• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, November 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ನಿಖಿಲ್‌ಗೆ ದೇಗುಲ ಪ್ರವೇಶ ನಿರಾಕರಣೆ: ಕಾಂಗ್ರೆಸ್‌ಗೆ ಹಳೆಯ ಘಟನೆ ನೆನಪಿಸಿ ಎಚ್ಚರಿಕೆ ನೀಡಿದ ಹೆಚ್‌ಡಿಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 14, 2026 - 3:52 pm
in ಕರ್ನಾಟಕ
0 0
0
ಹಳೆಯ ಘಟನೆ ನೆನಪಿಸಿ ಎಚ್ಚರಿಕೆ ನೀಡಿದ ಹೆಚ್ ಡಿಕೆ

ಹಾಸನ: ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರಿಗೆ ರಾಮನಗರ ಜಿಲ್ಲೆಯ ದೇವಸ್ಥಾನವೊಂದರ ಪ್ರವೇಶ ನಿರಾಕರಿಸಿದ ಘಟನೆ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ. ಈ ವಿಚಾರವಾಗಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಹಿಂದಿನ ಘಟನೆಯೊಂದನ್ನು ನೆನಪಿಸುವ ಮೂಲಕ ಎಚ್ಚರಿಕೆ ನೀಡಿದ್ದಾರೆ. ರಾಮನಗರದ ಜನರೇ ಮುಂದಿನ ದಿನಗಳಲ್ಲಿ ಕಾಂಗ್ರೆಸ್‌ಗೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಹೇಳಿದ್ದಾರೆ.

ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಮಾವಿನಕೆರೆ ರಂಗನಾಥ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ ಕುಮಾರಸ್ವಾಮಿ, ವಿಶೇಷ ಪೂಜೆ ಸಲ್ಲಿಸಿದರು. ಕುಟುಂಬದವರ ಹೆಸರಿನಲ್ಲಿ ಪೂಜೆ ಸಲ್ಲಿಸಿದ ಬಳಿಕ ದೇವಸ್ಥಾನದ ಆವರಣದಲ್ಲಿದ್ದ ಶಾಲಾ ಮಕ್ಕಳೊಂದಿಗೆ ಕೆಲಕಾಲ ಸಮಯ ಕಳೆದರು. ಮಕ್ಕಳ ದಿನಾಚರಣೆಯ ಹಿನ್ನೆಲೆ ಮಕ್ಕಳಿಗೆ ಶುಭಾಶಯ ಕೋರಿದ ಅವರು, ಮಕ್ಕಳೊಂದಿಗೆ ಫೋಟೋ ತೆಗೆಸಿಕೊಂಡರು. ಈ ವೇಳೆ ನೂರಾರು ಮಕ್ಕಳು ಕುಮಾರಸ್ವಾಮಿ ಅವರಿಗೆ ಜೈಕಾರ ಹಾಕಿದರು.

RelatedPosts

ವರ್ಷಾಂತ್ಯದ ಪ್ರವಾಸಕ್ಕೆ ಮೇಕ್‌ ಮೈ ಟ್ರಿಪ್ ಭರ್ಜರಿ ಆಫರ್: ನ.14ರಿಂದ ಟ್ರಾವೆಲ್ ಸೇಲ್ ಆರಂಭ!

7 ಮಂದಿಯ ಹತ್ಯೆ ಕೇಸ್: ಆಸ್ತಿಗಾಗಿ ಕುಟುಂಬಸ್ಥರ ಹೆಬ್ಬೆಟ್ಟು ಗುರುತು ಪಡೆದಿದ್ದ ಹಂತಕ

ಆಟ ವಾಡುವಾಗ ಕೆಮಿಕಲ್ ತುಂಬಿದ್ದ ಬಕೆಟ್‌ಗೆ ಬಿದ್ದು ಮಗು ಸಾವು

ನಂದಿನಿ ಮೊಸರಿನಲ್ಲಿ ಸಿಮ್ ಕಾರ್ಡ್ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಪೊಲೀಸರ ತನಿಖೆಯಲ್ಲಿ ಬಯಲಾಯ್ತು ಅಸಲಿ ಸತ್ಯ

ADVERTISEMENT
ADVERTISEMENT
ನಿಖಿಲ್‌ಗೆ ದೇಗುಲ ಪ್ರವೇಶ ನಿರಾಕರಣೆ: ಹೆಚ್‌ಡಿಕೆ ಆಕ್ರೋಶ

ನಿಖಿಲ್ ಕುಮಾರಸ್ವಾಮಿ ಅವರಿಗೆ ದೇವಸ್ಥಾನದ ಉದ್ಘಾಟನೆಗೆ ಆಹ್ವಾನ ನೀಡಲಾಗಿತ್ತು. ಆಹ್ವಾನದ ಮೇರೆಗೆ ಅವರು ರಾಮನಗರ ಜಿಲ್ಲೆಯ ಬೇಲೂರು ಪಂಚಾಯಿತಿ ವ್ಯಾಪ್ತಿಯ ಕುರುಬರದೊಡ್ಡಿ ಗ್ರಾಮಕ್ಕೆ ತೆರಳಿದ್ದರು. ಆದರೆ ಅಲ್ಲಿ ಅವರಿಗೆ ದೇವಸ್ಥಾನ ಪ್ರವೇಶಕ್ಕೆ ನಿರಾಕರಣೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಕುರುಬರದೊಡ್ಡಿ ಗ್ರಾಮ ತಮ್ಮ ರಾಜಕೀಯ ಜೀವನದಲ್ಲಿ ಮಹತ್ವದ ಸ್ಥಾನ ಹೊಂದಿದೆ. ಈ ಗ್ರಾಮ ಹಾಗೂ ಕ್ಷೇತ್ರದ ಜನರು ಹಿಂದಿನಿಂದಲೂ ತಮಗೆ ದೊಡ್ಡ ಮಟ್ಟದ ಬೆಂಬಲ ನೀಡಿದ್ದಾರೆ. ಆದರೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಜೆಡಿಎಸ್ ಕಾರ್ಯಕರ್ತರನ್ನು ಭಯಭೀತಗೊಳಿಸುವ ಹಾಗೂ ಅವರ ಮೇಲೆ ದಬ್ಬಾಳಿಕೆ ನಡೆಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಆರೋಪಿಸಿದರು.

ನಿನ್ನೆ ನಡೆದ ಘಟನೆ ಕೂಡ ಇದೇ ರೀತಿಯ ಬೆಳವಣಿಗೆಯ ಭಾಗವಾಗಿದೆ. ಕಾಂಗ್ರೆಸ್ ಕಾರ್ಯಕರ್ತರ ವರ್ತನೆ ದೌರ್ಜನ್ಯ ಹಾಗೂ ರೌಡಿಸಂನಂತೆ ಕಾಣುತ್ತಿದೆ. ಆದರೆ ಇದಕ್ಕೆಲ್ಲ ರಾಮನಗರದ ಜನರೇ ಮುಂದಿನ ದಿನಗಳಲ್ಲಿ ಉತ್ತರ ನೀಡಲಿದ್ದಾರೆ. ಜನರು ಅವರಿಗೆ ಬುದ್ಧಿ ಕಲಿಸುವ ದಿನಗಳು ದೂರವಿಲ್ಲ ಎಂದು ಎಚ್ಚರಿಕೆ ನೀಡಿದರು.

2004ರ ಘಟನೆ ನೆನಪಿಸಿದ ಕುಮಾರಸ್ವಾಮಿ

ಇದೇ ಸಂದರ್ಭದಲ್ಲಿ ಹಿಂದಿನ ರಾಜಕೀಯ ಘಟನೆಯೊಂದನ್ನು ನೆನಪಿಸಿಕೊಂಡ ಕುಮಾರಸ್ವಾಮಿ, 2004ರಲ್ಲಿ ತಾವು ಶಾಸಕನಾಗುವ ಮೊದಲೇ ಹೊಸೂರು ಗ್ರಾಮದಲ್ಲಿ ಕಾಂಗ್ರೆಸ್‌ನವರು ಇದೇ ರೀತಿಯ ದಬ್ಬಾಳಿಕೆ ನಡೆಸಿದ್ದರು ಎಂದು ಹೇಳಿದರು. ದೇವಸ್ಥಾನಕ್ಕೆ ಬೀಗ ಹಾಕಿ ಹೋಗಿದ್ದ ಘಟನೆಯನ್ನೂ ಪ್ರಸ್ತಾಪಿಸಿದರು.

ಆ ಘಟನೆ ಬಳಿಕ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಜನರು ತಮಗೆ 25 ಸಾವಿರಕ್ಕೂ ಅಧಿಕ ಮತಗಳ ಬಹುಮತ ನೀಡಿ ಗೆಲ್ಲಿಸಿದ್ದರು. ಆ ಮೂಲಕ ಕ್ಷೇತ್ರದಲ್ಲಿ ಬದಲಾವಣೆಯ ಪರ್ವ ಆರಂಭವಾಗಿತ್ತು. ಈಗ ನಿಖಿಲ್ ಕುಮಾರಸ್ವಾಮಿ ಅವರಿಗೆ ನಡೆದಿರುವ ಘಟನೆಯೂ ರಾಮನಗರದಲ್ಲಿ ಮತ್ತೊಂದು ರಾಜಕೀಯ ಬದಲಾವಣೆಗೆ ಮುನ್ನುಡಿಯಾಗಲಿದೆ. ಈ ಬದಲಾವಣೆಗೆ ಕಾಂಗ್ರೆಸ್‌ನವರೇ ನಾಂದಿ ಹಾಡಿದ್ದಾರೆ ಎಂದು ವ್ಯಂಗ್ಯವಾಡಿದರು.

500 ಕೋಟಿ ಆಫರ್ ವಿಚಾರ: ಸಿಎಂಗೆ ತಿರುಗೇಟು

ಇನ್ನು ಜೆಡಿಎಸ್ ಶಾಸಕರಿಗೆ 500 ಕೋಟಿ ರೂಪಾಯಿ ಆಮಿಷವೊಡ್ಡಲಾಗಿದೆ ಎಂಬ ಆರೋಪದ ಬಗ್ಗೆಯೂ ಕುಮಾರಸ್ವಾಮಿ ಪ್ರತಿಕ್ರಿಯಿಸಿದರು. ಶಾಸಕ ಎಂಟಿ ಕೃಷ್ಣಪ್ಪ ಈ ವಿಚಾರವನ್ನು ಬಹಿರಂಗವಾಗಿ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಹಲವು ಬಾರಿ ಈ ಬಗ್ಗೆ ಮಾತನಾಡಿದ್ದಾರೆ. ಜನತಾದಳವನ್ನು ರಾಜಕೀಯವಾಗಿ ಸರ್ವನಾಶ ಮಾಡಲು ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು.

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜಿ.ಟಿ. ದೇವೇಗೌಡ ಅವರು ಮೂರು ಬಾರಿ ಗೆಲ್ಲುವಲ್ಲಿ ಪಕ್ಷದ ನಿಷ್ಠಾವಂತ ಕಾರ್ಯಕರ್ತರ ಶ್ರಮವಿದೆ. ಅವರ ಗೆಲುವಿನಲ್ಲಿ ತಮ್ಮ ಪಾತ್ರವೂ ಇದೆ ಎಂದು ಹೇಳಿದರು. ಜೆಡಿಎಸ್ ನಾಯಕರನ್ನು ಹಾಗೂ ಕಾರ್ಯಕರ್ತರನ್ನು ಸೆಳೆಯುವ ಪ್ರಯತ್ನ ಹೊಸದೇನಲ್ಲ ಎಂದರು.

ಡಿಸಿ ಮತ್ತು ಪಿಎ ವಾಟ್ಸಪ್ ಚಾಟ್ ವಿಚಾರಕ್ಕೆ ಪ್ರತಿಕ್ರಿಯೆ

ಇನ್ನು ಜಿಲ್ಲಾಧಿಕಾರಿ ಹಾಗೂ ಅವರ ಪಿಎ ನಡುವಿನ ವಾಟ್ಸಪ್ ಚಾಟ್ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಕುಮಾರಸ್ವಾಮಿ, ಈ ವಿಚಾರದಲ್ಲಿ ಯಾರಾದರೂ ಹಣ ಪಡೆದಿದ್ದಾರೆ ಎಂದು ತಾವು ಹೇಳಿದ್ದೇನಾ ಎಂದು ಪ್ರಶ್ನಿಸಿದರು. ಸಂಬಂಧಪಟ್ಟ ಅಧಿಕಾರಿಯ ನಡವಳಿಕೆಯಲ್ಲಿ ಬದಲಾವಣೆ ಆಗಬೇಕು. ಮುಖ್ಯಮಂತ್ರಿಗಳೇ ಸಭೆಯಲ್ಲಿ ಅಧಿಕಾರಿಗೆ ಕ್ಲೀನ್ ಚಿಟ್ ನೀಡಿದ ಮೇಲೆ ಬೇರೆ ಯಾರಿಗೆ ದೂರು ನೀಡಿದರೂ ಏನು ಪ್ರಯೋಜನ ಎಂದು ಪ್ರಶ್ನಿಸಿದರು.

ವಾಟ್ಸಪ್ ಚಾಟ್ ಹಾಗೂ ಸಾಮಾಜಿಕ ಜಾಲತಾಣದ ಸ್ಟೇಟಸ್ ವಿಚಾರಗಳಿಗೆ ತಲೆಕೆಡಿಸಿಕೊಳ್ಳುವುದಿಲ್ಲ. ಕಾಲ ಬಂದಾಗ ಎಲ್ಲವನ್ನೂ ನೋಡಿಕೊಳ್ಳುತ್ತೇನೆ ಎಂದು ಹೇಳುವ ಮೂಲಕ ಈ ವಿಚಾರದ ಕುರಿತು ಹೆಚ್ಚಿನ ಚರ್ಚೆಗೆ ನಿರಾಕರಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled Design 2026 11 14T161153.177

ಸೀತೆ ಊರು ನೇಪಾಳದಲ್ಲಿ ರಾಮಾಯಣ ಗಳಿಸಿದ್ದೆಷ್ಟು ಕೋಟಿ?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 14, 2026 - 4:13 pm
0

ಹಳೆಯ ಘಟನೆ ನೆನಪಿಸಿ ಎಚ್ಚರಿಕೆ ನೀಡಿದ ಹೆಚ್ ಡಿಕೆ

ನಿಖಿಲ್‌ಗೆ ದೇಗುಲ ಪ್ರವೇಶ ನಿರಾಕರಣೆ: ಕಾಂಗ್ರೆಸ್‌ಗೆ ಹಳೆಯ ಘಟನೆ ನೆನಪಿಸಿ ಎಚ್ಚರಿಕೆ ನೀಡಿದ ಹೆಚ್‌ಡಿಕೆ

by ಶಾಲಿನಿ ಕೆ. ಡಿ
November 14, 2026 - 3:52 pm
0

ರಕ್ಷಿತ್ ಶೆಟ್ಟಿ ಎಲ್ಲಿದ್ದಾರೆ ಏನ್ಮಾಡ್ತಿದ್ದಾರೆ..

ರಕ್ಷಿತ್ ಶೆಟ್ಟಿ ಎಲ್ಲಿದ್ದಾರೆ ಏನ್ಮಾಡ್ತಿದ್ದಾರೆ..? ಇಲ್ಲಿದೆ ಗ್ಯಾರಂಟಿ ಆನ್ಸರ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 14, 2026 - 3:18 pm
0

Untitled Design 2026 11 14T150530.719

ವರ್ಷಾಂತ್ಯದ ಪ್ರವಾಸಕ್ಕೆ ಮೇಕ್‌ ಮೈ ಟ್ರಿಪ್ ಭರ್ಜರಿ ಆಫರ್: ನ.14ರಿಂದ ಟ್ರಾವೆಲ್ ಸೇಲ್ ಆರಂಭ!

by ಶಾಲಿನಿ ಕೆ. ಡಿ
November 14, 2026 - 3:07 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled Design 2026 11 14T150530.719
    ವರ್ಷಾಂತ್ಯದ ಪ್ರವಾಸಕ್ಕೆ ಮೇಕ್‌ ಮೈ ಟ್ರಿಪ್ ಭರ್ಜರಿ ಆಫರ್: ನ.14ರಿಂದ ಟ್ರಾವೆಲ್ ಸೇಲ್ ಆರಂಭ!
    November 14, 2026 | 0
  • Untitled Design 2026 11 14T134640.473
    7 ಮಂದಿಯ ಹತ್ಯೆ ಕೇಸ್: ಆಸ್ತಿಗಾಗಿ ಕುಟುಂಬಸ್ಥರ ಹೆಬ್ಬೆಟ್ಟು ಗುರುತು ಪಡೆದಿದ್ದ ಹಂತಕ
    November 14, 2026 | 0
  • ಆಟ ವಾಡುವಾಗ ಕೆಮಿಕಲ್ ತುಂಬಿದ್ದ ಬಕೆಟ್ ಗೆ ಬಿದ್ದು ಮಗು ಸಾವು
    ಆಟ ವಾಡುವಾಗ ಕೆಮಿಕಲ್ ತುಂಬಿದ್ದ ಬಕೆಟ್‌ಗೆ ಬಿದ್ದು ಮಗು ಸಾವು
    November 14, 2026 | 0
  • ನಂದಿನಿ ಮೊಸರಿನಲ್ಲಿ ಸಿಮ್ ಕಾರ್ಡ್ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
    ನಂದಿನಿ ಮೊಸರಿನಲ್ಲಿ ಸಿಮ್ ಕಾರ್ಡ್ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಪೊಲೀಸರ ತನಿಖೆಯಲ್ಲಿ ಬಯಲಾಯ್ತು ಅಸಲಿ ಸತ್ಯ
    November 14, 2026 | 0
  • ನಿಖಿಲ್ ಕುಮಾರಸ್ವಾಮಿಗೆ ದೇಗುಲ ಪ್ರವೇಶಕ್ಕೆ ನಿರಾಕರಣೆ ಜೆಡಿಎಸ್ ಕಾರ್ಯಕರ್ತರಿಂದ ಪ್ರತಿಭಟನೆ
    ನಿಖಿಲ್ ಕುಮಾರಸ್ವಾಮಿಗೆ ದೇಗುಲ ಪ್ರವೇಶಕ್ಕೆ ನಿರಾಕರಣೆ: ಜೆಡಿಎಸ್ ಕಾರ್ಯಕರ್ತರಿಂದ ಪ್ರತಿಭಟನೆ
    November 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version