• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್: ರಾಜ್ಯದ ಹಲವೆಡೆ ಲೋಕಾ ರೇಡ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 22, 2026 - 10:19 am
in ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2026 09 22T101836.130

ಬೆಂಗಳೂರು: ರಾಜ್ಯದ ಹಲವೆಡೆ ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ಕಾರ್ಯಾಚರಣೆ ನಡೆಸಿದ್ದು, ಹಲವು ಸರ್ಕಾರಿ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪ, ಅಕ್ರಮ ಆಸ್ತಿ ಸಂಪಾದನೆ ಹಾಗೂ ಲಂಚ ಸ್ವೀಕಾರದ ಆರೋಪಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳ ಮನೆ, ಫಾರ್ಮ್‌ಹೌಸ್‌ ಮತ್ತು ಸರ್ಕಾರಿ ಕಚೇರಿಗಳಲ್ಲಿ ದಾಖಲೆಗಳ ಪರಿಶೀಲನೆ ನಡೆದಿದೆ. ಕಲಬುರಗಿ, ಬೀದರ್, ಚಿತ್ರದುರ್ಗ, ಹುಬ್ಬಳ್ಳಿ-ಧಾರವಾಡ, ಬೆಂಗಳೂರು ಹಾಗೂ ಮಂಡ್ಯ ಸೇರಿದಂತೆ ವಿವಿಧೆಡೆ ಲೋಕಾಯುಕ್ತ ತಂಡಗಳು ಕಾರ್ಯಾಚರಣೆ ನಡೆಸಿವೆ.

ಕಲಬುರಗಿಯಲ್ಲಿ ಜೆಸ್ಕಾಂ AEE ಮನೆ ಮೇಲೆ ರೇಡ್

ಕಲಬುರಗಿಯಲ್ಲಿ ಜೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ರಾಜೇಶ್ವರಿ ಬಬಲಾದ್ ಅವರಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಆದಾಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಆಸ್ತಿ ಗಳಿಸಿದ್ದಾರೆ ಎಂಬ ದೂರಿನ ಹಿನ್ನೆಲೆ ದಾಳಿ ನಡೆಸಲಾಗಿದೆ.

RelatedPosts

ರಾಯಚೂರಿನಲ್ಲಿ ಮಹಿಳೆ ಹತ್ಯೆ ಕೇಸ್: ಪ್ರಿಯಕರ ಸೇರಿ ಇಬ್ಬರ ಬಂಧನ

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಕೋಟ್ಯಂತರ ಮೌಲ್ಯದ ಡ್ರಗ್ಸ್-ಚಿನ್ನ ಸೀಜ್

ಬೀದರ್‌ನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ರೇಡ್‌; ನಿವೃತ್ತ ಕೃಷಿ ಅಧಿಕಾರಿ ಮನೆ ಮೇಲೆ ದಾಳಿ

ದಸರಾದಲ್ಲಿ ಕಂಬಳ ಬೇಡ, ಪ್ರತ್ಯೇಕವಾಗಿ ಆಯೋಜಿಸಿ; ಪ್ರಮೋದಾದೇವಿ ಒಡೆಯರ್

ADVERTISEMENT
ADVERTISEMENT

ನಗರದ ಮಹಾಲಕ್ಷ್ಮಿ ಲೇಔಟ್‌ನಲ್ಲಿರುವ ರಾಜೇಶ್ವರಿ ಅವರ ನಿವಾಸ ಹಾಗೂ ಖಾದ್ರಿ ಚೌಕ್‌ನಲ್ಲಿರುವ ಮತ್ತೊಂದು ಮನೆಯ ಮೇಲೆ ಏಕಕಾಲದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇದರ ಜೊತೆಗೆ ಅವರು ಕಾರ್ಯನಿರ್ವಹಿಸುತ್ತಿರುವ ಜೆಸ್ಕಾಂ ಕಚೇರಿಯಲ್ಲೂ ಪರಿಶೀಲನೆ ನಡೆದಿದೆ.

ಲೋಕಾಯುಕ್ತ ಎಸ್‌ಪಿ ಸಿದ್ದರಾಜು ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಮನೆ ಹಾಗೂ ಕಚೇರಿಯಲ್ಲಿದ್ದ ದಾಖಲೆಗಳು, ಆಸ್ತಿ ವಿವರಗಳು ಮತ್ತು ಇತರ ಮಾಹಿತಿಗಳನ್ನು ಅಧಿಕಾರಿಗಳು ಪರಿಶೀಲಿಸಿದ್ದಾರೆ. ಬೆಳಗ್ಗೆ ವಾಕಿಂಗ್‌ಗೆ ತೆರಳಿದ್ದ ಅಧಿಕಾರಿಯೊಬ್ಬರು ಮನೆಗೆ ಮರಳುವಷ್ಟರಲ್ಲಿ ಲೋಕಾಯುಕ್ತ ತಂಡ ದಾಳಿ ನಡೆಸಿತ್ತು ಎನ್ನಲಾಗಿದೆ.

ಬೀದರ್‌ನಲ್ಲೂ ನಿವೃತ್ತ ಅಧಿಕಾರಿಗೆ ಲೋಕಾ ಶಾಕ್

ಬೀದರ್‌ನಲ್ಲೂ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ ಕಾರ್ಯಾಚರಣೆ ನಡೆಸಿದ್ದಾರೆ. ಇತ್ತೀಚೆಗಷ್ಟೇ ಸೇವೆಯಿಂದ ನಿವೃತ್ತರಾಗಿರುವ ಕೃಷಿ ಇಲಾಖೆಯ ಮಾಜಿ ಅಧಿಕಾರಿ ಮಾಣಿಕರಾವ್ ಶೇರಿಕಾರ್ ಅವರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ದಾಳಿ ನಡೆದಿದೆ.

ಬೀದರ್ ನಗರದ ಹಕ್ಕ್ ಕಾಲೋನಿಯಲ್ಲಿರುವ ಮನೆ, ಚಿಟಗುಪ್ಪಾ ತಾಲೂಕಿನ ಮುತ್ತಂಗಿ ಗ್ರಾಮದ ಫಾರ್ಮ್‌ಹೌಸ್ ಹಾಗೂ ಹುಮನಾಬಾದ್‌ನ ಟೀಚರ್ ಕಾಲೋನಿಯಲ್ಲಿರುವ ಮನೆ ಸೇರಿದಂತೆ ಮೂರು ಕಡೆ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ. ಸೇವೆಯಲ್ಲಿದ್ದಾಗ ಅಕ್ರಮ ಆಸ್ತಿ ಗಳಿಕೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದ ದೂರಿನ ಹಿನ್ನೆಲೆ ಈ ಕಾರ್ಯಾಚರಣೆ ನಡೆದಿದೆ ಎನ್ನಲಾಗಿದೆ.

ಲೋಕಾಯುಕ್ತ ಎಸ್‌ಪಿ ಸಿದ್ಧರಾಜು ಹಾಗೂ ಡಿವೈಎಸ್‌ಪಿ ಹನುಮಂತರಾಯ ನೇತೃತ್ವದಲ್ಲಿ ಅಧಿಕಾರಿಗಳು ದಾಖಲೆಗಳು ಮತ್ತು ಆಸ್ತಿ ವಿವರಗಳನ್ನು ಪರಿಶೀಲಿಸಿದ್ದಾರೆ.

ಚಿತ್ರದುರ್ಗದಲ್ಲಿ ₹40 ಸಾವಿರ ಲಂಚ ಪಡೆಯುವಾಗ FDA ಬಲೆಗೆ

ಚಿತ್ರದುರ್ಗದಲ್ಲಿ ಲೋಕಾಯುಕ್ತ ಕಾರ್ಯಾಚರಣೆ ಮತ್ತೊಂದು ಸ್ವರೂಪ ಪಡೆದುಕೊಂಡಿದೆ. ಎಸಿ ಕಚೇರಿಯ ಪ್ರಥಮ ದರ್ಜೆ ಸಹಾಯಕ (FDA) ಬಸವರಾಜ್ ಎಂಬುವವರು ₹40 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ.

ಕೆಲ್ಲೋಡು ಗ್ರಾಮದ ಹನುಮಂತಪ್ಪ ಎಂಬುವವರ ಜಮೀನಿನ ಪಹಣಿ ತಿದ್ದುಪಡಿಗೆ ಸಂಬಂಧಿಸಿದಂತೆ ₹40 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂಬ ಆರೋಪ ಕೇಳಿಬಂದಿತ್ತು. ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅವರನ್ನು ವಶಕ್ಕೆ ಪಡೆದಿದ್ದಾರೆ.

ಲೋಕಾಯುಕ್ತ ಎಸ್‌ಪಿ ಕವಲೇಪುರೆ ಹಾಗೂ ಡಿವೈಎಸ್‌ಪಿ ಕಲಾವತಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಎಸಿ ಕಚೇರಿಯಲ್ಲಿನ ದಾಖಲೆಗಳನ್ನೂ ಪರಿಶೀಲಿಸಲಾಗುತ್ತಿದೆ.

ಹುಬ್ಬಳ್ಳಿಯಲ್ಲಿ ಹೆಸ್ಕಾಂ ಅಧಿಕಾರಿಗಳ ಮನೆ-ಕಚೇರಿಗಳ ತಪಾಸಣೆ

ಹುಬ್ಬಳ್ಳಿಯಲ್ಲೂ ಹೆಸ್ಕಾಂ AEE ಕಿರಣ್‌ಕುಮಾರ್ ಬೈಂದೂರ್ ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ಷಯ ಪಾರ್ಕ್‌ನಲ್ಲಿರುವ ಅವರ ನಿವಾಸ ಸೇರಿದಂತೆ ಒಟ್ಟು ನಾಲ್ಕು ಕಡೆ ಏಕಕಾಲದಲ್ಲಿ ಪರಿಶೀಲನೆ ನಡೆದಿದೆ.

ಕಿರಣ್‌ಕುಮಾರ್ ಅವರ ಕಚೇರಿ, ಅವರ ಸಹೋದರನ ಮನೆ ಹಾಗೂ ಅವರ ಪತ್ನಿ ಪ್ರೀತಿ ಕಾರ್ಯನಿರ್ವಹಿಸುತ್ತಿರುವ ಗೋಪನಕೊಪ್ಪ ಹೆಸ್ಕಾಂ ಕಚೇರಿಯಲ್ಲೂ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸಿದ್ದಾರೆ. ಧಾರವಾಡ ಲೋಕಾಯುಕ್ತ ಎಸ್‌ಪಿ ಸಿದ್ದಲಿಂಗಪ್ಪ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ.

ಬೆಂಗಳೂರಿನಲ್ಲೂ ನಿವೃತ್ತ BBMP AEE ಮನೆ ಮೇಲೆ ದಾಳಿ

ರಾಜಧಾನಿ ಬೆಂಗಳೂರಿನಲ್ಲೂ ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆ ನಡೆದಿದೆ. ನಿವೃತ್ತ BBMP AEE ರಂಗನಾಥ್ ಅವರಿಗೆ ಸಂಬಂಧಿಸಿದ ಸ್ಥಳದಲ್ಲಿ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ. ಬೆಳಗ್ಗೆಯಿಂದಲೇ ದಾಖಲೆಗಳು ಹಾಗೂ ಆಸ್ತಿ ವಿವರಗಳನ್ನು ಅಧಿಕಾರಿಗಳು ಪರಿಶೀಲಿಸಿದ್ದಾರೆ.

ಮಂಡ್ಯದಲ್ಲಿ ನಿವೃತ್ತ ಹಾಸ್ಟೆಲ್ ಅಧೀಕ್ಷಕರ ಮನೆ ಮೇಲೆ ರೇಡ್

ಮಂಡ್ಯದಲ್ಲಿ ನಿವೃತ್ತ ಹಾಸ್ಟೆಲ್ ಅಧೀಕ್ಷಕ ಶಿವರಾಜ್ ಅವರ ಮನೆ ಹಾಗೂ ಫಾರ್ಮ್‌ಹೌಸ್ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಕಳೆದ ತಿಂಗಳಷ್ಟೇ ನಿವೃತ್ತರಾಗಿದ್ದ ಶಿವರಾಜ್, ಹಾಸ್ಟೆಲ್ ಮಕ್ಕಳಿಗೆ ನೀಡಬೇಕಿದ್ದ ಪುಸ್ತಕಗಳು ಹಾಗೂ ಬೆಡ್‌ಶೀಟ್‌ಗಳನ್ನು ಫಾರ್ಮ್‌ಹೌಸ್‌ನಲ್ಲಿ ಇರಿಸಿದ್ದರು ಎಂಬ ಆರೋಪದ ಹಿನ್ನೆಲೆ ಪರಿಶೀಲನೆ ನಡೆದಿದೆ.

ದಾಳಿ ವೇಳೆ ದುಬಾರಿ ಮದ್ಯದ ಬಾಟಲಿಗಳು, ಚಿನ್ನ, ಬೆಳ್ಳಿ ಸೇರಿದಂತೆ ಹಲವು ಬೆಲೆಬಾಳುವ ವಸ್ತುಗಳು ಪತ್ತೆಯಾಗಿವೆ ಎನ್ನಲಾಗಿದೆ. ಲೋಕಾಯುಕ್ತ ಪೊಲೀಸರು ವಸ್ತುಗಳು ಮತ್ತು ದಾಖಲೆಗಳ ಕುರಿತು ಮತ್ತಷ್ಟು ತನಿಖೆ ಮುಂದುವರಿಸಿದ್ದಾರೆ. ಮಂಡ್ಯ ಲೋಕಾಯುಕ್ತ ಎಸ್‌ಪಿ ಹಾಗೂ ಲೋಕಾಯುಕ್ತ ಪೊಲೀಸ್ ಬ್ಯಾಟರಾಯಗೌಡ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 09 22T113826.843

ರಾಯಚೂರಿನಲ್ಲಿ ಮಹಿಳೆ ಹತ್ಯೆ ಕೇಸ್: ಪ್ರಿಯಕರ ಸೇರಿ ಇಬ್ಬರ ಬಂಧನ

by ಶಾಲಿನಿ ಕೆ. ಡಿ
September 22, 2026 - 11:39 am
0

Untitled design 2026 09 22T105056.107

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಕೋಟ್ಯಂತರ ಮೌಲ್ಯದ ಡ್ರಗ್ಸ್-ಚಿನ್ನ ಸೀಜ್

by ಶಾಲಿನಿ ಕೆ. ಡಿ
September 22, 2026 - 10:51 am
0

Untitled design 2026 09 22T103007.137

“ರಾಮರಸ” ಚಿತ್ರದ ಪ್ರಮುಖಪಾತ್ರದಲ್ಲಿ ಅದಾ ಶರ್ಮಾ

by ಶಾಲಿನಿ ಕೆ. ಡಿ
September 22, 2026 - 10:33 am
0

Untitled design 2026 09 22T101836.130

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್: ರಾಜ್ಯದ ಹಲವೆಡೆ ಲೋಕಾ ರೇಡ್

by ಶಾಲಿನಿ ಕೆ. ಡಿ
September 22, 2026 - 10:19 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 22T113826.843
    ರಾಯಚೂರಿನಲ್ಲಿ ಮಹಿಳೆ ಹತ್ಯೆ ಕೇಸ್: ಪ್ರಿಯಕರ ಸೇರಿ ಇಬ್ಬರ ಬಂಧನ
    September 22, 2026 | 0
  • Untitled design 2026 09 22T105056.107
    ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಕೋಟ್ಯಂತರ ಮೌಲ್ಯದ ಡ್ರಗ್ಸ್-ಚಿನ್ನ ಸೀಜ್
    September 22, 2026 | 0
  • Untitled design 2026 09 22T090517.207
    ಬೀದರ್‌ನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ರೇಡ್‌; ನಿವೃತ್ತ ಕೃಷಿ ಅಧಿಕಾರಿ ಮನೆ ಮೇಲೆ ದಾಳಿ
    September 22, 2026 | 0
  • Untitled design 2026 09 22T081700.175
    ದಸರಾದಲ್ಲಿ ಕಂಬಳ ಬೇಡ, ಪ್ರತ್ಯೇಕವಾಗಿ ಆಯೋಜಿಸಿ; ಪ್ರಮೋದಾದೇವಿ ಒಡೆಯರ್
    September 22, 2026 | 0
  • Untitled design 2026 09 22T074207.722
    ಸೆಪ್ಟೆಂಬರ್ 24ರವರೆಗೆ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮಳೆ ಸಾಧ್ಯತೆ
    September 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version