತಂದಿದೆ. ನನ್ನ ಅಭಿಮಾನಿಗಳು ಅಭಿಮಾನ ಪಡುವ ಚಿತ್ರ “ಮಹಾನ್” ಆಗಲಿದೆ ಎಂದು ನಟಿ ರಾಧಿಕಾ ನಾರಾಯಣ್ ತಿಳಿಸಿದ್ದಾರೆ.

ನಾನು “ರಾಗ” ಚಿತ್ರದ ನಂತರ ನಿರ್ದೇಶಕ ಪಿ.ಸಿ.ಶೇಖರ್ ಅವರೊಟ್ಟಿಗೆ ಈ ಚಿತ್ರ ಮಾಡುತ್ತಿದ್ದೇನೆ. “ರಾಗ” ಚಿತ್ರದ ನನ್ನ ಪಾತ್ರಕ್ಕೆ ಎಲ್ಲಾ ಕಡೆ ಮೆಚ್ಚುಗೆ ವ್ಯಕ್ತವಾಗಿತ್ತು. ಈಗ “ಮಹಾನ್” ಚಿತ್ರದಲ್ಲೂ ಅಂತಹುದೇ ಒಂದು ಗಮನಾರ್ಹ ಪಾತ್ರದಲ್ಲಿ ಅಭಿನಯಿಸಿದ್ದೇನೆ. ನಾನು ನಾಯಕ ವಿಜಯ ರಾಘವೇಂದ್ರ ಅವರ ಸೋದರಮಾವನ ಪಾತ್ರದಲ್ಲಿ ಅಭಿನಯಿಸಿದ್ದೇನೆ. ಸದಾ ನಾಯಕನ ಜೊತೆಗೆ ಸಾಗುವ ಪಾತ್ರವಿದು. ನಾಯಕನದು ಸೌಮ್ಯ ಸ್ವಭಾವವಾದರೆ, ನನ್ನದು ಸ್ವಲ್ಪ ಮುಂಗೋಪಿಯ ಪಾತ್ರ.

ಇದೊಂದು ರೈತರ ಕುರಿತಾದ ಚಿತ್ರ. ಇಂತಹ ಸಾಮಾಜಿಕ ಕಳಕಳಿಯುಳ್ಳ ಚಿತ್ರವನ್ನು ಪ್ರಕಾಶ್ ಬೂದೂರು ಅವರು ಬಹಳ ಮುತುವರ್ಜಿಯಿಂದ ನಿರ್ಮಾಣ ಮಾಡುತ್ತಿದ್ದಾರೆ. ಶಿವರಾಜಕುಮಾರ್ ಅವರು ಸಹ ಈ ಚಿತ್ರದ ವಿಶೇಷ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಇಂತಹ ಅದ್ಭುತ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ನಟಿಸಿದ್ದು ನನಗೆ ಬಹಳ ಖುಷಿಯಾಗಿದೆ. ನನ್ನಷ್ಟೆ ನನ್ನ ಪಾತ್ರವನ್ನು ಪ್ರೇಕ್ಷಕರು ಸಹ ಇಷ್ಟ ಪಡುತ್ತಾರೆ ಎಂಬ ನಂಬಿಕೆ ಇದೆ ಎಂದು ನಟ ಮಿತ್ರ ತಿಳಿಸಿದ್ದಾರೆ.

ಈ ಹಿಂದೆ ಅವರು ಮಾಡಿರದ ಪಾತ್ರದಲ್ಲಿ ಅವರು “ಮಹಾನ್” ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ವಿಜಯ ರಾಘವೇಂದ್ರ ಅವರದು ಈ ಚಿತ್ರದಲ್ಲಿ ಸಾಮಾಜಿಕ ಕಾಳಜಿ ಇರುವ ರೈತನ ಪಾತ್ರ. ಅವರ ಜೀವನದಲ್ಲಿ ಸಾಕಷ್ಟು ಏರಿಳಿತಗಳಿರುತ್ತದೆ‌. ಅವರ ಕಷ್ಟದ ಸಮಯದಲ್ಲಿ ಧೈರ್ಯ ತುಂಬಿ ಅವರನ್ನು ಹುರಿದುಂಬಿಸುವ ಪಾತ್ರದಲ್ಲಿ ಮಹಿಳೆ ಇದ್ದರೆ ಉತ್ತಮ ಎಂಬುದು ನನ್ನ ಅನಿಸಿಕೆ ಆಗಿತ್ತು. ಈ ಪಾತ್ರದಲ್ಲಿ ರಾಧಿಕಾ ಅವರು ನಟಿಸಿದ್ದಾರೆ. ನರ್ಸ್ ಆಗಿಯೂ, ಸಾಮಾಜಿಕ ಕಾಳಜಿ ಇರುವ ಹೆಣ್ಣಾಗಿ ರಾಧಿಕಾ ನಾರಾಯಣ್ ಅವರು ಅಭಿನಯಿಸಿದ್ದು, ವಿಜಯ ರಾಘವೇಂದ್ರ ಅವರ ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ.

ನನ್ನ ಹಾಗೂ ಮಿತ್ರ ಅವರ ಕಾಂಬಿನೇಶನ್ ನಲ್ಲಿ ಬಂದ “ರಾಗ” ಚಿತ್ರ ಇಂದು ಕೂಡ ಜನಪ್ರಿಯ. ಈಗ “ಮಹಾನ್” ಚಿತ್ರದಲ್ಲಿ ನ್ಯಾಯದ ಪರ ಹೋರಾಡುವ ನಾಯಕ ವಿಜಯ ರಾಘವೇಂದ್ರ ಅವರಿಗೆ ಸದಾ ಬೆಂಗಾವಲಾಗಿ ಇರುವ, ನಾಯಕನ ಆಗುಹೋಗುಗಳಿಗೆ ಸ್ಪಂದಿಸುವ ಪಾತ್ರ ಮಿತ್ರ ಅವರದು. ಇಬ್ಬರ ನಡುವೆ ವಯಸ್ಸಿನ ಅಂತರ ಬಹಳ ಇದ್ದರೂ, ಈ ಸ್ನೇಹಿತರಂತೆ ಬಲವಾದ ನಂಟು ಇರುತ್ತದೆ. ಬಹಳ ಪ್ರಾಮುಖ್ಯತೆಯಿರುವ ಪಾತ್ರ‌. ಮಿತ್ರ ಅವರ ಪಾತ್ರ ಮತ್ತು ಅವರ ಅಭಿನಯ ಎಲ್ಲರ ಮನ ಮುಟ್ಟುತ್ತದೆ ಎಂದು ನಿರ್ದೇಶಕ ಪಿ‌‌.ಸಿ.ಶೇಖರ್ ತಿಳಿಸಿದ್ದಾರೆ. .

“ಮಹಾನ್” ನಮ್ಮ ಆಕಾಶ ಪಿಕ್ಚರ್ಸ್‌ ಸಂಸ್ಥೆಯ ಮೊದಲ ನಿರ್ಮಾಣದ ಚಿತ್ರ. ಪ್ರೇಕ್ಷಕರಿಗೆ ಸದಭಿರುಚಿಯ ಚಿತ್ರಗಳನ್ನು ನೀಡುವ ಹಂಬಲ ನಮ್ಮ ಸಂಸ್ಥೆಯದು. ಅದರ ಮೊದಲ ಪ್ರಯತ್ನವಾಗಿ ಪಿ.ಸಿ.ಶೇಖರ್ ಅವರ ನಿರ್ದೇಶನದಲ್ಲಿ “ಮಹಾನ್” ಚಿತ್ರ ನಿರ್ಮಾಣವಾಗುತ್ತಿದೆ. “ರಂಗಿತರಂಗ” ಖ್ಯಾತಿಯ ನಟಿ ರಾಧಿಕಾ ನಾರಾಯಣ್ ಹಾಗೂ ಹಲವಾರು ಜನಪ್ರಿಯ ಚಿತ್ರಗಳಲ್ಲಿ ನಟಿಸಿರುವ ಮಿತ್ರ ಅವರಂತಹ ಅನುಭವಿ ನಟರು ಅಭಿನಯಿಸಿರುವುದು ಬಹಳ ಖುಷಿಯಾಗಿದೆ ಎನ್ನುತ್ತಾರೆ ನಿರ್ಮಾಪಕ ‌ಪ್ರಕಾಶ್ ಬೂದೂರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 04T200004.531

ಬಸ್ ಹತ್ತಲು ಹೋದ ಭಿಕ್ಷುಕನಿಗೆ ಕಾಲಿನಿಂದ ಒದ್ದ BMTC ಕಂಡಕ್ಟರ್ ಅಮಾನತು

by ಶಾಲಿನಿ ಕೆ. ಡಿ
August 4, 2026 - 8:10 pm
0

Untitled design 2026 08 04T191158.502

“ಡಮ್ಮಿ ಸಿಎಂ, ರೀಲ್ಸ್ ಕ್ರಿಯೇಟರ್”: ವಿಜಯ್ ವಿರುದ್ಧ ಎಂ.ಕೆ ಸ್ಟಾಲಿನ್ ವಾಗ್ದಾಳಿ

by ಶಾಲಿನಿ ಕೆ. ಡಿ
August 4, 2026 - 7:12 pm
0

#Kudremukh #Trekking #Chikkamagaluru #Malnad #HeavyRain #KarnatakaRain #ForestDepartment

ಚಿಕ್ಕಮಗಳೂರಿನಲ್ಲಿ ಭಾರೀ ಮಳೆ: ಕುದುರೆಮುಖ ಟ್ರೆಕ್ಕಿಂಗ್‌ ತಾತ್ಕಾಲಿಕ ಬಂದ್

by ಶಾಲಿನಿ ಕೆ. ಡಿ
August 4, 2026 - 6:45 pm
0

Untitled design 2026 08 04T182620.737

“ಮಹಾನ್” ಚಿತ್ರದ ಪ್ರಮುಖಪಾತ್ರದಲ್ಲಿ ರಾಧಿಕಾ ನಾರಾಯಣ್ ಹಾಗೂ ಮಿತ್ರ: ಫಸ್ಟ್ ಲುಕ್ ಅನಾವರಣ

by ಶಾಲಿನಿ ಕೆ. ಡಿ
August 4, 2026 - 6:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 04T160639.933
    ಭಾರತೀಯ ಸಿನಿಮಾರಂಗದ ಇತಿಹಾಸದಲ್ಲಿಯೇ ದಾಖಲೆ ಬರೆದ ರಾಮಾಯಣ
    August 4, 2026 | 0
  • W
    ವಿನಯ್ ಕುಲಕರ್ಣಿಗೆ ಬೇಲ್ ಸಿಕ್ಕ ಬೆನ್ನಲ್ಲೇ ದರ್ಶನ್ ಕೇಸ್ ಮತ್ತೆ ಮುನ್ನೆಲೆಗೆ
    August 4, 2026 | 0
  • ಕೋರ್ಟ್ (3)
    ’60-70 ಜನರಿಗೆ ಒಂದೇ ಟಾಯ್ಲೆಟ್‌’..ಜೈಲಿನ ಕರಾಳ ಅನುಭವ ಬಿಚ್ಚಿಟ್ಟ ಸಲ್ಮಾನ್ ಖಾನ್
    August 3, 2026 | 0
  • ಕೋರ್ಟ್ (1)
    ಗಾಯದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬಿಗ್ ಅಪ್ಡೇಟ್ ನೀಡಿದ ನಟಿ ರಶ್ಮಿಕಾ ಮಂದಣ್ಣ
    August 3, 2026 | 0
  • Untitled design (32)
    ಹೊಸ ವಿವಾದಕ್ಕೆ ನಾಂದಿ ಹಾಡಿದ್ರಾ ಹಿರಿಯ ನಟ ಅನಂತ್..?
    August 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version