• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬೆಂಗಳೂರು ಹೊರವಲಯದಲ್ಲಿ ಅಕ್ರಮ ಪಿಜಿಗಳ ಹಾವಳಿ: 35ಕ್ಕೂ ಹೆಚ್ಚು ಪಿಜಿಗಳಿಗೆ ಪಂಚಾಯಿತಿ ನೋಟಿಸ್!

ದಿಶಾ ಕೆ. ಎಸ್. by ದಿಶಾ ಕೆ. ಎಸ್.
October 16, 2026 - 4:06 pm
in ಕರ್ನಾಟಕ
0 0
0
Your paragraph text (89)

ಸಿಲಿಕಾನ್ ಸಿಟಿ ಬೆಂಗಳೂರು ಹೊರವಲಯದಲ್ಲಿ ಅನಧಿಕೃತ ಪಿಜಿಗಳ ಹಾವಳಿ ಹೆಚ್ಚಾಗಿದ್ದು, ನಿಯಮ ಉಲ್ಲಂಘಿಸಿ ಕಟ್ಟಡ ನಿರ್ಮಿಸಿ ವಸತಿ ಸೌಲಭ್ಯ ಹೆಸರಿನಲ್ಲಿ ವಾಣಿಜ್ಯ ಚಟುವಟಿಕೆ ನಡೆಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಇದೀಗ ಇಂತಹ ಅಕ್ರಮ ಪಿಜಿಗಳ ವಿರುದ್ಧ ಪಂಚಾಯಿತಿ ಅಧಿಕಾರಿಗಳು ಕಾರ್ಯಾಚರಣೆಗೆ ಮುಂದಾಗಿದ್ದು, 35ಕ್ಕೂ ಹೆಚ್ಚು ಪಿಜಿಗಳಿಗೆ ನೋಟಿಸ್ ಜಾರಿ ಮಾಡಿದ್ದಾರೆ.

ಆನೇಕಲ್ ತಾಲೂಕಿನ ಬ್ಯಾಗಡದೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅನಧಿಕೃತ ಪಿಜಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಎನ್ನಲಾಗಿದೆ. ಈಡನ್ ಗಾರ್ಡನ್, ನಕ್ಷತ್ರ ಲೇಔಟ್ ಹಾಗೂ ಶ್ರೀ ಸಾಯಿ ಬಡಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಿಜಿಗಳು ತಲೆ ಎತ್ತಿವೆ. ಕಟ್ಟಡ ನಿರ್ಮಾಣಕ್ಕೆ ಪಡೆಯಲಾದ ಅನುಮತಿಯನ್ನು ಮೀರಿ ಬಹುಮಹಡಿ ಕಟ್ಟಡಗಳನ್ನು ನಿರ್ಮಿಸಿ ಪಿಜಿಗಳಾಗಿ ಪರಿವರ್ತಿಸಲಾಗಿದೆ ಎಂಬ ಆರೋಪವಿದೆ.

RelatedPosts

ಸ್ಟಿಂಗ್ ರೂವಾರಿಗಳ ಬಂಧನಕ್ಕೆ ಹೆಚ್‌ಡಿಕೆ ಆಗ್ರಹ: ಡಿಜಿಪಿ ಸಲೀಂಗೆ ದೂರು

ದಸರಾ ಹಬ್ಬದ ಸಮಯದಲ್ಲಿ ಸ್ವೀಟ್ಸ್ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ

ರಾಯಚೂರಿನಲ್ಲಿ ಈರುಳ್ಳಿ ಲಾರಿ ಪಲ್ಟಿ: 15 ನಿಮಿಷದಲ್ಲೇ ಈರುಳ್ಳಿ ಹೊತ್ತೊಯ್ದ ಜನ

ಕರ್ನಾಟಕದ 9 ಜಿಲ್ಲೆಗಳಿಗೆ ಅಕ್ಟೋಬರ್ 22ರವರೆಗೆ ಭಾರಿ ಮಳೆ ಮುನ್ಸೂಚನೆ

ADVERTISEMENT
ADVERTISEMENT

ಪಂಚಾಯಿತಿ ನಿಯಮಗಳ ಪ್ರಕಾರ ಎರಡು ಅಂತಸ್ತಿನ ಕಟ್ಟಡ ನಿರ್ಮಾಣಕ್ಕೆ ಅನುಮತಿ ಪಡೆದು, ಬಳಿಕ ಆರರಿಂದ ಏಳು ಅಂತಸ್ತಿನವರೆಗೆ ಕಟ್ಟಡಗಳನ್ನು ನಿರ್ಮಿಸಲಾಗಿದೆ ಎನ್ನಲಾಗಿದೆ. ಕಟ್ಟಡಗಳ ಸುತ್ತಲೂ ಕಡ್ಡಾಯವಾಗಿ ಬಿಡಬೇಕಾದ ಸೆಟ್‌ಬ್ಯಾಕ್ ಪ್ರದೇಶವನ್ನೂ ನಿಯಮಬಾಹಿರವಾಗಿ ಬಳಸಿಕೊಳ್ಳಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಇದಲ್ಲದೆ, ಪಿಜಿ ನಡೆಸಲು ಅಗತ್ಯವಿರುವ ಅನುಮತಿಗಳನ್ನು ಪಡೆಯದೆ ವಸತಿ ವ್ಯವಸ್ಥೆ ಕಲ್ಪಿಸಲಾಗುತ್ತಿದೆ ಎನ್ನಲಾಗಿದೆ.

ನೀರಿನ ಬಳಕೆ ಹಾಗೂ ತ್ಯಾಜ್ಯ ನಿರ್ವಹಣೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳ ಬಗ್ಗೆಯೂ ಸೂಕ್ತ ಕ್ರಮ ಕೈಗೊಂಡಿಲ್ಲ ಎಂಬ ಆರೋಪವಿದೆ. ನಿರ್ದಿಷ್ಟವಾಗಿ ಅಲಯನ್ಸ್ ಕಾಲೇಜಿನ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಪಿಜಿಗಳನ್ನು ನಡೆಸಲಾಗುತ್ತಿದ್ದು, ದುಪ್ಪಟ್ಟು ದರದಲ್ಲಿ ಬಾಡಿಗೆ ಅಥವಾ ಪಿಜಿ ಶುಲ್ಕ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪವೂ ಸ್ಥಳೀಯರಿಂದ ಕೇಳಿಬಂದಿದೆ.

ಈ ಎಲ್ಲ ಆರೋಪಗಳ ಹಿನ್ನೆಲೆಯಲ್ಲಿ ಬ್ಯಾಗಡದೇನಹಳ್ಳಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಅಖಾಡಕ್ಕಿಳಿದಿದ್ದಾರೆ. ಈಗಾಗಲೇ ನಿರ್ಮಾಣಗೊಂಡಿರುವ 35ಕ್ಕೂ ಹೆಚ್ಚು ಅನಧಿಕೃತ ಪಿಜಿಗಳಿಗೆ ನೋಟಿಸ್ ಜಾರಿ ಮಾಡಲಾಗಿದ್ದು, 15 ದಿನಗಳ ಗಡುವು ನೀಡಲಾಗಿದೆ.

ಎರಡು ಅಂತಸ್ತಿಗಿಂತ ಮೇಲಿನ ಕಟ್ಟಡಗಳಲ್ಲಿ ವಾಸಿಸುತ್ತಿರುವವರನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ. ಮೇಲಿನ ಅಂತಸ್ತುಗಳಲ್ಲಿ ಇರಿಸಲಾಗಿರುವ ವಸ್ತುಗಳನ್ನೂ ತೆರವುಗೊಳಿಸಬೇಕು ಎಂದು ಎಚ್ಚರಿಕೆ ನೀಡಿದ್ದಾರೆ. ಸೂಚನೆ ಪಾಲಿಸದಿದ್ದರೆ ಕಟ್ಟಡಗಳನ್ನೇ ಸೀಜ್ ಮಾಡುವ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ನೋಟಿಸ್‌ನಲ್ಲಿ ಎಚ್ಚರಿಸಲಾಗಿದೆ ಎನ್ನಲಾಗಿದೆ.

ಇದಕ್ಕೂ ಮುನ್ನವೇ ನಿರ್ಮಾಣ ಹಂತದಲ್ಲಿದ್ದ 16ಕ್ಕೂ ಹೆಚ್ಚು ಕಟ್ಟಡಗಳ ವಿರುದ್ಧ ಪಂಚಾಯಿತಿ ಅಧಿಕಾರಿಗಳು ಕ್ರಮ ಕೈಗೊಂಡಿದ್ದರು. ಸುಮಾರು ಒಂದು ವಾರದ ಹಿಂದೆ ಅನಧಿಕೃತವಾಗಿ ನಿರ್ಮಾಣವಾಗುತ್ತಿದ್ದ ಕಟ್ಟಡಗಳನ್ನು ಸೀಜ್ ಮಾಡಲಾಗಿತ್ತು. ಇದೀಗ ಪೂರ್ಣಗೊಂಡು ಪಿಜಿಗಳಾಗಿ ಕಾರ್ಯನಿರ್ವಹಿಸುತ್ತಿರುವ ಕಟ್ಟಡಗಳ ಮೇಲೂ ಕ್ರಮ ಕೈಗೊಳ್ಳಲಾಗಿದೆ.

ಹೊರರಾಜ್ಯಗಳಿಂದ ಬಂದು ಕೆಲವರು ಇಲ್ಲಿ ವಸತಿ ಉದ್ದೇಶಕ್ಕಾಗಿ ನಿರ್ಮಿಸಲಾದ ಲೇಔಟ್‌ಗಳನ್ನು ವಾಣಿಜ್ಯ ಚಟುವಟಿಕೆಗೆ ಬಳಸಿಕೊಂಡು ಪಿಜಿ ದಂಧೆ ನಡೆಸುತ್ತಿದ್ದಾರೆ ಎಂಬ ಆರೋಪ ಸ್ಥಳೀಯರಿಂದ ಕೇಳಿಬಂದಿದೆ. ನಿಯಮ ಉಲ್ಲಂಘಿಸಿ ನಿರ್ಮಿಸಿರುವ ಕಟ್ಟಡಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಒಟ್ಟಿನಲ್ಲಿ, ಆನೇಕಲ್ ಹೊರವಲಯದಲ್ಲಿ ಹೆಚ್ಚುತ್ತಿರುವ ಅನಧಿಕೃತ ಪಿಜಿಗಳ ವಿರುದ್ಧ ಪಂಚಾಯಿತಿ ಅಧಿಕಾರಿಗಳು ನೋಟಿಸ್ ಮೂಲಕ ಮೊದಲ ಹಂತದ ಕ್ರಮ ಕೈಗೊಂಡಿದ್ದಾರೆ. 

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Road trip (24)

ಸ್ಟಿಂಗ್ ರೂವಾರಿಗಳ ಬಂಧನಕ್ಕೆ ಹೆಚ್‌ಡಿಕೆ ಆಗ್ರಹ: ಡಿಜಿಪಿ ಸಲೀಂಗೆ ದೂರು

by ಶಾಲಿನಿ ಕೆ. ಡಿ
October 17, 2026 - 6:49 pm
0

Road trip (22)

ಟಾಪ್ ಪರ್ಫಾಮರ್ ಎಂದ ವಿಜಯ್ ದೇವರಕೊಂಡ..ತೆರೆಮೇಲೆ ಠುಸ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 17, 2026 - 5:44 pm
0

Road trip (21)

ದಸರಾ ಹಬ್ಬದ ಸಮಯದಲ್ಲಿ ಸ್ವೀಟ್ಸ್ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ

by ಶಾಲಿನಿ ಕೆ. ಡಿ
October 17, 2026 - 5:08 pm
0

Road trip (19)

ಸ್ಯಾಂಡಲ್‌ವುಡ್‌‌ನ ಸಾಯಿಪಲ್ಲವಿ ಪ್ರೇಮದ ಊರಲಿ ‘ರಮಿಕಾ’

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 17, 2026 - 4:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • Road trip (24)
    ಸ್ಟಿಂಗ್ ರೂವಾರಿಗಳ ಬಂಧನಕ್ಕೆ ಹೆಚ್‌ಡಿಕೆ ಆಗ್ರಹ: ಡಿಜಿಪಿ ಸಲೀಂಗೆ ದೂರು
    October 17, 2026 | 0
  • Road trip (21)
    ದಸರಾ ಹಬ್ಬದ ಸಮಯದಲ್ಲಿ ಸ್ವೀಟ್ಸ್ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ
    October 17, 2026 | 0
  • Road trip (17)
    ರಾಯಚೂರಿನಲ್ಲಿ ಈರುಳ್ಳಿ ಲಾರಿ ಪಲ್ಟಿ: 15 ನಿಮಿಷದಲ್ಲೇ ಈರುಳ್ಳಿ ಹೊತ್ತೊಯ್ದ ಜನ
    October 17, 2026 | 0
  • Untitled design 2026 10 17T102455.179
    ಕರ್ನಾಟಕದ 9 ಜಿಲ್ಲೆಗಳಿಗೆ ಅಕ್ಟೋಬರ್ 22ರವರೆಗೆ ಭಾರಿ ಮಳೆ ಮುನ್ಸೂಚನೆ
    October 17, 2026 | 0
  • Your paragraph text (94)
    ರಾಜ್ಯದಲ್ಲಿ ಮುಂದುವರಿಯಲಿದೆ ಮಳೆ ಆಟ: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟ!
    October 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version