• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, November 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಕೇಂದ್ರದ 3 ತಂಡಗಳಿಂದ ರಾಜ್ಯದ ಬರ ಅಧ್ಯಯನ: ಡಾ.ಜಿ.ಪರಮೇಶ್ವರ್

ದಿಶಾ ಕೆ. ಎಸ್. by ದಿಶಾ ಕೆ. ಎಸ್.
September 28, 2026 - 1:01 pm
in ಕರ್ನಾಟಕ
0 0
0
Your paragraph text (21)

ಬೆಂಗಳೂರು: ರಾಜ್ಯ ಸರ್ಕಾರದ ಮನವಿ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಮೂರು ತಂಡಗಳು ಕರ್ನಾಟಕಕ್ಕೆ ಆಗಮಿಸಿ ಬರ ಪರಿಸ್ಥಿತಿಯ ಕುರಿತು ಅಧ್ಯಯನ ನಡೆಸಲಿವೆ. ತುಮಕೂರು, ಚಿತ್ರದುರ್ಗ, ದಾವಣಗೆರೆ ಭಾಗದಲ್ಲಿ ಒಂದು ತಂಡ, ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಮತ್ತೊಂದು ತಂಡ ಹಾಗೂ ಮಂಡ್ಯ, ಮೈಸೂರು, ಚಾಮರಾಜನಗರ ಸೇರಿದಂತೆ ಮೈಸೂರು ಭಾಗದಲ್ಲಿ ಮೂರನೇ ತಂಡ ಅಧ್ಯಯನ ನಡೆಸಲಿದೆ ಎಂದು ಉಪಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ.ಜಿ.ಪರಮೇಶ್ವರ  ತಿಳಿಸಿದರು.

ಸದಾಶಿವನಗರದ ನಿವಾಸದ ಬಳಿ ಮಾತನಾಡಿದ ಅವರು, ಕೇಂದ್ರದ ತಂಡಗಳು ಬರಪೀಡಿತ ಪ್ರದೇಶಗಳಲ್ಲಿ ಅಧ್ಯಯನ ನಡೆಸಿ ತಮ್ಮ ವರದಿಯನ್ನು ಸಲ್ಲಿಸಲಿವೆ. ರಾಜ್ಯ ಸರ್ಕಾರ ಈಗಾಗಲೇ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ್ದು, ಅದರ ಆಧಾರದ ಮೇಲೆಯೇ ಕೇಂದ್ರದ ತಂಡಗಳು ಪರಿಶೀಲನೆ ನಡೆಸಲಿವೆ. ಇದರ ಜೊತೆಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಮೆಮೊರಾಂಡಂ ಕೂಡ ಸಲ್ಲಿಸಲಾಗುವುದು ಎಂದರು.

RelatedPosts

ಕಾಡಾನೆ ಸ್ಥಳಾಂತರ ವಿಚಾರ: ರಾಜೀನಾಮೆ ಎಚ್ಚರಿಕೆ ನೀಡಿದ ಕಾಂಗ್ರೆಸ್ ಶಾಸಕರು

ಅಶಾ ಕಾರ್ಯಕರ್ತೆಯರ ಹೋರಾಟಕ್ಕೆ ಮಾಜಿ ಸಂಸದೆ ಸುಮಲತಾ ಅಂಬರೀಶ್ ಬೆಂಬಲ

ಶಿಕಾರಿ ನೆಪದಲ್ಲಿ ಬಂದು ಎಸ್ಟೇಟ್ ಮಾಲೀಕನ ಮನೆ ಮೇಲೆ ಫೈರಿಂಗ್‌!

ಪ್ರತಿಭಟನೆ ಕೈಬಿಡಿ, ಅಧಿವೇಶನದ ಬಳಿಕ ಸಿಹಿಸುದ್ದಿ ಕೊಡ್ತೀವಿ: ಆಶಾ ಕಾರ್ಯಕರ್ತೆಯರಿಗೆ ಯು.ಟಿ. ಖಾದರ್ ಮನವಿ

ADVERTISEMENT
ADVERTISEMENT

ರಾಜ್ಯದಲ್ಲಿ ಬರ ಎಂದು ಘೋಷಿಸಲಾಗಿರುವ ಎಲ್ಲ ತಾಲೂಕುಗಳ ಬಗ್ಗೆಯೂ ಕೇಂದ್ರದ ತಂಡಗಳು ಮಾಹಿತಿಯನ್ನು ಸಂಗ್ರಹಿಸುವ ಸಾಧ್ಯತೆಯಿದೆ. ಕೆಲವು ತಾಲೂಕುಗಳಿಗೆ ತಂಡಗಳು ಖುದ್ದಾಗಿ ಭೇಟಿ ನೀಡಿ ಜಿಲ್ಲಾಧಿಕಾರಿಗಳು ಹಾಗೂ ಸ್ಥಳೀಯ ಅಧಿಕಾರಿಗಳೊಂದಿಗೆ ಚರ್ಚಿಸಿ ಮಾಹಿತಿ ಪಡೆದುಕೊಳ್ಳಲಿವೆ. ರಾಜ್ಯ ಸರ್ಕಾರ ಸಲ್ಲಿಸಿರುವ ವರದಿಯಲ್ಲಿನ ಅಂಶಗಳು ಹಾಗೂ ಕೇಂದ್ರದ ತಂಡಗಳು ಸ್ಥಳದಲ್ಲೇ ನಡೆಸುವ ಪರಿಶೀಲನೆಯಲ್ಲಿನ ವಾಸ್ತವಾಂಶಗಳ ನಡುವೆ ಯಾವುದೇ ವ್ಯತ್ಯಾಸವಿದೆಯೇ ಎಂಬುದನ್ನೂ ಅವರು ಪರಿಶೀಲಿಸಲಿದ್ದಾರೆ ಎಂದು ಡಾ.ಜಿ.ಪರಮೇಶ್ವರ ವಿವರಿಸಿದರು.

ರಾಜ್ಯದ ಬರ ಪೀಡಿತ ತಾಲೂಕುಗಳ ಘೋಷಣೆ ಕೇಂದ್ರದ ಮಾರ್ಗಸೂಚಿ ಆಧಾರಿತ : ಕೇಂದ್ರದ ಮಾರ್ಗಸೂಚಿಗಳ ಪ್ರಕಾರವೇ ಗ್ರೌಂಡ್‌ ಟ್ರೂಥಿಂಗ್ ನಡೆಯಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಕೇಂದ್ರದ ತಂಡಗಳಿಗೆ ತಮ್ಮದೇ ಆದ ಮಾರ್ಗಸೂಚಿಗಳಿವೆ. ರಾಜ್ಯ ಸರ್ಕಾರವೂ ಬರ ತಾಲೂಕುಗಳನ್ನು ಘೋಷಿಸುವ ಸಂದರ್ಭದಲ್ಲಿ ಇದೇ ಮಾರ್ಗಸೂಚಿಗಳನ್ನು ಅನುಸರಿಸಿದೆ ಎಂದು ಹೇಳಿದರು.

ಮಾರ್ಗಸೂಚಿಗಳಲ್ಲಿರುವ ಮಾನದಂಡಗಳನ್ನು ಆಧರಿಸಿಯೇ ಬರಪೀಡಿತ ತಾಲೂಕುಗಳನ್ನು ಘೋಷಿಸಲಾಗಿದೆ. ಮಾರ್ಗಸೂಚಿಗಳ ವ್ಯಾಪ್ತಿಗೆ ಬರದ ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿಲ್ಲ. ಹೀಗಾಗಿ ಕೇಂದ್ರದ ತಂಡಗಳು ಪರಿಶೀಲನೆ ನಡೆಸಿದಾಗ ರಾಜ್ಯ ಸರ್ಕಾರದ ವರದಿ ಹಾಗೂ ಅವರ ಪರಿಶೀಲನೆಯ ನಡುವೆ ಹೆಚ್ಚಿನ ವ್ಯತ್ಯಾಸ ಕಂಡುಬರುವ ಸಾಧ್ಯತೆ ಇಲ್ಲ ಎಂದರು.

ಸೆಪ್ಟೆಂಬರ್ 30ಕ್ಕೆ ಮುಂಗಾರು ಅವಧಿ ಮುಕ್ತಾಯವಾಗಲಿದ್ದು, ಅದರ ನಂತರ ಅಕ್ಟೋಬರ್ ಮೊದಲ ವಾರದಲ್ಲೇ ಅಂತಿಮ ಮೆಮೊರಾಂಡಂ ಸಲ್ಲಿಸಲು ಉದ್ದೇಶಿಸಲಾಗಿದೆ. ರಾಜ್ಯದ ನಷ್ಟ ಹಾಗೂ ಅಗತ್ಯವಿರುವ ಪರಿಹಾರದ ಕುರಿತು ಸಮಗ್ರ ಮಾಹಿತಿಯನ್ನು ಒಳಗೊಂಡ ವರದಿಯನ್ನು ಕೇಂದ್ರದ ಮುಂದೆ ಮಂಡಿಸಲಾಗುವುದು ಎಂದರು.

ಬರ ಯಾವುದೇ ಪಕ್ಷದ ಸಮಸ್ಯೆಯಲ್ಲ : ಬರ ಪರಿಹಾರದ ವಿಚಾರದಲ್ಲಿ ಸರ್ವಪಕ್ಷ ನಿಯೋಗದ ಅಗತ್ಯವನ್ನು ಪುನರುಚ್ಚರಿಸಿದ ಡಾ.ಜಿ.ಪರಮೇಶ್ವರ ಅವರು, ಬರ ಯಾವುದೇ ಪಕ್ಷಕ್ಕೆ ಸೀಮಿತವಾದ ಸಮಸ್ಯೆಯಲ್ಲ. ಪ್ರಕೃತಿ ವಿಕೋಪಕ್ಕೆ ಪಕ್ಷದ ಬೇಧವಿಲ್ಲ. ಕೇಂದ್ರ ಸರ್ಕಾರದ ಮುಂದೆ ಎಲ್ಲರೂ ಒಟ್ಟಾಗಿ ರಾಜ್ಯದ ಪರವಾಗಿ ಮನವಿ ಸಲ್ಲಿಸಿದರೆ ಹೆಚ್ಚಿನ ನೆರವು ಪಡೆಯಲು ಅನುಕೂಲವಾಗಲಿದೆ ಎಂಬ ಉದ್ದೇಶದಿಂದಲೇ ಮುಖ್ಯಮಂತ್ರಿ ಸರ್ವಪಕ್ಷ ನಿಯೋಗ ಕರೆದೊಯ್ಯುವುದಾಗಿ ಹೇಳಿದ್ದಾರೆ ಎಂದು ತಿಳಿಸಿದರು.

ಬಿಜೆಪಿ ನಾಯಕರು ನಿಯೋಗದಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಅವರ ಪಕ್ಷವೇ ಕೇಂದ್ರದಲ್ಲಿ ಅಧಿಕಾರದಲ್ಲಿದೆ. ಅವರು ನಮ್ಮೊಂದಿಗೆ ಬಂದರೆ ಕೇಂದ್ರ ಸರ್ಕಾರವನ್ನು ಮನವರಿಕೆ ಮಾಡಿಕೊಡಲು ಇನ್ನಷ್ಟು ಸಹಕಾರಿಯಾಗುತ್ತದೆ ಎಂಬುದು ರಾಜ್ಯ ಸರ್ಕಾರದ ಉದ್ದೇಶ. ಆದರೆ, ಅವರು ಬರದಿದ್ದರೂ ಆಡಳಿತ ಪಕ್ಷವಾಗಿ ರಾಜ್ಯದ ಹಿತಾಸಕ್ತಿಗಾಗಿ ಕೇಂದ್ರ ಸರ್ಕಾರದ ಗಮನಕ್ಕೆ ವಿಷಯವನ್ನು ತರುವ ಜವಾಬ್ದಾರಿಯನ್ನು ರಾಜ್ಯ ಸರ್ಕಾರ ನಿರ್ವಹಿಸಲಿದೆ ಎಂದು ಹೇಳಿದರು.

ಬರ ಯಾವುದೇ ಪಕ್ಷದ ಸಮಸ್ಯೆಯಲ್ಲ. ಇದು ಕರ್ನಾಟಕದ ಜನರ ಹಿತಾಸಕ್ತಿಗೆ ಸಂಬಂಧಿಸಿದ ವಿಷಯ. ಆದ್ದರಿಂದ ಎಲ್ಲರೂ ತಮ್ಮ ಜವಾಬ್ದಾರಿಯನ್ನು ಹಂಚಿಕೊಳ್ಳಬೇಕು. ಕೇಂದ್ರಕ್ಕೆ ಮನವಿ ಸಲ್ಲಿಸುವ ಸಂದರ್ಭದಲ್ಲಿ ಬಿಜೆಪಿಯವರೂ ನಮ್ಮೊಂದಿಗೆ ಬರಬೇಕು ಎಂದು ಮತ್ತೊಮ್ಮೆ ಮನವಿ ಮಾಡುವುದಾಗಿ ಅವರು ಹೇಳಿದರು.

ಕೇಂದ್ರ ಸರ್ಕಾರ ಮತ್ತೊಮ್ಮೆ ಪರಿಹಾರಕ್ಕಾಗಿ ಮನವಿ ಸಲ್ಲಿಸಿದರೂ ಸ್ಪಂದಿಸದ ಪರಿಸ್ಥಿತಿ ಎದುರಾದರೆ ರಾಜ್ಯ ಸರ್ಕಾರ ತನ್ನ ಜವಾಬ್ದಾರಿಯಿಂದ ಹಿಂದೆ ಸರಿಯುವುದಿಲ್ಲ ಎಂದು ಡಾ.ಜಿ.ಪರಮೇಶ್ವರ ಹೇಳಿದರು.

ಕೇಂದ್ರ ಸರ್ಕಾರ ಪರಿಹಾರ ನೀಡುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದರೆ, ಕಳೆದ ವರ್ಷ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ರೀತಿಯಲ್ಲಿ ಮತ್ತೆ ನ್ಯಾಯಾಲಯದ ಮೊರೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಬಾರದು. ಕೇಂದ್ರ ಸರ್ಕಾರ ಹಾಗೂ ಸಂಬಂಧಪಟ್ಟವರು ಅಂತಹ ಅವಕಾಶವನ್ನು ನೀಡಬಾರದು ಎಂಬುದು ತಮ್ಮ ಮನವಿ ಎಂದು ಅವರು ಹೇಳಿದರು.

ಗ್ಯಾರಂಟಿಗಳ ಹಣಕಾಸಿನ ಹೊರೆ ನಿರ್ವಹಿಸುತ್ತೇವೆ: ಗ್ಯಾರಂಟಿ ಯೋಜನೆಗಳ ಕುರಿತು ಪಕ್ಷದ ಸಚಿವರು ಹಾಗೂ ಶಾಸಕರಿಂದ ಬರುತ್ತಿರುವ ವಿಭಿನ್ನ ಅಭಿಪ್ರಾಯಗಳ ಬಗ್ಗೆ ಪ್ರತಿಕ್ರಿಯಿಸಿದ ಡಾ.ಜಿ.ಪರಮೇಶ್ವರ ಅವರು, ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಸಂದರ್ಭದಲ್ಲಿ ಅವುಗಳಿಗೆ ಹೆಚ್ಚಿನ ಹಣ ಅಗತ್ಯವಾಗುತ್ತದೆ ಎಂಬುದು ಸರ್ಕಾರಕ್ಕೆ ಮೊದಲಿನಿಂದಲೂ ತಿಳಿದಿತ್ತು ಎಂದು ಹೇಳಿದರು.

ಪ್ರಣಾಳಿಕೆ ಸಿದ್ಧಪಡಿಸುವಾಗಲೇ ಯೋಜನೆಗಳಿಗೆ ಎಷ್ಟು ಹಣ ಬೇಕಾಗಬಹುದು ಎಂಬುದರ ಕುರಿತು ಅಂದಾಜು ಮಾಡಲಾಗಿತ್ತು. ಆರಂಭದಲ್ಲಿ ಸುಮಾರು ₹40ರಿಂದ ₹45 ಸಾವಿರ ಕೋಟಿ ವೆಚ್ಚವಾಗಬಹುದು ಎಂಬ ಅಂದಾಜಿತ್ತು. ನಂತರ ವಾಸ್ತವಿಕ ವೆಚ್ಚ ಸುಮಾರು ₹50 ಸಾವಿರ ಕೋಟಿಗೂ ಹೆಚ್ಚಾಗಿದೆ. ಆದರೂ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ನಿರ್ಧಾರವನ್ನು ಪ್ರಜ್ಞಾಪೂರ್ವಕವಾಗಿಯೇ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಹಣಕಾಸಿನ ಮೇಲೆ ಒತ್ತಡ ಇರುವುದನ್ನು ಯಾರೂ ಮುಚ್ಚಿಡಲು ಸಾಧ್ಯವಿಲ್ಲ. ಆದರೆ, ಕಳೆದ ಮೂರು ವರ್ಷಗಳಿಂದ ಸರ್ಕಾರ ಈ ಹಣಕಾಸಿನ ಬದ್ಧತೆಯನ್ನು ನಿರ್ವಹಿಸಿಕೊಂಡು ಬಂದಿದೆ. ಮುಂದಿನ ಎರಡು ವರ್ಷಗಳಲ್ಲೂ ಅದನ್ನು ನಿರ್ವಹಿಸುವ ಸಾಮರ್ಥ್ಯ ಸರ್ಕಾರಕ್ಕಿದೆ ಎಂದು ಅವರು ಹೇಳಿದರು.

ಪಿಂಚಣಿ ಫಲಾನುಭವಿಗಳ ಮರು ಸೇರ್ಪಡೆ: ಪಿಂಚಣಿ ವಿಚಾರವಾಗಿ ಮಾತನಾಡಿದ ಅವರು, ಈ ಹಿಂದೆ ₹32 ಸಾವಿರ ಇದ್ದ ಆದಾಯದ ಮೇಲಿನ ಮಿತಿಯನ್ನು ಈಗ ₹1.20 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಇದರಿಂದ ಹಿಂದೆ ಪಿಂಚಣಿಯಿಂದ ಹೊರಗುಳಿದಿದ್ದ ಹಲವು ಅರ್ಹರು ಮತ್ತೆ ಯೋಜನೆಯ ವ್ಯಾಪ್ತಿಗೆ ಬರಲಿದ್ದಾರೆ ಎಂದು ತಿಳಿಸಿದರು.

ಹಿಂದೆ ಸುಮಾರು 23 ಲಕ್ಷ ಜನರ ಪಿಂಚಣಿ ರದ್ದಾಗಿತ್ತು. ಈಗ ಆದಾಯದ ಮಿತಿಯನ್ನು ಹೆಚ್ಚಿಸಿರುವುದರಿಂದ ಅರ್ಹ ಫಲಾನುಭವಿಗಳಿಗೆ ಮತ್ತೆ ಪಿಂಚಣಿ ದೊರೆಯಲಿದೆ. ಅದೇ ಸಂದರ್ಭದಲ್ಲಿ ಸೂಕ್ತ ಪ್ರಮಾಣಪತ್ರ ಸಲ್ಲಿಸದವರು ಹಾಗೂ ವಯೋಮಿತಿ ಪೂರೈಸದವರ ಅರ್ಜಿಗಳನ್ನು ಪರಿಶೀಲಿಸಿ ಅನರ್ಹರನ್ನು ಹೊರಗಿಡುವ ಮೂಲಕ ವ್ಯವಸ್ಥೆಯಲ್ಲಿ ಶುದ್ಧೀಕರಣ ಮಾಡಲಾಗುವುದು ಎಂದು ಹೇಳಿದರು.

ನಿಗಮ ಮಂಡಳಿಗೆ ಶೀಘ್ರ ನೇಮಕಾತಿ
ನಿಗಮ ಮಂಡಳಿಗಳ ನೇಮಕಾತಿ ಕುರಿತು ಪ್ರತಿಕ್ರಿಯಿಸಿದ ಅವರು, ಪಕ್ಷದ ಕಾರ್ಯಾಧ್ಯಕ್ಷರು ಹಾಗೂ ಪದಾಧಿಕಾರಿಗಳ ನೇಮಕಾತಿ ಪ್ರಕ್ರಿಯೆ ಮತ್ತು ನಿಗಮ ಮಂಡಳಿ ಅಧ್ಯಕ್ಷರು ಹಾಗೂ ನಿರ್ದೇಶಕರ ನೇಮಕಾತಿ ಪ್ರಕ್ರಿಯೆ ಬೇರೆಬೇರೆ. ಈ ಸಂಬಂಧ ಈಗಾಗಲೇ ಪಕ್ಷದ ಪ್ರಧಾನ ಕಾರ್ಯದರ್ಶಿ, ಉಸ್ತುವಾರಿ ಪ್ರಧಾನ ಕಾರ್ಯದರ್ಶಿ, ಮುಖ್ಯಮಂತ್ರಿ ಹಾಗೂ ಮಾಜಿ ಮುಖ್ಯಮಂತ್ರಿ ಸೇರಿದಂತೆ ಪ್ರಮುಖರು ಸಭೆ ನಡೆಸಿ ಅಂತಿಮಗೊಳಿಸಿದ್ದಾರೆ ಎಂಬ ಮಾಹಿತಿ ಇದೆ. ಆದಷ್ಟು ಶೀಘ್ರದಲ್ಲಿ ನೇಮಕಾತಿ ನಡೆಯಬಹುದು ಎಂದು ಅವರು ಹೇಳಿದರು.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled Design (71)

ಕಾಡಾನೆ ಸ್ಥಳಾಂತರ ವಿಚಾರ: ರಾಜೀನಾಮೆ ಎಚ್ಚರಿಕೆ ನೀಡಿದ ಕಾಂಗ್ರೆಸ್ ಶಾಸಕರು

by ಶಾಲಿನಿ ಕೆ. ಡಿ
November 22, 2026 - 6:52 pm
0

Untitled Design (70)

ಭಾರತಕ್ಕೆ ಆಗಮಿಸಿದ ನೇಪಾಳ ಪ್ರಧಾನಿ: ನಾಳೆ ಪ್ರಧಾನಿ ಮೋದಿ ಜೊತೆ ಮಹತ್ವದ ಮಾತುಕತೆ

by ಶಾಲಿನಿ ಕೆ. ಡಿ
November 22, 2026 - 6:35 pm
0

Untitled Design (69)

ನಿತೀಶ್ ಸೇತು ಉದ್ಘಾಟನೆಗೆ ತೇಜಸ್ವಿ ಯಾದವ್‌ಗೆ ಆಹ್ವಾನಿಸದಿದ್ದಕ್ಕೆ RJD ಕಾರ್ಯಕರ್ತರ ಆಕ್ರೋಶ.!

by ಶಾಲಿನಿ ಕೆ. ಡಿ
November 22, 2026 - 6:07 pm
0

Untitled Design (68)

ಭಟ್ರು ಬರೆದ ಆ ಸಾಲಿನಲ್ಲಿ ಏನಿದೆ..? ಬಿದ್ದು ಬಿದ್ದು ನಕ್ಕ ಶ್ರೀರಾಮ್

by ಶಾಲಿನಿ ಕೆ. ಡಿ
November 22, 2026 - 5:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled Design (71)
    ಕಾಡಾನೆ ಸ್ಥಳಾಂತರ ವಿಚಾರ: ರಾಜೀನಾಮೆ ಎಚ್ಚರಿಕೆ ನೀಡಿದ ಕಾಂಗ್ರೆಸ್ ಶಾಸಕರು
    November 22, 2026 | 0
  • Untitled Design (66)
    ಅಶಾ ಕಾರ್ಯಕರ್ತೆಯರ ಹೋರಾಟಕ್ಕೆ ಮಾಜಿ ಸಂಸದೆ ಸುಮಲತಾ ಅಂಬರೀಶ್ ಬೆಂಬಲ
    November 22, 2026 | 0
  • Untitled Design (63)
    ಶಿಕಾರಿ ನೆಪದಲ್ಲಿ ಬಂದು ಎಸ್ಟೇಟ್ ಮಾಲೀಕನ ಮನೆ ಮೇಲೆ ಫೈರಿಂಗ್‌!
    November 22, 2026 | 0
  • Untitled design (60)
    ಪ್ರತಿಭಟನೆ ಕೈಬಿಡಿ, ಅಧಿವೇಶನದ ಬಳಿಕ ಸಿಹಿಸುದ್ದಿ ಕೊಡ್ತೀವಿ: ಆಶಾ ಕಾರ್ಯಕರ್ತೆಯರಿಗೆ ಯು.ಟಿ. ಖಾದರ್ ಮನವಿ
    November 22, 2026 | 0
  • Untitled Design (55)
    ಆಹಾರದಲ್ಲಿ ಹುಳುಗಳು ಪತ್ತೆ ಕೇಸ್: ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಪ್ರಿನ್ಸಿಪಾಲ್, ವಾರ್ಡನ್ ಸಸ್ಪೆಂಡ್!
    November 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version