• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

ಬಿಗ್ ಬಾಸ್ ಶೋ ಅನುಮತಿಗಾಗಿ ಯಾವುದೇ ಅರ್ಜಿ ಸಲ್ಲಿಕೆಯಾಗಿಲ್ಲ; ಡಿಸಿ ಸ್ಪಷ್ಟನೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 1, 2026 - 6:51 pm
in ಬಿಗ್ ಬಾಸ್
0 0
0
Your paragraph text (58)

ಬೆಂಗಳೂರು: ಬಹುನಿರೀಕ್ಷಿತ ‘ಬಿಗ್ ಬಾಸ್ ಕನ್ನಡ ಸೀಸನ್ 13’ ರಿಯಾಲಿಟಿ ಶೋ ಆರಂಭಕ್ಕೂ ಮುನ್ನವೇ ಹೊಸದೊಂದು ಗೊಂದಲ ಎದುರಾಗಿದೆ. ಬಿಡದಿ ಕೈಗಾರಿಕಾ ಪ್ರದೇಶದಲ್ಲಿರುವ ಜಾಲಿವುಡ್ ಸ್ಟುಡಿಯೋಸ್‌ನಲ್ಲಿ ಕಾರ್ಯಕ್ರಮಕ್ಕಾಗಿ ಭರ್ಜರಿ ಸೆಟ್ ನಿರ್ಮಾಣವಾಗಿದ್ದರೂ, ಶೋ ನಡೆಸಲು ಅಗತ್ಯವಿರುವ ಅನುಮತಿಗಾಗಿ ಜಿಲ್ಲಾಡಳಿತಕ್ಕೆ ಯಾವುದೇ ಅರ್ಜಿ ಸಲ್ಲಿಕೆಯಾಗಿಲ್ಲ ಎಂದು ಬೆಂಗಳೂರು ದಕ್ಷಿಣ ಜಿಲ್ಲಾಧಿಕಾರಿ ಯಶವಂತ್ ಗುರುಕರ್ ತಿಳಿಸಿದ್ದಾರೆ. ಹೀಗಾಗಿ ಸೆಪ್ಟೆಂಬರ್ 6ರಂದು ನಿಗದಿಯಂತೆ ಬಿಗ್ ಬಾಸ್ ಕನ್ನಡ ಸೀಸನ್ 13 ಆರಂಭವಾಗುತ್ತದೆಯೇ ಎಂಬ ಪ್ರಶ್ನೆ ಇದೀಗ ಮೂಡಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 13’ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಕಾರ್ಯಕ್ರಮದ ಪ್ರೋಮೋಗಳು ಈಗಾಗಲೇ ಪ್ರಸಾರವಾಗುತ್ತಿದ್ದು, ಸೆಪ್ಟೆಂಬರ್ 6ರಿಂದ ಶೋ ಆರಂಭವಾಗಲಿದೆ ಎಂದು ಕಲರ್ಸ್ ಕನ್ನಡ ವಾಹಿನಿ ಘೋಷಿಸಿದೆ. ಕನ್ನಡ ಮಾತ್ರವಲ್ಲದೆ ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳ ಬಿಗ್ ಬಾಸ್ ಕಾರ್ಯಕ್ರಮಗಳೂ ಇದೇ ಅವಧಿಯಲ್ಲಿ ಆರಂಭವಾಗುವ ನಿರೀಕ್ಷೆಯಿದೆ.

RelatedPosts

ಬಿಗ್ ಬಾಸ್: ನಾಲ್ವರು ಸೂಪರ್‌ಸ್ಟಾರ್‌ಗಳನ್ನು ಒಂದೇ ಪರದೆಯಲ್ಲಿ ಕರೆತಂದ JioStar

‘ಬಿಗ್ ಬಾಸ್ ಅಗ್ನಿಪರೀಕ್ಷೆ’ ವೀಕ್ಷಿಸಿ, ಪಾಯಿಂಟ್ಸ್ ಗೆಲ್ಲಿ: ಬಿಗ್ ಬಾಸ್ ಮನೆ ಅತಿಥಿಯಾಗುವ ಅವಕಾಶ ಗಳಿಸಿ!

ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳ ಆಯ್ಕೆ ವೀಕ್ಷಕರ ಕೈಯಲ್ಲಿ; ವೋಟಿಂಗ್ ಆರಂಭ

ಬಿಗ್‌ಬಾಸ್ ಸೀಸನ್ 13ಕ್ಕೆ ಕೌಂಟ್‌ಡೌನ್: ಪೈಲಟ್ ಅವತಾರದಲ್ಲಿ ಕಿಚ್ಚ ಸುದೀಪ್

ADVERTISEMENT
ADVERTISEMENT

ಆದರೆ, ಬಿಗ್ ಬಾಸ್ ಕನ್ನಡ ಕಾರ್ಯಕ್ರಮ ನಡೆಯಲಿರುವ ಬಿಡದಿಯ ಜಾಲಿವುಡ್ ಸ್ಟುಡಿಯೋಸ್‌ಗೆ ಸಂಬಂಧಿಸಿದಂತೆ ಅಗತ್ಯ ಅನುಮತಿಗಳ ವಿಚಾರದಲ್ಲಿ ಇನ್ನೂ ಸ್ಪಷ್ಟತೆ ಮೂಡಿಲ್ಲ. ಕಾರ್ಯಕ್ರಮ ನಡೆಸಲು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯಿಂದ ಅಗತ್ಯ ಅನುಮತಿಗಳನ್ನು ಪಡೆಯಬೇಕಿದ್ದು, ಈ ಸಂಬಂಧ ಜಿಲ್ಲಾಡಳಿತಕ್ಕೆ ಯಾವುದೇ ಅರ್ಜಿ ಬಂದಿಲ್ಲ ಎಂದು ಜಿಲ್ಲಾಧಿಕಾರಿ ಯಶವಂತ್ ಗುರುಕರ್ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು, “ಜಿಲ್ಲಾಡಳಿತಕ್ಕೆ ಯಾವುದೇ ರೀತಿಯ ಅರ್ಜಿ ಬಂದಿಲ್ಲ. ಅರ್ಜಿ ಬಂದ ಬಳಿಕ ನಿಯಮಾನುಸಾರ ಕ್ರಮ ಕೈಗೊಳ್ಳುತ್ತೇವೆ” ಎಂದು ಹೇಳಿದ್ದಾರೆ. ಹೀಗಾಗಿ ಶೋ ಆಯೋಜಕರು ಅನುಮತಿಗಾಗಿ ಅರ್ಜಿ ಸಲ್ಲಿಸಿದ ನಂತರವಷ್ಟೇ ಸಂಬಂಧಪಟ್ಟ ನಿಯಮಗಳು ಮತ್ತು ಷರತ್ತುಗಳನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಇನ್ನು ಪರಿಸರ ಇಲಾಖೆಯ ಅನುಮತಿ ವಿಚಾರವೂ ಈ ಬೆಳವಣಿಗೆಯಲ್ಲಿ ಪ್ರಮುಖವಾಗಿದೆ. ಜಾಲಿವುಡ್ ಸ್ಟುಡಿಯೋಸ್ ವತಿಯಿಂದ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ‘ಕನ್ಸೆಂಟ್ ಫಾರ್ ಎಸ್ಟಾಬ್ಲಿಷ್‌ಮೆಂಟ್’ಗೆ ಅರ್ಜಿ ಸಲ್ಲಿಸಲಾಗಿದೆ. ಈ ಅನುಮೋದನೆ ಮಂಡಳಿಯ ಮಟ್ಟದಲ್ಲಿ ಇನ್ನೂ ಬಾಕಿ ಇದೆ ಎಂದು ಪರಿಸರ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮಾಲಿನ್ಯ ನಿಯಂತ್ರಣ ಮಂಡಳಿ ನೀಡುವ ಸೂಚನೆಗಳ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ. ಅಂದರೆ, ಸ್ಟುಡಿಯೋಗೆ ಸಂಬಂಧಿಸಿದ ಕೆಲವು ಪರಿಸರ ಅನುಮತಿ ಪ್ರಕ್ರಿಯೆಗಳು ನಡೆಯುತ್ತಿದ್ದು, ಇದೇ ವೇಳೆ ಬಿಗ್ ಬಾಸ್ ಶೋ ನಡೆಸಲು ಬೇಕಾದ ಜಿಲ್ಲಾಡಳಿತದ ಅನುಮತಿಗೆ ಪ್ರತ್ಯೇಕವಾಗಿ ಅರ್ಜಿ ಸಲ್ಲಿಕೆಯಾಗಬೇಕಿದೆ.

ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅರಣ್ಯ ಸಚಿವ ರಾಮಲಿಂಗಾ ರೆಡ್ಡಿ ಕೂಡ ಪ್ರತಿಕ್ರಿಯಿಸಿದ್ದಾರೆ. ಬಿಗ್ ಬಾಸ್‌ನಂತಹ ರಿಯಾಲಿಟಿ ಶೋ ನಡೆಸಲು ಅಗತ್ಯ ಅನುಮತಿ ಕಡ್ಡಾಯವಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

“ಅರ್ಜಿಯಲ್ಲಿ ನೀಡಿರುವ ಮಾಹಿತಿಯ ಆಧಾರದಲ್ಲಿ ಪರಿಶೀಲನೆ ನಡೆಸಲಾಗುವುದು. ಅರ್ಜಿಯಲ್ಲಿರುವ ಅಂಶಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಬಳಿಕ ಅನುಮತಿ ನೀಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಬಿಗ್ ಬಾಸ್ ಶೋಗೆ ಅವಕಾಶ ಕಲ್ಪಿಸುವ ಕುರಿತು ಅಗತ್ಯ ಕ್ರಮ ಕೈಗೊಳ್ಳುತ್ತೇವೆ” ಎಂದು ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.

ಸದ್ಯ ಜಾಲಿವುಡ್ ಸ್ಟುಡಿಯೋಸ್‌ನಲ್ಲಿ ಬಿಗ್ ಬಾಸ್ ಕನ್ನಡ ಸೀಸನ್ 13ರ ಸೆಟ್ ನಿರ್ಮಾಣದ ಕೆಲಸಗಳು ಪೂರ್ಣಗೊಂಡಿವೆ. ಕಾರ್ಯಕ್ರಮದ ಸ್ಪರ್ಧಿಗಳು ಯಾರು, ಈ ಬಾರಿಯ ಮನೆ ಹೇಗಿರಲಿದೆ ಮತ್ತು ಹೊಸ ಸೀಸನ್‌ನಲ್ಲಿ ಯಾವ ರೀತಿಯ ಬದಲಾವಣೆಗಳಿರಲಿವೆ ಎಂಬುದರ ಬಗ್ಗೆ ಅಭಿಮಾನಿಗಳಲ್ಲಿ ಸಾಕಷ್ಟು ನಿರೀಕ್ಷೆ ಇದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (61)

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಬೇಟೆ: ₹1.07 ಕೋಟಿ ಮೌಲ್ಯದ ಗಾಂಜಾ ಜಪ್ತಿ

by ಶಾಲಿನಿ ಕೆ. ಡಿ
September 1, 2026 - 7:32 pm
0

Your paragraph text (58)

ಬಿಗ್ ಬಾಸ್ ಶೋ ಅನುಮತಿಗಾಗಿ ಯಾವುದೇ ಅರ್ಜಿ ಸಲ್ಲಿಕೆಯಾಗಿಲ್ಲ; ಡಿಸಿ ಸ್ಪಷ್ಟನೆ

by ಶಾಲಿನಿ ಕೆ. ಡಿ
September 1, 2026 - 6:51 pm
0

Your paragraph text (56)

ದರ್ಶನ್‌ ಭೇಟಿಯಾದ ವಿಜಯಲಕ್ಷ್ಮಿ, ಝೈದ್‌‌ ಖಾನ್‌, ಶಾಸಕ ದರ್ಶನ್‌ ಪುಟ್ಟಣ್ಣಯ್ಯ

by ಶಾಲಿನಿ ಕೆ. ಡಿ
September 1, 2026 - 6:23 pm
0

Your paragraph text (54)

ಯುಪಿಇಎಸ್‌ ಕ್ಯಾಂಪಸ್‌ನಲ್ಲಿ ಅದ್ದೂರಿ ‘ಜೆಮಿನಿ ಡೇ’ ಆಚರಣೆ

by ಶಾಲಿನಿ ಕೆ. ಡಿ
September 1, 2026 - 5:56 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪಶ್ಚಾತ್ತಾಪ (3)
    ಬಿಗ್ ಬಾಸ್: ನಾಲ್ವರು ಸೂಪರ್‌ಸ್ಟಾರ್‌ಗಳನ್ನು ಒಂದೇ ಪರದೆಯಲ್ಲಿ ಕರೆತಂದ JioStar
    August 31, 2026 | 0
  • Untitled design 2026 08 26T134048.314
    ‘ಬಿಗ್ ಬಾಸ್ ಅಗ್ನಿಪರೀಕ್ಷೆ’ ವೀಕ್ಷಿಸಿ, ಪಾಯಿಂಟ್ಸ್ ಗೆಲ್ಲಿ: ಬಿಗ್ ಬಾಸ್ ಮನೆ ಅತಿಥಿಯಾಗುವ ಅವಕಾಶ ಗಳಿಸಿ!
    August 26, 2026 | 0
  • ChatGPT Image Aug 24, 2026, 11 10 43 AM
    ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳ ಆಯ್ಕೆ ವೀಕ್ಷಕರ ಕೈಯಲ್ಲಿ; ವೋಟಿಂಗ್ ಆರಂಭ
    August 24, 2026 | 0
  • ಬೆಂಗಳೂರಿನಲ್ಲಿ ಮಂಗಳಮುಖಿ (6)
    ಬಿಗ್‌ಬಾಸ್ ಸೀಸನ್ 13ಕ್ಕೆ ಕೌಂಟ್‌ಡೌನ್: ಪೈಲಟ್ ಅವತಾರದಲ್ಲಿ ಕಿಚ್ಚ ಸುದೀಪ್
    August 22, 2026 | 0
  • Untitled design 2026 08 21T221141.162
    ಬಿಗ್ ಬಾಸ್ ಕನ್ನಡ 13 ಡೇಟ್ ಫಿಕ್ಸ್; ಸೆ.6ಕ್ಕೆ ಗ್ರ್ಯಾಂಡ್ ಪ್ರೀಮಿಯರ್
    August 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version