• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಶ್ರೀಲಂಕಾ ವಿರುದ್ಧ ಭಾರತಕ್ಕೆ ಭರ್ಜರಿ ಜಯ: ಮಹಿಳಾ ಕ್ರಿಕೆಟ್‌ ತಂಡಕ್ಕೆ ಮೊದಲ ಚಿನ್ನದ ಪದಕ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 22, 2026 - 2:19 pm
in ಕ್ರೀಡೆ
0 0
0
Your paragraph text 2026 09 22T141731.718

ಟೋಕಿಯೋ: ಭಾರತದ ಕ್ರೀಡಾ ಇತಿಹಾಸದಲ್ಲಿ ಇಂದು ಮತ್ತೊಂದು ಸುವರ್ಣ ದಿನವಾಗಿ ದಾಖಲಾಗಿದೆ. ಜಪಾನ್‌ನ ನಿಸ್ಶಿನ್‌ನ ಕೊರೊಗಿ ಸ್ಪೋರ್ಟ್ಸ್ ಪಾರ್ಕ್‌ನಲ್ಲಿ ನಡೆದ ಏಷ್ಯನ್ ಗೇಮ್ಸ್ ಮಹಿಳಾ ಕ್ರಿಕೆಟ್ ಫೈನಲ್‌ನಲ್ಲಿ ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಭಾರತ ತಂಡ ಶ್ರೀಲಂಕಾವನ್ನು ಬರೋಬ್ಬರಿ 147 ರನ್‌ಗಳಿಂದ ಮಣಿಸಿ ಚಿನ್ನದ ಪದಕಕ್ಕೆ ಮುತ್ತಿಕ್ಕಿದೆ. ಈ ಗೆಲುವಿನೊಂದಿಗೆ 2026ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತ ತನ್ನ ಮೊದಲ ಚಿನ್ನದ ಪದಕವನ್ನು ಗೆದ್ದುಕೊಂಡಿದೆ.

 ಏಷ್ಯನ್ ಗೇಮ್ಸ್ ಮಹಿಳಾ ಕ್ರಿಕೆಟ್‌ನಲ್ಲಿ ಭಾರತ ಸತತ ಎರಡನೇ ಬಾರಿ ಚಿನ್ನದ ಪದಕ ಗೆದ್ದಿದೆ. 2023ರ ಹ್ಯಾಂಗ್‌ಝೌ ಏಷ್ಯನ್ ಗೇಮ್ಸ್‌ನಲ್ಲೂ ಭಾರತವೇ ಚಾಂಪಿಯನ್ ಆಗಿತ್ತು. ಇದೀಗ 2026ರ ಆವೃತ್ತಿಯಲ್ಲೂ ಪ್ರಶಸ್ತಿಯನ್ನು ಉಳಿಸಿಕೊಳ್ಳುವ ಮೂಲಕ ಹರ್ಮನ್‌ಪ್ರೀತ್ ಪಡೆ ತನ್ನ ಚಾಂಪಿಯನ್ ಪಟ್ಟವನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.

RelatedPosts

2026ರ ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನ ಗೆದ್ದ ನಾಯಕಿ ಹರ್ಮನ್‌ಪ್ರೀತ್‌ಗೆ ಭರ್ಜರಿ ಬಹುಮಾನ!

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಮೀರಾಬಾಯಿ ಚಾನುಗೆ ಬೆಳ್ಳಿ ಪದಕ

ಭಾರತ vs ಜಪಾನ್​ ಟಿ20 ಪಂದ್ಯ; ಮೈದಾನದಲ್ಲೇ ಫುಟ್‌ಬಾಲ್ ಆಡಿದ ಟೀಮ್ ಇಂಡಿಯಾ

ಆಸ್ಟ್ರೇಲಿಯಾ ವಿರುದ್ಧ ಭಾರತ ಯುವ ಪಡೆಯ ಅಬ್ಬರ; 103 ರನ್‌ಗಳ ಭರ್ಜರಿ ಗೆಲುವು

ADVERTISEMENT
ADVERTISEMENT
ಸ್ಮೃತಿ-ಶಫಾಲಿ ಭರ್ಜರಿ ಆರಂಭ

ಟಾಸ್ ಗೆದ್ದ ಭಾರತ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಆರಂಭಿಕರಾದ ಸ್ಮೃತಿ ಮಂಧಾನಾ ಮತ್ತು ಶಫಾಲಿ ವರ್ಮಾ ತಂಡಕ್ಕೆ ಸ್ಫೋಟಕ ಆರಂಭ ನೀಡಿದರು. ಇಬ್ಬರೂ ಸೇರಿ ಮೊದಲ ವಿಕೆಟ್‌ಗೆ 99 ರನ್‌ಗಳ ಜೊತೆಯಾಟ ನೀಡಿದ್ದು, ಭಾರತದ ಬೃಹತ್ ಮೊತ್ತಕ್ಕೆ ಭದ್ರ ಅಡಿಪಾಯ ಹಾಕಿತು.

ಶಫಾಲಿ ವರ್ಮಾ 29 ಎಸೆತಗಳಲ್ಲಿ 48 ರನ್ ಸಿಡಿಸಿದರೆ, ಸ್ಮೃತಿ ಮಂಧಾನಾ ಕೇವಲ 45 ಎಸೆತಗಳಲ್ಲಿ 79 ರನ್ ಗಳಿಸಿ ಅಬ್ಬರಿಸಿದರು. ಮಂಧಾನಾ ಅವರ ಇನ್ನಿಂಗ್ಸ್‌ನಲ್ಲಿ 5 ಬೌಂಡರಿ ಹಾಗೂ 7 ಸಿಕ್ಸರ್‌ಗಳು ಸೇರಿದ್ದವು. ಅವರ ಸ್ಫೋಟಕ ಬ್ಯಾಟಿಂಗ್ ಶ್ರೀಲಂಕಾ ಬೌಲರ್‌ಗಳ ಮೇಲೆ ಆರಂಭದಿಂದಲೇ ಒತ್ತಡ ಹೇರಿತು.

ರಿಚಾ ಘೋಷ್ ಸಿಡಿಲಬ್ಬರ

ಆರಂಭಿಕ ಜೋಡಿ ನೀಡಿದ ಭರ್ಜರಿ ಆರಂಭದ ಬಳಿಕ ಮಧ್ಯಮ ಕ್ರಮಾಂಕದಲ್ಲೂ ಭಾರತ ರನ್‌ವೇಗವನ್ನು ಕಡಿಮೆ ಮಾಡಲಿಲ್ಲ. ನಾಯಕಿ ಹರ್ಮನ್‌ಪ್ರೀತ್ ಕೌರ್ 19 ರನ್ ಗಳಿಸಿದರೆ, ವಿಕೆಟ್‌ಕೀಪರ್ ಬ್ಯಾಟರ್ ರಿಚಾ ಘೋಷ್ ಅಂತಿಮ ಹಂತದಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು.

ರಿಚಾ ಘೋಷ್ ಕೇವಲ 22 ಎಸೆತಗಳಲ್ಲಿ ಅಜೇಯ 49 ರನ್ ಸಿಡಿಸಿದರು. ಅವರ ಆಕ್ರಮಣಕಾರಿ ಬ್ಯಾಟಿಂಗ್‌ನ ನೆರವಿನಿಂದ ಭಾರತ 20 ಓವರ್‌ಗಳಲ್ಲಿ 3 ವಿಕೆಟ್‌ಗೆ 216 ರನ್ಗಳ ಬೃಹತ್ ಮೊತ್ತ ಕಲೆಹಾಕಿತು. ಇದು ಏಷ್ಯನ್ ಗೇಮ್ಸ್ ಮಹಿಳಾ ಕ್ರಿಕೆಟ್‌ನಲ್ಲಿ ಭಾರತದ ಅತ್ಯಧಿಕ ತಂಡದ ಮೊತ್ತವಾಗಿಯೂ ದಾಖಲಾಗಿದೆ.

ಲಂಕಾ ಬ್ಯಾಟಿಂಗ್‌ಗೆ ಭಾರತದ ಬೌಲರ್‌ಗಳ ಬ್ರೇಕ್

217 ರನ್‌ಗಳ ಕಠಿಣ ಗುರಿ ಬೆನ್ನತ್ತಿದ ಶ್ರೀಲಂಕಾ ತಂಡಕ್ಕೆ ಆರಂಭದಿಂದಲೇ ಭಾರತದ ಬೌಲರ್‌ಗಳು ಆಘಾತ ನೀಡಿದರು. ಭಾರತದ ಬೌಲಿಂಗ್ ದಾಳಿಗೆ ತತ್ತರಿಸಿದ ಲಂಕಾ ಬ್ಯಾಟರ್‌ಗಳಿಗೆ ದೊಡ್ಡ ಜೊತೆಯಾಟ ಕಟ್ಟಲು ಸಾಧ್ಯವಾಗಲಿಲ್ಲ.

ನಾಯಕಿ ಚಾಮರಿ ಅಟ್ಟಾಪಟ್ಟು 29 ರನ್ ಗಳಿಸಿದ್ದು ಶ್ರೀಲಂಕಾ ಪರ ಗರಿಷ್ಠ ವೈಯಕ್ತಿಕ ಸ್ಕೋರ್ ಆಯಿತು. ಉಳಿದ ಬ್ಯಾಟರ್‌ಗಳು ಭಾರತೀಯ ಬೌಲರ್‌ಗಳ ಸಂಘಟಿತ ದಾಳಿಯನ್ನು ಎದುರಿಸಲು ವಿಫಲರಾದರು.

ಅಂತಿಮವಾಗಿ ಶ್ರೀಲಂಕಾ 15.4 ಓವರ್‌ಗಳಲ್ಲಿ ಕೇವಲ 69 ರನ್‌ಗಳಿಗೆ ಆಲೌಟ್ ಆಯಿತು. ಭಾರತ ಬರೋಬ್ಬರಿ 147 ರನ್‌ಗಳ ಭರ್ಜರಿ ಗೆಲುವು ದಾಖಲಿಸಿತು.

ದೀಪ್ತಿ ಶರ್ಮಾ ಬೌಲಿಂಗ್ ಕಮಾಲ್

ಭಾರತದ ಗೆಲುವಿನಲ್ಲಿ ಬೌಲರ್‌ಗಳ ಪಾತ್ರವೂ ಪ್ರಮುಖವಾಗಿತ್ತು. ದೀಪ್ತಿ ಶರ್ಮಾ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿ 3 ವಿಕೆಟ್ ಕಬಳಿಸಿದರು. ಶಫಾಲಿ ವರ್ಮಾ, ಶ್ರೇಯಾಂಕಾ ಪಾಟೀಲ್ ಮತ್ತು ಶ್ರೀ ಚರಣಿ ತಲಾ 2 ವಿಕೆಟ್ ಪಡೆದು ಶ್ರೀಲಂಕಾ ಬ್ಯಾಟಿಂಗ್ ಪಡೆಯನ್ನು ಕಟ್ಟಿ ಹಾಕಿದರು.

ಬ್ಯಾಟಿಂಗ್‌ನಲ್ಲಿ 216 ರನ್‌ಗಳ ಬೃಹತ್ ಮೊತ್ತ ಕಲೆಹಾಕಿದ ಬಳಿಕ ಬೌಲಿಂಗ್‌ನಲ್ಲೂ ಸಂಪೂರ್ಣ ಹಿಡಿತ ಸಾಧಿಸಿದ ಭಾರತ ಫೈನಲ್ ಪಂದ್ಯವನ್ನು ಏಕಪಕ್ಷೀಯವಾಗಿಸಿತು.

ಭಾರತಕ್ಕೆ ಮೊದಲ ಚಿನ್ನ, ವನಿತೆಯರಿಗೆ ಸತತ ಎರಡನೇ ಗೋಲ್ಡ್

2026ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಹಲವು ಪದಕಗಳಿಗಾಗಿ ಸ್ಪರ್ಧಿಸುತ್ತಿದ್ದರೂ, ಚಿನ್ನದ ಖಾತೆ ತೆರೆದಿರಲಿಲ್ಲ. ಇದೀಗ ಮಹಿಳಾ ಕ್ರಿಕೆಟ್ ತಂಡ ಆ ಕಾಯುವಿಕೆಗೆ ತೆರೆ ಎಳೆದಿದೆ. ಶ್ರೀಲಂಕಾ ವಿರುದ್ಧದ 147 ರನ್‌ಗಳ ಗೆಲುವಿನೊಂದಿಗೆ ಭಾರತಕ್ಕೆ ಟೂರ್ನಿಯ ಮೊದಲ ಚಿನ್ನದ ಪದಕ ಒಲಿದುಬಂದಿದೆ.

2023ರ ಹ್ಯಾಂಗ್‌ಝೌ ಆವೃತ್ತಿಯಲ್ಲಿ ಮೊದಲ ಬಾರಿಗೆ ಮಹಿಳಾ ಕ್ರಿಕೆಟ್ ಚಿನ್ನ ಗೆದ್ದಿದ್ದ ಭಾರತ, ಇದೀಗ 2026ರಲ್ಲೂ ಅದೇ ಸಾಧನೆಯನ್ನು ಪುನರಾವರ್ತಿಸಿದೆ. ಏಷ್ಯನ್ ಗೇಮ್ಸ್‌ನ ಮಹಿಳಾ ಕ್ರಿಕೆಟ್‌ನಲ್ಲಿ ಸತತ ಎರಡು ಚಿನ್ನ ಗೆದ್ದಿರುವುದು ಹರ್ಮನ್‌ಪ್ರೀತ್ ಕೌರ್ ಪಡೆಗೆ ಮಹತ್ವದ ಮೈಲಿಗಲ್ಲಾಗಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (30)

ಪ್ರದೋಷ್ ಮಾಫಿ ಸಾಕ್ಷಿ: ದರ್ಶನ್‌ಗೆ ಹೈಕೋರ್ಟ್‌ನಲ್ಲಿ ಮತ್ತೆ ಹಿನ್ನಡೆ

by ಕವಿತಾ
September 23, 2026 - 5:33 pm
0

Untitled design (28)

ಬ್ಯಾಂಕ್ ಗ್ರಾಹಕರಿಗೆ ಗುಡ್‌ನ್ಯೂಸ್; ಸೆ.27 ಭಾನುವಾರ ಬ್ಯಾಂಕ್‌ಗೆ ರಜೆ ಇಲ್ಲ

by ಕವಿತಾ
September 23, 2026 - 5:02 pm
0

Untitled design (27)

ಉತ್ತರ ಕನ್ನಡದಲ್ಲಿ ವರುಣನ ಆರ್ಭಟ; ಅಂಕೋಲ-ಕಾರವಾರ-ಕುಮಟಾದಲ್ಲಿ ಭಾರಿ ಮಳೆ

by ಕವಿತಾ
September 23, 2026 - 5:00 pm
0

Untitled design (25)

ಯಶ್ ‘ಟಾಕ್ಸಿಕ್ ಡಿಸಾಸ್ಟರ್’.. ಆಡಿಕೊಂಡವ್ರ ವಿರುದ್ಧ ಕವಿರಾಜ್ ಕಿಡಿ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 23, 2026 - 4:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (23)
    2026ರ ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನ ಗೆದ್ದ ನಾಯಕಿ ಹರ್ಮನ್‌ಪ್ರೀತ್‌ಗೆ ಭರ್ಜರಿ ಬಹುಮಾನ!
    September 23, 2026 | 0
  • Your paragraph text (4)
    ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಮೀರಾಬಾಯಿ ಚಾನುಗೆ ಬೆಳ್ಳಿ ಪದಕ
    September 23, 2026 | 0
  • Your paragraph text 2026 09 22T130331.688
    ಭಾರತ vs ಜಪಾನ್​ ಟಿ20 ಪಂದ್ಯ; ಮೈದಾನದಲ್ಲೇ ಫುಟ್‌ಬಾಲ್ ಆಡಿದ ಟೀಮ್ ಇಂಡಿಯಾ
    September 22, 2026 | 0
  • Your paragraph text 2026 09 21T185107.193
    ಆಸ್ಟ್ರೇಲಿಯಾ ವಿರುದ್ಧ ಭಾರತ ಯುವ ಪಡೆಯ ಅಬ್ಬರ; 103 ರನ್‌ಗಳ ಭರ್ಜರಿ ಗೆಲುವು
    September 21, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (61)
    ಏಷ್ಯನ್ ಗೇಮ್ಸ್ ಮಹಿಳಾ ಕ್ರಿಕೆಟ್ ಫೈನಲ್: ಭಾರತ-ಶ್ರೀಲಂಕಾ ಚಿನ್ನದ ಪದಕಕ್ಕಾಗಿ ಕಾದಾಟ
    September 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version