• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, November 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಹೆಚ್‌ಡಿಕೆ ಲಂಚದ ಆರೋಪಕ್ಕೆ ಡಿಸಿ ಲತಾಕುಮಾರಿ ತಿರುಗೇಟು: ಸಿಂಹ-ನಾಯಿ ಪೋಸ್ಟ್ ವೈರಲ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 9, 2026 - 11:58 am
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಹಾಸನ
0 0
0
Untitled Design 2026 11 09T115415.629

ಹಾಸನ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮತ್ತು ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ನಡುವಿನ ವಾಕ್ಸಮರ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಜಿಲ್ಲಾಧಿಕಾರಿ ಲತಾಕುಮಾರಿ ವಿರುದ್ಧ 75 ಲಕ್ಷ ರೂಪಾಯಿ ಲಂಚದ ಗಂಭೀರ ಆರೋಪ ಮಾಡಿದ್ದ ಕುಮಾರಸ್ವಾಮಿ ಅವರಿಗೆ ಡಿಸಿ ಈಗ ಮತ್ತೊಮ್ಮೆ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ. ತಮ್ಮ ವಾಟ್ಸಾಪ್ ಸ್ಟೇಟಸ್‌ನಲ್ಲಿ ಸಿಂಹ ಮತ್ತು ನಾಯಿಗಳ ಚಿತ್ರವಿರುವ ಪೋಸ್ಟರ್ ಹಂಚಿಕೊಂಡಿದ್ದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್‌ ಆಗಿದೆ.

ಲಂಚದ ಆರೋಪಕ್ಕೆ ಈಗಾಗಲೇ ಖಡಕ್ ಪ್ರತಿಕ್ರಿಯೆ ನೀಡಿದ್ದ ಲತಾಕುಮಾರಿ, ಇದೀಗ ಯಾರ ಹೆಸರನ್ನೂ ಉಲ್ಲೇಖಿಸದೆ ಹಾಕಿರುವ ಪೋಸ್ಟ್ ಸಾಕಷ್ಟು ಕುತೂಹಲ ಮೂಡಿಸಿದೆ. 

RelatedPosts

ಒಂದೇ ಕುಟುಂಬದ 7 ಮಂದಿಯ ಹ*ತ್ಯೆ ಕೇಸ್: ಶಿರಾಡಿ ಘಾಟ್‌ನಲ್ಲಿ ಇಬ್ಬರ ಮೃತದೇಹ ಪತ್ತೆ

ದೀಪಾವಳಿ ಹಬ್ಬದ ಮೊದಲ ದಿನವೇ ಪಟಾಕಿ ಅವಘಡ: ಬೆಂಗಳೂರಲ್ಲಿ 42 ಮಂದಿಗೆ ಗಾಯ

ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ ಸಾಧ್ಯತೆ

ಹಾಸನಾಂಬೆ ಸನ್ನಿಧಿಯಲ್ಲೇ ಅಧಿಕಾರಿಗಳ ಮಧ್ಯೆ ಕಿತ್ತಾಟ; ತಹಶೀಲ್ದಾರ್-ಡಿವೈಎಸ್‌ಪಿ ನಡುವೆ ವಾಗ್ವಾದ

ADVERTISEMENT
ADVERTISEMENT
ಸಿಂಹ-ನಾಯಿ ಫೋಟೋ ಪೋಸ್ಟ್ ಮಾಡಿದ ಡಿಸಿ!

ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ವಿಶೇಷ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. ಚಿತ್ರದಲ್ಲಿ ಸಿಂಹವೊಂದು ಶಾಂತವಾಗಿ ಕುಳಿತಿದ್ದರೆ, ಅದರ ಸುತ್ತ ನಾಯಿಗಳು ಬೊಗಳುತ್ತಿರುವ ದೃಶ್ಯವಿದೆ.

ಈ ಫೋಟೋದ ಮೇಲೆ ಇಂಗ್ಲಿಷ್‌ನಲ್ಲಿ ‘NOT EVERY VOICE DESERVES A RESPONSE’ ಎಂಬ ವಾಕ್ಯವನ್ನು ಬರೆಯಲಾಗಿದೆ. ಅಂದರೆ, ‘ಪ್ರತಿಯೊಂದು ಧ್ವನಿಯೂ ಪ್ರತಿಕ್ರಿಯೆಗೆ ಅರ್ಹವಲ್ಲ’ ಎಂಬ ಅರ್ಥ ನೀಡುವ ಸಂದೇಶವನ್ನು ಪೋಸ್ಟ್ ಮಾಡಿದ್ದಾರೆ.

ಈ ಪೋಸ್ಟರ್ ಇದೀಗ ವೈರಲ್ ಆಗಿದ್ದು, ಕುಮಾರಸ್ವಾಮಿ ಅವರ ಲಂಚದ ಆರೋಪಕ್ಕೆ ಡಿಸಿ ನೀಡಿರುವ ಪರೋಕ್ಷ ತಿರುಗೇಟು ಎಂದೇ ಹಲವರು ವ್ಯಾಖ್ಯಾನಿಸುತ್ತಿದ್ದಾರೆ. ಆದರೆ ಪೋಸ್ಟ್‌ನಲ್ಲಿ ಯಾರ ಹೆಸರನ್ನೂ ನೇರವಾಗಿ ಉಲ್ಲೇಖಿಸಿಲ್ಲ. ಈ ಕುರಿತು ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಂದಲೂ ಯಾವುದೇ ಪ್ರತಿಕ್ರಿಯೆ ಬಂದಿರುವ ಬಗ್ಗೆ ಮಾಹಿತಿ ಇಲ್ಲ.

‘ಮೊದಲ ದಿನದಿಂದಲೂ ನನ್ನನ್ನೇ ಟಾರ್ಗೆಟ್ ಮಾಡುತ್ತಿದ್ದಾರೆ’

ಇದಕ್ಕೂ ಮೊದಲು ತಮ್ಮ ವಿರುದ್ಧ ಕೇಳಿಬಂದಿರುವ ಲಂಚದ ಆರೋಪಕ್ಕೆ ಜಿಲ್ಲಾಧಿಕಾರಿ ಲತಾಕುಮಾರಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ತಾವು ಅಧಿಕಾರ ವಹಿಸಿಕೊಂಡ ಮೊದಲ ದಿನದಿಂದಲೂ ತಮ್ಮನ್ನು ಗುರಿಯಾಗಿಸಿಕೊಂಡು ಆರೋಪಗಳನ್ನು ಮಾಡಲಾಗುತ್ತಿದೆ ಎಂದು ಹೇಳಿದ್ದರು.

‘ನಾನು ಇಂತಹ ಆರೋಪಗಳು ಮತ್ತು ಬೆದರಿಕೆಗಳಿಗೆ ಹೆದರುವುದಿಲ್ಲ. ಆಡಳಿತ ಸೇವೆಗೆ ಬರುವ ಮುನ್ನವೇ ಇಂತಹ ಸವಾಲುಗಳನ್ನು ಎದುರಿಸಲು ತರಬೇತಿ ಪಡೆದಿರುತ್ತೇವೆ. ನನ್ನ ವಿರುದ್ಧ ಮಾಡಿರುವ ಆರೋಪಗಳು ಸಂಪೂರ್ಣ ಸುಳ್ಳು. ಮಹಿಳಾ ಅಧಿಕಾರಿಯ ತೇಜೋವಧೆ ಮಾಡುವ ಪ್ರಯತ್ನ ನಡೆಯುತ್ತಿದೆ. ಸಾರ್ವಜನಿಕರು ಇಂತಹ ಆರೋಪಗಳನ್ನು ನಂಬಬಾರದು’ ಎಂದು ಮನವಿ ಮಾಡಿದ್ದರು.

ಅಲ್ಲದೆ, ತಮ್ಮ ವಿರುದ್ಧ ನಡೆಯುತ್ತಿರುವ ಆರೋಪಗಳ ಕುರಿತು ಕಾನೂನು ಹೋರಾಟ ನಡೆಸುವುದಾಗಿ ಸ್ಪಷ್ಟಪಡಿಸಿದ್ದರು.

ಡಿಸಿ ಪಿಎ ಶಶಿಕಿರಣ್‌ನಿಂದ ಸೈಬರ್ ಕ್ರೈಂಗೆ ದೂರು

ಈ ವಿವಾದಕ್ಕೆ ಮತ್ತೊಂದು ತಿರುವು ನೀಡಿರುವುದು ಜಿಲ್ಲಾಧಿಕಾರಿಯ ಆಪ್ತ ಸಹಾಯಕ ಶಶಿಕಿರಣ್ ನೀಡಿರುವ ದೂರು. ತಮ್ಮ ಮೊಬೈಲ್ ನಂಬರ್ ಮತ್ತು ಫೋಟೋವನ್ನು ಅನಧಿಕೃತವಾಗಿ ಬಳಸಿಕೊಂಡು ನಕಲಿ ವಾಟ್ಸಾಪ್ ಸಂದೇಶಗಳನ್ನು ಸೃಷ್ಟಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಾಟ್ಸಾಪ್ ಚಾಟ್‌ಗಳನ್ನು ತಾವು ಸೃಷ್ಟಿಸಿಲ್ಲ. ತಮ್ಮ ಮೊಬೈಲ್‌ನಿಂದ ಸಂದೇಶಗಳನ್ನು ಕಳುಹಿಸಿರುವಂತೆ ನಕಲಿ ಸಂಭಾಷಣೆಗಳನ್ನು ಸಿದ್ಧಪಡಿಸಿ ಹರಿಬಿಡಲಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಈ ಸಂದೇಶಗಳಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ಉಸ್ತುವಾರಿ ಸಚಿವ ಶಿವಲಿಂಗೇಗೌಡ ಹಾಗೂ ತಹಶೀಲ್ದಾರ್ ಅವರ ಹೆಸರುಗಳನ್ನು ಉಲ್ಲೇಖಿಸಲಾಗಿದೆ ಎನ್ನಲಾಗಿದೆ. ನಕಲಿ ಸಂದೇಶಗಳಿಂದ ತಮ್ಮ ವೈಯಕ್ತಿಕ ಮತ್ತು ಸಾಮಾಜಿಕ ಜೀವನಕ್ಕೆ ಧಕ್ಕೆಯಾಗುವ ಸಾಧ್ಯತೆಯಿದೆ. ಕುಟುಂಬ ಹಾಗೂ ಬಂಧು ಬಳಗದಲ್ಲಿಯೂ ಇದರಿಂದ ಅಸಮಾಧಾನ ಉಂಟಾಗಿದೆ. ಹೀಗಾಗಿ ಸಂದೇಶಗಳ ಮೂಲ ಪತ್ತೆಹಚ್ಚಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಈ ಸಂಬಂಧ ಹಾಸನದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. 

75 ಲಕ್ಷ ಲಂಚದ ಆರೋಪ ಮಾಡಿದ್ದ ಕುಮಾರಸ್ವಾಮಿ!

ಹಾಸನ ಶಾಸಕ ಹೆಚ್.ಪಿ. ಸ್ವರೂಪ್ ಪ್ರಕಾಶ್ ಅವರ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಶಿವಲಿಂಗೇಗೌಡ ವಿರುದ್ಧ ಗಂಭೀರ ಆರೋಪ ಮಾಡಿದ್ದರು.

ಲತಾಕುಮಾರಿ ತಮ್ಮ ಹುದ್ದೆಯನ್ನು ಉಳಿಸಿಕೊಳ್ಳಲು 75 ಲಕ್ಷ ರೂಪಾಯಿ ಲಂಚ ನೀಡಿದ್ದಾರೆ ಎಂಬ ಆರೋಪವನ್ನು ಮಾಡಿದ್ದರು. ಇದಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಯ ಪಿಎ ಶಶಿಕಿರಣ್ ಅವರ ಮೊಬೈಲ್‌ನಲ್ಲಿದೆ ಎನ್ನಲಾದ ವಾಟ್ಸಾಪ್ ಚಾಟ್‌ಗಳನ್ನು ಮಾಧ್ಯಮಗಳ ಮುಂದೆ ಬಿಡುಗಡೆ ಮಾಡಿದ್ದರು.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled Design 2026 11 09T115415.629

ಹೆಚ್‌ಡಿಕೆ ಲಂಚದ ಆರೋಪಕ್ಕೆ ಡಿಸಿ ಲತಾಕುಮಾರಿ ತಿರುಗೇಟು: ಸಿಂಹ-ನಾಯಿ ಪೋಸ್ಟ್ ವೈರಲ್

by ಶಾಲಿನಿ ಕೆ. ಡಿ
November 9, 2026 - 11:58 am
0

Untitled Design 2026 11 09T113143.300

ಒಂದೇ ಕುಟುಂಬದ 7 ಮಂದಿಯ ಹ*ತ್ಯೆ ಕೇಸ್: ಶಿರಾಡಿ ಘಾಟ್‌ನಲ್ಲಿ ಇಬ್ಬರ ಮೃತದೇಹ ಪತ್ತೆ

by ಶಾಲಿನಿ ಕೆ. ಡಿ
November 9, 2026 - 11:32 am
0

Untitled Design 2026 11 09T110930.317

ಯುದ್ಧ ನಿಲ್ಲಿಸುವ ಮಾತುಕತೆ ಮಧ್ಯೆಯೇ ಇರಾನ್ ಮೇಲೆ ಅಮೆರಿಕಾ ದಾಳಿ

by Hemanth Kumar S
November 9, 2026 - 11:10 am
0

Untitled Design 2026 11 09T105956.980

ದೀಪಾವಳಿ ಹಬ್ಬದ ಮೊದಲ ದಿನವೇ ಪಟಾಕಿ ಅವಘಡ: ಬೆಂಗಳೂರಲ್ಲಿ 42 ಮಂದಿಗೆ ಗಾಯ

by ಶಾಲಿನಿ ಕೆ. ಡಿ
November 9, 2026 - 11:01 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled Design 2026 11 09T113143.300
    ಒಂದೇ ಕುಟುಂಬದ 7 ಮಂದಿಯ ಹ*ತ್ಯೆ ಕೇಸ್: ಶಿರಾಡಿ ಘಾಟ್‌ನಲ್ಲಿ ಇಬ್ಬರ ಮೃತದೇಹ ಪತ್ತೆ
    November 9, 2026 | 0
  • Untitled Design 2026 11 09T105956.980
    ದೀಪಾವಳಿ ಹಬ್ಬದ ಮೊದಲ ದಿನವೇ ಪಟಾಕಿ ಅವಘಡ: ಬೆಂಗಳೂರಲ್ಲಿ 42 ಮಂದಿಗೆ ಗಾಯ
    November 9, 2026 | 0
  • Untitled Design (98)
    ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ ಸಾಧ್ಯತೆ
    November 9, 2026 | 0
  • Your paragraph text 2026 11 08T185054.202
    ಹಾಸನಾಂಬೆ ಸನ್ನಿಧಿಯಲ್ಲೇ ಅಧಿಕಾರಿಗಳ ಮಧ್ಯೆ ಕಿತ್ತಾಟ; ತಹಶೀಲ್ದಾರ್-ಡಿವೈಎಸ್‌ಪಿ ನಡುವೆ ವಾಗ್ವಾದ
    November 8, 2026 | 0
  • Your paragraph text 2026 11 08T180924.902
    ನಮ್ಮನ್ನ ಟಾರ್ಗೆಟ್‌ ಮಾಡುತ್ತಿದ್ದಾರೆ, ಎಲ್ಲದಕ್ಕೂ ರೆಡಿ ಇದ್ದೇವೆ’: ಹೆಚ್‌ಡಿಕೆ ಆರೋಪಕ್ಕೆ ಹಾಸನ ಡಿಸಿ ತಿರುಗೇಟು
    November 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version