• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, November 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ರಾಜ್ಯಾದ್ಯಂತ ಮೋಡ ಕವಿದ ವಾತಾವರಣ, ಇಂದು ಚಳಿ ಹೆಚ್ಚಳ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 15, 2026 - 10:51 am
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled Design (92)

ಬೆಂಗಳೂರು: ಕರ್ನಾಟಕದಲ್ಲಿ ಭಾನುವಾರ ವಾತಾವರಣದಲ್ಲಿ ಬದಲಾವಣೆ ಕಂಡುಬರುವ ಸಾಧ್ಯತೆಯಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಮುಂಜಾನೆ ಹಾಗೂ ರಾತ್ರಿ ವೇಳೆ ಚಳಿಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆಯಿದೆ. ಅದರಲ್ಲೂ ಬೆಂಗಳೂರು ಸೇರಿದಂತೆ ಒಳನಾಡಿನ ಹಲವು ಪ್ರದೇಶಗಳಲ್ಲಿ ತಂಪಾದ ಹವಾಮಾನ ಮುಂದುವರಿಯಲಿದೆ ಎಂದು ಹವಾಮಾನ ಮುನ್ಸೂಚನೆ ತಿಳಿಸಿದೆ.

ವಾರಾಂತ್ಯದ ರಜೆ ಹಿನ್ನೆಲೆ ಪ್ರವಾಸ, ಶಾಪಿಂಗ್ ಹಾಗೂ ಇತರ ಚಟುವಟಿಕೆಗಳಿಗೆ ತೆರಳಲು ಯೋಜನೆ ರೂಪಿಸಿರುವವರಿಗೆ ಹವಾಮಾನದ ಮಾಹಿತಿ ಮುಖ್ಯವಾಗಿದೆ. ಸದ್ಯದ ಮುನ್ಸೂಚನೆಯ ಪ್ರಕಾರ, ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಕಡಿಮೆ ಇದೆ. ಆದರೆ ಬೆಳಗಿನ ಜಾವ ಮತ್ತು ರಾತ್ರಿ ವೇಳೆ ಚಳಿಯಿಂದಾಗಿ ಪ್ರಯಾಣಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವುದು ಉತ್ತಮ.

RelatedPosts

ನಿಖಿಲ್‌ಗೆ ದೇಗುಲ ಪ್ರವೇಶ ನಿರಾಕರಣೆ: ಕಾಂಗ್ರೆಸ್‌ಗೆ ಹಳೆಯ ಘಟನೆ ನೆನಪಿಸಿ ಎಚ್ಚರಿಕೆ ನೀಡಿದ ಹೆಚ್‌ಡಿಕೆ

ವರ್ಷಾಂತ್ಯದ ಪ್ರವಾಸಕ್ಕೆ ಮೇಕ್‌ ಮೈ ಟ್ರಿಪ್ ಭರ್ಜರಿ ಆಫರ್: ನ.14ರಿಂದ ಟ್ರಾವೆಲ್ ಸೇಲ್ ಆರಂಭ!

7 ಮಂದಿಯ ಹತ್ಯೆ ಕೇಸ್: ಆಸ್ತಿಗಾಗಿ ಕುಟುಂಬಸ್ಥರ ಹೆಬ್ಬೆಟ್ಟು ಗುರುತು ಪಡೆದಿದ್ದ ಹಂತಕ

ಆಟ ವಾಡುವಾಗ ಕೆಮಿಕಲ್ ತುಂಬಿದ್ದ ಬಕೆಟ್‌ಗೆ ಬಿದ್ದು ಮಗು ಸಾವು

ADVERTISEMENT
ADVERTISEMENT

ರಾಜ್ಯಾದ್ಯಂತ ಮೋಡ ಕವಿದ ವಾತಾವರಣ

ಹವಾಮಾನ ಮುನ್ಸೂಚನೆಯ ಪ್ರಕಾರ, ಭಾನುವಾರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರಲಿದೆ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವ ಮಂಜು ಆವರಿಸುವ ಸಾಧ್ಯತೆಯೂ ಇದೆ. ಹಗಲಿನ ವೇಳೆಯಲ್ಲಿ ಮೋಡ ಮತ್ತು ಬಿಸಿಲು ಮಿಶ್ರಿತ ವಾತಾವರಣ ಇರಲಿದೆ.

ರಾಜ್ಯದಲ್ಲಿ ಗರಿಷ್ಠ ತಾಪಮಾನ ಸರಾಸರಿ 29 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿರಲಿದ್ದು, ಕನಿಷ್ಠ ತಾಪಮಾನ ಸುಮಾರು 18 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ನಿರೀಕ್ಷೆಯಿದೆ. ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಎತ್ತರದ ಪ್ರದೇಶಗಳಲ್ಲಿ ರಾತ್ರಿ ತಾಪಮಾನದಲ್ಲಿ ಇಳಿಕೆಯಾಗುವ ಸಾಧ್ಯತೆಯಿದೆ.

ಮಳೆಯಾಗುವ ಸಾಧ್ಯತೆ ಎಷ್ಟಿದೆ?

ನವೆಂಬರ್ 15ರಂದು ರಾಜ್ಯದಾದ್ಯಂತ ವ್ಯಾಪಕ ಮಳೆಯಾಗುವ ಲಕ್ಷಣಗಳು ಕಂಡುಬರುತ್ತಿಲ್ಲ. ಮಳೆಯ ಸಾಧ್ಯತೆ ಕೇವಲ ಶೇ.10ರಷ್ಟು ಎಂದು ಮುನ್ಸೂಚನೆ ಇದ್ದು. ಹೀಗಾಗಿ ವೀಕೆಂಡ್‌ನಲ್ಲಿ ಪ್ರವಾಸ ಅಥವಾ ಇತರ ಹೊರಾಂಗಣ ಚಟುವಟಿಕೆಗಳಿಗೆ ತೆರಳುವವರು ಮಳೆಯ ಬಗ್ಗೆ ಹೆಚ್ಚಿನ ಆತಂಕ ಪಡುವ ಅಗತ್ಯವಿಲ್ಲ.

ಇನ್ನು ಗಾಳಿಯು ಪೂರ್ವ ದಿಕ್ಕಿನಿಂದ ಗಂಟೆಗೆ ಸುಮಾರು 6 ಮೈಲಿ ವೇಗದಲ್ಲಿ ಬೀಸುವ ಸಾಧ್ಯತೆಯಿದೆ. ಹಗಲಿನ ಸರಾಸರಿ ತೇವಾಂಶ ಶೇ.44ರಷ್ಟು ಇರಬಹುದು. 

ಬೆಂಗಳೂರಿನಲ್ಲಿ ಹೇಗಿರಲಿದೆ ಹವಾಮಾನ?

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾನುವಾರ ಮೋಡ ಕವಿದ ವಾತಾವರಣ ಮುಂದುವರಿಯುವ ನಿರೀಕ್ಷೆಯಿದೆ. ನಗರದಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಬಹುದು.

ಇತ್ತೀಚಿನ ದಿನಗಳಲ್ಲಿ ಬೆಂಗಳೂರಿನಲ್ಲಿ ರಾತ್ರಿ ತಾಪಮಾನ 16ರಿಂದ 19 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿ ದಾಖಲಾಗುತ್ತಿದೆ. ಇದರಿಂದಾಗಿ ಬೆಳಗಿನ ಜಾವ ವಾಕಿಂಗ್, ಜಾಗಿಂಗ್ ಹಾಗೂ ಕೆಲಸಕ್ಕೆ ತೆರಳುವವರಿಗೆ ಚಳಿಯ ಅನುಭವ ಹೆಚ್ಚಾಗಲಿದೆ. ರಾತ್ರಿ ವೇಳೆಯೂ ತಂಪಾದ ಗಾಳಿ ಬೀಸುವ ಸಾಧ್ಯತೆಯಿರುವುದರಿಂದ ದ್ವಿಚಕ್ರ ವಾಹನ ಸವಾರರು ಹಾಗೂ ದೂರ ಪ್ರಯಾಣ ಮಾಡುವವರು ಬೆಚ್ಚಗಿನ ಉಡುಪು ಧರಿಸುವುದು ಸೂಕ್ತ.

ಮಂಗಳೂರಿನಲ್ಲಿ ಬಿಸಿಲಿನ ಝಳ

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಕಂಡುಬರುವ ಸಾಧ್ಯತೆಯಿದೆ. ಆದರೆ ಬೆಂಗಳೂರಿಗೆ ಹೋಲಿಸಿದರೆ ಕರಾವಳಿ ಪ್ರದೇಶಗಳಲ್ಲಿ ತಾಪಮಾನ ಹೆಚ್ಚಿರಲಿದೆ. ಮಂಗಳೂರಿನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ತಲುಪುವ ನಿರೀಕ್ಷೆಯಿದ್ದು, ಮಧ್ಯಾಹ್ನದ ವೇಳೆ ಬಿಸಿಲಿನ ಝಳ ಹೆಚ್ಚಾಗಬಹುದು.

ಹೀಗಾಗಿ ಕರಾವಳಿ ಭಾಗದ ಜನರು ಮಧ್ಯಾಹ್ನದ ಸಮಯದಲ್ಲಿ ಬಿಸಿಲಿನಲ್ಲಿ ಹೆಚ್ಚು ಓಡಾಡುವುದನ್ನು ತಪ್ಪಿಸುವುದು ಉತ್ತಮ. ಹೊರಗೆ ತೆರಳುವಾಗ ನೀರು ಕುಡಿಯುವುದು ಹಾಗೂ ಅಗತ್ಯ ಮುನ್ನೆಚ್ಚರಿಕೆ ವಹಿಸುವುದು ಸೂಕ್ತ.

ಹುಬ್ಬಳ್ಳಿ ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಚಳಿ

ಹುಬ್ಬಳ್ಳಿ ಸೇರಿದಂತೆ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಬೆಳಗಿನ ಜಾವ ತಿಳಿ ಮಂಜು ಹಾಗೂ ಮೋಡ ಕವಿದ ವಾತಾವರಣ ಕಂಡುಬರುವ ಸಾಧ್ಯತೆಯಿದೆ. ಹಗಲಿನಲ್ಲಿ ಹಿತಕರವಾದ ವಾತಾವರಣವಿದ್ದರೂ ಬೆಳಗ್ಗೆ ಮತ್ತು ರಾತ್ರಿ ವೇಳೆ ಚಳಿ ಹೆಚ್ಚಾಗಬಹುದು. ಗ್ರಾಮೀಣ ಪ್ರದೇಶಗಳು ಹಾಗೂ ಎತ್ತರದ ಪ್ರದೇಶಗಳಲ್ಲಿ ತಾಪಮಾನ ಮತ್ತಷ್ಟು ಕಡಿಮೆಯಾಗುವ ಸಾಧ್ಯತೆಯಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled Design (92)

ರಾಜ್ಯಾದ್ಯಂತ ಮೋಡ ಕವಿದ ವಾತಾವರಣ, ಇಂದು ಚಳಿ ಹೆಚ್ಚಳ

by ಶಾಲಿನಿ ಕೆ. ಡಿ
November 15, 2026 - 10:51 am
0

Untitled Design (90)

ಪಾಕಿಸ್ತಾನ ಮಣಿಸಿ ಏಷ್ಯಾಕಪ್ ಗೆದ್ದ ಟೀಂ ಇಂಡಿಯಾ

by ಶಾಲಿನಿ ಕೆ. ಡಿ
November 14, 2026 - 6:59 pm
0

ಎಕ್ಸ್ ಪೆಕ್ಟ್, ಅಕ್ಸೆಪ್ಟ್ & ಪಬ್ಬಾರ್

ತೆಲುಗು ಹಿರಿಯ ನಟ ಗಿರಿ ಬಾಬು ನಿಧನ

by ಶಾಲಿನಿ ಕೆ. ಡಿ
November 14, 2026 - 6:50 pm
0

Untitled Design 2026 11 14T182604.227

ಡಿಸೆಂಬರ್ 5 ರಂದು ಬೆಂಗಳೂರಿನಲ್ಲಿ ಯುವನ್ ಶಂಕರ್ ರಾಜಾ ಸಂಗೀತ ಹಬ್ಬ!

by ಶಾಲಿನಿ ಕೆ. ಡಿ
November 14, 2026 - 6:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಹಳೆಯ ಘಟನೆ ನೆನಪಿಸಿ ಎಚ್ಚರಿಕೆ ನೀಡಿದ ಹೆಚ್ ಡಿಕೆ
    ನಿಖಿಲ್‌ಗೆ ದೇಗುಲ ಪ್ರವೇಶ ನಿರಾಕರಣೆ: ಕಾಂಗ್ರೆಸ್‌ಗೆ ಹಳೆಯ ಘಟನೆ ನೆನಪಿಸಿ ಎಚ್ಚರಿಕೆ ನೀಡಿದ ಹೆಚ್‌ಡಿಕೆ
    November 14, 2026 | 0
  • Untitled Design 2026 11 14T150530.719
    ವರ್ಷಾಂತ್ಯದ ಪ್ರವಾಸಕ್ಕೆ ಮೇಕ್‌ ಮೈ ಟ್ರಿಪ್ ಭರ್ಜರಿ ಆಫರ್: ನ.14ರಿಂದ ಟ್ರಾವೆಲ್ ಸೇಲ್ ಆರಂಭ!
    November 14, 2026 | 0
  • Untitled Design 2026 11 14T134640.473
    7 ಮಂದಿಯ ಹತ್ಯೆ ಕೇಸ್: ಆಸ್ತಿಗಾಗಿ ಕುಟುಂಬಸ್ಥರ ಹೆಬ್ಬೆಟ್ಟು ಗುರುತು ಪಡೆದಿದ್ದ ಹಂತಕ
    November 14, 2026 | 0
  • ಆಟ ವಾಡುವಾಗ ಕೆಮಿಕಲ್ ತುಂಬಿದ್ದ ಬಕೆಟ್ ಗೆ ಬಿದ್ದು ಮಗು ಸಾವು
    ಆಟ ವಾಡುವಾಗ ಕೆಮಿಕಲ್ ತುಂಬಿದ್ದ ಬಕೆಟ್‌ಗೆ ಬಿದ್ದು ಮಗು ಸಾವು
    November 14, 2026 | 0
  • ನಂದಿನಿ ಮೊಸರಿನಲ್ಲಿ ಸಿಮ್ ಕಾರ್ಡ್ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
    ನಂದಿನಿ ಮೊಸರಿನಲ್ಲಿ ಸಿಮ್ ಕಾರ್ಡ್ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಪೊಲೀಸರ ತನಿಖೆಯಲ್ಲಿ ಬಯಲಾಯ್ತು ಅಸಲಿ ಸತ್ಯ
    November 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version