• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, November 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪ್ರಯಾಣಿಕರಿಗೆ ಬಿಗ್ ಶಾಕ್: ಬಸ್ ಟಿಕೆಟ್ ದರ ಏರಿಕೆ, ಇಂದು ಮಧ್ಯರಾತ್ರಿಯಿಂದಲೇ ಜಾರಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 4, 2026 - 12:28 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
BMTC, KSRTC ಟಿಕೆಟ್ ದರ 9 ರೂ. ಹೆಚ್ಚಳ

ಬೆಂಗಳೂರು: ರಾಜ್ಯದ ಜನರಿಗೆ ಮತ್ತೊಂದು ಬೆಲೆ ಏರಿಕೆಯ ಬಿಸಿ ತಟ್ಟಿದೆ. ಕೆಎಸ್‌ಆರ್‌ಟಿಸಿ (KSRTC), ಬಿಎಂಟಿಸಿ (BMTC) ಸೇರಿದಂತೆ ಕರ್ನಾಟಕದ ನಾಲ್ಕೂ ಸಾರಿಗೆ ನಿಗಮಗಳ ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಸಂಬಂಧಿಸಿದಂತೆ ಅಧಿಕೃತ ಆದೇಶ ಹೊರಬಿದ್ದಿದೆ. ನವೆಂಬರ್ 4 ಮತ್ತು 5ರ ನಡುವಿನ ಮಧ್ಯರಾತ್ರಿಯಿಂದಲೇ ಪರಿಷ್ಕೃತ ಟಿಕೆಟ್ ದರಗಳು ಜಾರಿಗೆ ಬರಲಿವೆ. ಸಾಮಾನ್ಯ ಸಾರಿಗೆ ಬಸ್‌ಗಳಲ್ಲಿ ಗರಿಷ್ಠ ₹9ರವರೆಗೆ ಹಾಗೂ ವೇಗಧೂತ ಬಸ್‌ಗಳಲ್ಲಿ ಗರಿಷ್ಠ ₹18ರವರೆಗೆ ದರ ಹೆಚ್ಚಳ ಮಾಡಲಾಗಿದೆ.

ದರ ಏರಿಕೆಯಿಂದ ಬೆಂಗಳೂರಿನಿಂದ ವಿವಿಧ ನಗರಗಳಿಗೆ ಪ್ರಯಾಣಿಸುವವರ ಜೇಬಿಗೆ ಹೆಚ್ಚುವರಿ ಹೊರೆ ಬೀಳಲಿದೆ. ಉದಾಹರಣೆಗೆ, ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ವೇಗಧೂತ ಬಸ್‌ನಲ್ಲಿ ಪ್ರಯಾಣಿಸುವವರ ಟಿಕೆಟ್ ದರ ₹295ರಿಂದ ₹363ಕ್ಕೆ ಏರಿಕೆಯಾಗಿದ್ದು, ಒಟ್ಟು ₹68 ಹೆಚ್ಚಳವಾಗಿದೆ.

RelatedPosts

ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ 10ಕ್ಕೂ ಹೆಚ್ಚು ಅಗತ್ಯ ವಸ್ತು-ಸೇವೆಗಳ ದರ ಏರಿಕೆ

ಮೈಸೂರು ಅರಮನೆ ಖಾಸಗಿ ಸ್ವತ್ತು, ಸರ್ಕಾರ ಕಟ್ಟಿಸಿಲ್ಲ: ಪ್ರಮೋದಾ ದೇವಿ ಸ್ಪಷ್ಟನೆ

ರಾಜ್ಯದಲ್ಲಿ ಎರಡು ದಿನ ಭಾರಿ ಮಳೆ ಮುನ್ಸೂಚನೆ: 4 ಜಿಲ್ಲೆಗಳಿಗೆ ಅಲರ್ಟ್

ನ.13ಕ್ಕೆ ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ನಮ್ಮ ಮೆಟ್ರೋ ಪಿಂಕ್ ಲೈನ್‌ ಉದ್ಘಾಟನೆ

ADVERTISEMENT
ADVERTISEMENT
ಬೆಂಗಳೂರಿನಿಂದ ಹೊರಡುವ ಬಸ್‌ಗಳ ಹೊಸ ದರ ಪಟ್ಟಿ

ಸಾಮಾನ್ಯ ಸಾರಿಗೆ ಬಸ್‌ಗಳಲ್ಲಿ ಮೊದಲ ಐದು ಹಂತಗಳ ಪ್ರಯಾಣ ದರವನ್ನು ಪರಿಷ್ಕರಿಸಲಾಗಿದೆ. ಬೆಂಗಳೂರಿನಿಂದ ಸಮೀಪದ ಪಟ್ಟಣಗಳಿಗೆ ತೆರಳುವ ಪ್ರಯಾಣಿಕರಿಗೂ ದರ ಏರಿಕೆಯ ಬಿಸಿ ತಟ್ಟಲಿದೆ.

  • ನೆಲಮಂಗಲ: ₹35ರಿಂದ ₹44ಕ್ಕೆ
  • ಹೊಸಕೋಟೆ: ₹35ರಿಂದ ₹44ಕ್ಕೆ
  • ದೊಡ್ಡಬಳ್ಳಾಪುರ: ₹38ರಿಂದ ₹47ಕ್ಕೆ
  • ಆನೇಕಲ್: ₹38ರಿಂದ ₹47ಕ್ಕೆ
  • ಮಾಗಡಿ: ₹46ರಿಂದ ₹57ಕ್ಕೆ
  • ಮಾಲೂರು: ₹46ರಿಂದ ₹57ಕ್ಕೆ

ಇನ್ನು ವೇಗಧೂತ ಬಸ್‌ಗಳ ದರದಲ್ಲಿಯೂ ಗಮನಾರ್ಹ ಏರಿಕೆ ಮಾಡಲಾಗಿದೆ.

  • ಕೋಲಾರ: ₹81ರಿಂದ ₹100ಕ್ಕೆ
  • ತುಮಕೂರು: ₹81ರಿಂದ ₹100ಕ್ಕೆ
  • ಮಂಡ್ಯ: ₹110ರಿಂದ ₹136ಕ್ಕೆ
  • ಮೈಸೂರು: ₹160ರಿಂದ ₹197ಕ್ಕೆ
  • ಹಾಸನ: ₹219ರಿಂದ ₹270ಕ್ಕೆ
  • ಚಿಕ್ಕಮಗಳೂರು: ₹295ರಿಂದ ₹363ಕ್ಕೆ

ಈ ಪರಿಷ್ಕರಣೆಯಲ್ಲಿ ಟೋಲ್ ಶುಲ್ಕ, ಸೇತುವೆ ಶುಲ್ಕ ಹಾಗೂ ಮುಂಗಡ ಕಾಯ್ದಿರಿಸುವಿಕೆ ಶುಲ್ಕಗಳನ್ನು ಸೇರಿಸಲಾಗಿಲ್ಲ ಎಂದು ತಿಳಿಸಲಾಗಿದೆ.

ಬಿಎಂಟಿಸಿ ಪ್ರಯಾಣಿಕರಿಗೂ ದರ ಏರಿಕೆ ಬಿಸಿ

ಬೆಂಗಳೂರಿನ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಾದ ಬಿಎಂಟಿಸಿ ಬಸ್ ಟಿಕೆಟ್ ದರವನ್ನೂ ಪರಿಷ್ಕರಿಸಲಾಗಿದೆ. ಸಾಮಾನ್ಯ ಸಾರಿಗೆ ಬಸ್‌ಗಳಲ್ಲಿ ಎರಡು ಕಿಲೋಮೀಟರ್‌ವರೆಗಿನ ಪ್ರಯಾಣಕ್ಕೆ ₹4 ಹೆಚ್ಚಳ ಮಾಡಲಾಗಿದ್ದು, ಎರಡು ಕಿಲೋಮೀಟರ್‌ನಿಂದ ನಾಲ್ಕು ಕಿಲೋಮೀಟರ್‌ವರೆಗಿನ ಪ್ರಯಾಣಕ್ಕೆ ₹6 ಏರಿಕೆ ಮಾಡಲಾಗಿದೆ. ದೂರದ ಪ್ರಯಾಣಕ್ಕೆ ಗರಿಷ್ಠ ₹12ರವರೆಗೆ ದರ ಹೆಚ್ಚಳವಾಗಲಿದೆ ಎಂದು ದರಪಟ್ಟಿಯಲ್ಲಿ ತಿಳಿಸಲಾಗಿದೆ.

ಪ್ರಮುಖ ಮಾರ್ಗಗಳ ಪರಿಷ್ಕೃತ ದರಗಳು ಹೀಗಿವೆ
  • ಮೆಜೆಸ್ಟಿಕ್–ಶಿವಾಜಿನಗರ: ₹12ರಿಂದ ₹18ಕ್ಕೆ
  • ಮೆಜೆಸ್ಟಿಕ್–ಯಶವಂತಪುರ: ₹18ರಿಂದ ₹25ಕ್ಕೆ
  • ಮೆಜೆಸ್ಟಿಕ್–ಬನಶಂಕರಿ: ₹23ರಿಂದ ₹35ಕ್ಕೆ
  • ಮೆಜೆಸ್ಟಿಕ್–ಅತ್ತಿಬೆಲೆ: ₹30ರಿಂದ ₹42ಕ್ಕೆ
  • ಮೆಜೆಸ್ಟಿಕ್–ವಿಜಯನಗರ: ₹18ರಿಂದ ₹25ಕ್ಕೆ
  • ಮೆಜೆಸ್ಟಿಕ್–ಕಾಡುಗೋಡಿ: ₹30ರಿಂದ ₹40ಕ್ಕೆ
  • ಕೆ.ಆರ್. ಮಾರುಕಟ್ಟೆ–ನೆಲಮಂಗಲ: ₹30ರಿಂದ ₹40ಕ್ಕೆ
  • ಕೆ.ಆರ್. ಮಾರುಕಟ್ಟೆ–ಹೊಸಕೋಟೆ: ₹30ರಿಂದ ₹40ಕ್ಕೆ
ವಜ್ರ ಎಸಿ ಬಸ್ ದರವೂ ಹೆಚ್ಚಳ

ಬಿಎಂಟಿಸಿಯ ಹವಾನಿಯಂತ್ರಿತ ವಜ್ರ ಬಸ್‌ಗಳ ಟಿಕೆಟ್ ದರವನ್ನೂ ಹೆಚ್ಚಿಸಲಾಗಿದೆ. ಆರು ಕಿಲೋಮೀಟರ್‌ವರೆಗಿನ ಪ್ರಯಾಣಕ್ಕೆ ₹5, ಆರುರಿಂದ 18 ಕಿಲೋಮೀಟರ್‌ವರೆಗಿನ ಪ್ರಯಾಣಕ್ಕೆ ₹10 ಹಾಗೂ ದೂರದ ಪ್ರಯಾಣಕ್ಕೆ ಗರಿಷ್ಠ ₹15ರವರೆಗೆ ಹೆಚ್ಚಳ ಮಾಡಲಾಗಿದೆ ಎಂದು ಪ್ರಕಟಿತ ದರಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

ಪ್ರಮುಖ ಮಾರ್ಗಗಳ ಹೊಸ ದರಗಳು
  • ಸೆಂಟ್ರಲ್ ಸಿಲ್ಕ್ ಬೋರ್ಡ್–ಹೆಬ್ಬಾಳ: ₹55ರಿಂದ ₹65ಕ್ಕೆ
  • ಬನಶಂಕರಿ–ಐಟಿಪಿಎಲ್: ₹50ರಿಂದ ₹60ಕ್ಕೆ
  • ಕೆ.ಆರ್.ಪುರಂ–ಸೆಂಟ್ರಲ್ ಸಿಲ್ಕ್ ಬೋರ್ಡ್: ₹40ರಿಂದ ₹55ಕ್ಕೆ
  • ಸೆಂಟ್ರಲ್ ಸಿಲ್ಕ್ ಬೋರ್ಡ್–ಕಾಡುಗೋಡಿ: ₹50ರಿಂದ ₹60ಕ್ಕೆ
  • ಮೆಜೆಸ್ಟಿಕ್–ಅತ್ತಿಬೆಲೆ: ₹60ರಿಂದ ₹70ಕ್ಕೆ
ದರ ಏರಿಕೆಗೆ ಸಚಿವ ಬೈರತಿ ಸುರೇಶ್ ಸಮರ್ಥನೆ

ಬಸ್ ಟಿಕೆಟ್ ದರ ಹೆಚ್ಚಳದ ಕುರಿತು ಮಾತನಾಡಿರುವ ಸಚಿವ ಬೈರತಿ ಸುರೇಶ್, ಸಾರಿಗೆ ನಿಗಮಗಳ ಮೇಲೆ ಆರ್ಥಿಕ ಹೊರೆ ಹೆಚ್ಚಾಗಿರುವುದರಿಂದ ದರ ಪರಿಷ್ಕರಣೆ ಅನಿವಾರ್ಯವಾಗಿದೆ ಎಂದು ಸಮರ್ಥಿಸಿಕೊಂಡಿದ್ದಾರೆ. ರಾಜ್ಯದಲ್ಲಿ ದಕ್ಷಿಣ ಭಾರತದಲ್ಲೇ ಅತಿ ಹೆಚ್ಚು ಬಸ್‌ಗಳಿದ್ದು, ಶಕ್ತಿ ಯೋಜನೆಯಿಂದ ಸಾರಿಗೆ ನಿಗಮಗಳಿಗೆ ಸಮಸ್ಯೆಯಾಗುತ್ತಿಲ್ಲ. ನಿಗಮಗಳು ನಷ್ಟದಲ್ಲಿಲ್ಲ ಎಂದು ಅವರು ಹೇಳಿದ್ದಾರೆ.

ಪ್ರತಿ ವರ್ಷ ಟಿಕೆಟ್ ದರ ಪರಿಷ್ಕರಣೆ ಮಾಡಬೇಕಿದ್ದರೂ ಕಳೆದ ಹಲವು ವರ್ಷಗಳಿಂದ ನಿರಂತರವಾಗಿ ದರ ಏರಿಕೆ ಮಾಡಿಲ್ಲ. ಡೀಸೆಲ್ ಬೆಲೆ ಏರಿಕೆ, ನೌಕರರ ವೇತನ ಹೆಚ್ಚಳ ಹಾಗೂ ನಿರ್ವಹಣಾ ವೆಚ್ಚಗಳ ಕಾರಣದಿಂದ ಹಂತ ಹಂತವಾಗಿ ದರ ಪರಿಷ್ಕರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

2021ರಲ್ಲಿ ಎಂ.ಆರ್. ಶ್ರೀನಿವಾಸ್ ನೇತೃತ್ವದಲ್ಲಿ ರಚನೆಯಾದ ಸಮಿತಿಯು ಕಾಲಕಾಲಕ್ಕೆ ದರ ಏರಿಕೆ ಮಾಡುವಂತೆ ಶಿಫಾರಸು ಮಾಡಿತ್ತು. ಸಾರಿಗೆ ನಿಗಮಗಳಿಗೆ ₹1,111 ಕೋಟಿ ಇಂಧನ ಬಾಕಿ ಇದ್ದು, ವಾರ್ಷಿಕವಾಗಿ ಇಂಧನಕ್ಕಾಗಿ ₹5,694 ಕೋಟಿ ವೆಚ್ಚವಾಗುತ್ತಿದೆ ಎಂಬ ಅಂಕಿ-ಅಂಶಗಳನ್ನೂ ಸಚಿವರು ಉಲ್ಲೇಖಿಸಿದ್ದಾರೆ.

ದರ ಏರಿಕೆಗೆ ಸಾರ್ವಜನಿಕರು ಸಹಕರಿಸಬೇಕು ಹಾಗೂ ಸಾರಿಗೆ ನಿಗಮಗಳ ಸೇವೆಯನ್ನು ಉಳಿಸಿ ಬೆಳೆಸಲು ಅವಕಾಶ ಮಾಡಿಕೊಡಬೇಕು ಎಂದು ಸಾರಿಗೆ ಸಂಸ್ಥೆಗಳು ಮನವಿ ಮಾಡಿವೆ. ಆದರೆ ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಬಸ್ ಪ್ರಯಾಣದ ಹೆಚ್ಚುವರಿ ವೆಚ್ಚ ಮತ್ತಷ್ಟು ಹೊರೆಯಾಗುವ ಸಾಧ್ಯತೆಯಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಅಮೆರಿಕ ಮಧ್ಯಂತರ ಚುನಾವಣೆಯಲ್ಲಿ ಟ್ರಂಪ್ ಗೆ ಭಾರೀ ಹಿನ್ನಡೆ (1)

ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ 10ಕ್ಕೂ ಹೆಚ್ಚು ಅಗತ್ಯ ವಸ್ತು-ಸೇವೆಗಳ ದರ ಏರಿಕೆ

by ಶಾಲಿನಿ ಕೆ. ಡಿ
November 4, 2026 - 2:35 pm
0

ಅಮೆರಿಕ ಮಧ್ಯಂತರ ಚುನಾವಣೆಯಲ್ಲಿ ಟ್ರಂಪ್ ಗೆ ಭಾರೀ ಹಿನ್ನಡೆ

ಅಮೆರಿಕ ಮಧ್ಯಂತರ ಚುನಾವಣೆಯಲ್ಲಿ ಟ್ರಂಪ್‌ಗೆ ಭಾರೀ ಹಿನ್ನಡೆ

by ಶಾಲಿನಿ ಕೆ. ಡಿ
November 4, 2026 - 2:22 pm
0

ಮೈಸೂರು ಅರಮನೆ ಖಾಸಗಿ ಸ್ವತ್ತು, ಸರ್ಕಾರ ಕಟ್ಟಿಸಿಲ್ಲ ಪ್ರಮೋದಾ ದೇವಿ ಸ್ಪಷ್ಟನೆ

ಮೈಸೂರು ಅರಮನೆ ಖಾಸಗಿ ಸ್ವತ್ತು, ಸರ್ಕಾರ ಕಟ್ಟಿಸಿಲ್ಲ: ಪ್ರಮೋದಾ ದೇವಿ ಸ್ಪಷ್ಟನೆ

by ಶಾಲಿನಿ ಕೆ. ಡಿ
November 4, 2026 - 1:43 pm
0

Untitled Design 2026 11 04T132207.771

ಸಂಬಂಧಗಳನ್ನು ಮರೆಯುತ್ತಿರುವ ಯಾಂತ್ರಿಕ ಬದುಕು: ‘ಐಡೆಂಟಿಟಿ ಕಾರ್ಡ್’ ಹಿಂದಿನ ಕಹಿ ಸತ್ಯ

by ಶಾಲಿನಿ ಕೆ. ಡಿ
November 4, 2026 - 1:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled Design 2026 10 28T121141.177
    ‘ರಾಜೀವ್ ಗಾಂಧಿ ಪ್ರಧಾನಿಯಾಗುವುದು ನನಗೆ ಇಷ್ಟವಿರಲಿಲ್ಲ’: ಸೋನಿಯಾ ಗಾಂಧಿ
    October 28, 2026 | 0
  • Untitled Design 2026 10 28T113048.123
    ‘ಅರ್ನಬ್’ ಚಂಡಮಾರುತದ ಅಬ್ಬರಕ್ಕೆ ಆಂಧ್ರ ತತ್ತರ; 100ಕ್ಕೂ ಹೆಚ್ಚು ರೈಲುಗಳು, ವಿಮಾನ ಸಂಚಾರ ರದ್ದು
    October 28, 2026 | 0
  • Untitled Design 2026 10 28T075841.742
    ‘ಅರ್ನಾಬ್’ ಚಂಡಮಾರುತಕ್ಕೆ ಚೆನ್ನೈ ತತ್ತರ: ರಸ್ತೆಗೆ ನುಗ್ಗಿದ ಸಮುದ್ರದ ನೀರು, ವಾಹನಗಳಿಗೆ ಹಾನಿ
    October 28, 2026 | 0
  • ಔಟ್
    ಡಿಸಿಎಂ ಪರಮೇಶ್ವರ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು
    October 27, 2026 | 0
  • ಎಥೆನಾಲ್ ಇಂಧನ ಬಳಕೆಗೆ ಕೇಂದ್ರದಿಂದ ಗ್ರೀನ್ ಸಿಗ್ನಲ್
    ಎಥೆನಾಲ್ ಇಂಧನ ಬಳಕೆಗೆ ಕೇಂದ್ರದಿಂದ ಗ್ರೀನ್ ಸಿಗ್ನಲ್
    October 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version