• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, November 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಕುಡಿಯಲು ಹಣ ಕೊಡದಿದ್ದಕ್ಕೆ ತಾಯಿಯನ್ನೇ ಹತ್ಯೆಗೈದ ಮಗ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 13, 2026 - 5:17 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ದಾವಣಗೆರೆ
0 0
0
Untitled Design 2026 11 13T171553.813

ದಾವಣಗೆರೆ: ವೃದ್ಧಾಪ್ಯದಲ್ಲಿ ಆಸರೆಯಾಗಬೇಕಿದ್ದ ಮಗನೇ ಹೆತ್ತ ತಾಯಿಯ ಪಾಲಿಗೆ ಯಮನಾಗಿರುವ ಹೃದಯವಿದ್ರಾವಕ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ದೊಡ್ಡಘಟ್ಟ ಗ್ರಾಮದಲ್ಲಿ ನಡೆದಿದೆ.

ಮದ್ಯ ಸೇವಿಸಲು ಹಣ ನೀಡಲು ನಿರಾಕರಿಸಿದ ಕಾರಣಕ್ಕೆ 70 ವರ್ಷದ ತಾಯಿ ಬುಳ್ಳಮ್ಮ ಅವರನ್ನು ಮಗ ಹನುಮಂತಪ್ಪ ದೊಣ್ಣೆಯಿಂದ ಹೊಡೆದು ಹತ್ಯೆ ಮಾಡಿದ್ದಾನೆ. ಸ್ನೇಹಿತನ ಕೊಲೆ ಪ್ರಕರಣದಲ್ಲಿ ಏಳು ವರ್ಷ ಜೈಲು ಶಿಕ್ಷೆ ಅನುಭವಿಸಿದ್ದ ಮಗನನ್ನು ಜಾಮೀನಿನ ಮೇಲೆ ಬಿಡಿಸಿಕೊಳ್ಳಲು ತಾಯಿ ತನ್ನ ಮನೆಯನ್ನು ಮಾರಿದ್ದರು. ಆದರೆ, ಜೈಲಿನಿಂದ ಹೊರಬಂದ ಕೇವಲ ಮೂರು ತಿಂಗಳಲ್ಲೇ ಅದೇ ಮಗನಿಂದ ತಾಯಿ ಕೊನೆಯುಸಿರೆಳೆದಿದ್ದಾರೆ.

RelatedPosts

ಮೆಟ್ರೋ ಆರ್ಥಿಕ ಹೊರೆಯನ್ನು ಕೇಂದ್ರ ಹಾಗೂ ರಾಜ್ಯ ಸಮಾನವಾಗಿ ಹಂಚಿಕೊಳ್ಳಬೇಕು: ಸಿಎಂ ಡಿಕೆಶಿ

ಮೈಸೂರಿನಲ್ಲಿ ತಾರಾಲಯ ಉದ್ಘಾಟಿಸಿದ ಪ್ರಧಾನಿ ಮೋದಿ

ಮೈಸೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ

ಹೊಸ ಮೆಟ್ರೋ ಮಾರ್ಗದಿಂದ ಬೆಂಗಳೂರಿಗೆ ದೊಡ್ಡ ಕೊಡುಗೆ: ಪ್ರಧಾನಿ ಮೋದಿ

ADVERTISEMENT
ADVERTISEMENT

ಮೃತ ಬುಳ್ಳಮ್ಮ ಅವರಿಗೆ ಹತ್ತು ಮಕ್ಕಳು. ಒಂಬತ್ತು ಹೆಣ್ಣು ಮಕ್ಕಳ ಬಳಿಕ ಜನಿಸಿದ ಒಬ್ಬನೇ ಗಂಡು ಮಗ ಹನುಮಂತಪ್ಪ (35). ಗಂಡನನ್ನು ಕಳೆದುಕೊಂಡ ಬಳಿಕ ಕಷ್ಟಪಟ್ಟು ಮಕ್ಕಳನ್ನು ಬೆಳೆಸಿದ್ದ ಬುಳ್ಳಮ್ಮ, ಒಂಬತ್ತು ಹೆಣ್ಣು ಮಕ್ಕಳಿಗೂ ಮದುವೆ ಮಾಡಿಕೊಟ್ಟಿದ್ದರು. ಗಂಡು ಮಗನ ಮೇಲಿದ್ದ ಅಪಾರ ಪ್ರೀತಿಯಿಂದ ಆತನ ಭವಿಷ್ಯದ ಬಗ್ಗೆ ಸಾಕಷ್ಟು ಕನಸು ಕಂಡಿದ್ದರು. ಆದರೆ, ಹನುಮಂತಪ್ಪ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುತ್ತಿದ್ದ ಹಿನ್ನೆಲೆಯಲ್ಲಿ ಕುಟುಂಬದಲ್ಲಿ ನೆಮ್ಮದಿ ಇರಲಿಲ್ಲ ಎನ್ನಲಾಗಿದೆ.

ಈ ಹಿಂದೆ ಸ್ನೇಹಿತನನ್ನೇ ಕೊಲೆ ಮಾಡಿದ ಪ್ರಕರಣದಲ್ಲಿ ಹನುಮಂತಪ್ಪ ಏಳು ವರ್ಷಗಳ ಕಾಲ ಜೈಲಿನಲ್ಲಿದ್ದ. ಮಗ ಜೈಲು ಸೇರಿದ್ದರಿಂದ ತಾಯಿ ಬುಳ್ಳಮ್ಮ ತೀವ್ರವಾಗಿ ನೊಂದಿದ್ದರು. ಮಗನನ್ನು ಜೈಲಿನಿಂದ ಹೊರತರಲು ಮನೆಯನ್ನೇ ಮಾರಾಟ ಮಾಡಿ, ಸುಮಾರು 10 ಲಕ್ಷ ರೂಪಾಯಿ ಖರ್ಚು ಮಾಡಿ ಜಾಮೀನಿನ ಮೇಲೆ ಬಿಡಿಸಿಕೊಂಡು ಬಂದಿದ್ದರು ಎನ್ನಲಾಗಿದೆ. ಮೂರು ತಿಂಗಳ ಹಿಂದಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದ ಹನುಮಂತಪ್ಪ, ದಾವಣಗೆರೆಯ ಖಾಸಗಿ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದ.

ತಾಯಿಯ ಬಳಿ ಹಣ ಕೇಳಿ ಜಗಳ

ಬುಳ್ಳಮ್ಮ ಅವರು ತಮ್ಮ ಹೆಣ್ಣುಮಕ್ಕಳ ಮನೆಗಳಲ್ಲಿ ವಾಸವಾಗಿದ್ದರು. ಮಗನನ್ನು ನೋಡಬೇಕೆಂಬ ಆಸೆಯಿಂದ ಎರಡು ದಿನಗಳ ಹಿಂದೆ ಹನುಮಂತಪ್ಪನನ್ನು ದೊಡ್ಡಘಟ್ಟ ಗ್ರಾಮಕ್ಕೆ ಕರೆಸಿಕೊಂಡಿದ್ದರು. ಘಟನೆ ನಡೆದ ದಿನ ಅಕ್ಕ ಶಾರದಮ್ಮ ಅವರ ಮನೆಯಲ್ಲಿ ಚಿಕನ್ ಊಟ ಮಾಡಿದ ಹನುಮಂತಪ್ಪ, ತಾಯಿಯೊಂದಿಗೆ ಮಾತನಾಡಿಕೊಂಡು ಬರುವುದಾಗಿ ಹೇಳಿ ತೆರಳಿದ್ದ.

ಈ ವೇಳೆ ಬುಳ್ಳಮ್ಮ ಅವರ ಬಳಿ ಇತ್ತೀಚೆಗೆ ಬಿಡಿಸಿಕೊಂಡಿದ್ದ ಸುಮಾರು 6 ಸಾವಿರ ರೂಪಾಯಿ ಹಣವಿರುವ ವಿಚಾರ ಹನುಮಂತಪ್ಪನಿಗೆ ತಿಳಿದಿತ್ತು ಎನ್ನಲಾಗಿದೆ. ವಿಪರೀತ ಮದ್ಯಪಾನ ಮಾಡಿದ್ದ ಆತ, ತಾಯಿಯ ಬಳಿ ಹಣ ಕೇಳಿದ್ದಾನೆ. ಆದರೆ, ಕುಡಿತಕ್ಕೆ ಹಣ ಖರ್ಚು ಮಾಡುತ್ತಾನೆ ಎಂಬ ಕಾರಣಕ್ಕೆ ಬುಳ್ಳಮ್ಮ ಹಣ ನೀಡಲು ನಿರಾಕರಿಸಿದ್ದಾರೆ. ಇದೇ ವಿಚಾರವಾಗಿ ತಾಯಿ ಮತ್ತು ಮಗನ ನಡುವೆ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ.

ಕೋಪಗೊಂಡ ಹನುಮಂತಪ್ಪ ಕಟ್ಟಿಗೆಯ ತುಂಡಿನಿಂದ ತಾಯಿ ಬುಳ್ಳಮ್ಮ ಅವರ ತಲೆಗೆ ಬಲವಾಗಿ ಹೊಡೆದಿದ್ದಾನೆ. ತೀವ್ರವಾಗಿ ಗಾಯಗೊಂಡ ಬುಳ್ಳಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಳಿಕ ಮೃತದೇಹವನ್ನು ಬೆಡ್‌ಶೀಟ್‌ನಿಂದ ಮುಚ್ಚಿ ಆರೋಪಿ ಅಲ್ಲಿಯೇ ಕುಳಿತಿದ್ದ ಎನ್ನಲಾಗಿದೆ.

ಮಗಳ ಕಣ್ಣಿಗೆ ಬಿದ್ದ ಭೀಕರ ದೃಶ್ಯ

ತಾಯಿಯನ್ನು ಮಾತನಾಡಿಸಿಕೊಂಡು ಬರುವುದಾಗಿ ತೆರಳಿದ್ದ ಹನುಮಂತಪ್ಪ ಮರಳಿ ಬಾರದಿದ್ದರಿಂದ ಅಕ್ಕ ಶಾರದಮ್ಮ ಅನುಮಾನಗೊಂಡು ಸ್ಥಳಕ್ಕೆ ತೆರಳಿದ್ದಾರೆ. ಅಲ್ಲಿ ತಾಯಿ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಕಂಡು ಆಘಾತಕ್ಕೊಳಗಾಗಿದ್ದಾರೆ. ಕೂಡಲೇ ಗ್ರಾಮಸ್ಥರನ್ನು ಕರೆಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಗ್ರಾಮಸ್ಥರು ಆರೋಪಿಯನ್ನು ಹಿಡಿದು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.

ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಬಸವಾಪಟ್ಟಣ ಪೊಲೀಸ್ ಠಾಣೆಯ ಸಿಪಿಐ ಮಲ್ಲಮ್ಮ ಚೌಬೇ ಹಾಗೂ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ದಾವಣಗೆರೆಯ ಜಿಲ್ಲಾ ಚಿಗಟೇರಿ ಆಸ್ಪತ್ರೆಗೆ ರವಾನಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled Design 2026 11 13T172457.869

ಹವಾಮಾನ ವೈಪರೀತ್ಯದ ನಡುವೆ ಶಿವು ಪ್ರೀತಿಯ ನಿರೀಕ್ಷಾ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 13, 2026 - 5:27 pm
0

Untitled Design 2026 11 13T171553.813

ಕುಡಿಯಲು ಹಣ ಕೊಡದಿದ್ದಕ್ಕೆ ತಾಯಿಯನ್ನೇ ಹತ್ಯೆಗೈದ ಮಗ

by ಶಾಲಿನಿ ಕೆ. ಡಿ
November 13, 2026 - 5:17 pm
0

Untitled Design 2026 11 13T165636.843

ಪ್ರಮೋದ್ ಶೆಟ್ರ ಹುಬ್ಬಳ್ಳಿ ಹಂಟರ್ಸ್..ರಕ್ಷಿತ್ ಶೆಟ್ಟಿ ಜಾದೂ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 13, 2026 - 4:57 pm
0

ಮೆಟ್ರೋ ಆರ್ಥಿಕ ಹೊರೆಯನ್ನು ಕೇಂದ್ರ ಹಾಗೂ ರಾಜ್ಯ ಸಮಾನವಾಗಿ ಹಂಚಿಕೊಳ್ಳಬೇಕು ಸಿಎಂ ಡಿಕೆಶಿ

ಮೆಟ್ರೋ ಆರ್ಥಿಕ ಹೊರೆಯನ್ನು ಕೇಂದ್ರ ಹಾಗೂ ರಾಜ್ಯ ಸಮಾನವಾಗಿ ಹಂಚಿಕೊಳ್ಳಬೇಕು: ಸಿಎಂ ಡಿಕೆಶಿ

by ಶಾಲಿನಿ ಕೆ. ಡಿ
November 13, 2026 - 4:45 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮೆಟ್ರೋ ಆರ್ಥಿಕ ಹೊರೆಯನ್ನು ಕೇಂದ್ರ ಹಾಗೂ ರಾಜ್ಯ ಸಮಾನವಾಗಿ ಹಂಚಿಕೊಳ್ಳಬೇಕು ಸಿಎಂ ಡಿಕೆಶಿ
    ಮೆಟ್ರೋ ಆರ್ಥಿಕ ಹೊರೆಯನ್ನು ಕೇಂದ್ರ ಹಾಗೂ ರಾಜ್ಯ ಸಮಾನವಾಗಿ ಹಂಚಿಕೊಳ್ಳಬೇಕು: ಸಿಎಂ ಡಿಕೆಶಿ
    November 13, 2026 | 0
  • Untitled Design 2026 11 13T160421.879
    ಮೈಸೂರಿನಲ್ಲಿ ತಾರಾಲಯ ಉದ್ಘಾಟಿಸಿದ ಪ್ರಧಾನಿ ಮೋದಿ
    November 13, 2026 | 0
  • ಹೊಸ ಮೆಟ್ರೋ ಮಾರ್ಗದಿಂದ ಬೆಂಗಳೂರಿಗೆ ದೊಡ್ಡ ಕೊಡುಗೆ ಪ್ರಧಾನಿ ಮೋದಿ
    ಮೈಸೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ
    November 13, 2026 | 0
  • ಹೊಸ ಮೆಟ್ರೋ ಮಾರ್ಗದಿಂದ ಬೆಂಗಳೂರಿಗೆ ದೊಡ್ಡ ಕೊಡುಗೆ ಪ್ರಧಾನಿ ಮೋದಿ
    ಹೊಸ ಮೆಟ್ರೋ ಮಾರ್ಗದಿಂದ ಬೆಂಗಳೂರಿಗೆ ದೊಡ್ಡ ಕೊಡುಗೆ: ಪ್ರಧಾನಿ ಮೋದಿ
    November 13, 2026 | 0
  • Untitled Design 2026 11 13T140339.492
    ಕರ್ನಾಟಕದ ವಿವಿಧ ಅಭಿವೃದ್ಧಿ ಯೋಜನೆ ಹಾಗೂ ವಂದೇ ಭಾರತ್ ರೈಲು ಸಂಚಾರಕ್ಕೆ ಪ್ರಧಾನಿ ಮೋದಿ ಚಾಲನೆ
    November 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version