• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಪುಷ್ಪ 2’, ‘ಆರ್‌ಆರ್‌ಆರ್’ ದಾಖಲೆ ಹಿಂದಿಕ್ಕಲಿರುವ ‘ರಾಮಾಯಣ’

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 7, 2026 - 1:52 pm
in ಸಿನಿಮಾ
0 0
0
ಕೈಗೊಳ್ಳಲಿರುವ (66)

ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಸಿನಿಮಾಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ನಿರ್ದೇಶಕ ನಿತೇಶ್ ತಿವಾರಿ ಅವರ ‘ರಾಮಾಯಣ’ ಚಿತ್ರ ಈಗಾಗಲೇ ವಿಶ್ವದಾದ್ಯಂತ ಭಾರೀ ನಿರೀಕ್ಷೆ ಹುಟ್ಟುಹಾಕಿದೆ. ಭಾರತೀಯ ಪೌರಾಣಿಕ ಮಹಾಕಾವ್ಯವನ್ನು ಅತ್ಯಾಧುನಿಕ ತಂತ್ರಜ್ಞಾನ ಮತ್ತು ಭವ್ಯ ನಿರ್ಮಾಣದೊಂದಿಗೆ ತೆರೆಗೆ ತರುತ್ತಿರುವ ಈ ಸಿನಿಮಾ, ಬಿಡುಗಡೆಯ ಮುನ್ನವೇ ಹಲವು ದಾಖಲೆಗಳನ್ನು ನಿರ್ಮಿಸುವತ್ತ ಹೆಜ್ಜೆಯಿಟ್ಟಿದೆ.

ವರದಿಗಳ ಪ್ರಕಾರ, 2026ರ ದೀಪಾವಳಿ ಹಬ್ಬದ ಪ್ರಯುಕ್ತ ಬಿಡುಗಡೆಯಾಗಲಿರುವ ‘ರಾಮಾಯಣ’ ಚಿತ್ರವು ವಿಶ್ವದಾದ್ಯಂತ 59,000ಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ತೆರೆಕಾಣುವ ಸಾಧ್ಯತೆ ಇದೆ. ಇದು ಭಾರತೀಯ ಸಿನಿಮಾವೊಂದಕ್ಕೆ ಇದುವರೆಗೂ ಸಿಕ್ಕಿರುವ ಅತಿದೊಡ್ಡ ಜಾಗತಿಕ ಬಿಡುಗಡೆಯಾಗುವ ನಿರೀಕ್ಷೆ ಮೂಡಿಸಿದೆ.

RelatedPosts

‘ಟಾಕ್ಸಿಕ್’ ಟ್ರೇಲರ್ ರಿಲೀಸ್: ಯಶ್‌ ಆ್ಯಕ್ಷನ್‌ಗೆ ಫಿದಾ ಆದ ಅಭಿಮಾನಿಗಳು

‘ಟಾಕ್ಸಿಕ್’ ಟ್ರೈಲರ್‌ ಲಾಂಚ್ ಗೆ ಕ್ಷಣಗಣನೆ: ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ

ಇಂದು ಸಂಜೆ ‘ಟಾಕ್ಸಿಕ್’ ಟ್ರೈಲರ್ ಬಿಡುಗಡೆ

ನಟ ಸೂರ್ಯ ಅಭಿನಯದ ‘ವಿಶ್ವನಾಥ್ ಅಂಡ್ ಸನ್ಸ್’ ಚಿತ್ರ ಆಗಸ್ಟ್ 14ಕ್ಕೆ ಬಿಡುಗಡೆ

ADVERTISEMENT
ADVERTISEMENT

ಚಿತ್ರದ ವಿದೇಶಿ ವಿತರಣೆಯ ಹಕ್ಕನ್ನು ಸೋನಿ ಪಿಕ್ಚರ್ಸ್ ಪಡೆದುಕೊಂಡಿದ್ದು, ಭಾರತದ ಹೊರಗೆ ಮಾತ್ರವೇ 50,000ಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ಸಿನಿಮಾ ಬಿಡುಗಡೆಯಾಗುವಂತೆ ಯೋಜನೆ ರೂಪಿಸಲಾಗಿದೆ ಎನ್ನಲಾಗಿದೆ. ಭಾರತದಲ್ಲಿಯೂ ಸುಮಾರು 9,000 ಚಿತ್ರಮಂದಿರಗಳಲ್ಲಿ ಈ ಚಿತ್ರ ಬಿಡುಗಡೆಯಾಗಲಿದೆ. ಈ ಮೂಲಕ ದೇಶೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಭೂತಪೂರ್ವ ಪ್ರಮಾಣದ ರಿಲೀಸ್‌ಗೆ ಚಿತ್ರತಂಡ ಸಿದ್ಧತೆ ನಡೆಸಿದೆ.

ಈ ಹಿಂದೆ ಅಲ್ಲು ಅರ್ಜುನ್ ಅಭಿನಯದ ‘ಪುಷ್ಪ 2’ ಚಿತ್ರ ಸುಮಾರು 13,000 ಸ್ಕ್ರೀನ್‌ಗಳಲ್ಲಿ, ಎಸ್.ಎಸ್. ರಾಜಮೌಳಿ ನಿರ್ದೇಶನದ ‘ಆರ್‌ಆರ್‌ಆರ್’ ಸಿನಿಮಾ ಸುಮಾರು 11,000 ಸ್ಕ್ರೀನ್‌ಗಳಲ್ಲಿ ಬಿಡುಗಡೆಯಾಗಿ ದಾಖಲೆ ನಿರ್ಮಿಸಿದ್ದವು. ಅಲ್ಲದೆ, ಜೇಮ್ಸ್ ಕ್ಯಾಮರೂನ್ ನಿರ್ದೇಶನದ ಹಾಲಿವುಡ್ ಬ್ಲಾಕ್‌ಬಸ್ಟರ್ ‘ಅವತಾರ್: ದಿ ವೇ ಆಫ್ ವಾಟರ್’ ವಿಶ್ವದಾದ್ಯಂತ ಸುಮಾರು 52,000 ಸ್ಕ್ರೀನ್‌ಗಳಲ್ಲಿ ಬಿಡುಗಡೆಯಾಗಿತ್ತು. ಇದೀಗ ‘ರಾಮಾಯಣ’ ಈ ದಾಖಲೆಯನ್ನೂ ಮೀರಿಸುವತ್ತ ಹೆಜ್ಜೆಯಿಡುತ್ತಿದೆ ಎಂಬ ಮಾಹಿತಿ ಸಿನಿ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಚಿತ್ರದ ನಿರ್ಮಾಪಕರಾದ ನಮಿತ್ ಮಲ್ಹೋತ್ರಾ, ಅತ್ಯುನ್ನತ ಗುಣಮಟ್ಟದ ದೃಶ್ಯಾನುಭವಕ್ಕಾಗಿ ಈ ಸಿನಿಮಾವನ್ನು ಐಮ್ಯಾಕ್ಸ್ (IMAX) ಮಾದರಿಯಲ್ಲೂ ಬಿಡುಗಡೆ ಮಾಡುವ ಯೋಜನೆ ಹೊಂದಿದ್ದಾರೆ. ಜಗತ್ತಿನ ವಿವಿಧ ಭಾಗಗಳ ಪ್ರೇಕ್ಷಕರನ್ನು ತಲುಪುವ ಉದ್ದೇಶದಿಂದ ಸಿನಿಮಾ 50ಕ್ಕೂ ಹೆಚ್ಚು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಭಾಷಾಂತರದ ಗುಣಮಟ್ಟವನ್ನು ಹೆಚ್ಚಿಸಲು ಹಾಗೂ ನಟರ ತುಟಿ ಚಲನೆಗೆ ಹೊಂದುವಂತೆ ಡಬ್ಬಿಂಗ್ ಮಾಡಲು ‘ಬ್ರಹ್ಮ ಎಐ’ ಎಂಬ ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಬಳಸಲಾಗಿದೆ ಎಂದು ಹೇಳಲಾಗಿದೆ. ಇತ್ತೀಚೆಗೆ ಬಿಡುಗಡೆಯಾದ ಇಂಗ್ಲಿಷ್ ಟ್ರೇಲರ್ ಕೂಡ ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ಪಡೆದು ಚಿತ್ರದ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ.

ತಾರಾಬಳಗವೂ ಚಿತ್ರದ ಪ್ರಮುಖ ಆಕರ್ಷಣೆಯಾಗಿದೆ. ಬಾಲಿವುಡ್ ನಟ ರಣಬೀರ್ ಕಪೂರ್ ಶ್ರೀರಾಮನ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಸಾಯಿ ಪಲ್ಲವಿ ಸೀತೆಯ ಪಾತ್ರಕ್ಕೆ ಜೀವ ತುಂಬಿದ್ದಾರೆ. ಕನ್ನಡದ ಖ್ಯಾತ ನಟ ಯಶ್ ರಾವಣನ ಪಾತ್ರದಲ್ಲಿ ಅಭಿನಯಿಸುತ್ತಿದ್ದು, ಸನ್ನಿ ಡಿಯೋಲ್ ಹನುಮಂತನ ಪಾತ್ರದಲ್ಲಿ ಪ್ರೇಕ್ಷಕರ ಮುಂದೆ ಬರಲಿದ್ದಾರೆ. ಸಂಗೀತ ಕ್ಷೇತ್ರದ ದಿಗ್ಗಜರಾದ ಆಸ್ಕರ್ ಪ್ರಶಸ್ತಿ ವಿಜೇತ ಹ್ಯಾನ್ಸ್ ಝಿಮ್ಮರ್ ಹಾಗೂ ಭಾರತದ ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಈ ಚಿತ್ರಕ್ಕೆ ಸಂಗೀತ ನೀಡುತ್ತಿರುವುದು ಮತ್ತೊಂದು ವಿಶೇಷ.

ಸುಮಾರು 4,000 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ‘ರಾಮಾಯಣ’ ಭಾರತೀಯ ಚಿತ್ರರಂಗದ ಅತಿ ದುಬಾರಿ ಸಿನಿಮಾಗಳಲ್ಲಿ ಒಂದಾಗಿ ಗುರುತಿಸಿಕೊಂಡಿದೆ. ಚಿತ್ರದ ಮೊದಲ ಭಾಗವನ್ನು 2026ರ ದೀಪಾವಳಿಗೆ, ಎರಡನೇ ಭಾಗವನ್ನು 2027ರ ದೀಪಾವಳಿಗೆ ಬಿಡುಗಡೆ ಮಾಡಲು ಚಿತ್ರತಂಡ ಯೋಜನೆ ರೂಪಿಸಿದೆ. ಭವ್ಯ ನಿರ್ಮಾಣ, ಅತ್ಯಾಧುನಿಕ ತಂತ್ರಜ್ಞಾನ, ಅಂತರರಾಷ್ಟ್ರೀಯ ಮಟ್ಟದ ಬಿಡುಗಡೆ ಹಾಗೂ ಬಲಿಷ್ಠ ತಾರಾಬಳಗದೊಂದಿಗೆ ‘ರಾಮಾಯಣ’ ಭಾರತೀಯ ಸಿನಿ ಇತಿಹಾಸದಲ್ಲಿ ಹೊಸ ಅಧ್ಯಾಯ ಬರೆಯುವ ನಿರೀಕ್ಷೆ ಮೂಡಿಸಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಭಾವುಕರಾದ (21)

ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್–ಬಿಜೆಪಿ ಪಾದಯಾತ್ರೆ ಆರಂಭ

by ದಿಶಾ ಕೆ. ಎಸ್.
August 9, 2026 - 12:46 pm
0

ಭಾವುಕರಾದ (20)

ಪಾದಯಾತ್ರೆಗೆ ಮುನ್ನ ದೇವೇಗೌಡರ ಆಶೀರ್ವಾದ ಪಡೆದ ನಿಖಿಲ್ ಕುಮಾರಸ್ವಾಮಿ

by ದಿಶಾ ಕೆ. ಎಸ್.
August 9, 2026 - 12:23 pm
0

ಭಾವುಕರಾದ (18)

ಅನಾರೋಗ್ಯದ ವದಂತಿಗಳ ನಡುವೆ ಮೊಜ್ತಬಾ ಖಮೇನಿ ವಿಡಿಯೋ ಬಿಡುಗಡೆ

by ದಿಶಾ ಕೆ. ಎಸ್.
August 9, 2026 - 11:57 am
0

ಭಾವುಕರಾದ (17)

ಥೈಲ್ಯಾಂಡ್ ನಿಂದ ದಿಲ್ಲಿಗೆ ಬರ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಪ್ರಕ್ಷುಬ್ಧತೆ: ಓರ್ವ ಪೈಲಟ್ ಮಾದಕ ವಸ್ತು ಸೇವನೆ ದೃಢ!

by ದಿಶಾ ಕೆ. ಎಸ್.
August 9, 2026 - 11:36 am
0

ಸಂಬಂಧಿಸಿದ ಪೋಸ್ಟ್‌ಗಳು

  • ಕೈಗೊಳ್ಳಲಿರುವ (83)
    ‘ಟಾಕ್ಸಿಕ್’ ಟ್ರೇಲರ್ ರಿಲೀಸ್: ಯಶ್‌ ಆ್ಯಕ್ಷನ್‌ಗೆ ಫಿದಾ ಆದ ಅಭಿಮಾನಿಗಳು
    August 8, 2026 | 0
  • ಕೈಗೊಳ್ಳಲಿರುವ (77)
    ‘ಟಾಕ್ಸಿಕ್’ ಟ್ರೈಲರ್‌ ಲಾಂಚ್ ಗೆ ಕ್ಷಣಗಣನೆ: ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ
    August 8, 2026 | 0
  • Untitled design (12)
    ಇಂದು ಸಂಜೆ ‘ಟಾಕ್ಸಿಕ್’ ಟ್ರೈಲರ್ ಬಿಡುಗಡೆ
    August 8, 2026 | 0
  • Your paragraph text (42)
    ನಟ ಸೂರ್ಯ ಅಭಿನಯದ ‘ವಿಶ್ವನಾಥ್ ಅಂಡ್ ಸನ್ಸ್’ ಚಿತ್ರ ಆಗಸ್ಟ್ 14ಕ್ಕೆ ಬಿಡುಗಡೆ
    August 7, 2026 | 0
  • Your paragraph text (27)
    ಇಂದು ‘ಬಾಸ್’ ರಿಲೀಸ್..ಡಿಬಾಸ್ ರೋಲ್‌ಗೆ ಜೀವ ತುಂಬಿದ ತನುಷ್ ಶಿವಣ್ಣ
    August 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version