• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, November 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಕಾಂಗ್ರೆಸ್ ರ‍್ಯಾಲಿಯಿಂದ ದೆಹಲಿ ವ್ಯಾಪಾರಿಗಳಿಗೆ ₹11 ಸಾವಿರ ಕೋಟಿ ನಷ್ಟ: ಬಿಜೆಪಿ ಕಾರಣ ಎಂದ ರಾಹುಲ್ ಗಾಂಧಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 2, 2026 - 4:51 pm
in ದೇಶ
0 0
0
Untitled design 2026 11 02T164938.624

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ಕಾಂಗ್ರೆಸ್ ನೇತೃತ್ವದ ಇಂಡಿಯಾ ಬ್ಲಾಕ್ ರ‍್ಯಾಲಿ ಇದೀಗ ರಾಜಕೀಯ ವಿವಾದದ ಜೊತೆಗೆ ವ್ಯಾಪಾರ ವಲಯದಲ್ಲೂ ಚರ್ಚೆಗೆ ಕಾರಣವಾಗಿದೆ. ರಾಮಲೀಲಾ ಮೈದಾನದಲ್ಲಿ ನವೆಂಬರ್ 1ರಂದು ನಡೆದ ರ‍್ಯಾಲಿಯಿಂದಾಗಿ ದೆಹಲಿಯ ವ್ಯಾಪಾರಿಗಳಿಗೆ ಸುಮಾರು ₹11,000 ಕೋಟಿ ರೂಪಾಯಿ ಮೌಲ್ಯದ ವಹಿವಾಟು ನಷ್ಟವಾಗಿದೆ ಎಂದು ದೆಹಲಿಯ ವ್ಯಾಪಾರ ಮತ್ತು ಕೈಗಾರಿಕಾ ಮಂಡಳಿ (CTI) ಅಂದಾಜಿಸಿದೆ. ದೀಪಾವಳಿ ಹಬ್ಬದ ನಂತರದ ಪ್ರಮುಖ ಶಾಪಿಂಗ್ ಸಮಯದಲ್ಲಿ ರ‍್ಯಾಲಿ ನಡೆದಿದ್ದರಿಂದ ಮಾರುಕಟ್ಟೆಗಳ ವ್ಯಾಪಾರ ಚಟುವಟಿಕೆಗಳಿಗೆ ಹೊಡೆತ ಬಿದ್ದಿದೆ ಎಂಬುದು ವ್ಯಾಪಾರ ಸಂಘಟನೆಯ ಆರೋಪ.

ಇನ್ನೊಂದೆಡೆ, ದೆಹಲಿಯ ಅಂಗಡಿಗಳನ್ನು ಬಲವಂತವಾಗಿ ಮುಚ್ಚಿಸಲಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಆರೋಪಿಸಿದ್ದಾರೆ. ಹೀಗಾಗಿ ವ್ಯಾಪಾರ ನಷ್ಟದ ವಿಚಾರ ಇದೀಗ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ರಾಜಕೀಯ ವಾಕ್ಸಮರಕ್ಕೂ ಕಾರಣವಾಗಿದೆ.

RelatedPosts

ದೀಪಾವಳಿ ಹಬ್ಬಕ್ಕೆ ದೆಹಲಿಯಲ್ಲಿ ಹಸಿರು ಪಟಾಕಿ ಸಿಡಿಸಲು ಸುಪ್ರೀಂ ಅನುಮತಿ

ಬರಿಗೈಯಲ್ಲೇ ಶೌಚಾಲಯ ಸ್ವಚ್ಛಗೊಳಿಸಿದ ಬಿಜೆಪಿ ಸಂಸದ ಜನಾರ್ದನ ಮಿಶ್ರಾ: ವಿಡಿಯೋ ವೈರಲ್

ಬಂಗಾಳಕೊಲ್ಲಿಯಲ್ಲಿ ಮುರಸು ಚಂಡಮಾರುತ ಅಬ್ಬರ: ಆಂಧ್ರ, ತಮಿಳುನಾಡು, ಒಡಿಶಾದಲ್ಲಿ ಹೈ ಅಲರ್ಟ್

SIR ವಿರುದ್ಧ ದೆಹಲಿಯಲ್ಲಿ INDIA ಒಕ್ಕೂಟದ ಬೃಹತ್ ಪ್ರತಿಭಟನೆ: ಬಿಜೆಪಿಯಿಂದಲೂ ಪ್ರತ್ಯೇಕ ರ‍್ಯಾಲಿ

ADVERTISEMENT
ADVERTISEMENT
ಚಿಲ್ಲರೆ, ಸಗಟು ವ್ಯಾಪಾರಕ್ಕೆ ₹8,800 ಕೋಟಿ ನಷ್ಟ

CTI ಅಧ್ಯಕ್ಷ ಬ್ರಿಜೇಶ್ ಗೋಯಲ್ ಅವರ ಪ್ರಕಾರ, ನವೆಂಬರ್ 1ರಂದು ದೆಹಲಿಯಲ್ಲಿ ಒಟ್ಟಾರೆ ಸುಮಾರು ₹11,000 ಕೋಟಿ ಮೌಲ್ಯದ ವ್ಯಾಪಾರ ವಹಿವಾಟು ನಷ್ಟವಾಗಿದೆ. ಈ ಪೈಕಿ ಚಿಲ್ಲರೆ ಮತ್ತು ಸಗಟು ವ್ಯಾಪಾರ ಕ್ಷೇತ್ರದಲ್ಲಿಯೇ ಸುಮಾರು ₹8,800 ಕೋಟಿ ನಷ್ಟವಾಗಿರುವುದಾಗಿ ಸಂಘಟನೆ ಅಂದಾಜಿಸಿದೆ.

ರಾಮಲೀಲಾ ಮೈದಾನದ ಸುತ್ತಮುತ್ತಲಿನ ಐದು ಕಿಲೋಮೀಟರ್ ವ್ಯಾಪ್ತಿಯಲ್ಲಿರುವ ಪ್ರಮುಖ ಮಾರುಕಟ್ಟೆಗಳಲ್ಲಿ ವ್ಯಾಪಾರ ಚಟುವಟಿಕೆಗಳು ಬಹುತೇಕ ಸ್ಥಗಿತಗೊಂಡಿದ್ದವು ಎಂದು CTI ಹೇಳಿದೆ. ಕಾಶ್ಮೀರಿ ಗೇಟ್, ಚಾಂದಿನಿ ಚೌಕ್, ಚಾವ್ರಿ ಬಜಾರ್, ಖಾರಿ ಬಾವೊಲಿ, ಸದರ್ ಬಜಾರ್, ದರಿಯಾಗಂಜ್, ಕನ್ನಾಟ್ ಪ್ಲೇಸ್, ಪಾಲಿಕಾ ಬಜಾರ್ ಹಾಗೂ ಕರೋಲ್ ಬಾಗ್ ಸೇರಿದಂತೆ ಹಲವು ಪ್ರಮುಖ ವಾಣಿಜ್ಯ ಪ್ರದೇಶಗಳು ಇದರಿಂದ ಪರಿಣಾಮ ಎದುರಿಸಿವೆ ಎಂದು ತಿಳಿಸಿದೆ.

ಈ ಮಾರುಕಟ್ಟೆಗಳಲ್ಲಿ ಸುಮಾರು ಮೂರು ಲಕ್ಷ ಅಂಗಡಿಗಳಿದ್ದು, ಅವುಗಳ ಪೈಕಿ 2.5 ಲಕ್ಷ ಅಂಗಡಿಗಳು ಮುಚ್ಚಿದ್ದವು ಎಂಬುದು CTI ನೀಡಿರುವ ಅಂದಾಜು. ಇದರಿಂದ ಶೇ.80ರಷ್ಟು ವ್ಯಾಪಾರ ಚಟುವಟಿಕೆ ಸ್ಥಗಿತಗೊಂಡಿದೆ ಎಂದು ಸಂಘಟನೆ ಹೇಳಿದೆ.

ಸರಕು ಸಾಗಣೆ, ಹೋಟೆಲ್ ಉದ್ಯಮಕ್ಕೂ ಹೊಡೆತ

ರ‍್ಯಾಲಿಯ ಹಿನ್ನೆಲೆಯಲ್ಲಿ ರಸ್ತೆ ಸಂಚಾರ ನಿರ್ಬಂಧಗಳು ಮತ್ತು ಜನಸಂದಣಿಯಿಂದ ಸರಕು ಸಾಗಣೆ ಹಾಗೂ ಲಾಜಿಸ್ಟಿಕ್ಸ್ ಚಟುವಟಿಕೆಗಳಿಗೂ ಅಡ್ಡಿಯಾಗಿದೆ ಎಂದು CTI ಆರೋಪಿಸಿದೆ. ಸುಮಾರು 10 ಕಿಲೋಮೀಟರ್ ವ್ಯಾಪ್ತಿಯಲ್ಲಿ ಸರಕುಗಳ ಚಲನೆಗೆ ತೊಂದರೆಯಾಗಿದ್ದರಿಂದ ಸಾರಿಗೆ ಮತ್ತು ಲಾಜಿಸ್ಟಿಕ್ಸ್ ಕ್ಷೇತ್ರದಲ್ಲಿ ಸುಮಾರು ₹1,500 ಕೋಟಿ ಮೌಲ್ಯದ ವಹಿವಾಟು ನಷ್ಟವಾಗಿದೆ ಎಂದು ಅಂದಾಜಿಸಿದೆ.

ಇನ್ನು ಹೋಟೆಲ್, ರೆಸ್ಟೋರೆಂಟ್ ಮತ್ತು ಪ್ರವಾಸೋದ್ಯಮ ಕ್ಷೇತ್ರಕ್ಕೂ ಹೊಡೆತ ಬಿದ್ದಿದೆ ಎನ್ನಲಾಗಿದೆ. ಈ ವಲಯದಲ್ಲಿ ಸುಮಾರು ₹500 ಕೋಟಿ ನಷ್ಟವಾಗಿರುವುದಾಗಿ CTI ತಿಳಿಸಿದೆ. ಕನ್ನಾಟ್ ಪ್ಲೇಸ್, ಕರೋಲ್ ಬಾಗ್, ಪಹರ್‌ಗಂಜ್, ಚಾಂದಿನಿ ಚೌಕ್ ಹಾಗೂ ದರಿಯಾಗಂಜ್ ಪ್ರದೇಶಗಳಲ್ಲಿನ 2,000ಕ್ಕೂ ಹೆಚ್ಚು ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ಅತಿಥಿಗೃಹಗಳು ಮತ್ತು ಧಾಬಾಗಳಲ್ಲಿ ಬುಕಿಂಗ್‌ಗಳು ರದ್ದಾಗಿದ್ದವು ಎಂದು ಸಂಘಟನೆ ಹೇಳಿದೆ.

ರ‍್ಯಾಲಿ ಮುಂದೂಡುವಂತೆ ಮನವಿ ಮಾಡಿದ್ದ ವ್ಯಾಪಾರಿಗಳು

ದೀಪಾವಳಿ ಹಬ್ಬದ ನಂತರ ರ‍್ಯಾಲಿ ಆಯೋಜಿಸುವಂತೆ ವ್ಯಾಪಾರಿಗಳ ಸಂಘವು ಈ ಹಿಂದೆಯೇ ರಾಹುಲ್ ಗಾಂಧಿ ಸೇರಿದಂತೆ ವಿರೋಧ ಪಕ್ಷಗಳ ನಾಯಕರಿಗೆ ಪತ್ರ ಬರೆದಿತ್ತು ಎನ್ನಲಾಗಿದೆ. ಹಬ್ಬದ ಸಮಯದಲ್ಲಿ ಗ್ರಾಹಕರ ಸಂಖ್ಯೆ ಹೆಚ್ಚಾಗುವುದರಿಂದ ಮಾರುಕಟ್ಟೆಗಳಲ್ಲಿ ವ್ಯಾಪಾರ ಚಟುವಟಿಕೆಗಳು ಗರಿಗೆದರಿರುತ್ತವೆ. ಇಂತಹ ಸಂದರ್ಭದಲ್ಲಿ ದೊಡ್ಡ ರ‍್ಯಾಲಿ ನಡೆದರೆ ಅಂಗಡಿಗಳ ವಹಿವಾಟಿಗೆ ತೊಂದರೆಯಾಗಬಹುದು ಎಂಬ ಕಾರಣ ನೀಡಿ ರ‍್ಯಾಲಿಯನ್ನು ಮುಂದೂಡುವಂತೆ ಮನವಿ ಮಾಡಲಾಗಿತ್ತು ಎಂದು CTI ತಿಳಿಸಿದೆ.

‘ಅಂಗಡಿಗಳನ್ನು ಬಿಜೆಪಿ ಬಲವಂತವಾಗಿ ಮುಚ್ಚಿಸಿದೆ’: ರಾಹುಲ್ ಗಾಂಧಿ

ಇನ್ನೊಂದೆಡೆ, ವ್ಯಾಪಾರ ನಷ್ಟದ ಆರೋಪಕ್ಕೆ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, ದೆಹಲಿಯಲ್ಲಿ ಅಂಗಡಿಗಳನ್ನು ಬಲವಂತವಾಗಿ ಮುಚ್ಚಿಸಲಾಗಿದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರ‍್ಯಾಲಿಗೆ ಆಗಮಿಸುವವರು ಸ್ಥಳೀಯ ಮಾರುಕಟ್ಟೆಗಳಲ್ಲಿ ಶಾಪಿಂಗ್ ಮಾಡುವಂತೆ ತಾವು ಮನವಿ ಮಾಡಿದ್ದೆವು. ಆದರೆ ಕನ್ನಾಟ್ ಪ್ಲೇಸ್‌ಗೆ ಭೇಟಿ ನೀಡಿದಾಗ ಪ್ರತಿಯೊಂದು ಅಂಗಡಿಯನ್ನೂ ಬಿಜೆಪಿ ಬಲವಂತವಾಗಿ ಮುಚ್ಚಿಸಿದೆ ಎಂದು ವಿಡಿಯೋವೊಂದರಲ್ಲಿ ಆರೋಪಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled Design 2026 11 02T183849.135

ದೀಪಾವಳಿ ಹಬ್ಬಕ್ಕೆ ದೆಹಲಿಯಲ್ಲಿ ಹಸಿರು ಪಟಾಕಿ ಸಿಡಿಸಲು ಸುಪ್ರೀಂ ಅನುಮತಿ

by ಶಾಲಿನಿ ಕೆ. ಡಿ
November 2, 2026 - 6:41 pm
0

Untitled Design 2026 11 02T182957.381

ಯಾದಗಿರಿಯಲ್ಲಿ ವಂದೇ ಭಾರತ್ ಸ್ಲೀಪರ್ ಎಕ್ಸ್‌ಪ್ರೆಸ್‌ ರೈಲು ನಿಲುಗಡೆಗೆ ಶಾಸಕ ಶರಣಗೌಡ ಕಂದಕೂರು ಚಾಲನೆ

by ಶಾಲಿನಿ ಕೆ. ಡಿ
November 2, 2026 - 6:30 pm
0

Untitled Design 2026 11 02T181150.232

ದೀಪಾವಳಿ, ಧನತ್ರಯೋದಶಿಗೆ ಬಂಪರ್‌ ಆಫರ್: ಹತ್ತೇ ನಿಮಿಷದಲ್ಲಿ ಮನೆ ಬಾಗಿಲಿಗೆ ಚಿನ್ನ ಜೊತೆಗೆ ಬೆಳ್ಳಿ ಫ್ರೀ!

by ಶಾಲಿನಿ ಕೆ. ಡಿ
November 2, 2026 - 6:13 pm
0

Untitled Design 2026 11 02T180931.494

ರೋಬೋಟ್‌ ಜಿಯಾಗೆ ಆ್ಯಕ್ಷನ್ ಕಟ್ ಹೇಳಿದ ಸಿಂಪಲ್ ಸುನಿ

by ಶಾಲಿನಿ ಕೆ. ಡಿ
November 2, 2026 - 6:06 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled Design 2026 11 02T183849.135
    ದೀಪಾವಳಿ ಹಬ್ಬಕ್ಕೆ ದೆಹಲಿಯಲ್ಲಿ ಹಸಿರು ಪಟಾಕಿ ಸಿಡಿಸಲು ಸುಪ್ರೀಂ ಅನುಮತಿ
    November 2, 2026 | 0
  • Untitled Design 2026 11 02T122648.908
    ಬರಿಗೈಯಲ್ಲೇ ಶೌಚಾಲಯ ಸ್ವಚ್ಛಗೊಳಿಸಿದ ಬಿಜೆಪಿ ಸಂಸದ ಜನಾರ್ದನ ಮಿಶ್ರಾ: ವಿಡಿಯೋ ವೈರಲ್
    November 2, 2026 | 0
  • Untitled Design 2026 11 02T112542.788
    ಬಂಗಾಳಕೊಲ್ಲಿಯಲ್ಲಿ ಮುರಸು ಚಂಡಮಾರುತ ಅಬ್ಬರ: ಆಂಧ್ರ, ತಮಿಳುನಾಡು, ಒಡಿಶಾದಲ್ಲಿ ಹೈ ಅಲರ್ಟ್
    November 2, 2026 | 0
  • Untitled Design 2026 11 01T130556.631
    SIR ವಿರುದ್ಧ ದೆಹಲಿಯಲ್ಲಿ INDIA ಒಕ್ಕೂಟದ ಬೃಹತ್ ಪ್ರತಿಭಟನೆ: ಬಿಜೆಪಿಯಿಂದಲೂ ಪ್ರತ್ಯೇಕ ರ‍್ಯಾಲಿ
    November 1, 2026 | 0
  • ಆತ್ಮಹತ್ಯೆ! (17)
    2ನೇ ಮದುವೆಯಾದ ಜಮ್ಮು ಕಾಶ್ಮೀರ ಸಿಎಂ!: ಸೋಶಿಯಲ್ ಮೀಡಿಯಾದಲ್ಲಿ ಮದುವೆ ಫೋಟೋ ವೈರಲ್
    October 31, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version