• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, November 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ನಮ್ಮ ಮೆಟ್ರೋ ಹಣಕಾಸಿನ ಲೆಕ್ಕ ಬಿಚ್ಚಿಟ್ಟ ತೇಜಸ್ವಿ ಸೂರ್ಯ; ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 12, 2026 - 4:25 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled Design 2026 11 12T162445.082

ಬೆಂಗಳೂರು: ನಮ್ಮ ಮೆಟ್ರೋ ಯೋಜನೆಯ ಅನುದಾನ ಹಂಚಿಕೆ, ವಿದೇಶಿ ಸಾಲದ ಮರುಪಾವತಿ ಹಾಗೂ ರೆಡ್ ಲೈನ್ ಕಾಮಗಾರಿಯ ವಿಳಂಬದ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು ಬಿಜೆಪಿ ನಡುವೆ ವಾಕ್ಸಮರ ತೀವ್ರಗೊಂಡಿದೆ. ಮೆಟ್ರೋ ಯೋಜನೆಗೆ ಕೇಂದ್ರ ಸರ್ಕಾರದ ಕೊಡುಗೆ ಕಡಿಮೆ ಎಂದು ರಾಜ್ಯ ಸರ್ಕಾರ ತಪ್ಪು ಮಾಹಿತಿ ನೀಡುತ್ತಿದೆ ಎಂದು ಆರೋಪಿಸಿರುವ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ, ಕೇಂದ್ರದ ಪಾಲು ಶೇ.53.35ರಷ್ಟಿದ್ದರೆ ರಾಜ್ಯದ ಪಾಲು ಶೇ.46.65ರಷ್ಟಿದೆ ಎಂದು ಅಂಕಿಅಂಶಗಳೊಂದಿಗೆ ತಿರುಗೇಟು ನೀಡಿದ್ದಾರೆ.

ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮ ಮೆಟ್ರೋ ಯೋಜನೆಯ ಹಣಕಾಸಿನ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಜನರನ್ನು ದಾರಿ ತಪ್ಪಿಸುತ್ತಿದೆ. ಯೋಜನೆಯ ಹೆಸರಿನಲ್ಲಿ ರಾಜಕೀಯವಾಗಿ ಕ್ರೆಡಿಟ್ ಪಡೆಯಲು ಪ್ರಯತ್ನಿಸುತ್ತಿದೆ ಎಂದು ಟೀಕಿಸಿದರು.

RelatedPosts

ಕುಡಿಯಲು ಹಣ ಕೊಡದಿದ್ದಕ್ಕೆ ತಾಯಿಯನ್ನೇ ಹತ್ಯೆಗೈದ ಮಗ

ಮೆಟ್ರೋ ಆರ್ಥಿಕ ಹೊರೆಯನ್ನು ಕೇಂದ್ರ ಹಾಗೂ ರಾಜ್ಯ ಸಮಾನವಾಗಿ ಹಂಚಿಕೊಳ್ಳಬೇಕು: ಸಿಎಂ ಡಿಕೆಶಿ

ಮೈಸೂರಿನಲ್ಲಿ ತಾರಾಲಯ ಉದ್ಘಾಟಿಸಿದ ಪ್ರಧಾನಿ ಮೋದಿ

ಮೈಸೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ

ADVERTISEMENT
ADVERTISEMENT
ಕೇಂದ್ರದ ಪಾಲು 53.35%, ರಾಜ್ಯದ ಪಾಲು 46.65%

ನಮ್ಮ ಮೆಟ್ರೋ ಯೋಜನೆಯು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ತಲಾ ಶೇ.50ರ ಇಕ್ವಿಟಿ ಹಂಚಿಕೆಯ ಒಪ್ಪಂದದಡಿ ಕಾರ್ಯನಿರ್ವಹಿಸುತ್ತಿದೆ. ಆರಂಭಿಕ ಹೂಡಿಕೆಯಾಗಿ ಎರಡೂ ಸರ್ಕಾರಗಳು ತಲಾ 9,164 ಕೋಟಿ ರೂಪಾಯಿ ನೀಡಿವೆ. ಭೂಸ್ವಾಧೀನದ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಬೇಕೆಂಬ ಒಪ್ಪಂದದ ನಿಯಮದಂತೆ ರಾಜ್ಯವು ಸುಮಾರು 19 ಸಾವಿರ ಕೋಟಿ ರೂಪಾಯಿ ವೆಚ್ಚ ಮಾಡಿದೆ ಎಂದು ತೇಜಸ್ವಿ ಸೂರ್ಯ ವಿವರಿಸಿದರು.

ಆದರೆ, ವಿದೇಶಿ ಹಣಕಾಸು ಸಂಸ್ಥೆಗಳಿಂದ ಕೇಂದ್ರ ಸರ್ಕಾರದ ಸಾರ್ವಭೌಮ ಖಾತರಿಯಡಿ ಪಡೆಯಲಾದ ಸಾಲವನ್ನು ರಾಜ್ಯ ಸರ್ಕಾರ ತನ್ನ ಕೊಡುಗೆಯೆಂದು ಬಿಂಬಿಸುತ್ತಿದೆ ಎಂಬುದು ಅವರ ಆರೋಪ. ಸುಮಾರು 28,958 ಕೋಟಿ ರೂಪಾಯಿ ವಿದೇಶಿ ಸಾಲವನ್ನು ಬಿಎಂಆರ್‌ಸಿಎಲ್ ಸಂಸ್ಥೆಯೇ ಪಡೆದು ಮರುಪಾವತಿ ಮಾಡಲಿದೆ. ರಾಜ್ಯ ಸರ್ಕಾರವೊಂದೇ ಈ ಸಾಲವನ್ನು ಮರುಪಾವತಿಸುತ್ತಿದೆ ಎಂಬ ವಾದ ಸರಿಯಲ್ಲ ಎಂದು ಹೇಳಿದರು.

ತಮ್ಮ ಲೆಕ್ಕಾಚಾರದ ಪ್ರಕಾರ, ಕೇಂದ್ರದ ಒಟ್ಟು ಪಾಲು 41,558 ಕೋಟಿ ರೂಪಾಯಿ ಅಂದರೆ ಶೇ.53.35ರಷ್ಟಿದ್ದರೆ, ರಾಜ್ಯದ ಪಾಲು 36,333 ಕೋಟಿ ರೂಪಾಯಿ ಅಂದರೆ ಶೇ.46.65ರಷ್ಟಿದೆ. ಕೇಂದ್ರದ ಕೊಡುಗೆ ಕೇವಲ ಶೇ.16ರಷ್ಟು ಎಂಬ ರಾಜ್ಯ ಸರ್ಕಾರದ ವಾದವನ್ನು ಅವರು ತಳ್ಳಿಹಾಕಿದರು.

ರೆಡ್ ಲೈನ್ ವಿಳಂಬಕ್ಕೆ ರಾಜ್ಯದ ಸುರಂಗ ರಸ್ತೆ ಯೋಜನೆಯೇ ಕಾರಣವೇ?

ನಮ್ಮ ಮೆಟ್ರೋ ರೆಡ್ ಲೈನ್ ಯೋಜನೆ ವಿಳಂಬವಾಗುತ್ತಿರುವುದಕ್ಕೆ ರಾಜ್ಯ ಸರ್ಕಾರದ ಪ್ರಸ್ತಾವಿತ ಸುರಂಗ ರಸ್ತೆ ಯೋಜನೆಯೇ ಕಾರಣ ಎಂದು ತೇಜಸ್ವಿ ಸೂರ್ಯ ಆರೋಪಿಸಿದ್ದಾರೆ. ಉತ್ತರ-ದಕ್ಷಿಣ ಸುರಂಗ ರಸ್ತೆ ಮಾರ್ಗವು ಮೆಟ್ರೋದ ಪ್ರಸ್ತಾವಿತ ಮಾರ್ಗದೊಂದಿಗೆ ಅತಿಕ್ರಮಣಗೊಳ್ಳುತ್ತಿದೆ. ಹೀಗಾಗಿ ಮೆಟ್ರೋ ಮಾರ್ಗದ ಮರು ವಿನ್ಯಾಸ ಅನಿವಾರ್ಯವಾಗಿದ್ದು, ಯೋಜನೆಯ ಪ್ರಗತಿಗೆ ಅಡ್ಡಿಯಾಗಿದೆ ಎಂದು ದೂರಿದರು.

ಹೆಬ್ಬಾಳ ಸುರಂಗ ರಸ್ತೆ ಪ್ರಸ್ತಾವನೆಯಿಂದ ಪಶುವೈದ್ಯಕೀಯ ಕಾಲೇಜು ಮೆಟ್ರೋ ನಿಲ್ದಾಣವನ್ನು ಕೈಬಿಡುವ ಪರಿಸ್ಥಿತಿ ಎದುರಾಗಿದೆ. ಇದರಿಂದ ಪ್ರಯಾಣಿಕರ ಸಂಚಾರ ಸಾಮರ್ಥ್ಯದ ಮೇಲೂ ಪರಿಣಾಮ ಬೀರಲಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಈ ವಿಳಂಬದಿಂದ ಯೋಜನೆ ಪೂರ್ಣಗೊಳ್ಳುವ ಗಡುವು 2031ರಿಂದ 2033ಕ್ಕೆ ಮುಂದೂಡಿಕೆಯಾಗುವ ಸಾಧ್ಯತೆಯಿದ್ದು, ಸುಮಾರು 2,628 ಕೋಟಿ ರೂಪಾಯಿ ಹೆಚ್ಚುವರಿ ವೆಚ್ಚವಾಗಲಿದೆ ಎಂದು ತೇಜಸ್ವಿ ಸೂರ್ಯ ಹೇಳಿದರು.

ಮೆಟ್ರೋ ಹಂತ 3ಎ ವೆಚ್ಚದಲ್ಲೂ ಉಳಿತಾಯದ ಲೆಕ್ಕ

ನಮ್ಮ ಮೆಟ್ರೋ ಹಂತ 3ಎ (ಆರೆಂಜ್ ಲೈನ್) ಯೋಜನೆಗೆ ರಾಜ್ಯ ಸರ್ಕಾರ 28,405 ಕೋಟಿ ರೂಪಾಯಿ ಅಂದಾಜು ವೆಚ್ಚದ ಸಮಗ್ರ ಯೋಜನಾ ವರದಿ (DPR) ಸಲ್ಲಿಸಿತ್ತು. ಕೇಂದ್ರ ಸರ್ಕಾರದ ಪರಿಶೀಲನಾ ಸಮಿತಿಯು ಈ ಮೊತ್ತವನ್ನು 25,999 ಕೋಟಿ ರೂಪಾಯಿಗೆ ಇಳಿಸಿದೆ. ಇದರಿಂದ 2,406 ಕೋಟಿ ರೂಪಾಯಿ ಉಳಿತಾಯವಾಗಲಿದೆ ಎಂದು ಸಂಸದರು ತಿಳಿಸಿದರು.

ಕೇಂದ್ರ ಪ್ರಾಯೋಜಿತ ವಿದೇಶಿ ಸಾಲವನ್ನೂ ಸೇರಿಸಿ ಲೆಕ್ಕ ಹಾಕಿದರೆ, ಮೆಟ್ರೋ ಯೋಜನೆಯಲ್ಲಿ ಪ್ರತಿ ಕಿಲೋಮೀಟರ್‌ಗೆ ಕೇಂದ್ರದ ಕೊಡುಗೆ 189 ಕೋಟಿ ರೂಪಾಯಿ ಹಾಗೂ ರಾಜ್ಯದ ಕೊಡುಗೆ 165 ಕೋಟಿ ರೂಪಾಯಿಗಳಾಗುತ್ತದೆ ಎಂದು ಅವರು ಪ್ರತಿಪಾದಿಸಿದರು.

ಮೆಟ್ರೋ ದರ ಏರಿಕೆ, ಖಾಲಿ ಜಾಗದ ಬಗ್ಗೆಯೂ ಪ್ರಶ್ನೆ

ಮೆಟ್ರೋ ಪ್ರಯಾಣ ದರದ ವಿಚಾರವಾಗಿಯೂ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ತೇಜಸ್ವಿ ಸೂರ್ಯ, ಬೆಂಗಳೂರಿನಲ್ಲಿ ಪ್ರತಿ ಕಿಲೋಮೀಟರ್‌ಗೆ ಮೆಟ್ರೋ ಪ್ರಯಾಣದ ವೆಚ್ಚ 3.97 ರೂಪಾಯಿ ಇದ್ದರೆ, ಮುಂಬೈನಲ್ಲಿ 3.20 ರೂಪಾಯಿ ಹಾಗೂ ದೆಹಲಿಯಲ್ಲಿ 2.72 ರೂಪಾಯಿ ಇದೆ ಎಂದು ಹೋಲಿಕೆ ಮಾಡಿದರು.

ಇದಲ್ಲದೆ, ನಮ್ಮ ಮೆಟ್ರೋದಲ್ಲಿ ಸುಮಾರು ಎರಡು ಲಕ್ಷ ಚದರ ಅಡಿ ಜಾಗ ಖಾಲಿ ಉಳಿದಿದೆ. ಈ ಜಾಗವನ್ನು ಬಾಡಿಗೆಗೆ ನೀಡುವ ಮೂಲಕ ಆದಾಯ ಹೆಚ್ಚಿಸಿ ಪ್ರಯಾಣಿಕರ ಮೇಲಿನ ದರದ ಹೊರೆಯನ್ನು ಕಡಿಮೆ ಮಾಡಬಹುದಿತ್ತು ಎಂದು ಅಭಿಪ್ರಾಯಪಟ್ಟರು. ಮೆಟ್ರೋ ಎರಡನೇ ಹಂತ, 2ಎ, 2ಬಿ ಹಾಗೂ ಮೂರನೇ ಹಂತದ ಯೋಜನೆಗಳಿಗೆ ರಾಜ್ಯ ಸರ್ಕಾರ ಹಣ ಪಾವತಿಸಿರುವುದಕ್ಕೆ ದಾಖಲೆ ನೀಡಬೇಕು ಎಂದೂ ಆಗ್ರಹಿಸಿದರು.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (68)

ಹವಾಮಾನ ವೈಪರೀತ್ಯದ ನಡುವೆ ಶಿವು ಪ್ರೀತಿಯ ನಿರೀಕ್ಷಾ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 13, 2026 - 5:27 pm
0

Untitled Design 2026 11 13T171553.813

ಕುಡಿಯಲು ಹಣ ಕೊಡದಿದ್ದಕ್ಕೆ ತಾಯಿಯನ್ನೇ ಹತ್ಯೆಗೈದ ಮಗ

by ಶಾಲಿನಿ ಕೆ. ಡಿ
November 13, 2026 - 5:17 pm
0

Untitled Design 2026 11 13T165636.843

ಪ್ರಮೋದ್ ಶೆಟ್ರ ಹುಬ್ಬಳ್ಳಿ ಹಂಟರ್ಸ್..ರಕ್ಷಿತ್ ಶೆಟ್ಟಿ ಜಾದೂ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 13, 2026 - 4:57 pm
0

ಮೆಟ್ರೋ ಆರ್ಥಿಕ ಹೊರೆಯನ್ನು ಕೇಂದ್ರ ಹಾಗೂ ರಾಜ್ಯ ಸಮಾನವಾಗಿ ಹಂಚಿಕೊಳ್ಳಬೇಕು ಸಿಎಂ ಡಿಕೆಶಿ

ಮೆಟ್ರೋ ಆರ್ಥಿಕ ಹೊರೆಯನ್ನು ಕೇಂದ್ರ ಹಾಗೂ ರಾಜ್ಯ ಸಮಾನವಾಗಿ ಹಂಚಿಕೊಳ್ಳಬೇಕು: ಸಿಎಂ ಡಿಕೆಶಿ

by ಶಾಲಿನಿ ಕೆ. ಡಿ
November 13, 2026 - 4:45 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled Design 2026 11 13T171553.813
    ಕುಡಿಯಲು ಹಣ ಕೊಡದಿದ್ದಕ್ಕೆ ತಾಯಿಯನ್ನೇ ಹತ್ಯೆಗೈದ ಮಗ
    November 13, 2026 | 0
  • ಮೆಟ್ರೋ ಆರ್ಥಿಕ ಹೊರೆಯನ್ನು ಕೇಂದ್ರ ಹಾಗೂ ರಾಜ್ಯ ಸಮಾನವಾಗಿ ಹಂಚಿಕೊಳ್ಳಬೇಕು ಸಿಎಂ ಡಿಕೆಶಿ
    ಮೆಟ್ರೋ ಆರ್ಥಿಕ ಹೊರೆಯನ್ನು ಕೇಂದ್ರ ಹಾಗೂ ರಾಜ್ಯ ಸಮಾನವಾಗಿ ಹಂಚಿಕೊಳ್ಳಬೇಕು: ಸಿಎಂ ಡಿಕೆಶಿ
    November 13, 2026 | 0
  • Untitled Design 2026 11 13T160421.879
    ಮೈಸೂರಿನಲ್ಲಿ ತಾರಾಲಯ ಉದ್ಘಾಟಿಸಿದ ಪ್ರಧಾನಿ ಮೋದಿ
    November 13, 2026 | 0
  • ಹೊಸ ಮೆಟ್ರೋ ಮಾರ್ಗದಿಂದ ಬೆಂಗಳೂರಿಗೆ ದೊಡ್ಡ ಕೊಡುಗೆ ಪ್ರಧಾನಿ ಮೋದಿ
    ಮೈಸೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ
    November 13, 2026 | 0
  • ಹೊಸ ಮೆಟ್ರೋ ಮಾರ್ಗದಿಂದ ಬೆಂಗಳೂರಿಗೆ ದೊಡ್ಡ ಕೊಡುಗೆ ಪ್ರಧಾನಿ ಮೋದಿ
    ಹೊಸ ಮೆಟ್ರೋ ಮಾರ್ಗದಿಂದ ಬೆಂಗಳೂರಿಗೆ ದೊಡ್ಡ ಕೊಡುಗೆ: ಪ್ರಧಾನಿ ಮೋದಿ
    November 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version