• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, November 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಸಿದ್ದರಾಮಯ್ಯ ಹಾಗೂ ನನ್ನ ನಡುವೆ ಯಾವುದೇ ಮುನಿಸಿಲ್ಲ: ಸಿಎಂ ಡಿ.ಕೆ ಶಿವಕುಮಾರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 9, 2026 - 6:46 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Your paragraph text (38)

ಬೆಂಗಳೂರು, ನ.09: “ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನನ್ನ ನಡುವೆ ದೊಡ್ಡ ಮುನಿಸೂ ಇಲ್ಲ, ಸಣ್ಣ ಮುನಿಸೂ ಇಲ್ಲ. ಕೆಲವರು ನಮ್ಮ ನಡುವೆ ಮುನಿಸು ಇದೆ ಎಂಬ ವಾತಾವರಣ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿರುಗೇಟು ನೀಡಿದರು.

ಮೇಖ್ರಿ ವೃತ್ತ ಹಾಗೂ ಟೌನ್ ಹಾಲ್ ಬಳಿ ಶಿವಕುಮಾರ್ ಅವರು ಮಾಧ್ಯಮಗಳೊಂದಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು. ಸಿದ್ದರಾಮಯ್ಯ ಅವರಿಗೂ ನಿಮಗೂ ಮುನಿಸು ಉಂಟಾಗಿದೆಯೇ ಎಂದು ಕೇಳಿದಾಗ, ‌”ರಾಜಕಾರಣದಲ್ಲಿ ನಿಂದಕರು ಇರಬೇಕು, ವಿರೋಧಿಗಳು ಇರಬೇಕು. ಅವರೆಲ್ಲ ಇದ್ದಾಗಲೇ ನಮ್ಮಂತಹವರು ಶುದ್ಧ ರಾಜಕಾರಣ ಮಾಡಲು ಸಾಧ್ಯ. ಸಿದ್ದರಾಮಯ್ಯ ಅವರು ನಮ್ಮ ನಾಯಕರು. ಮಹಾಸ್ವಾಮಿಗಳೂ ಸೇರಿದಂತೆ ಕೆಲವರು ಮಾಧ್ಯಮಗಳಲ್ಲಿ ವಿಭಿನ್ನ ರೀತಿಯಲ್ಲಿ ಬಿಂಬಿಸುತ್ತಿದ್ದಾರೆ. ಈ ವಿಚಾರಗಳಿಗೆ ಸಂಬಂಧಿಸಿದಂತೆ ನಾವು ಅವರಿಗೆ ತಿಳಿಸಬೇಕಾದ ವಿಷಯಗಳನ್ನು ಈಗಾಗಲೇ ತಿಳಿಸಿದ್ದೇವೆ” ಎಂದರು.

RelatedPosts

ಅಕ್ರಮ ಮನೆಗಳ ಸಕ್ರಮ ಶುಲ್ಕದಲ್ಲಿ ಶೇ.50ರಷ್ಟು ಭಾರೀ ರಿಯಾಯಿತಿ: ಸಿಎಂ ಡಿ.ಕೆ ಶಿವಕುಮಾರ್‌

ಭಾಷಣದಲ್ಲಿ ಪ್ರತಾಪ್ ಸಿಂಹ ಹೆಸರು ಕೈಬಿಟ್ಟಿದ್ದಕ್ಕೆ ಗಲಾಟೆ: ಹೆದರಿಸಿ ವಿಡಿಯೋ ಮಾಡಿಸಿದ್ರು ಎಂದ BJP ಕಾರ್ಯಕರ್ತ

ಬೆಳಗಾವಿ ಮಹಾನಗರ ಪಾಲಿಕೆಗೆ ಹುಸಿ ಬಾಂಬ್ ಬೆದರಿಕೆ ಕರೆ

ಹಣದ ವಿಚಾರಕ್ಕೆ ಚಾಕುವಿನಿಂದ ಇರಿದು ಯುವಕನ ಬರ್ಬರ ಹ*ತ್ಯೆ

ADVERTISEMENT
ADVERTISEMENT

​”ಸಿದ್ದರಾಮಯ್ಯನವರು ನಮ್ಮ ನಾಯಕರು.‌ ಸ್ಥಳೀಯ ಸಂಸ್ಥೆಗಳ‌ ಚುನಾವಣೆ ಸಮೀಪಿಸುತ್ತಿದೆ.‌ ಹೀಗಾಗಿ ಅವರ ಬಳಿ ಅನೇಕ ವಿಚಾರಗಳನ್ನ ಚರ್ಚೆ ಮಾಡಬೇಕಾದ್ದರಿಂದ‌ ಅವರನ್ನು ಭೇಟಿ‌ ಮಾಡಿ ಹಬ್ಬದ ಶುಭಾಶಯ ಕೋರಿದ್ದೇನೆ” ಎಂದು ಹೇಳಿದರು.

ಮೇಖ್ರಿ ವೃತ್ತದ ಬಳಿ ಉದ್ದೇಶಿತ ಎಲಿವೇಟೆಡ್ ಕಾರಿಡಾರ್ ಹಾಗೂ ಸುರಂಗ ಮಾರ್ಗದ ಯೋಜನೆ ಕುರಿತು ಕೇಳಿದಾಗ, “ನಾವು ಸುರಂಗ ರಸ್ತೆ ನಿರ್ಮಿಸಿದರೂ ಪ್ರತಿಪಕ್ಷಗಳಿಗೆ ಆಕ್ಷೇಪ, ಎಲಿವೇಟೆಡ್ ಕಾರಿಡಾರ್ ನಿರ್ಮಿಸಿದರೂ ಆಕ್ಷೇಪ. ಅವರು ಯಾವಾಗಲೂ ನಕಾರಾತ್ಮಕವಾಗಿಯೇ ಯೋಚಿಸುತ್ತಾರೆ. ಬೆಂಗಳೂರಿನ ಸಂಚಾರ ದಟ್ಟಣೆ ನಿವಾರಣೆಯಾಗಬೇಕಾದರೆ ಪರ್ಯಾಯ ಮಾರ್ಗಗಳನ್ನು ಕಲ್ಪಿಸಲೇಬೇಕು. ರಸ್ತೆಯನ್ನು ಮೇಲ್ಭಾಗದಲ್ಲಿ ನಿರ್ಮಿಸಬೇಕು ಅಥವಾ ಭೂಮಿಯೊಳಗೆ ಸುರಂಗ ಮಾರ್ಗ ಮಾಡಬೇಕು. ಕಟ್ಟಡಗಳನ್ನು ತೆರವುಗೊಳಿ‌ ರಸ್ತೆ ಅಗಲ ಮಾಡಲು ಆಗುತ್ತದೆಯೇ” ಎಂದು” ಹೇಳಿದರು.

“ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ರಸ್ತೆ ಅಗಲೀಕರಣಕ್ಕಾಗಿ ರಕ್ಷಣಾ ಇಲಾಖೆಯ ಜಾಗವನ್ನು ಕೇಳಲಾಗಿದೆ. ಈಗಾಗಲೇ ರಕ್ಷಣಾ ಸಚಿವರ ಬಳಿ ಮೇಖ್ರಿ ವೃತ್ತದ ಬಳಿಯ ಮೂಲೆಯಲ್ಲಿರುವ ಜಾಗವನ್ನು ನೀಡುವಂತೆ ಮನವಿ ಮಾಡಿದ್ದೇನೆ. ಆ ಜಾಗ ದೊರೆತರೆ ಅಲ್ಲಿ ಸಂಚಾರ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತರಬಹುದು. ಒಂದು ವೃತ್ತದ ಸುತ್ತ ಮತ್ತೊಂದು ವೃತ್ತದ ಮಾದರಿಯಲ್ಲಿ ರೋಟರಿ ಸರ್ಕಲ್ ಹಾಗೂ ರಿಂಗ್ ವ್ಯವಸ್ಥೆ ರೂಪಿಸಲಾಗುವುದು. ಎಡಕ್ಕೆ ಹೋಗುವವರು ಎಡಕ್ಕೆ, ಬಲಕ್ಕೆ ಹೋಗುವವರು ಬಲಕ್ಕೆ ಸಾಗುವಂತೆ ವ್ಯವಸ್ಥೆ ಮಾಡಲಾಗುವುದು. ಮೇಲ್ಭಾಗದಲ್ಲಿ ಸಂಚಾರಕ್ಕೆ ಅವಕಾಶ ಕಲ್ಪಿಸುವುದರ ಜೊತೆಗೆ ಅಗತ್ಯವಿರುವ ಕಡೆ ಸುರಂಗ ಮಾರ್ಗವನ್ನೂ ಬಳಸಿಕೊಳ್ಳಲಾಗುವುದು” ಎಂದು ವಿವರಿಸಿದರು.

“ಕಾಮಗಾರಿ ವೇಳೆ ಯಾವುದೇ ರೀತಿಯ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸುವುದಿಲ್ಲ. ಸಂಚಾರ ಪೊಲೀಸರು ಈಗಾಗಲೇ ಯೋಜನೆಯನ್ನು ಪರಿಶೀಲಿಸಿದ್ದಾರೆ. ಇತ್ತೀಚೆಗೆ ಬಿಡಿಎ ಅಧ್ಯಕ್ಷರೂ ಸ್ಥಳ ಪರಿಶೀಲನೆ ನಡೆಸಿದ್ದಾರೆ. ನಾನೂ ಸ್ಥಳಕ್ಕೆ ಭೇಟಿ ನೀಡಿ, ಯಾವ ಭಾಗದಲ್ಲಿ ಸಂಚಾರ ದಟ್ಟಣೆ ಹೆಚ್ಚಾಗುತ್ತಿದೆ ಎಂಬುದನ್ನು ಪರಿಶೀಲಿಸುವಂತೆ ಸೂಚಿಸಿದ್ದೇನೆ. ಕಾಮಗಾರಿ ನಡೆಯುವ ಸಂದರ್ಭದಲ್ಲಿ ಕೆಲವು ದೊಡ್ಡ ವಾಹನಗಳು ಹಾಗೂ ಸರಕು ಸಾಗಣೆ ವಾಹನಗಳನ್ನು ಮಾತ್ರ ನಿರ್ದಿಷ್ಟ ಸಮಯದಲ್ಲಿ ತಾತ್ಕಾಲಿಕವಾಗಿ ತಡೆಹಿಡಿಯಲಾಗುತ್ತದೆ. ಉಳಿದ ವಾಹನಗಳ ಸಂಚಾರವನ್ನು ಸ್ಥಗಿತಗೊಳಿಸುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

“ಕಾಮಗಾರಿಯಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಇದಕ್ಕಾಗಿ ಸುಮಾರು 9 ಕೋಟಿ ರೂಪಾಯಿ ವೆಚ್ಚವಾಗಲಿದೆ. ಸುತ್ತಮುತ್ತಲಿನ ಸಂಪರ್ಕ ರಸ್ತೆಗಳ ಅಭಿವೃದ್ಧಿ ಕಾರ್ಯವನ್ನು ಬಿಡಿಎ ಕೈಗೆತ್ತಿಕೊಳ್ಳಲು ಈಗಾಗಲೇ ಸಿದ್ಧತೆ ಮಾಡಿಕೊಳ್ಳುತ್ತಿದೆ” ಎಂದರು.

ಅಭಿವೃದ್ಧಿ ಕಾಮಗಾರಿಗಳ ಸಂದರ್ಭದಲ್ಲಿ ಸಣ್ಣಪುಟ್ಟ ಸಮಸ್ಯೆಗಳು ಎದುರಾಗುವುದು ಸಹಜ. ಜನರನ್ನು ಹೇಗೆ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತೀರಿ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ವಿರೋಧ ಮಾಡುವವರನ್ನು ಒಪ್ಪಿಸುವ ಅಗತ್ಯವಿಲ್ಲ. ಒಂದು ವರ್ಗದ ಜನರು ನಾನು ಏನೇ ಮಾಡಿದರೂ ವಿರೋಧಿಸಬೇಕೆಂದು ನಿರ್ಧರಿಸಿದಂತಿದೆ. ಬಿಜೆಪಿ ಅಧಿಕಾರದಲ್ಲಿದ್ದಾಗ ಇಂತಹ ಯಾವುದೇ ಕೆಲಸ ಮಾಡಿದ್ದಾರೆಯೇ? ಜೆಡಿಎಸ್‌ನವರು ಏನಾದರೂ ಇಂತಹ ಅಭಿವೃದ್ಧಿ ಕಾರ್ಯ ಕೈಗೊಂಡಿದ್ದಾರೆಯೇ? ಡಿ ಕೆ ಶಿವಕುಮಾರ್ ಏನೇ ಮಾಡಿದರೂ ವಿರೋಧಿಸಬೇಕು ಎಂದು ಕೆಲವರು ನಿರ್ಧರಿಸಿದ್ದಾರೆ. ಎಲ್ಲದಕ್ಕೂ ವಿರೋಧ ವ್ಯಕ್ತಪಡಿಸುತ್ತಿದ್ದಾರೆ” ಎಂದು ಹೇಳಿದರು.

“ಇತ್ತೀಚೆಗೆ ಹೆಲಿಕಾಪ್ಟರ್‌ನಲ್ಲಿ ಸಂಚರಿಸುವಾಗ ಸುರಂಗ ಮಾರ್ಗದ ಯೋಜನೆಗೆ ಸಂಬಂಧಿಸಿದ ಸ್ಥಳವನ್ನು ಪರಿಶೀಲಿಸಿದ್ದೇನೆ. ಲಾಲ್‌ಬಾಗ್ ಬಳಿ ಸುರಂಗ ಮಾರ್ಗ ಹಾದುಹೋಗುವ ಪ್ರದೇಶದಲ್ಲಿ ದೊಡ್ಡ ಹಳ್ಳವಿದ್ದು, ಬಂಡೆ ಇರುವ ಸ್ಥಳಕ್ಕೂ ಸುರಂಗ ಹೊರಬರುವ ಸ್ಥಳಕ್ಕೂ ವ್ಯತ್ಯಾಸವಿದೆ. ಈ ಹಿನ್ನೆಲೆಯಲ್ಲಿ ಯಾವುದೇ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆ ರೂಪಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ” ಎಂದು ತಿಳಿಸಿದರು.

ಪ್ರತಿಪಕ್ಷಗಳ ವಿರೋಧದ ಕುರಿತು ಮಾತನಾಡಿದ ಅವರು, “ವಿರೋಧ ಪಕ್ಷಗಳ ಕೆಲಸವೇ ವಿರೋಧ ಮಾಡುವುದು ಎಂಬಂತಾಗಿದೆ. ಅಭಿವೃದ್ಧಿಗೂ ವಿರೋಧ, ಪ್ರತಿಯೊಂದು ಕೆಲಸಕ್ಕೂ ವಿರೋಧ. ನಮ್ಮ ಸರ್ಕಾರದ ಅಭಿವೃದ್ಧಿಯ ವೇಗವನ್ನು ಅವರಿಂದ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ನಮ್ಮ ಅಭಿವೃದ್ಧಿಯ ವೇಗವನ್ನು ಅವರು ಅರಗಿಸಿಕೊಳ್ಳಲಾಗುತ್ತಿಲ್ಲ” ಎಂದು ಟೀಕಿಸಿದರು.

ಈಗಾಗಲೇ ನಿರ್ಮಾಣವಾಗಿರುವ ಎಲಿವೇಟೆಡ್ ಕಾರಿಡಾರ್‌ಗೆ ಹೊಸ ಯೋಜನೆಯನ್ನು ಜೋಡಿಸಲಾಗುತ್ತದೆಯೇ ಅಥವಾ ಪ್ರತ್ಯೇಕವಾಗಿ ನಿರ್ಮಿಸಲಾಗುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, “ಇದು ಪ್ರತ್ಯೇಕ ಯೋಜನೆಯಾಗಿರುತ್ತದೆ. ಎರಡೂ ಯೋಜನೆಗಳು ತಮ್ಮದೇ ಆದ ರೀತಿಯಲ್ಲಿ ಕಾರ್ಯನಿರ್ವಹಿಸಲಿವೆ. ಸಂಚಾರದ ವೇಗ ಮತ್ತು ಸುಗಮ ಸಂಚಾರವನ್ನು ಕಾಪಾಡುವ ಉದ್ದೇಶದಿಂದ ಪ್ರತ್ಯೇಕ ವ್ಯವಸ್ಥೆ ರೂಪಿಸಲಾಗುತ್ತಿದೆ” ಎಂದರು.

ಎಲಿವೇಟೆಡ್ ಕಾರಿಡಾರ್ ಮುಂದಿನ ಭಾಗದಿಂದ ಸುರಂಗ ಮಾರ್ಗಕ್ಕೆ ಸಂಪರ್ಕ ಕಲ್ಪಿಸುವ ವ್ಯವಸ್ಥೆ ಇರಲಿದೆಯೇ ಎಂಬ ಪ್ರಶ್ನೆಗೆ, “ಸುರಂಗ ಮಾರ್ಗದಿಂದ ಹೊರಬಂದು ಎಲಿವೇಟೆಡ್ ರಸ್ತೆಯ ಮೂಲಕ ಮುಂದುವರಿಯುವ ವ್ಯವಸ್ಥೆ ಇರಲಿದೆ. ಆದರೆ, ಇದು 16 ಕಿಲೋಮೀಟರ್ ಉದ್ದದ ಸುರಂಗ ಮಾರ್ಗವಲ್ಲ. ಅದು ಪ್ರತ್ಯೇಕ ಯೋಜನೆ. ಈಗ ಪ್ರಸ್ತಾಪಿಸಿರುವುದು ಸಣ್ಣ ಸುರಂಗ ಮಾರ್ಗವಾಗಿದೆ” ಎಂದರು.

“ಹೆಬ್ಬಾಳದ ಭಾಗದಲ್ಲಿ ಉಂಟಾಗುವ ಸಂಚಾರ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ಈ ಸಣ್ಣ ಸುರಂಗ ಮಾರ್ಗದ ಯೋಜನೆ ರೂಪಿಸಲಾಗುತ್ತಿದೆ. ಒಂದು ಪ್ರದೇಶದಲ್ಲಿ ಸಂಚಾರ ಸುಗಮಗೊಳಿಸಿದ ಬಳಿಕ ಮುಂದಿನ ಭಾಗದಲ್ಲಿ ಮತ್ತೆ ವಾಹನ ದಟ್ಟಣೆ ಉಂಟಾಗಬಾರದು ಎಂಬ ಉದ್ದೇಶದಿಂದ ಪರ್ಯಾಯ ಸಂಪರ್ಕ ವ್ಯವಸ್ಥೆ ಕಲ್ಪಿಸಲಾಗುತ್ತಿದೆ” ಎಂದು ಹೇಳಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (38)

ಸಿದ್ದರಾಮಯ್ಯ ಹಾಗೂ ನನ್ನ ನಡುವೆ ಯಾವುದೇ ಮುನಿಸಿಲ್ಲ: ಸಿಎಂ ಡಿ.ಕೆ ಶಿವಕುಮಾರ್

by ಶಾಲಿನಿ ಕೆ. ಡಿ
November 9, 2026 - 6:46 pm
0

Your paragraph text (36)

ಅಕ್ರಮ ಮನೆಗಳ ಸಕ್ರಮ ಶುಲ್ಕದಲ್ಲಿ ಶೇ.50ರಷ್ಟು ಭಾರೀ ರಿಯಾಯಿತಿ: ಸಿಎಂ ಡಿ.ಕೆ ಶಿವಕುಮಾರ್‌

by ಶಾಲಿನಿ ಕೆ. ಡಿ
November 9, 2026 - 6:38 pm
0

Your paragraph text (30)

ಡಿಬಾಸ್ ಕಟ್ಟಾಭಿಮಾನಿ ಚೇತನ್..ಟೀಂ ದೇವಿ ಭರ್ಜರಿ ದೀಪಾವಳಿ ಆಚರಣೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 9, 2026 - 5:57 pm
0

Your paragraph text (28)

ಭಾಷಣದಲ್ಲಿ ಪ್ರತಾಪ್ ಸಿಂಹ ಹೆಸರು ಕೈಬಿಟ್ಟಿದ್ದಕ್ಕೆ ಗಲಾಟೆ: ಹೆದರಿಸಿ ವಿಡಿಯೋ ಮಾಡಿಸಿದ್ರು ಎಂದ BJP ಕಾರ್ಯಕರ್ತ

by ಶಾಲಿನಿ ಕೆ. ಡಿ
November 9, 2026 - 5:38 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (36)
    ಅಕ್ರಮ ಮನೆಗಳ ಸಕ್ರಮ ಶುಲ್ಕದಲ್ಲಿ ಶೇ.50ರಷ್ಟು ಭಾರೀ ರಿಯಾಯಿತಿ: ಸಿಎಂ ಡಿ.ಕೆ ಶಿವಕುಮಾರ್‌
    November 9, 2026 | 0
  • Your paragraph text (28)
    ಭಾಷಣದಲ್ಲಿ ಪ್ರತಾಪ್ ಸಿಂಹ ಹೆಸರು ಕೈಬಿಟ್ಟಿದ್ದಕ್ಕೆ ಗಲಾಟೆ: ಹೆದರಿಸಿ ವಿಡಿಯೋ ಮಾಡಿಸಿದ್ರು ಎಂದ BJP ಕಾರ್ಯಕರ್ತ
    November 9, 2026 | 0
  • Your paragraph text (16)
    ಬೆಳಗಾವಿ ಮಹಾನಗರ ಪಾಲಿಕೆಗೆ ಹುಸಿ ಬಾಂಬ್ ಬೆದರಿಕೆ ಕರೆ
    November 9, 2026 | 0
  • Untitled Design 2026 11 09T144223.451
    ಹಣದ ವಿಚಾರಕ್ಕೆ ಚಾಕುವಿನಿಂದ ಇರಿದು ಯುವಕನ ಬರ್ಬರ ಹ*ತ್ಯೆ
    November 9, 2026 | 0
  • Untitled design 2026 11 09T134352.906
    ಪೆಟ್ರೋಲ್‌ನಲ್ಲಿ ಶೇ.31ರಷ್ಟು ಎಥೆನಾಲ್ ಮಿಶ್ರಣ: ಕೇಂದ್ರದ ವಿರುದ್ಧ ಸಚಿವ ರಿಜ್ವಾನ್ ಅರ್ಷದ್ ವಾಗ್ದಾಳಿ
    November 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version