• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, October 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಸಂಭ್ರಮ: ನೊಣವಿನಕೆರೆ ಶ್ರೀಗಳು ಭಾಗಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 19, 2026 - 1:02 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design (96)

ಚಿಕ್ಕಬಳ್ಳಾಪುರ: ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮದಲ್ಲಿರುವ ಶ್ರೀ ಮಧುಸೂದನ ಸಾಯಿ ಆಶ್ರಮದಲ್ಲಿ ನವರಾತ್ರಿ ಉತ್ಸವ ಭಕ್ತಿಭಾವದಿಂದ ನಡೆಯುತ್ತಿದೆ. ಉತ್ಸವದ ಏಳನೇ ದಿನದ ಕಾರ್ಯಕ್ರಮದಲ್ಲಿ ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಶ್ರೀ ಕರಿವೃಷಭ ದೇಶಿಕೇಂದ್ರ ಶಿವಯೋಗೀಶ್ವರ ಸ್ವಾಮೀಜಿ, ಅವಧೂತ ವಿನಯ್ ಗುರೂಜಿ, ವಿಧಾನ ಪರಿಷತ್ ಸದಸ್ಯೆ ಆರತಿ ಕೃಷ್ಣ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು. ಧಾರ್ಮಿಕ ಚಿಂತನೆ, ಆಧ್ಯಾತ್ಮಿಕ ಸಂದೇಶಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನವರಾತ್ರಿ ಆಚರಣೆ ಗಮನ ಸೆಳೆಯಿತು.

RelatedPosts

ನಾಡಹಬ್ಬ ಮೈಸೂರು ದಸರಾ: ಇಂದಿನ ಕಾರ್ಯಕ್ರಮಗಳ ವೇಳಾಪಟ್ಟಿ ಇಲ್ಲಿದೆ

ಬೆಂಗಳೂರಿನಲ್ಲಿ ವಕೀಲನ ತಲೆಗೆ ಗುಂಡಿಟ್ಟು ಬರ್ಬರ ಹ*ತ್ಯೆ

ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ಸಾಧ್ಯತೆ: ಹಲವು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್

ಹಿಂದೂ ದೇವಸ್ಥಾನದ ಗೋಡೆ ಮೇಲೆ ಶಿಲುಬೆ, ಮಸೀದಿ ಚಿತ್ರ ಪತ್ತೆ: ಇಬ್ಬರ ವಿರುದ್ಧ FIR

ADVERTISEMENT
ADVERTISEMENT
ಧರ್ಮ ಮತ್ತು ರಾಜಕಾರಣದ ಬಗ್ಗೆ ನೊಣವಿನಕೆರೆ ಶ್ರೀಗಳ ಸಂದೇಶ

ಕಾರ್ಯಕ್ರಮದಲ್ಲಿ ಮಾತನಾಡಿದ ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಶ್ರೀ ಕರಿವೃಷಭ ದೇಶಿಕೇಂದ್ರ ಶಿವಯೋಗೀಶ್ವರ ಸ್ವಾಮೀಜಿ, ಧರ್ಮ ಮತ್ತು ರಾಜಕಾರಣದ ನಡುವಿನ ಸಂಬಂಧದ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಧರ್ಮದಲ್ಲಿ ರಾಜಕಾರಣ ಬೆರೆಯಬಾರದು. ಆದರೆ ರಾಜಕಾರಣದಲ್ಲಿ ಧರ್ಮದ ಮೌಲ್ಯಗಳು ಉಳಿಯುವಂತಾಗಬೇಕು ಎಂದು ಅವರು ಹೇಳಿದರು.

ರಾಜಕಾರಣದಲ್ಲಿ ಮೌಲ್ಯಗಳು ಮತ್ತು ನೈತಿಕತೆ ನೆಲೆಸುವುದು ಅಗತ್ಯ. ಈ ನಿಟ್ಟಿನಲ್ಲಿ ಧಾರ್ಮಿಕ ಗುರುಗಳು ರಾಜಕಾರಣಿಗಳಿಗೆ ಆಶೀರ್ವಾದ ನೀಡುವುದರ ಜೊತೆಗೆ ಸೂಕ್ತ ಮಾರ್ಗದರ್ಶನವನ್ನೂ ಮಾಡಬೇಕು ಎಂದು ಸ್ವಾಮೀಜಿ ಅಭಿಪ್ರಾಯಪಟ್ಟರು. ಸಾರ್ವಜನಿಕ ಜೀವನದಲ್ಲಿ ಮೌಲ್ಯಗಳು ಮತ್ತು ಧಾರ್ಮಿಕ ಚಿಂತನೆಗಳು ಉತ್ತಮ ಬದಲಾವಣೆಗೆ ನೆರವಾಗಬೇಕು ಎಂಬ ಸಂದೇಶವನ್ನು ಅವರು ನೀಡಿದರು.

ನವರಾತ್ರಿಯ ಏಳನೇ ದಿನ ಆರಾಧಿಸಲಾಗುವ ಕಾಳರಾತ್ರಿ ದೇವಿಯ ಮಹತ್ವವನ್ನು ವಿವರಿಸಿದ ಸ್ವಾಮೀಜಿ, ಮಹಿಳೆಯ ಶಕ್ತಿ ಮತ್ತು ತಾಯಿಯ ಸ್ಥಾನಮಾನವನ್ನು ಸ್ಮರಿಸಿದರು. ಮಹಿಳೆ ಹಲವು ಅವತಾರಗಳನ್ನು ತಾಳಬಲ್ಲಳು. ಗುರುವಿಗೂ ಗುರು, ಪರಮ ಗುರು ಎಂದರೆ ತಾಯಿ ಎಂದು ಹೇಳುವ ಮೂಲಕ ತಾಯಿಯ ಮಹತ್ವವನ್ನು ಸಾರಿದರು.

ವಿದೇಶಗಳಲ್ಲಿಯೂ ಸಹಕಾರಕ್ಕೆ ಸಿದ್ಧ: ಆರತಿ ಕೃಷ್ಣ

ಕಾರ್ಯಕ್ರಮದಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯೆ ಆರತಿ ಕೃಷ್ಣ, ಒನ್ ವರ್ಲ್ಡ್ ಒನ್ ಫ್ಯಾಮಿಲಿ ಮಿಷನ್ ಸಂಸ್ಥೆಯ ಸೇವಾ ಕಾರ್ಯಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಸಂಸ್ಥೆಯು ವಿದೇಶಗಳಲ್ಲಿ ಯಾವುದೇ ಯೋಜನೆಗಳನ್ನು ಕೈಗೆತ್ತಿಕೊಂಡರೂ ಅಗತ್ಯ ಸಹಕಾರ ನೀಡಲು ಸಿದ್ಧರಿದ್ದೇವೆ ಎಂದು ಭರವಸೆ ನೀಡಿದರು.

ಅಂಧಕಾರ ನಿವಾರಿಸುವ ಶಕ್ತಿ ಕಾಳರಾತ್ರಿ ದೇವಿಗಿದೆ: ಮಧುಸೂದನ ಸಾಯಿ

ಒನ್ ವರ್ಲ್ಡ್ ಒನ್ ಫ್ಯಾಮಿಲಿ ಮಿಷನ್ ಸಂಸ್ಥಾಪಕ ಸದ್ಗುರು ಶ್ರೀ ಮಧುಸೂದನ ಸಾಯಿ ಅವರು ಕಾಳರಾತ್ರಿ ದೇವಿಯ ಆರಾಧನೆಯ ಆಧ್ಯಾತ್ಮಿಕ ಮಹತ್ವವನ್ನು ವಿವರಿಸಿದರು. ಮನುಷ್ಯನ ಬದುಕಿನ ಅಂಧಕಾರವನ್ನು ನಿವಾರಿಸುವ ಶಕ್ತಿ ಜಗನ್ಮಾತೆ ಕಾಳರಾತ್ರಿ ದೇವಿಗಿದೆ ಎಂದು ಹೇಳಿದರು.

ಕತ್ತಲಿನಲ್ಲಿ ಭಯಗೊಂಡ ಮಗು ತನ್ನ ತಾಯಿಯನ್ನು ಕರೆಯುವಂತೆ, ಮನುಷ್ಯರೂ ತಮ್ಮೊಳಗಿನ ಅಜ್ಞಾನ, ಭಯ ಮತ್ತು ಅಂಧಕಾರವನ್ನು ದೂರಮಾಡಿಕೊಳ್ಳಲು ಜಗನ್ಮಾತೆಯ ಮೊರೆ ಹೋಗಬೇಕು ಎಂದು ಅವರು ತಿಳಿಸಿದರು. ದೇವಿಯ ಆರಾಧನೆ ಕೇವಲ ಆಚರಣೆಗೆ ಸೀಮಿತವಾಗದೆ, ಆತ್ಮಪರಿಶೀಲನೆ ಮತ್ತು ಆಂತರಿಕ ಪರಿವರ್ತನೆಗೆ ದಾರಿಯಾಗಬೇಕು ಎಂಬ ಸಂದೇಶವನ್ನು ಅವರ ಮಾತುಗಳು ಸಾರಿದವು.

ನವರಾತ್ರಿಯ ಏಳನೇ ದಿನದ ಕಾಳರಾತ್ರಿ ಆರಾಧನೆಯು ಕೆಟ್ಟ ಶಕ್ತಿಗಳ ವಿರುದ್ಧದ ಹೋರಾಟ, ಧೈರ್ಯ ಮತ್ತು ಅಜ್ಞಾನದ ನಿವಾರಣೆಯ ಸಂಕೇತವಾಗಿ ಪರಿಗಣಿಸಲಾಗುತ್ತದೆ. 

ಅವಧೂತ ಶ್ರೀ ವಿನಯ್ ಗುರೂಜಿ ಮಾತನಾಡಿ, ಮುದ್ದೇನಹಳ್ಳಿಯಲ್ಲಿ ಕರುಣೆ ಮತ್ತು ಪಾರದರ್ಶಕತೆ ನೆಲೆಸಿವೆ ಎಂದು ಬಣ್ಣಿಸಿದರು. ಮಾನವೀಯತೆ ಮತ್ತು ದೈವತ್ವದ ಸಂಗಮ ಇಲ್ಲಿ ಕಾಣಸಿಗುತ್ತದೆ. ಜೀವನದ ಉದ್ದೇಶವನ್ನು ಕಲಿಸುವ ಸಂಸ್ಥೆಯಾಗಿ ಸತ್ಯಸಾಯಿ ಸಂಸ್ಥೆ ಕಾರ್ಯನಿರ್ವಹಿಸುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಪ್ರಶಾಂತಿ ಬಾಲಮಂದಿರ ಟ್ರಸ್ಟ್ ಅಧ್ಯಕ್ಷ ಬಿ.ಎನ್. ನರಸಿಂಹಮೂರ್ತಿ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು. ಧಾರ್ಮಿಕ ಉಪನ್ಯಾಸಗಳ ಬಳಿಕ ಖ್ಯಾತ ನೃತ್ಯ ಕಲಾವಿದೆ ಸೋನಾಲ್ ಮಾನ್ ಸಿಂಗ್ ಅವರ ತಂಡದಿಂದ ವಿಶೇಷ ನೃತ್ಯ ಕಾರ್ಯಕ್ರಮ ನಡೆಯಿತು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (99)

ಯುರೋಪ್ ಖಂಡದ ಹಲವು ದೇಶಗಳಲ್ಲಿ ಜೆನ್ ಝಿ ಪ್ರತಿಭಟನೆ

by ಶಾಲಿನಿ ಕೆ. ಡಿ
October 19, 2026 - 2:03 pm
0

Untitled design (98)

ದಸರಾ ಸಮಯದಲ್ಲಿ ಆಭರಣ ಪ್ರಿಯರಿಗೆ ಬಿಗ್ ಶಾಕ್: ಇಂದು ಚಿನ್ನದ ಬೆಲೆ ಏರಿಕೆ

by ಶಾಲಿನಿ ಕೆ. ಡಿ
October 19, 2026 - 1:36 pm
0

Untitled design (96)

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಸಂಭ್ರಮ: ನೊಣವಿನಕೆರೆ ಶ್ರೀಗಳು ಭಾಗಿ

by ಶಾಲಿನಿ ಕೆ. ಡಿ
October 19, 2026 - 1:02 pm
0

Untitled design (93)

ಟೈಗರ್‌ ಶ್ರಾಫ್‌ ಕಾರಿನ ಮೇಲೆ ಗುಂಡಿನ ದಾಳಿ ಕೇಸ್‌; ಓರ್ವ ಅಪ್ರಾಪ್ತ ಸೇರಿ ಮೂವರ ಬಂಧನ

by ಶಾಲಿನಿ ಕೆ. ಡಿ
October 19, 2026 - 12:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • ನವರಾತ್ರಿ 9ನೇ ದಿನ (5)
    ನಾಡಹಬ್ಬ ಮೈಸೂರು ದಸರಾ: ಇಂದಿನ ಕಾರ್ಯಕ್ರಮಗಳ ವೇಳಾಪಟ್ಟಿ ಇಲ್ಲಿದೆ
    October 19, 2026 | 0
  • ನವರಾತ್ರಿ 9ನೇ ದಿನ (3)
    ಬೆಂಗಳೂರಿನಲ್ಲಿ ವಕೀಲನ ತಲೆಗೆ ಗುಂಡಿಟ್ಟು ಬರ್ಬರ ಹ*ತ್ಯೆ
    October 19, 2026 | 0
  • Untitled design (90)
    ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ಸಾಧ್ಯತೆ: ಹಲವು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್
    October 19, 2026 | 0
  • ರಸ್ತೆಯಲ್ಲಿ (9)
    ಹಿಂದೂ ದೇವಸ್ಥಾನದ ಗೋಡೆ ಮೇಲೆ ಶಿಲುಬೆ, ಮಸೀದಿ ಚಿತ್ರ ಪತ್ತೆ: ಇಬ್ಬರ ವಿರುದ್ಧ FIR
    October 18, 2026 | 0
  • ರಸ್ತೆಯಲ್ಲಿ (7)
    ನೈಸ್ ರಸ್ತೆಯಲ್ಲಿ ಭೀಕರ ಅಪಘಾತ: ಧಗಧಗನೆ ಹೊತ್ತಿ ಉರಿದ ಕೆಮಿಕಲ್ ಟ್ಯಾಂಕರ್
    October 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version