• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, November 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಸಾಧ್ಯತೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 2, 2026 - 10:36 am
in ಕರ್ನಾಟಕ
0 0
0
Untitled Design 2026 11 02T103109.059

ಬೆಂಗಳೂರು: ರಾಜ್ಯದಲ್ಲಿ ಚಳಿಗಾಲದ ವಾತಾವರಣ ಆರಂಭವಾಗುವ ಮುನ್ಸೂಚನೆಯ ನಡುವೆಯೇ ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರಿಸುವ ಸಾಧ್ಯತೆ ಇದೆ. ಬಂಗಾಳಕೊಲ್ಲಿಯ ವಾತಾವರಣದಲ್ಲಿನ ಬದಲಾವಣೆಗಳ ಪರಿಣಾಮವಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆ, ಗುಡುಗು ಹಾಗೂ ಮಿಂಚಿನ ವಾತಾವರಣ ನಿರ್ಮಾಣವಾಗುವ ನಿರೀಕ್ಷೆಯಿದೆ. ಇಂದು (ನವೆಂಬರ್ 2) ಬೆಂಗಳೂರು ನಗರ ಮತ್ತು ಗ್ರಾಮಾಂತರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಇದರೊಂದಿಗೆ ನವೆಂಬರ್ 5ರವರೆಗೆ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯೂ ಇದೆ. ಕೆಲವು ಪ್ರದೇಶಗಳಲ್ಲಿ ಗುಡುಗು ಮತ್ತು ಮಿಂಚು ಕಾಣಿಸಿಕೊಳ್ಳುವ ನಿರೀಕ್ಷೆಯಿರುವುದರಿಂದ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

RelatedPosts

ಹಾಸನಾಂಬೆ ದರ್ಶನಕ್ಕೆ ಹರಿದುಬಂದ ಜನಸಾಗರ: ಮೂರೇ ದಿನದಲ್ಲಿ ₹5 ಕೋಟಿಗೂ ಅಧಿಕ ಆದಾಯ!

ನಂದಿನಿ ಹಾಲಿನ ಬೆಲೆ ಏರಿಕೆ ಎಫೆಕ್ಟ್‌: ರಾಜ್ಯಾದ್ಯಂತ ಕಾಫಿ, ಟೀ ದರ ಹೆಚ್ಚಳ

ಪ್ರೇಯಸಿ ಕರೆದಿದ್ದಕ್ಕೆ ಬಂದ ಪ್ರಿಯಕರನನ್ನು ಕಂಬಕ್ಕೆ ಕಟ್ಟಿ ಅರೆಬೆತ್ತಲೆಗೊಳಿಸಿ ಥಳಿತ

ಬೆಂಗಳೂರು-ಮುಂಬೈ ನಡುವೆ ವಂದೇ ಭಾರತ್ ಸ್ಲೀಪರ್ ರೈಲಿಗೆ ಚಾಲನೆ ನೀಡಿದ ಸಚಿವ ಅಶ್ವಿನಿ ವೈಷ್ಣವ್

ADVERTISEMENT
ADVERTISEMENT
ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಭಾಗದಲ್ಲಿ ಮುಂದಿನ ದಿನಗಳಲ್ಲಿ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯೂ ಇದೆ.

ಉತ್ತರ ಕರ್ನಾಟಕದ ಜಿಲ್ಲೆಗಳಲ್ಲೂ ಮಳೆ ಮುನ್ಸೂಚನೆ

ಉತ್ತರ ಒಳನಾಡು ಕರ್ನಾಟಕದ ಹಲವು ಜಿಲ್ಲೆಗಳಲ್ಲೂ ಮಳೆಯ ವಾತಾವರಣ ನಿರ್ಮಾಣವಾಗುವ ಸಾಧ್ಯತೆಯಿದೆ. ಬೀದರ್, ಕಲಬುರಗಿ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯನ್ನೂ ಹವಾಮಾನ ಇಲಾಖೆ ಸೂಚಿಸಿದೆ.

ಇನ್ನು ಬಾಗಲಕೋಟೆ, ವಿಜಯಪುರ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಹಾಗೂ ಕೊಪ್ಪಳ ಜಿಲ್ಲೆಗಳ ಕೆಲವು ಭಾಗಗಳಲ್ಲೂ ಮಳೆಯಾಗುವ ಸಾಧ್ಯತೆಯಿದೆ. 

ಬೆಂಗಳೂರು ಸೇರಿ 8 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

ದಕ್ಷಿಣ ಒಳನಾಡು ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಅದರಲ್ಲೂ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆಯಾದರೆ ವಾಹನ ಸಂಚಾರದ ಮೇಲೆ ಪರಿಣಾಮ ಬೀರುವ ಸಾಧ್ಯತೆಯೂ ಇದೆ.  

ಇದಲ್ಲದೆ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ನವೆಂಬರ್ 5ರವರೆಗೆ ಬಿರುಗಾಳಿ, ಗುಡುಗು-ಮಿಂಚಿನ ಎಚ್ಚರಿಕೆ

ರಾಜ್ಯದಲ್ಲಿ ನವೆಂಬರ್ 1ರಿಂದ 5ರವರೆಗೆ ಹವಾಮಾನದಲ್ಲಿ ಏರಿಳಿತ ಮುಂದುವರಿಯುವ ನಿರೀಕ್ಷೆಯಿದೆ. ಈ ಅವಧಿಯಲ್ಲಿ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಅಲ್ಲಲ್ಲಿ ಗುಡುಗು ಮತ್ತು ಮಿಂಚು ಸಂಭವಿಸಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

 ಇನ್ನು ಭಾನುವಾರ ಸಂಜೆಗೆ ಕೊನೆಗೊಂಡ 24 ಗಂಟೆಗಳ ಅವಧಿಯಲ್ಲಿ ದಕ್ಷಿಣ ಒಳನಾಡು ಕರ್ನಾಟಕದ ಕೆಲವು ಪ್ರದೇಶಗಳಲ್ಲಿ ಮಳೆಯಾಗಿದೆ. ಆದರೆ ಕರಾವಳಿ ಹಾಗೂ ಉತ್ತರ ಒಳನಾಡು ಕರ್ನಾಟಕದ ಬಹುತೇಕ ಭಾಗಗಳಲ್ಲಿ ಒಣಹವೆ ಮುಂದುವರಿದಿತ್ತು.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled Design 2026 11 02T122648.908

ಬರಿಗೈಯಲ್ಲೇ ಶೌಚಾಲಯ ಸ್ವಚ್ಛಗೊಳಿಸಿದ ಬಿಜೆಪಿ ಸಂಸದ ಜನಾರ್ದನ ಮಿಶ್ರಾ: ವಿಡಿಯೋ ವೈರಲ್

by ಶಾಲಿನಿ ಕೆ. ಡಿ
November 2, 2026 - 12:27 pm
0

Untitled Design 2026 11 02T120046.633

ಹಾಸನಾಂಬೆ ದರ್ಶನಕ್ಕೆ ಹರಿದುಬಂದ ಜನಸಾಗರ: ಮೂರೇ ದಿನದಲ್ಲಿ ₹5 ಕೋಟಿಗೂ ಅಧಿಕ ಆದಾಯ!

by ಶಾಲಿನಿ ಕೆ. ಡಿ
November 2, 2026 - 12:01 pm
0

Untitled Design 2026 11 02T114322.922

ನಂದಿನಿ ಹಾಲಿನ ಬೆಲೆ ಏರಿಕೆ ಎಫೆಕ್ಟ್‌: ರಾಜ್ಯಾದ್ಯಂತ ಕಾಫಿ, ಟೀ ದರ ಹೆಚ್ಚಳ

by ಶಾಲಿನಿ ಕೆ. ಡಿ
November 2, 2026 - 11:44 am
0

Untitled Design 2026 11 02T112542.788

ಬಂಗಾಳಕೊಲ್ಲಿಯಲ್ಲಿ ಮುರಸು ಚಂಡಮಾರುತ ಅಬ್ಬರ: ಆಂಧ್ರ, ತಮಿಳುನಾಡು, ಒಡಿಶಾದಲ್ಲಿ ಹೈ ಅಲರ್ಟ್

by ಶಾಲಿನಿ ಕೆ. ಡಿ
November 2, 2026 - 11:26 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled Design 2026 11 02T120046.633
    ಹಾಸನಾಂಬೆ ದರ್ಶನಕ್ಕೆ ಹರಿದುಬಂದ ಜನಸಾಗರ: ಮೂರೇ ದಿನದಲ್ಲಿ ₹5 ಕೋಟಿಗೂ ಅಧಿಕ ಆದಾಯ!
    November 2, 2026 | 0
  • Untitled Design 2026 11 02T114322.922
    ನಂದಿನಿ ಹಾಲಿನ ಬೆಲೆ ಏರಿಕೆ ಎಫೆಕ್ಟ್‌: ರಾಜ್ಯಾದ್ಯಂತ ಕಾಫಿ, ಟೀ ದರ ಹೆಚ್ಚಳ
    November 2, 2026 | 0
  • ಪ್ರಿಯಕರನನ್ನು
    ಪ್ರೇಯಸಿ ಕರೆದಿದ್ದಕ್ಕೆ ಬಂದ ಪ್ರಿಯಕರನನ್ನು ಕಂಬಕ್ಕೆ ಕಟ್ಟಿ ಅರೆಬೆತ್ತಲೆಗೊಳಿಸಿ ಥಳಿತ
    November 1, 2026 | 0
  • ಮಾಡಿಕೊಂಡ (4)
    ಬೆಂಗಳೂರು-ಮುಂಬೈ ನಡುವೆ ವಂದೇ ಭಾರತ್ ಸ್ಲೀಪರ್ ರೈಲಿಗೆ ಚಾಲನೆ ನೀಡಿದ ಸಚಿವ ಅಶ್ವಿನಿ ವೈಷ್ಣವ್
    November 1, 2026 | 0
  • ಮಾಡಿಕೊಂಡ (2)
    ಹಿಟ್‌ ಆ್ಯಂಡ್‌ ರನ್‌ ಕೇಸ್‌: ಅಪಘಾತ ಮಾಡಿದ್ದೇ ಗೊತ್ತಿರಲಿಲ್ಲ ಎಂದ ಯೂಟ್ಯೂಬರ್ ನಿಖಿಲ್
    November 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version