• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಸಕ್ಕರೆ ಕೃತಕ ಅಭಾವ ಸೃಷ್ಟಿಸಿದ್ರೆ ಕಠಿಣ ಕ್ರಮ: ವ್ಯಾಪಾರಿಗಳಿಗೆ ಪ್ರಲ್ಹಾದ ಜೋಶಿ ಖಡಕ್ ಎಚ್ಚರಿಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 1, 2026 - 11:06 pm
in ದೇಶ
0 0
0
Your paragraph text (73)

ನವದೆಹಲಿ: ಗಣೇಶ ಹಬ್ಬ ಸೇರಿದಂತೆ ಮುಂದಿನ ಹಬ್ಬದ ಋತುವಿನಲ್ಲಿ ದೇಶಾದ್ಯಂತ ಸಕ್ಕರೆಯ ಕೃತಕ ಅಭಾವ ಸೃಷ್ಟಿಯಾಗದಂತೆ ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಅಕ್ರಮ ದಾಸ್ತಾನು, ಕೃತಕ ಕೊರತೆ ಹಾಗೂ ಬೆಲೆ ಏರಿಕೆಯನ್ನು ತಡೆಯುವ ಉದ್ದೇಶದಿಂದ ಸಕ್ಕರೆ ವಿತರಕರು ಮತ್ತು ವ್ಯಾಪಾರಿಗಳ ದಾಸ್ತಾನು ಮಿತಿಯನ್ನು ಕಡಿತಗೊಳಿಸಲಾಗಿದೆ. ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಈ ಕುರಿತು ಮಾಹಿತಿ ನೀಡಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಕೇಂದ್ರ ಸರ್ಕಾರದ ಹೊಸ ನಿರ್ಧಾರದಂತೆ ಸೆಪ್ಟೆಂಬರ್ 15ರಿಂದ ದೇಶದ ಬಹುತೇಕ ಭಾಗಗಳಲ್ಲಿ ಸಕ್ಕರೆ ವಿತರಕರ ಗರಿಷ್ಠ ದಾಸ್ತಾನು ಮಿತಿಯನ್ನು 4,000 ಕ್ವಿಂಟಲ್‌ನಿಂದ 2,000 ಕ್ವಿಂಟಲ್‌ಗೆ ಇಳಿಸಲಾಗಿದೆ. ಈ ಮಿತಿ ನವೆಂಬರ್ 30ರವರೆಗೆ ಜಾರಿಯಲ್ಲಿರಲಿದೆ. ಹೀಗಾಗಿ ಸಕ್ಕರೆ ವ್ಯಾಪಾರಿಗಳು ನಿಗದಿತ ಮಿತಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಸಕ್ಕರೆ ಸಂಗ್ರಹಿಸಿಡಲು ಅವಕಾಶ ಇರುವುದಿಲ್ಲ.

RelatedPosts

ಪಾಕಿಸ್ತಾನಕ್ಕೆ ಶಾಕ್; ಸಿಂಧೂ ಜಲ ಒಪ್ಪಂದದ ತೀರ್ಪು ಒಪ್ಪಲ್ಲ ಎಂದ ಭಾರತ

ಗ್ರೂಪ್ ಫೋಟೋದಿಂದ ಪ್ರಧಾನಿ ಮೋದಿ ಫೋಟೋ ಕ್ರಾಪ್ ಮಾಡಿದ ಪಾಕಿಸ್ತಾನ

ಕೇಂದ್ರ ಸಚಿವ ಚಿರಾಗ್ ಪಾಸ್ವಾನ್‌ಗೆ ಕೊ*ಲೆ ಬೆದರಿಕೆ

ಮಮತಾ ಬ್ಯಾನರ್ಜಿ ಸೋದರ ಸಂಬಂಧಿ ಪುತ್ರಿ ಬೃಷ್ಟಿ ಮುಖರ್ಜಿ ಶವವಾಗಿ ಪತ್ತೆ

ADVERTISEMENT
ADVERTISEMENT

ಅಷ್ಟೇ ಅಲ್ಲ, ವ್ಯಾಪಾರಿಗಳು ಸಕ್ಕರೆ ದಾಸ್ತಾನು ಸ್ವೀಕರಿಸಿದ ದಿನದಿಂದ 30 ದಿನಗಳಿಗಿಂತ ಹೆಚ್ಚು ಕಾಲ ಅದನ್ನು ಇಟ್ಟುಕೊಳ್ಳಬಾರದು ಎಂಬ ನಿಯಮವನ್ನೂ ಜಾರಿಗೆ ತರಲಾಗಿದೆ. ದೇಶದ ಯಾವುದೇ ಸ್ಥಳದಲ್ಲಿ ಯಾವುದೇ ಸಮಯದಲ್ಲಿ 2,000 ಕ್ವಿಂಟಲ್‌ಗಿಂತ ಹೆಚ್ಚಿನ ಸಕ್ಕರೆ ದಾಸ್ತಾನು ಕಂಡುಬಂದರೆ, ಅಂತಹ ಪ್ರಕರಣಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ಕೋಲ್ಕತ್ತಾಗೆ ಮಾತ್ರ ವಿನಾಯಿತಿ

ದೇಶದ ಬಹುತೇಕ ಪ್ರದೇಶಗಳಿಗೆ 2,000 ಕ್ವಿಂಟಲ್ ದಾಸ್ತಾನು ಮಿತಿ ಅನ್ವಯವಾಗಲಿದ್ದರೂ, ಕೋಲ್ಕತ್ತಾ ಮತ್ತು ಅದರ ವ್ಯಾಪ್ತಿಯ ಮಹಾನಗರ ಪ್ರದೇಶಗಳಿಗೆ ವಿನಾಯಿತಿ ನೀಡಲಾಗಿದೆ. ಇಲ್ಲಿ ಈಗಾಗಲೇ ಜಾರಿಯಲ್ಲಿರುವ 4,000 ಕ್ವಿಂಟಲ್ ದಾಸ್ತಾನು ಮಿತಿಯೇ ಮುಂದುವರಿಯಲಿದೆ.

ಕೋಲ್ಕತ್ತಾ ಉತ್ತರ ಪ್ರದೇಶ ಹಾಗೂ ಮಹಾರಾಷ್ಟ್ರ ಸೇರಿದಂತೆ ಪ್ರಮುಖ ಸಕ್ಕರೆ ಉತ್ಪಾದನಾ ರಾಜ್ಯಗಳಿಂದ ಸಕ್ಕರೆ ಪಡೆಯುತ್ತದೆ. ಅಲ್ಲದೆ, ಈಶಾನ್ಯ ಮತ್ತು ಪೂರ್ವ ಭಾರತದ ಹಲವು ಪ್ರದೇಶಗಳಿಗೆ ಸಕ್ಕರೆ ಪೂರೈಕೆಯ ಪ್ರಮುಖ ಕೇಂದ್ರವಾಗಿರುವ ಹಿನ್ನೆಲೆಯಲ್ಲಿ ಕೋಲ್ಕತ್ತಾಗೆ ಪ್ರತ್ಯೇಕ ಮಿತಿ ಮುಂದುವರಿಸಲಾಗಿದೆ ಎಂದು ಪ್ರಲ್ಹಾದ ಜೋಶಿ ವಿವರಿಸಿದ್ದಾರೆ.

ವ್ಯಾಪಾರಿಗಳ ಮೇಲೆ ಸರ್ಕಾರದ ನಿಗಾ

ಸಕ್ಕರೆ ಕಾರ್ಖಾನೆಗಳು, ಡೀಲರ್‌ಗಳು, ವಿತರಕರು ಮತ್ತು ವ್ಯಾಪಾರಿಗಳ ದಾಸ್ತಾನುಗಳ ಮೇಲೆ ಕೇಂದ್ರ ಸರ್ಕಾರ ನಿರಂತರ ನಿಗಾ ಇರಿಸಿದೆ. ಸಕ್ಕರೆ ಮಾರುಕಟ್ಟೆಯಲ್ಲಿ ಕೃತಕ ಕೊರತೆ ಅಥವಾ ಅಕ್ರಮ ದಾಸ್ತಾನು ನಡೆಯದಂತೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಮುಂದಿನ ದಿನಗಳಲ್ಲೂ ಈ ಮೇಲ್ವಿಚಾರಣೆ ಮತ್ತು ತಪಾಸಣೆ ಮುಂದುವರಿಯಲಿದೆ ಎಂದು ಸಚಿವರು ತಿಳಿಸಿದ್ದಾರೆ.

ಸಕ್ಕರೆ ದಾಸ್ತಾನು ಕುರಿತು ಮಾಹಿತಿ ಸಂಗ್ರಹಿಸಲು ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯ ಆನ್‌ಲೈನ್ ಪೋರ್ಟಲ್ ಮೂಲಕ ದಾಸ್ತಾನು ಘೋಷಣೆ ಮತ್ತು ನಿಯಮಿತ ನವೀಕರಣದ ವ್ಯವಸ್ಥೆಯನ್ನೂ ಜಾರಿಗೆ ತರಲಾಗಿದೆ. ಇದರಿಂದ ಮಾರುಕಟ್ಟೆಯಲ್ಲಿ ಲಭ್ಯವಿರುವ ಸಕ್ಕರೆ ಪ್ರಮಾಣದ ಬಗ್ಗೆ ಸರ್ಕಾರಕ್ಕೆ ನಿಖರ ಮಾಹಿತಿ ದೊರೆಯಲಿದೆ.

ಬೆಲೆಯಲ್ಲಿ ಇಳಿಕೆ

ಕೇಂದ್ರ ಸರ್ಕಾರದ ಕ್ರಮಗಳ ಪರಿಣಾಮವಾಗಿ ಇತ್ತೀಚಿನ ದಿನಗಳಲ್ಲಿ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯಲ್ಲಿ ಸುಮಾರು 20 ಪ್ರತಿಶತದಷ್ಟು ಇಳಿಕೆ ಕಂಡುಬಂದಿದೆ ಎಂದು ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ. ಚಿಲ್ಲರೆ ಮಾರುಕಟ್ಟೆಯಲ್ಲಿಯೂ ಬೆಲೆ ಇಳಿಕೆಯ ಪ್ರವೃತ್ತಿ ಮುಂದುವರಿದಿದ್ದು, ಎಕ್ಸ್-ಮಿಲ್ ಬೆಲೆಗಳಲ್ಲೂ ಮತ್ತಷ್ಟು ಕಡಿತವಾಗುವ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ.

ಹಬ್ಬದ ಸಮಯದಲ್ಲಿ ಸಕ್ಕರೆಗೆ ಬೇಡಿಕೆ ಹೆಚ್ಚಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸರ್ಕಾರ ಮುನ್ನೆಚ್ಚರಿಕಾ ಕ್ರಮವಾಗಿ ದಾಸ್ತಾನು ಮಿತಿಯನ್ನು ಕಡಿಮೆ ಮಾಡಿದೆ. ಸಾಮಾನ್ಯ ಗ್ರಾಹಕರಿಗೆ ಸಕ್ಕರೆ ಸುಲಭವಾಗಿ ಮತ್ತು ಸಮರ್ಪಕವಾಗಿ ಲಭ್ಯವಾಗುವಂತೆ ನೋಡಿಕೊಳ್ಳುವುದು ಸರ್ಕಾರದ ಪ್ರಮುಖ ಉದ್ದೇಶವಾಗಿದೆ.

ಕೃತಕ ಅಭಾವ ಸೃಷ್ಟಿಸಿದರೆ ಕಠಿಣ ಕ್ರಮ

ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆಯ ಸಮರ್ಪಕ ಲಭ್ಯತೆ, ನಿರಂತರ ಪೂರೈಕೆ ಹಾಗೂ ಬೆಲೆ ಸ್ಥಿರತೆ ಕಾಪಾಡಲು ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಸಚಿವರು ಹೇಳಿದ್ದಾರೆ.

ನೈಜ ವ್ಯಾಪಾರ ಮತ್ತು ವಿತರಣಾ ವ್ಯವಸ್ಥೆಗೆ ಯಾವುದೇ ಅಡ್ಡಿಯಾಗುವುದಿಲ್ಲ. ಆದರೆ, ಉದ್ದೇಶಪೂರ್ವಕವಾಗಿ ಸಕ್ಕರೆ ದಾಸ್ತಾನು ಮಾಡಿ ಕೃತಕ ಅಭಾವ ಸೃಷ್ಟಿಸುವುದು, ಬೆಲೆ ಹೆಚ್ಚಿಸಲು ಪ್ರಯತ್ನಿಸುವುದು ಅಥವಾ ನಿಗದಿತ ಮಿತಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಸಕ್ಕರೆ ಸಂಗ್ರಹಿಸುವುದು ಕಂಡುಬಂದರೆ ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಪ್ರಲ್ಹಾದ ಜೋಶಿ ಖಡಕ್ ಎಚ್ಚರಿಕೆ ನೀಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

WhatsApp Image 2026 09 01 at 12.57.54 PM

₹2 ಕೋಟಿ ಸಿನಿಮಾ..₹50 ಕೋಟಿ ಕಲೆಕ್ಷನ್! ಸದ್ದಿಲ್ಲದೆ ಬಾಕ್ಸಾಫೀಸ್ ಶೇಕ್ ಮಾಡಿದ ‘ಹನುಮಾನ್ ಅಂಶ್’

by ಶಾಲಿನಿ ಕೆ. ಡಿ
September 1, 2026 - 11:30 pm
0

Your paragraph text (75)

ಐಸ್‌ಕ್ರೀಮ್ ಮಾರುಕಟ್ಟೆಗೆ ಎಂಟ್ರಿ ಕೊಟ್ಟ ರಿಲಯನ್ಸ್; ಜಸ್ಟ್ 10 ರೂ.ಗೆ ಸಿಗಲಿದೆ ‘ಬಾಂಬೆ ಕ್ರೀಮರಿ’

by ಶಾಲಿನಿ ಕೆ. ಡಿ
September 1, 2026 - 11:25 pm
0

ChatGPT Image Sep 1, 2026, 01 00 51 PM

ಪಾಕಿಸ್ತಾನಕ್ಕೆ ಶಾಕ್; ಸಿಂಧೂ ಜಲ ಒಪ್ಪಂದದ ತೀರ್ಪು ಒಪ್ಪಲ್ಲ ಎಂದ ಭಾರತ

by ಶಾಲಿನಿ ಕೆ. ಡಿ
September 1, 2026 - 11:09 pm
0

Image 188618c5

ಭಾರತದ ಟೆಕ್ಕಿಗಳಿಗೆ ಬಿಗ್ ಶಾಕ್? Oracle, Microsoftನಲ್ಲಿ ಲೇ ಆಫ್ ಭೀತಿ!

by ಶಾಲಿನಿ ಕೆ. ಡಿ
September 1, 2026 - 11:06 pm
0

ಸಂಬಂಧಿಸಿದ ಪೋಸ್ಟ್‌ಗಳು

  • ChatGPT Image Sep 1, 2026, 01 00 51 PM
    ಪಾಕಿಸ್ತಾನಕ್ಕೆ ಶಾಕ್; ಸಿಂಧೂ ಜಲ ಒಪ್ಪಂದದ ತೀರ್ಪು ಒಪ್ಪಲ್ಲ ಎಂದ ಭಾರತ
    September 1, 2026 | 0
  • Your paragraph text (71)
    ಗ್ರೂಪ್ ಫೋಟೋದಿಂದ ಪ್ರಧಾನಿ ಮೋದಿ ಫೋಟೋ ಕ್ರಾಪ್ ಮಾಡಿದ ಪಾಕಿಸ್ತಾನ
    September 1, 2026 | 0
  • Your paragraph text (70)
    ಕೇಂದ್ರ ಸಚಿವ ಚಿರಾಗ್ ಪಾಸ್ವಾನ್‌ಗೆ ಕೊ*ಲೆ ಬೆದರಿಕೆ
    September 1, 2026 | 0
  • ಬೃಷ್ಟಿ
    ಮಮತಾ ಬ್ಯಾನರ್ಜಿ ಸೋದರ ಸಂಬಂಧಿ ಪುತ್ರಿ ಬೃಷ್ಟಿ ಮುಖರ್ಜಿ ಶವವಾಗಿ ಪತ್ತೆ
    September 1, 2026 | 0
  • ChatGPT Image Sep 1, 2026, 04 43 46 PM
    ಸೋನಿಯಾ ಗಾಂಧಿ ಆತ್ಮಕತೆ ವಿವಾದ: ‘ಯಾವುದೇ ಬಾಹ್ಯ ಒತ್ತಡವಿಲ್ಲ’ ಎಂದ ಪೆಂಗ್ವಿನ್
    September 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version