• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ಕೆನಡಾದ ವ್ಯಾಂಕೋವರ್-ಬೆಂಗಳೂರು ಏರ್‌ಪೋರ್ಟ್‌ಗಳ ನಡುವೆ ಐತಿಹಾಸಿಕ ಒಪ್ಪಂದ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
October 16, 2026 - 2:08 pm
in ವಿದೇಶ
0 0
0
Your paragraph text (81)

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (ಬಿಎಲ್‌ಆರ್‌) ಮತ್ತು ಕೆನಡಾದ ವ್ಯಾಂಕೋವರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (ವೈವಿಆರ್‌) ನಡುವೆ ಐತಿಹಾಸಿಕ ‘ಸಿಸ್ಟರ್ ಏರ್‌ಪೋರ್ಟ್’ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಪಶ್ಚಿಮ ಕೆನಡಾ ಮತ್ತು ದಕ್ಷಿಣ ಭಾರತದ ನಡುವೆ ಕಾರ್ಯಾಚರಣೆ, ತಂತ್ರಜ್ಞಾನ, ಆರ್ಥಿಕತೆ ಮತ್ತು ವಿಮಾನಯಾನ ಸೇವೆಯನ್ನು ಅಭಿವೃದ್ಧಿಪಡಿಸುವುದು ಈ ಒಪ್ಪಂದದ ಪ್ರಮುಖ ಉದ್ದೇಶವಾಗಿದೆ.

ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್-2 ರಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಕೆನಡಾದ ಅಂತಾರಾಷ್ಟ್ರೀಯ ವ್ಯಾಪಾರ ಸಚಿವ ಮಣಿಂದರ್ ಸಿಧು, ಭಾರತದಲ್ಲಿರುವ ಕೆನಡಾದ ಹೈಕಮಿಷನರ್ ಕ್ರಿಸ್ ಕೂಟರ್, ಕಾನ್ಸುಲ್ ಜನರಲ್ ರಿಯಾನ್ ವಾರ್ಡ್ ಹಾಗೂ ಎರಡೂ ವಿಮಾನ ನಿಲ್ದಾಣಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

RelatedPosts

ರಷ್ಯಾ ತೈಲ ಖರೀದಿಗೆ ನಿರ್ಬಂಧ ಸಡಿಲ: ಭಾರತ, ಚೀನಾಗೆ ಟ್ರಂಪ್‌ ಬಿಗ್ ಗಿಫ್ಟ್

ಈ ಬಾರಿಯ ಚುನಾವಣೆಯಲ್ಲಿ ಟ್ರಂಪ್‌ಗೆ ಹೀನಾಯ ಸೋಲು ಫಿಕ್ಸ್?

ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ

ಅಮೆರಿಕದ ಹಿಂದೂ ದೇವಾಲಯದಲ್ಲಿ ಭಾರತೀಯರ ಹ*ತ್ಯೆಗೆ ಸಂಚು: 19ರ ಯುವಕ ಅರೆಸ್ಟ್‌

ADVERTISEMENT
ADVERTISEMENT

ಈ ಒಪ್ಪಂದವು ಪ್ರಮುಖವಾಗಿ ಏಳು ವಿವಿಧ ಕ್ಷೇತ್ರಗಳಲ್ಲಿ ಪರಸ್ಪರ ಸಹಕಾರ ನೀಡುವ ಗುರಿಯನ್ನು ಹೊಂದಿದೆ. ವಿಮಾನ ನಿಲ್ದಾಣದ ಕಾರ್ಯಾಚರಣೆಯನ್ನು ಸುಲಭಗೊಳಿಸಲು ‘ಡಿಜಿಟಲ್ ಟ್ವಿನ್’ನಂತಹ ನವೀನ ತಂತ್ರಜ್ಞಾನಗಳ ಬಳಕೆ, ತಂತ್ರಜ್ಞಾನ ಹಂಚಿಕೆ ಹಾಗೂ ಹೊಸ ಆವಿಷ್ಕಾರಗಳ ಜಂಟಿ ಪ್ರಯೋಗವನ್ನು ಇದು ಒಳಗೊಂಡಿದೆ.

ಎಲ್ಲಕ್ಕಿಂತ ಮುಖ್ಯವಾಗಿ, ಬೆಂಗಳೂರು ಮತ್ತು ವ್ಯಾಂಕೋವರ್ ನಡುವೆ ನೇರ ವಿಮಾನ ಸಂಪರ್ಕ ಕಲ್ಪಿಸಲು ಈ ಒಪ್ಪಂದವು ಭದ್ರ ಬುನಾದಿ ಹಾಕಿದೆ. ಇದರ ಜೊತೆಗೆ, ಉಭಯ ದೇಶಗಳ ಟೆಕ್ ವಲಯ ಸೇರಿದಂತೆ ವಿವಿಧ ಉದ್ಯಮಗಳ ಬೆಳವಣಿಗೆಗೆ ಪೂರಕವಾಗಿ ದಕ್ಷಿಣ ಭಾರತ ಮತ್ತು ಕೆನಡಾ ನಡುವೆ ಸರಕು ಸಾಗಣೆ ವಹಿವಾಟನ್ನು ಹೆಚ್ಚಿಸುವ ಉದ್ದೇಶವನ್ನೂ ಹೊಂದಲಾಗಿದೆ.

ಈ ಕುರಿತು ಮಾತನಾಡಿದ ಕೆನಡಾದ ಸಚಿವ ಮಣಿಂದರ್ ಸಿಧು, “ಭಾರತದಂತಹ ಮಿತ್ರ ರಾಷ್ಟ್ರಗಳೊಂದಿಗೆ ಕೆನಡಾದ ವ್ಯಾಪಾರ ಸಂಬಂಧಗಳನ್ನು ವಿಸ್ತರಿಸುವ ಯತ್ನಗಳು ಅತ್ಯುತ್ತಮ ಫಲಿತಾಂಶ ನೀಡುತ್ತಿವೆ,” ಎಂದರು. ಈ ಒಪ್ಪಂದವು ವಿಶ್ವದ ಅತಿ ವೇಗವಾಗಿ ಬೆಳೆಯುತ್ತಿರುವ ಮಾರುಕಟ್ಟೆಯೊಂದಿಗೆ ನೇರ ವಿಮಾನಯಾನ ಸೇವೆ ಆರಂಭಿಸಲು ನಾಂದಿ ಹಾಡಿದ್ದು, ಬೃಹತ್ ಹೂಡಿಕೆ ಹಾಗೂ ವ್ಯಾಪಾರ ವೃದ್ಧಿಗೆ ಕಾರಣವಾಗಲಿದೆ ಎಂದೂ ವಿಶ್ವಾಸ ವ್ಯಕ್ತಪಡಿಸಿದರು.

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (ಬಿಐಎಎಲ್‌) ಸಿಒಒ ಗಿರೀಶ್ ನಾಯರ್ ಮಾತನಾಡಿ, “ಈ ಕಾರ್ಯತಂತ್ರದ ಪಾಲುದಾರಿಕೆಯು ತಂತ್ರಜ್ಞಾನದ ಏಕೀಕರಣಕ್ಕೆ ಭದ್ರ ಚೌಕಟ್ಟನ್ನು ಒದಗಿಸಲಿದೆ. ಸ್ಮಾರ್ಟ್ ಏರ್‌ಪೋರ್ಟ್ ತಂತ್ರಜ್ಞಾನ, ಸುಸ್ಥಿರ ಕಾರ್ಯಾಚರಣೆ ಮತ್ತು ಪ್ರಯಾಣಿಕರಿಗೆ ಜಾಗತಿಕ ಮಟ್ಟದ ಅತ್ಯುತ್ತಮ ಅನುಭವ ನೀಡುವ ನಿಟ್ಟಿನಲ್ಲಿ ಎರಡೂ ವಿಮಾನ ನಿಲ್ದಾಣಗಳು ಒಟ್ಟಾಗಿ ಕೆಲಸ ಮಾಡಲಿವೆ,” ಎಂದು ವಿವರಿಸಿದರು.

ವ್ಯಾಪಾರ ಮತ್ತು ಬಾಂಧವ್ಯ ವೃದ್ಧಿ

2025ರಲ್ಲಿ ಭಾರತ ಮತ್ತು ಕೆನಡಾ ನಡುವಿನ ದ್ವಿಪಕ್ಷೀಯ ವ್ಯಾಪಾರ ಬರೋಬ್ಬರಿ 10.9 ಬಿಲಿಯನ್ ಡಾಲರ್ ತಲುಪಿದೆ. ಕೆನಡಾದ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದಲ್ಲಿ ಸುಮಾರು 5 ಲಕ್ಷಕ್ಕೂ ಅಧಿಕ ಭಾರತೀಯರಿದ್ದು, ಇದು ಆ ಪ್ರಾಂತ್ಯದ ಒಟ್ಟು ಜನಸಂಖ್ಯೆಯ ಶೇ. 10ರಷ್ಟಿದೆ. ಇತ್ತ ಬೆಂಗಳೂರು ಕೂಡ ಟೆಕ್ ವಲಯದಲ್ಲಿ ಜಾಗತಿಕ ಮಟ್ಟದಲ್ಲಿ ಅತಿ ವೇಗವಾಗಿ ಬೆಳೆಯುತ್ತಿದೆ. ಹೀಗಾಗಿ ಈ ಒಪ್ಪಂದವು ಭವಿಷ್ಯದಲ್ಲಿ ಉಭಯ ದೇಶಗಳ ನಡುವಿನ ವ್ಯಾಪಾರ ಮತ್ತು ಜನರ ನಡುವಿನ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸಲಿದೆ.

ಕಳೆದ ವರ್ಷ (2025) ಬೆಂಗಳೂರು ವಿಮಾನ ನಿಲ್ದಾಣದ ಮೂಲಕ 4.44 ಕೋಟಿ ಪ್ರಯಾಣಿಕರು ಸಂಚರಿಸಿದ್ದು, 5.32 ಲಕ್ಷ ಟನ್ ಕಾರ್ಗೋ ವಹಿವಾಟು ನಡೆದಿದೆ. ಇತ್ತೀಚೆಗಷ್ಟೇ ಇದರ ಟರ್ಮಿನಲ್-2 ‘ಸ್ಕೈಟ್ರಾಕ್ಸ್’ನಿಂದ ‘5-ಸ್ಟಾರ್’ ರೇಟಿಂಗ್ ಪಡೆದ ಭಾರತದ ಏಕೈಕ ಟರ್ಮಿನಲ್ ಎನಿಸಿಕೊಂಡಿದೆ.

ಅದೇ ರೀತಿ ವ್ಯಾಂಕೋವರ್ ಏರ್‌ಪೋರ್ಟ್‌ ಮೂಲಕ ಕಳೆದ ವರ್ಷ 2.69 ಕೋಟಿ ಪ್ರಯಾಣಿಕರು ಸಂಚರಿಸಿದ್ದು, 3.65 ಲಕ್ಷ ಟನ್ ಕಾರ್ಗೋ ವಹಿವಾಟು ನಡೆದಿದೆ. ಸತತ 15 ವರ್ಷಗಳಿಂದ ಇದು ‘ಉತ್ತರ ಅಮೆರಿಕದ ಅತ್ಯುತ್ತಮ ವಿಮಾನ ನಿಲ್ದಾಣ’ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇದೀಗ ಈ ಎರಡು ಬೃಹತ್ ವಿಮಾನ ನಿಲ್ದಾಣಗಳು ಕೈಜೋಡಿಸಿರುವುದು ವಿಮಾನಯಾನ ಕ್ಷೇತ್ರದಲ್ಲಿ ಹೊಸ ಸಂಚಲನ ಮೂಡಿಸಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Road trip (24)

ಸ್ಟಿಂಗ್ ರೂವಾರಿಗಳ ಬಂಧನಕ್ಕೆ ಹೆಚ್‌ಡಿಕೆ ಆಗ್ರಹ: ಡಿಜಿಪಿ ಸಲೀಂಗೆ ದೂರು

by ಶಾಲಿನಿ ಕೆ. ಡಿ
October 17, 2026 - 6:49 pm
0

Road trip (22)

ಟಾಪ್ ಪರ್ಫಾಮರ್ ಎಂದ ವಿಜಯ್ ದೇವರಕೊಂಡ..ತೆರೆಮೇಲೆ ಠುಸ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 17, 2026 - 5:44 pm
0

Road trip (21)

ದಸರಾ ಹಬ್ಬದ ಸಮಯದಲ್ಲಿ ಸ್ವೀಟ್ಸ್ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ

by ಶಾಲಿನಿ ಕೆ. ಡಿ
October 17, 2026 - 5:08 pm
0

Road trip (19)

ಸ್ಯಾಂಡಲ್‌ವುಡ್‌‌ನ ಸಾಯಿಪಲ್ಲವಿ ಪ್ರೇಮದ ಊರಲಿ ‘ರಮಿಕಾ’

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 17, 2026 - 4:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • Road trip (9)
    ರಷ್ಯಾ ತೈಲ ಖರೀದಿಗೆ ನಿರ್ಬಂಧ ಸಡಿಲ: ಭಾರತ, ಚೀನಾಗೆ ಟ್ರಂಪ್‌ ಬಿಗ್ ಗಿಫ್ಟ್
    October 17, 2026 | 0
  • Road trip (1)
    ಈ ಬಾರಿಯ ಚುನಾವಣೆಯಲ್ಲಿ ಟ್ರಂಪ್‌ಗೆ ಹೀನಾಯ ಸೋಲು ಫಿಕ್ಸ್?
    October 17, 2026 | 0
  • ₹111.68 (3)
    ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ
    October 15, 2026 | 0
  • Untitled design 2026 10 15T094714.508
    ಅಮೆರಿಕದ ಹಿಂದೂ ದೇವಾಲಯದಲ್ಲಿ ಭಾರತೀಯರ ಹ*ತ್ಯೆಗೆ ಸಂಚು: 19ರ ಯುವಕ ಅರೆಸ್ಟ್‌
    October 15, 2026 | 0
  • ಪಾಕಿಸ್ತಾನದಲ್ಲಿ
    ಪಾಕಿಸ್ತಾನದಲ್ಲಿ ಹಳಿತಪ್ಪಿದ ರೆಹಮಾನ್ ಬಾಬಾ ಎಕ್ಸ್‌ಪ್ರೆಸ್ ರೈಲು: ಐವರು ಸಾ*ವು
    October 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version