• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಹನೂರು ಶೂಟ್ ಔಟ್ ಪ್ರಕರಣ SIT ತನಿಖೆಯಾಗಲಿ: ಬೊಮ್ಮಾಯಿ ಒತ್ತಾಯ

ಕವಿತಾ by ಕವಿತಾ
August 16, 2026 - 3:33 pm
in ಕರ್ನಾಟಕ
0 0
0
Untitled design (59)

ಬೆಂಗಳೂರು ಆ. 16: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಯಿಂದ ನಡೆದ ಹತ್ಯೆಯ ಘಟನೆಗೆ ಸಂಬಂಧಿಸಿದಂತೆ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ವಿಶೇಷ ತನಿಖಾ ತಂಡ ರಚಿಸಿ ಸಮಗ್ರ ತನಿಖೆ ನಡೆಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರು ಆಗ್ರಹಿಸಿದ್ದಾರೆ.

ಬೆಂಗಳೂರಿನಲ್ಲಿ ​ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಘಟನೆಯ ಕುರಿತು ಸ್ಥಳೀಯ ಜನರು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಅರಣ್ಯ ಪ್ರದೇಶದಲ್ಲಿ ಸ್ಥಳೀಯರಿಗೆ ಮತ್ತು ಅರಣ್ಯ ಇಲಾಖೆಗೆ ನಿರಂತರವಾಗಿ ಸಂಪರ್ಕವಿರುತ್ತದೆ. ಆದರೆ ಈ ರೀತಿಯ ಹತ್ಯೆ ಘಟನೆಗಳು ಸಂಭವಿಸಿರುವುದು ಹಾಗೂ ಬೆದರಿಸುವ ಕೆಲಸಗಳು ನಡೆಯುತ್ತಿರುವುದು ತೀವ್ರ ಆತಂಕಕಾರಿ ಸಂಗತಿಯಾಗಿದೆ ಎಂದರು.
ಅರಣ್ಯ ಇಲಾಖೆ ಹಾಗೂ ಸ್ಥಳೀಯ ಜನರ ನಡುವೆ ನಿಕಟವಾದ ಸಂಬಂಧವಿರುತ್ತದೆ. ಸ್ಥಳೀಯ ಗಾರ್ಡ್ಸ್‌ ಹಾಗೂ ಕೆಳಹಂತದ ಅರಣ್ಯ ಅಧಿಕಾರಿಗಳಿಗೆ ಪ್ರತಿಯೊಬ್ಬರ ಬಗ್ಗೆಯೂ ಮಾಹಿತಿ ಇರುತ್ತದೆ. ಹೀಗಿರುವಾಗ ಅತ್ಯಂತ ಕಡಿಮೆ ಅಂತರದಿಂದ ಮೂವರು ವ್ಯಕ್ತಿಗಳ ಮೇಲೆ ಗುಂಡು ಹಾರಿಸಿರುವುದು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ ಎಂದು ಆರೋಪಿಸಿದರು.

RelatedPosts

ಕರಾವಳಿ, ದಕ್ಷಿಣ ಒಳನಾಡಿಗೆ ಮಳೆ ಸಾಧ್ಯತೆ: ಬಳ್ಳಾರಿ ಸೇರಿ 4 ಜಿಲ್ಲೆಗಳಲ್ಲಿ ಒಣಹವೆ

ದಸರಾ ಆರಂಭದಲ್ಲೇ ಮುರಿದು ಬಿದ್ದ ದೀಪಾಲಂಕಾರ ಕಟೌಟ್

ರಾಜ್ಯಕ್ಕೆ 3705.30 ಕೋಟಿ ರೂ. ಬರ ಪರಿಹಾರ ನೀಡಿ: ಸಿಎಂ ಡಿ.ಕೆ ಶಿವಕುಮಾರ್

ರಸ್ತೆ ಅಪಘಾತದಿಂದ ಬ್ರೈನ್ ಡೆಡ್: ಮಗನ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು

ADVERTISEMENT
ADVERTISEMENT

​ಕಾರಣಗಳು ಸುಳ್ಳು:

ಇಲಾಖೆಯ ಅಧಿಕಾರಿಗಳು ನೀಡುತ್ತಿರುವ ಸಮರ್ಥನೆಗಳು ಹಾಗೂ ಕಾರಣಗಳು ನಂಬಲು ಸಾಧ್ಯವಿಲ್ಲದ್ದು ಮತ್ತು ಸತ್ಯಕ್ಕೆ ದೂರವಾದವು. ಈ ಪ್ರಕರಣದ ತನಿಖೆ ಕೆಳಹಂತದ ಅಧಿಕಾರಿಗಳಿಂದ ನಡೆದರೆ ಸತ್ಯ ಹೊರಬರಲು ಸಾಧ್ಯವಿಲ್ಲ. ಆದ್ದರಿಂದ ನಿಷ್ಪಕ್ಷಪಾತ ಹಾಗೂ ಸ್ವತಂತ್ರ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಬೇಕು. ಮೃತರ ಕುಟುಂಬಸ್ಥರು ನ್ಯಾಯಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದು, ಸರ್ಕಾರ ತಕ್ಷಣವೇ ಮಧ್ಯಪ್ರವೇಶಿಸಿ ಅವರಿಗೆ ನ್ಯಾಯ ಒದಗಿಸಬೇಕು. ​ಘಟನೆಯ ಹಿಂದಿನ ನೈಜ ಸತ್ಯಾಂಶಗಳನ್ನು ಹೊರತಂದು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

​ಸಂಬಂಧಪಟ್ಟ ಅಧಿಕಾರಿಗಳ ಸಸ್ಪೆಂಡ್: ಘಟನೆಯಲ್ಲಿ ಭಾಗಿಯಾದ ಹಾಗೂ ನಿರ್ಲಕ್ಷ್ಯ ವಹಿಸಿದ ಎಲ್ಲಾ ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಸರ್ಕಾರ ತಕ್ಷಣವೇ ಅಮಾನತು ಮಾಡಬೇಕು. ಬೇರೆ ಬೇರೆ ಪ್ರಕರಣಗಳಿಗೆ ಸರ್ಕಾರ ಎಸ್‌ಐಟಿ ರಚನೆ ಮಾಡುವಂತೆ, ಈ ಘಟನೆಗೂ ನ್ಯಾಯಾಲಯದ ನೇರ ಮೇಲ್ವಿಚಾರಣೆಯಲ್ಲಿ ಸ್ವತಂತ್ರ ಎಸ್‌ಐಟಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

​ಕೋಲ್ಡ್ ಬ್ಲಡೆಡ್ ಮರ್ಡರ್ ಆರೋಪ:

ಘಟನೆಯ ಹಿಂದಿನ ಸತ್ಯಾಂಶ ಹೊರಬರದಿದ್ದರೆ ಇದು ‘ಕೋಲ್ಡ್ ಬ್ಲಡೆಡ್ ಮರ್ಡರ್’ (ಯೋಜಿತ ಹತ್ಯೆ) ಎಂದು ಬಿಂಬಿತವಾಗುತ್ತದೆ. ಆದ್ದರಿಂದ ನಿಷ್ಪಕ್ಷಪಾತ ತನಿಖೆಯೊಂದೇ ಸತ್ಯವನ್ನು ಹೊರತ ಬರಲು ಸಾಧ್ಯ. ​ಸರ್ಕಾರ ತಕ್ಷಣವೇ ಹೆಚ್ಚೆತ್ತುಕೊಂಡು ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕು ಮತ್ತು ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಬಸವರಾಜ ಬೊಮ್ಮಾಯಿ ಒತ್ತಾಯಿಸಿದರು.

​ನೈಸ್ ಯೋಜನೆ ಸಮಗ್ರ ತನಿಖೆಗೆಯಾಗಲಿ

ನೈಸ್ ಯೋಜನೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನೈಸ್ ಯೋಜನೆಯಲ್ಲಿ ಹಲವು ನ್ಯೂನತೆಗಳಿದ್ದು, ಈ ಕುರಿತು ಸರ್ಕಾರ ಸಮಗ್ರ ತನಿಖೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳಬೇಕು. “ನೈಸ್ ಯೋಜನೆಯಡಿ ನಿರ್ಮಿಸಲಾಗಿರುವ ರಸ್ತೆಯಿಂದ ಬೆಂಗಳೂರಿಗೆ ಒಂದಿಷ್ಟು ಅನುಕೂಲವಾಗಿರುವುದನ್ನು ಹೊರತುಪಡಿಸಿದರೆ, ಸಾರ್ವಜನಿಕರಿಂದ ಅತಿಯಾದ ಟೋಲ್ ವಸೂಲಿ ಮಾಡಲಾಗುತ್ತಿದೆ ಎಂಬ ದೂರುಗಳು ಮೊದಲಿನಿಂದಲೂ ಇವೆ” ಎಂದು ಹೇಳಿದರು.

​ನೈಸ್ ಯೋಜನೆಯ ಅಕ್ರಮ ಹಾಗೂ ನ್ಯೂನತೆಗಳ ಕುರಿತು ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ಗಳಲ್ಲಿ ಹಲವು ಬಾರಿ ಅರ್ಜಿಗಳು ಸಲ್ಲಿಕೆಯಾಗಿವೆ. ಇತ್ತೀಚೆಗೆ ಹೈಕೋರ್ಟ್ ನೀಡಿರುವ ಗಮನಾರ್ಹ ಟಿಪ್ಪಣಿಯಿಂದಾಗಿ ಈ ವಿಷಯದ ಗಂಭೀರತೆ ಹೆಚ್ಚಾಗಿದೆ. ನೈಸ್ ಕುರಿತು ಪಬ್ಲಿಕ್ ಅಕೌಂಟ್ಸ್ ಕಮಿಟಿ, ವರದಿ ಹಾಗೂ ಲೋಕೋಪಯೋಗಿ ಇಲಾಖೆ ನೀಡಿದ ವರದಿಗಳು ಈಗಾಗಲೇ ಸರ್ಕಾರದ ಬಳಿ ಇವೆ. ಯೋಜನೆಯಿಂದ ಸಂತ್ರಸ್ತರಾದ ಅನೇಕ ಜನರಿಗೆ ಹಾಗೂ ಭೂಮಿ ಕಳೆದುಕೊಂಡ ರೈತರಿಗೆ ಇಂದಿಗೂ ಸರಿಯಾದ ಪರಿಹಾರ ತಲುಪಿಲ್ಲ. ಕೆಲವರಿಗೆ ಪರ್ಯಾಯ ನಿವೇಶನ (ಸೈಟ್) ಕೊಡುವುದಾಗಿ ಹೇಳಿ ಇನ್ನೂ ನೀಡಿಲ್ಲ ಎಂದು ಆರೋಪಿಸಿದರು.

​ಟೋಲ್ ದರ ಕಡಿತ ಹಾಗೂ ಮರುಪರಿಶೀಲನೆ:

ಅತಿಯಾದ ಟೋಲ್ ವಸೂಲಿಯನ್ನು ತಡೆದು ದರ ಕಡಿತಗೊಳಿಸಬೇಕು ಮತ್ತು ಇಡೀ ಯೋಜನೆಯನ್ನು ಪುನರ್ ವಿಮರ್ಶೆ ಮಾಡಿ ಸಮಗ್ರ ತನಿಖೆ ನಡೆಸಬೇಕು.​ ಸಂತ್ರಸ್ತ ರೈತರಿಗೆ ನ್ಯಾಯ ಒದಗಿಸುವುದು ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಸರ್ಕಾರ ತಕ್ಷಣವೇ ಈ ವಿಷಯದಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಬೊಮ್ಮಾಯಿ ಅವರು ಆಗ್ರಹಿಸಿದ್ದಾರೆ.

ನಾಗೇಂದ್ರ ಸೇರ್ಪಡೆ ನೈತಿಕತೆ ಪತನ

ನಾಗೇಂದ್ರ ಅವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಯಾವ ಹಣಕಾಸಿನ ವಹಿವಾಟಿಗೆ ಸಂಬಂಧಿಸಿದಂತೆ ರಾಜ್ಯದ ವಿಶೇಷ ತನಿಖಾ ತಂಡ ಕ್ಲೀನ್ ಚೀಟ್ ನೀಡಿದೆಯೋ, ಅದೇ ವಹಿವಾಟಿನ ವಿಷಯದಲ್ಲಿ ಜಾರಿ ನಿರ್ದೇಶನಾಲಯ ಈಗಾಗಲೇ ಚಾರ್ಜ್‌ಶೀಟ್ (ದೋಷಾರೋಪಣೆ ಪಟ್ಟಿ) ಸಲ್ಲಿಸಿದೆ. ಇಂತಹ ಗಂಭೀರ ಆರೋಪ ಹೊತ್ತಿರುವ ವ್ಯಕ್ತಿಯನ್ನು ಸಂಪುಟಕ್ಕೆ ಸೇರಿಸಿಕೊಂಡು ಮಂತ್ರಿ ಮಾಡುತ್ತೀರಾ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸರ್ಕಾರವನ್ನು ತೀವ್ರವಾಗಿ ಪ್ರಶ್ನಿಸಿದ್ದಾರೆ.

ಈ ಪ್ರಕರಣವು ಕೇವಲ ಎಫ್‌ಐಆರ್ ಅಥವಾ ದೂರಿನ ಹಂತದಲ್ಲಿ ಉಳಿದಿಲ್ಲ, ಬದಲಿಗೆ ತನಿಖೆ ಮುಗಿದು ತನಿಖಾ ಸಂಸ್ಥೆಯಿಂದ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಕೆಯಾಗಿದೆ. ಚಾರ್ಜ್‌ಶೀಟ್ ಎದುರಿಸುತ್ತಿರುವವರನ್ನು ಸರ್ಕಾರದ ಉನ್ನತ ಸ್ಥಾನದಲ್ಲಿ ಕೂರಿಸುವುದು ನೈತಿಕತೆಗೆ ದೂರವಾದದ್ದು‌. ​ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಸರ್ಕಾರ ತಕ್ಷಣವೇ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಡಿ.ಕೆ ಶಿವಕುಮಾರ್ ಸಂಪುಟಗಳಲ್ಲಿ ಮಹಿಳಾ ಸಚಿವೆ ಇಲ್ಲದಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ನವರು ಮಹಿಳೆಯರ ಬಗ್ಗೆ ಬಹಳ ಮಾತನಾಡುತ್ತಾರೆ. ಈಗ ಕಾಂಗ್ರೆಸ್ ಬಣ್ಣ ಬದಲಾಗಿದೆ ಗೌರವಯುತಾಗಿರುವ ಮಹಿಳಾ ಸಚಿವರನ್ನ ಸಂಪುಟಕ್ಕೆ ತರುವುದು ಸಿಎಂ ಜವಾಬ್ದಾರಿ ಇತ್ತು, ಆದರೆ ಇದುವರೆಗೂ ಡಿ.ಕೆ ಶಿವಕುಮಾರ್ ಸಂಪುಟಕ್ಕೆ ಮಹಿಳಾ ಸಚಿವೆಯನ್ನು ತೆಗೆದುಕೊಂಡಿಲ್ಲ ಮಹಿಳೆಯರನ್ನು ಹಗುರವಾಗಿ ತೆಗೆದುಕೊಳ್ಳುವುದು ಶೋಭೆ ತರುವುದಿಲ್ಲ ಎಂದು ಹೇಳಿದರು.

ಕಾಂಗ್ರೆಸ್ ಮನಸ್ಥಿತಿ

ಇದೇ ವೇಳೆ ವಂದೆ ಮಾತರಂ ಗೀತೆಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವಮಾನ ಮಾಡಿದ್ದಾರೆ ಎನ್ನುವ ಆರೋಪದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಅವರ ಮೈಂಡ್ ಸೆಟ್ ಏನು ಅಂತ ಗೊತ್ತಾಗಿದೆ. ಮೊದಲಿನಿಂದಲೂ ಅವರು ದೇಶಪ್ರೇಮ, ರಾಷ್ಟ್ರೀಯತೆಯ ವಿಷಯ ಬಂದಾಗ ಅದೇ ರೀತಿ ನಡೆದುಕೊಂಡಿದ್ದಾರೆ. ವಂದೇ ಮಾತರಂ ಗೀತೆಗೆ 150 ವರ್ಷವಾಗಿರುವ ಹಿನ್ನೆಲೆಯಲ್ಲಿ ಈಗ ಅದನ್ನು ಅಧಿಕೃತ ರಾಷ್ಟ್ರೀಯ ಗೀತೆಯನ್ನಾಗಿ ಮಾಡಲಾಗಿದೆ. ಅದಕ್ಕೆ ಅವಮಾನ ಮಾಡುವುದು ಅವರ ಮನಸ್ಥಿತಿಯನ್ನು ತೋರಿಸುತ್ತದೆ. ಆ ರೀತಿ ಮಾಡಿರುವುದು ಅಪರಾಧ ಎಂದು ಹೇಳಿದರು.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಬೃಹತ್

ಜಾಗತಿಕ ಆರ್ಥಿಕ ಶಕ್ತಿಯಾಗಿ ಭಾರತ: ಯುಎಇ-ಜಪಾನ್‌ನಿಂದ ಬೃಹತ್ ಹೂಡಿಕೆಗೆ ಪ್ಲಾನ್

by Hemanth Kumar S
October 4, 2026 - 1:49 pm
0

Untitled design 2026 10 04T132219.453

ವೀಕೆಂಡ್‌ನಲ್ಲಿ ಬಂಗಾರ ಖರೀದಿಸುವವರಿಗೆ ಗುಡ್‌ನ್ಯೂಸ್: ಚಿನ್ನದ ಬೆಲೆ ಮತ್ತೆ ಇಳಿಕೆ

by ಶಾಲಿನಿ ಕೆ. ಡಿ
October 4, 2026 - 1:23 pm
0

Untitled design 2026 10 04T124216.938

‘ಸುಂಟರಗಾಳಿ’ ಚಿತ್ರದಲ್ಲಿ ಲೇಡಿ ವಿಲನ್ ಆಗಿ ಮಿಂಚಿದ್ದ ಲಲಿತಮ್ಮ ನಿಧನ

by ಶಾಲಿನಿ ಕೆ. ಡಿ
October 4, 2026 - 12:46 pm
0

Untitled design 2026 10 04T121053.471

ಭಾರತೀಯ ಪೈಲಟ್ ಸ್ಮಿತ್ ಮಚ್ಚರ್‌ಗೆ ಇಸ್ರೇಲ್ ಗೌರವ: ಸ್ವಾತಂತ್ರ್ಯ ದಿನಾಚರಣೆಗೆ ನೆತನ್ಯಾಹು ಆಹ್ವಾನ

by ಶಾಲಿನಿ ಕೆ. ಡಿ
October 4, 2026 - 12:15 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 04T112652.449
    ಕರಾವಳಿ, ದಕ್ಷಿಣ ಒಳನಾಡಿಗೆ ಮಳೆ ಸಾಧ್ಯತೆ: ಬಳ್ಳಾರಿ ಸೇರಿ 4 ಜಿಲ್ಲೆಗಳಲ್ಲಿ ಒಣಹವೆ
    October 4, 2026 | 0
  • Your paragraph text 2026 10 03T165918.077
    ದಸರಾ ಆರಂಭದಲ್ಲೇ ಮುರಿದು ಬಿದ್ದ ದೀಪಾಲಂಕಾರ ಕಟೌಟ್
    October 3, 2026 | 0
  • Your paragraph text 2026 10 03T132415.559
    ರಾಜ್ಯಕ್ಕೆ 3705.30 ಕೋಟಿ ರೂ. ಬರ ಪರಿಹಾರ ನೀಡಿ: ಸಿಎಂ ಡಿ.ಕೆ ಶಿವಕುಮಾರ್
    October 3, 2026 | 0
  • ರಸ್ತೆ ಅಪಘಾತದಲ್ಲಿ ಯುವಕ ಸಾವು (1)
    ರಸ್ತೆ ಅಪಘಾತದಿಂದ ಬ್ರೈನ್ ಡೆಡ್: ಮಗನ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು
    October 3, 2026 | 0
  • Untitled design 2026 10 03T103450.867
    ಕರ್ನಾಟಕದ ಕರಾವಳಿ, ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ
    October 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version