• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೀಕರ ಭೂಕಂಪ: ಹತ್ತಾರು ಕಟ್ಟಡ ನೆಲಸಮ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 10, 2026 - 11:21 pm
in ವಿದೇಶ
0 0
0
ಬಲಿಷ್ಠ (67)

ದಕ್ಷಿಣ ಅಮೆರಿಕದ ಕೊಲಂಬಿಯಾದಲ್ಲಿ ಸಂಭವಿಸಿದ ಭೀಕರ ಭೂಕಂಪಕ್ಕೆ 47 ಮಂದಿ ಮೃತಪಟ್ಟಿದ್ದು, ನೂರಾರು ಜನರು ಗಾಯಗೊಂಡಿದ್ದಾರೆ. ರಿಕ್ಟರ್ ಮಾಪಕದಲ್ಲಿ 7.4 ತೀವ್ರತೆ ದಾಖಲಾಗಿರುವ ಈ ಪ್ರಬಲ ಭೂಕಂಪದಿಂದ ಪಶ್ಚಿಮ ಕೊಲಂಬಿಯಾದ ಹಲವು ಪ್ರದೇಶಗಳಲ್ಲಿ ಭಾರಿ ಹಾನಿ ಸಂಭವಿಸಿದೆ. ಕಟ್ಟಡಗಳು ಕುಸಿದಿದ್ದು, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ರಕ್ಷಣಾ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ.

ಕೊಲಂಬಿಯಾದ ಚೊಕೊ ಪ್ರದೇಶದ ಸ್ಯಾನ್ ಜೋಸ್ ಡೆಲ್ ಪಾಲ್ಮಾರ್ ಪಟ್ಟಣದ ಸಮೀಪ ಭೂಕಂಪದ ಕೇಂದ್ರಬಿಂದು ದಾಖಲಾಗಿದೆ. ಸ್ಥಳೀಯ ಕಾಲಮಾನ ಬೆಳಿಗ್ಗೆ 7.34ರ ಸುಮಾರಿಗೆ ಭೂಮಿ ಕಂಪಿಸಿದೆ. ಸ್ಯಾನ್ ಜೋಸ್ ಡೆಲ್ ಪಾಲ್ಮಾರ್‌ನಿಂದ ಪೂರ್ವಕ್ಕೆ ಸುಮಾರು 3 ಮೈಲಿ ದೂರದಲ್ಲಿ ಭೂಕಂಪದ ಕೇಂದ್ರಬಿಂದು ಪತ್ತೆಯಾಗಿದ್ದು, ಭೂಮಿಯೊಳಗೆ ಸುಮಾರು 107 ಕಿಲೋಮೀಟರ್ ಆಳದಲ್ಲಿ ಕಂಪನ ಸಂಭವಿಸಿದೆ ಎಂದು ಅಮೆರಿಕದ ಯುಎಸ್ ಜಿಯೋಲಾಜಿಕಲ್ ಸರ್ವೇ (USGS) ಹಾಗೂ ಕೊಲಂಬಿಯಾದ ಭೂಕಂಪಶಾಸ್ತ್ರ ಸಂಸ್ಥೆ ಮಾಹಿತಿ ನೀಡಿವೆ.

RelatedPosts

ರಷ್ಯಾ ಮೇಲೆ ಹಿಂದೆಂದೂ ಕಂಡು ಕೇಳರಿಯದಂಥಾ ದಾಳಿ ಮಾಡಿದ ಉಕ್ರೇನ್

ಟ್ರಂಪ್‌ ಶಾಂತಿ ಯೋಜನೆಗೆ ಒಪ್ಪದ ನೆತನ್ಯಾಹು!: ಇಬ್ಬರ ಮಧ್ಯೆ ಮತ್ತೆ ಭಿನ್ನಮತ

ಅನಾರೋಗ್ಯದ ವದಂತಿಗಳ ನಡುವೆ ಮೊಜ್ತಬಾ ಖಮೇನಿ ವಿಡಿಯೋ ಬಿಡುಗಡೆ

ಥೈಲ್ಯಾಂಡ್ ನಿಂದ ದಿಲ್ಲಿಗೆ ಬರ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಪ್ರಕ್ಷುಬ್ಧತೆ: ಓರ್ವ ಪೈಲಟ್ ಮಾದಕ ವಸ್ತು ಸೇವನೆ ದೃಢ!

ADVERTISEMENT
ADVERTISEMENT

ಈ ಪ್ರಬಲ ಭೂಕಂಪದ ಕಂಪನ ಕೊಲಂಬಿಯಾದ ರಾಜಧಾನಿ ಬೊಗೋಟಾ ಸೇರಿದಂತೆ ಹಲವು ನಗರಗಳಿಗೂ ತಟ್ಟಿದೆ. ಬೊಗೋಟಾದಿಂದ ಸುಮಾರು 400 ಕಿಲೋಮೀಟರ್ ಪಶ್ಚಿಮದಲ್ಲಿರುವ ಸ್ಯಾನ್ ಜೋಸ್ ಡೆಲ್ ಪಾಲ್ಮಾರ್ ಸಣ್ಣ ಪಟ್ಟಣವಾಗಿದ್ದು, ಇಲ್ಲಿ ಸುಮಾರು 4,800 ಮಂದಿ ವಾಸಿಸುತ್ತಿದ್ದಾರೆ. ಭೂಕಂಪದ ಕೇಂದ್ರದ ಸಮೀಪದ ಪ್ರದೇಶಗಳಲ್ಲಿ ಕಟ್ಟಡಗಳು ಮತ್ತು ಇತರ ಮೂಲಸೌಕರ್ಯಗಳಿಗೆ ಭಾರಿ ಹಾನಿಯಾಗಿದೆ.

ಭೂಕಂಪದ ತೀವ್ರತೆ ನೆರೆಯ ರಾಷ್ಟ್ರಗಳಿಗೂ ಅನುಭವವಾಗಿದ್ದು, ಎಕ್ವಡಾರ್‌ನಲ್ಲೂ ಕಂಪನದ ಅನುಭವವಾಗಿದೆ ಎಂದು ವರದಿಯಾಗಿದೆ. ಹಲವು ಪ್ರದೇಶಗಳಲ್ಲಿ ಜನರು ಆತಂಕದಿಂದ ಮನೆ ಹಾಗೂ ಕಟ್ಟಡಗಳಿಂದ ಹೊರಗೆ ಓಡಿ ಬಂದಿದ್ದಾರೆ.

ಆರು ವಿಮಾನ ನಿಲ್ದಾಣಗಳ ಕಾರ್ಯಾಚರಣೆ ಸ್ಥಗಿತ

ಭೂಕಂಪದಿಂದಾಗಿ ಪಶ್ಚಿಮ ಕೊಲಂಬಿಯಾದ ಮೂಲಸೌಕರ್ಯಗಳಿಗೆ ಹಾನಿಯಾಗಿರುವ ಹಿನ್ನೆಲೆಯಲ್ಲಿ ಆರು ಪ್ರಮುಖ ವಿಮಾನ ನಿಲ್ದಾಣಗಳ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ವಿಮಾನ ನಿಲ್ದಾಣಗಳ ಸುರಕ್ಷತೆ ಪರಿಶೀಲನೆ ಹಾಗೂ ಹಾನಿಯ ಮೌಲ್ಯಮಾಪನ ಕಾರ್ಯ ನಡೆಯುತ್ತಿದೆ.

ಅವಶೇಷಗಳಡಿ ಸಿಲುಕಿದವರಿಗಾಗಿ ಶೋಧ

ವಿಧ ನಗರಗಳಲ್ಲಿ ಕಟ್ಟಡಗಳ ಅವಶೇಷಗಳಡಿ ಜನರು ಸಿಲುಕಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೇನೆ, ಅಗ್ನಿಶಾಮಕ ದಳ, ಪೊಲೀಸ್ ಸಿಬ್ಬಂದಿ ಹಾಗೂ ದುರಂತ ನಿರ್ವಹಣಾ ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಅವಶೇಷಗಳನ್ನು ತೆರವುಗೊಳಿಸಿ ಸಿಲುಕಿರುವವರನ್ನು ಸುರಕ್ಷಿತವಾಗಿ ಹೊರತೆಗೆಯಲು ತುರ್ತು ಕಾರ್ಯಾಚರಣೆ ನಡೆಸಲಾಗುತ್ತಿದೆ.

ಭೂಕಂಪದ ಬಳಿಕ ಹಲವು ಪ್ರದೇಶಗಳಲ್ಲಿ ವಿದ್ಯುತ್ ಹಾಗೂ ಸಂವಹನ ವ್ಯವಸ್ಥೆಗಳ ಮೇಲೂ ಪರಿಣಾಮ ಬೀರಿರುವ ಬಗ್ಗೆ ವರದಿಯಾಗಿದೆ. ಹಾನಿಗೊಳಗಾದ ಪ್ರದೇಶಗಳಲ್ಲಿ ಪರಿಸ್ಥಿತಿ ಇನ್ನೂ ಆತಂಕಕಾರಿಯಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಂತೆ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯ ಬಗ್ಗೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಭೂಕಂಪದಿಂದ ಹೆಚ್ಚು ಹಾನಿಗೊಳಗಾದ ಪ್ರದೇಶಗಳಿಗೆ ತುರ್ತು ನೆರವು ಒದಗಿಸುವ ಕಾರ್ಯವೂ ಆರಂಭವಾಗಿದೆ. ಸಂತ್ರಸ್ತರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದ್ದು, ಗಾಯಾಳುಗಳಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಬಲಿಷ್ಠ (67)

ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೀಕರ ಭೂಕಂಪ: ಹತ್ತಾರು ಕಟ್ಟಡ ನೆಲಸಮ

by ದಿಶಾ ಕೆ. ಎಸ್.
August 10, 2026 - 11:21 pm
0

ಬಲಿಷ್ಠ (65)

ಹೊರಟ್ಟಿ ಸ್ಥಾನಕ್ಕೆ ಪುಟ್ಟಣ್ಣ: ಹಂಗಾಮಿ ಸಭಾಪತಿಯಾಗಿ ಸರ್ಕಾರದಿಂದ ನೇಮಕ

by ದಿಶಾ ಕೆ. ಎಸ್.
August 10, 2026 - 10:29 pm
0

ಬಲಿಷ್ಠ (63)

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಾಳೆಗೆ ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್

by ದಿಶಾ ಕೆ. ಎಸ್.
August 10, 2026 - 10:06 pm
0

ಬಲಿಷ್ಠ (61)

ಶೃಂಗೇರಿಯಲ್ಲಿ ಮಳೆಯ ಅಬ್ಬರಕ್ಕೆ ಗುಡ್ಡ ಕುಸಿತ: ಸಂಚಾರ ಅಸ್ತವ್ಯಸ್ತ

by ದಿಶಾ ಕೆ. ಎಸ್.
August 10, 2026 - 9:50 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಬಲಿಷ್ಠ (52)
    ರಷ್ಯಾ ಮೇಲೆ ಹಿಂದೆಂದೂ ಕಂಡು ಕೇಳರಿಯದಂಥಾ ದಾಳಿ ಮಾಡಿದ ಉಕ್ರೇನ್
    August 10, 2026 | 0
  • ವೋಟ್ (13)
    ಟ್ರಂಪ್‌ ಶಾಂತಿ ಯೋಜನೆಗೆ ಒಪ್ಪದ ನೆತನ್ಯಾಹು!: ಇಬ್ಬರ ಮಧ್ಯೆ ಮತ್ತೆ ಭಿನ್ನಮತ
    August 9, 2026 | 0
  • ಭಾವುಕರಾದ (18)
    ಅನಾರೋಗ್ಯದ ವದಂತಿಗಳ ನಡುವೆ ಮೊಜ್ತಬಾ ಖಮೇನಿ ವಿಡಿಯೋ ಬಿಡುಗಡೆ
    August 9, 2026 | 0
  • ಭಾವುಕರಾದ (17)
    ಥೈಲ್ಯಾಂಡ್ ನಿಂದ ದಿಲ್ಲಿಗೆ ಬರ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಪ್ರಕ್ಷುಬ್ಧತೆ: ಓರ್ವ ಪೈಲಟ್ ಮಾದಕ ವಸ್ತು ಸೇವನೆ ದೃಢ!
    August 9, 2026 | 0
  • ಕೈಗೊಳ್ಳಲಿರುವ (71)
    ಇರಾನ್ ನೂತನ ಸರ್ವಾಧಿಕಾರಿ ಮೊಜ್ತಬಾ ಖಮೇನಿ ಸ್ಥಿತಿ ಗಂಭೀರ: ಇಸ್ರೇಲ್ ಮಾಧ್ಯಮಗಳ ವರದಿಯನ್ನು ತಳ್ಳಿ ಹಾಕಿದ ಇರಾನ್ ಸರ್ಕಾರ
    August 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version