• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, November 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಅಕ್ರಮ ಮನೆಗಳ ಸಕ್ರಮ ಶುಲ್ಕದಲ್ಲಿ ಶೇ.50ರಷ್ಟು ಭಾರೀ ರಿಯಾಯಿತಿ: ಸಿಎಂ ಡಿ.ಕೆ ಶಿವಕುಮಾರ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 9, 2026 - 6:38 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Your paragraph text (36)

ಬೆಂಗಳೂರು, ನ.09: “ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಭೂಸ್ವಾಧೀನಕ್ಕೊಳಪಟ್ಟ ಜಮೀನಿನಲ್ಲಿ ದಿನಾಂಕ 10.7.2008 ರ ಪೂರ್ವದಲ್ಲಿ ನಿರ್ಮಿಸಲಾದ ಅನಧಿಕೃತ ಕಟ್ಟಡಗಳನ್ನು ಸಕ್ರಮಗೊಳಿಸಲು ಈಗಾಗಲೇ ಅಧಿಸೂಚನೆ ಹೊರಡಿಸಿದ್ದು, ಈ ಹಿಂದಿನ ಸಕ್ರಮ ಶುಲ್ಕದಲ್ಲಿ ಶೇ.50ರಷ್ಟು ರಿಯಾಯಿತಿ ನೀಡಲು ತೀರ್ಮಾನಿಸಲಾಗಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಯೋಜನೆಗಳ ಕುರಿತಂತೆ ಬಿಡಿಎ ಕಚೇರಿಯಲ್ಲಿ ಸೋಮವಾರ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಬಳಿಕ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದರು. “ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ 50 ನೇ ವರ್ಷಾಚರಣೆ ಸಂದರ್ಭದಲ್ಲಿ ಆಸ್ತಿ ದಾಖಲೆಗಳಿಲ್ಲದ ಭೂ ಮಾಲಿಕರಿಗೆ ಭೂ ಗ್ಯಾರಂಟಿ ಸೇರಿದಂತೆ ಹೊಸ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಯೋಜನೆ ರೂಪಿಸಲಾಗಿದೆ.‌ ಈ ಸೌಲಭ್ಯ ಕಲಂ 38(ಡಿ) ತಿದ್ದುಪಡಿ ಮೂಲಕ ಈಗಾಗಲೇ ಜಾರಿಗೆ ಬಂದಿದ್ದು, ಡಿಸೆಂಬರ್‌ 17 ರ ಒಳಗಾಗಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಎರಡು ವರ್ಷಗಳ ಅವಧಿಯೊಳಗಾಗಿ ಈ ಸೌಲಭ್ಯವನ್ನು ಬಳಸಿಕೊಳ್ಳದಿದ್ದರೆ, ಪ್ರಾಧಿಕಾರದ ಭೂಮಿಯಲ್ಲಿರುವ ಅಂತಹ ಕಟ್ಟಡಗಳನ್ನು ತೆರವುಗೊಳಿಸಲಾಗುವುದು” ಎಂದು ಸ್ಪಷ್ಟಪಡಿಸಿದರು.

RelatedPosts

ನಂದಿನಿ ಬೆನ್ನಲ್ಲೇ ಮದರ್ ಡೈರಿ ಹಾಲಿನ ದರ ಏರಿಕೆ!

ರೈತರು ಆತಂಕ ಪಡಬೇಕಿಲ್ಲ, ಬರಪರಿಹಾರ ತಲುಪಲಿದೆ: ಸಿಎಂ‌ ಡಿ ಕೆ‌ ಶಿವಕುಮಾರ್

ಪಟಾಕಿ ಸದ್ದಿಗೆ ಆರು ವರ್ಷದ ಶ್ವಾನ ಹೃದಯಾಘಾತಕ್ಕೆ ಬ*ಲಿ

ದೀಪಾವಳಿ: ಪಟಾಕಿ ಅವಘಡಕ್ಕೆ 150ಕ್ಕೂ ಹೆಚ್ಚು ಮಂದಿಗೆ ಗಾಯ

ADVERTISEMENT
ADVERTISEMENT

“2008 ಕ್ಕಿಂತ ಮುಂಚೆ ಮನೆ ಕಟ್ಟಿದವರಿಗೆ, ಸುಮಾರು 1 ಲಕ್ಷ ಮಾಲಿಕರಿಗೆ ಆಸ್ತಿ ದೊರಕಿಸಬೇಕು ಎಂಬ ಉದ್ದೇಶದಿಂದ ಹಿಂದಿನ ಸರ್ಕಾರ ಅವಕಾಶ ನೀಡಿತು. 2021ರಲ್ಲಿಯೇ ದರ ನಿಗದಿ ಮಾಡಿತ್ತು. ಆದರೆ ಶುಲ್ಕ ಹೆಚ್ಚಾಯಿತೆಂದು ಕೇವಲ 600 ಜನ ಮಾತ್ರ ಅರ್ಜಿ ಹಾಕಿದ್ದರು. ಆದರೆ ನಾವು ಶುಲ್ಕ ಕಡಿಮೆ ಮಾಡಿ ಇನ್ನೊಂದು ಅವಕಾಶ ನೀಡಿದ್ದೇವೆ. ಕ್ಲೀನ್ ಬಿಡಿಎ, ಪರಿಶುದ್ಧವಾದ ಆಡಳಿತವನ್ನು ಬೆಂಗಳೂರಿಗರಿಗೆ ನೀಡುವ ಉದ್ದೇಶದಿಂದ ಸರ್ಕಾರ ಈ ಸೌಲಭ್ಯವನ್ನು ಜಾರಿಗೊಳಿಸಿದೆ” ಎಂದು ಹೇಳಿದರು.

“ನಿಗದಿತ ಅವಧಿಯ ಒಳಗಾಗಿ ಅರ್ಜಿಯನ್ನು ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸಿ, ಈ ಸೌಲಭ್ಯವನ್ನು ಬಳಸಿಕೊಂಡು ಆಸ್ತಿಯ ಹಕ್ಕನ್ನು ಪಡೆದುಕೊಳ್ಳಲು ಇದು ಉತ್ತಮ ಅವಕಾಶವಾಗಿದೆ” ಎಂದರು.

“ಮೂಲೆ ನಿವೇಶನ ಹೊರತುಪಡಿಸಿ ಕಟ್ಟಡದೊಂದಿಗಿನ ಭೂಮಿಯ ವ್ಯಾಪ್ತಿ 20×30 ರವರೆಗೆ ಪ್ರಸ್ತುತ ಮಾರ್ಗಸೂಚಿ ಮೌಲ್ಯದ ಶೇ.5ರಷ್ಟು, 20×30 ಕ್ಕಿಂತ ಹೆಚ್ಚು ಮತ್ತು 30×40 ರವರೆಗೆ ಶೇ.12.5% ರಷ್ಟು, 30×40 ಕ್ಕಿಂತ ಹೆಚ್ಚು ಮತ್ತು 40×60 ರವರೆಗೆ ಶೇ.20% ರಷ್ಟು ಮತ್ತು 40×60 ಕ್ಕಿಂತ ಹೆಚ್ಚು ಮತ್ತು 50×80 ರವರೆಗೆ ಶೇ.25% ರಷ್ಟು ದರವನ್ನು ನಿಗದಿಪಡಿಸಲಾಗಿದೆ. ಇದು ಈ ಹಿಂದಿನ ಸರ್ಕಾರ ನಿಗದಿಪಡಿಸಿದ್ದ ದರಕ್ಕಿಂತ ಶೇ.50ರಷ್ಟು ಕಡಿಮೆಯಾಗಿದೆ” ಎಂದು ಹೇಳಿದರು.

ಪ್ರೋತ್ಸಾಹದಾಯಕ ನಿವೇಶನ ಸೌಲಭ್ಯ

“ಕೆಂಪೇಗೌಡ ಬಡಾವಣೆ ಸೇರಿದಂತೆ ಇತರೆಡೆಗಳಲ್ಲಿ ವ್ಯಾಜ್ಯವಿಲ್ಲದೆ ಸ್ವಇಚ್ಛೆಯಿಂದ ಆಸ್ತಿ ಬಿಟ್ಟು ಕೊಟ್ಟವರಿಗೆ ಒಂದು ಎಕರೆಗೆ 30×40 ನಿವೇಶನ ನೀಡುವ ಪ್ರಕ್ರಿಯೆಗೆ ಚಾಲನೆ ನೀಡಿದ್ದೇವೆ. ವಿಶೇಷ ಪ್ರೋತ್ಸಾಹಕವಾಗಿ ನಿವೇಶನ ನೀಡುವ ಕಾರ್ಯ 2014 ರಿಂದ ಬಾಕಿ ಇದ್ದು, 1989 ಕಾನೂನಿನ ಪ್ರಕಾರ ಇದಕ್ಕಾಗಿ ಸೂಕ್ತ ಅರ್ಜಿ ಹಾಕಬೇಕು. ಇದಕ್ಕೆ ಬೆಲೆ ನಿಗದಿ ಮಾಡಲಾಗುವುದು. ಜಮೀನು ನೀಡಿದ ರೈತರ ಉಪಕಾರ ಸ್ಮರಣೆಯಾಗಿ ಅಲ್ಲಿ ನಾವು ವಾಲ್ ಆಪ್ ಗ್ರಾಟಿಟ್ಯೂಡ್ ಹಾಕಿದ್ದೇವೆ. ಇದು ಇಡೀ ದೇಶದ ಇತಿಹಾಸದಲ್ಲಿಯೇ ಮೊದಲು” ಎಂದು ಹೇಳಿದರು

“ಶಿವರಾಮ ಕಾರಂತ ಬಡಾವಣೆಯಲ್ಲಿ ಜಮೀನು ನೀಡಿದ ರೈತರಿಗೆ ಒಂದೇ ದಿನದಲ್ಲಿ ಸೈಟ್ ಮಂಜೂರಾತಿಯನ್ನು ಪಾರದರ್ಶಕವಾಗಿ ಮಾಡಿರುವುದು ಬಿಡಿಎ ಇತಿಹಾಸದಲ್ಲೇ ಮೊದಲು” ಎಂದರು.

ಅಂಚಿನ ಜಾಗ ಹಂಚಿಕೆ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ನಿವೇಶನಗಳನ್ನು ಹಂಚಿಕೆ ಮಾಡಿರುವ ನಿವೇಶನಗಳ ಹಿಂಬದಿಯಲ್ಲಿ ಮತ್ತು ಅಕ್ಕ-ಪಕ್ಕದಲ್ಲಿ ಪ್ರಾಧಿಕಾರಕ್ಕೆ ಸೇರಿರುವ ಅಂಚಿನ ಜಾಗಗಳು (Marginal Land) ಲಭ್ಯವಿದ್ದಲ್ಲಿ, ಅಂಚಿನ ಜಾಗದ ಬಗ್ಗೆ ಹಂಚಿಕೆದಾರರಿಗೆ ಆಸಕ್ತಿಯಿದ್ದಲ್ಲಿ ದಿನಾಂಕ 17.12.2026ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.600ಚದರ ಅಡಿವರೆಗೂ ಈ ರೀತಿಯ ಸೈಟ್ ನೀಡಲು ಕಾಯ್ದೆಯಲ್ಲಿ ಅವಕಾಶವಿದ್ದು, ಇದರ ಪ್ರಯೋಜನವನ್ನು ಪಡೆದುಕೊಳ್ಳುವಂತೆ” ತಿಳಿಸಿದರು.

ಶುದ್ಧ ಕ್ರಯಪತ್ರ ಮೇಳ

“ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ನಿವೇಶನಗಳನ್ನು ಹಂಚಿಕೆ ಮಾಡಿ, ಗುತ್ತಿಗೆ ಅವಧಿಯು ಮುಕ್ತಾಯವಾಗಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರ ಅನುಕೂಲಕ್ಕಾಗಿ ಶುದ್ಧ ಕ್ರಯಪತ್ರವನ್ನು ನೋಂದಾಯಿಸಿಕೊಡಲು ಶುದ್ಧ ಕ್ರಯಪತ್ರ ಮೇಳವನ್ನು ಆಯೋಜಿಸಲಾಗಿದೆ. ಸಾಮಾನ್ಯವಾಗಿ ಬಿಡಿಎ ಹಂಚಿಕೆ ಮಾಡುವ ನಿವೇಶನಗಳ ಹತ್ತು ವರ್ಷದ ಗುತ್ತಿಗೆ ಅವಧಿಯಿರುತ್ತದೆ. ಈ ಅವಧಿಯು ಪೂರ್ಣಗೊಂಡ ಬಳಿಕ ನಾಗರಿಕರು ಅಗತ್ಯ ದಾಖಲಾತಿಗಳನ್ನು ಸಲ್ಲಿಸಿ, ಸದರಿ ನಿವೇಶನಕ್ಕೆ ಶುದ್ಧ ಕ್ರಯಪತ್ರವನ್ನು ಮಾಡಿಸಿಕೊಳ್ಳಬೇಕಾಗುತ್ತದೆ. ಆದರೆ ನಾನಾ ಕಾರಣಗಳಿಂದ ಸುಮಾರು 20 ಸಾವಿರ ಹಂಚಿಕೆದಾರರು ಗುತ್ತಿಗೆ ಅವಧಿ ಪೂರ್ಣಗೊಂಡರೂ ಶುದ್ಧ ಕ್ರಯಪತ್ರವನ್ನು ಮಾಡಿಸಿಕೊಂಡಿರುವುದಿಲ್ಲ. ಹಂಚಿಕೆದಾರರ ಅನುಕೂಲಕ್ಕಾಗಿ ಶುದ್ಧ ಕ್ರಯಪತ್ರ ಮೇಳವನ್ನು ಆಯೋಜಿಸುತ್ತಿದ್ದು, ನಿವೇಶನದ ದಾಖಲಾತಿಗಳೊಂದಿಗೆ ದಿನಾಂಕ 17.12.2026ರೊಳಗೆ ಅರ್ಜಿಯನ್ನು ಸಲ್ಲಿಸಿದರೆ ಅರ್ಜಿಯನ್ನು ಸ್ವೀಕರಿಸಿದ 60 ದಿನಗಳೊಳಗೆ ನಿಯಮಾನುಸಾರ ಶುದ್ಧ ಕ್ರಯಪತ್ರವನ್ನು ನೋಂದಾಯಿಸಿಕೊಡಲು ಕ್ರಮವಹಿಸಲಾಗುವುದು” ಎಂದು ಹೇಳಿದರು.

ಸುಸಜ್ಜಿತ ಕಟ್ಟಡ

“ಬಿಡಿಎ 50ನೇ ವರ್ಷಾಚರಣೆ ಹಿನ್ನೆಲೆಯಲ್ಲಿ 1ಲಕ್ಷ ಚದರ ಅಡಿ ವ್ಯಾಪ್ತಿಯಲ್ಲಿ ಸುಸಜ್ಜಿತವಾದ ಬಹುಪಯೋಗಿ ಪ್ರಾಧಿಕಾರದ ಕಟ್ಟಡವನ್ನು ನಿರ್ಮಿಸಲು ಈಗಾಗಲೇ ಯೋಜನೆ ರೂಪಿಸಲಾಗಿದೆ” ಎಂದು ಅವರು ಹೇಳಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (19)

ದೀಪಾವಳಿಗೆ ದೀಪಾ ಸನ್ನಿಧಿ ಪ್ರತ್ಯಕ್ಷ.. ದಶಕದಿಂದ ಎಲ್ಲಿದ್ರು..?!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 11, 2026 - 3:09 pm
0

Your paragraph text (18)

ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ; ಸಿಆರ್‌ಪಿಎಫ್ ಯೋಧರ ಮೇಲೆ ಗುಂಡಿನ ದಾಳಿ!

by ಕವಿತಾ
November 11, 2026 - 3:05 pm
0

Your paragraph text (17)

ನಂದಿನಿ ಬೆನ್ನಲ್ಲೇ ಮದರ್ ಡೈರಿ ಹಾಲಿನ ದರ ಏರಿಕೆ!

by ಕವಿತಾ
November 11, 2026 - 2:48 pm
0

Your paragraph text (16)

45 ಪ್ರೊಡ್ಯೂಸರ್ ಈಸ್ ಬ್ಯಾಕ್.. ‘ಕರ್ಮ’ಕ್ಕೆ ಹೊಣೆ ಯಾರು?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 11, 2026 - 2:18 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (17)
    ನಂದಿನಿ ಬೆನ್ನಲ್ಲೇ ಮದರ್ ಡೈರಿ ಹಾಲಿನ ದರ ಏರಿಕೆ!
    November 11, 2026 | 0
  • ಆತ್ಮಹತ್ಯೆ! (10)
    ರೈತರು ಆತಂಕ ಪಡಬೇಕಿಲ್ಲ, ಬರಪರಿಹಾರ ತಲುಪಲಿದೆ: ಸಿಎಂ‌ ಡಿ ಕೆ‌ ಶಿವಕುಮಾರ್
    November 11, 2026 | 0
  • Your paragraph text (2)
    ಬೆಲೆ ಏರಿಕೆ ವಿರುದ್ಧ BJP ಸಮರ; ಇಂದು ಬೆಂಗಳೂರಿನಲ್ಲಿ ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆ!
    November 11, 2026 | 0
  • Untitled design (30)
    KSRTC ಪ್ರಯಾಣಿಕರಿಗೆ ಬಿಗ್ ಶಾಕ್: ಲಗೇಜ್ ಶುಲ್ಕ ಏರಿಕೆ
    November 11, 2026 | 0
  • Untitled design (28)
    ಇಂದು 4 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ; ಬೆಂಗಳೂರಿನಲ್ಲೂ ತುಂತುರು ಮಳೆ!
    November 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version