• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, November 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಮನವಿ ಸಲ್ಲಿಸಿದರೂ ಕೇಂದ್ರದಿಂದ ಸ್ಪಂದನೆ ಇಲ್ಲ; ರೈತರ ಸಂಕಷ್ಟದಲ್ಲಿ ರಾಜಕೀಯ ಸಲ್ಲದು: ಪರಮೇಶ್ವರ್

ದಿಶಾ ಕೆ. ಎಸ್. by ದಿಶಾ ಕೆ. ಎಸ್.
November 18, 2026 - 11:22 am
in ಕರ್ನಾಟಕ
0 0
0
1

ಬೆಂಗಳೂರು, ನವೆಂಬರ್ 18: ಕೇಂದ್ರ ಸರ್ಕಾರದಿಂದ ಪರಿಹಾರ ಪಡೆಯುವ ಸಂಬಂಧ ಈಗಾಗಲೇ ಮೂರು ಬಾರಿ ಮೆಮೊರಾಂಡಮ್ ಸಲ್ಲಿಸಲಾಗಿದೆ. ಮನವಿ ಸಲ್ಲಿಸಿದ ಬಳಿಕ ಕೇಂದ್ರದ ಕೃಷಿ ಸಚಿವರು, ಗೃಹ ಸಚಿವರು ಹಾಗೂ ಪ್ರಧಾನಮಂತ್ರಿಗಳ ಕಚೇರಿಗೆ ಭೇಟಿ ಮಾಡಲು ಸಮಯಾವಕಾಶ ಕೋರಿದ್ದೇವೆ. ಖುದ್ದಾಗಿ ಭೇಟಿ ಮಾಡಿ ರಾಜ್ಯದ ಪರಿಸ್ಥಿತಿಯನ್ನು ವಿವರಿಸಿ, ರೈತರಿಗೆ ಪರಿಹಾರ ಒದಗಿಸುವಂತೆ ಮನವಿ ಮಾಡುವುದು ನಮ್ಮ ಉದ್ದೇಶವಾಗಿತ್ತು. ಆದರೆ, ಈವರೆಗೂ ಯಾರಿಂದಲೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಉಪಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ. ಜಿ. ಪರಮೇಶ್ವರ ಅವರು ಹೇಳಿದರು.

ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಕಳೆದ ಬಾರಿಯೂ ಕೇಂದ್ರ ಸರ್ಕಾರ ರಾಜ್ಯಕ್ಕೆ ಪರಿಹಾರ ನೀಡಿರಲಿಲ್ಲ. ಈ ಹಿನ್ನೆಲೆಯಲ್ಲಿ ನಾವು ಪ್ರತಿಭಟನೆ ನಡೆಸಿ, ಸುಪ್ರೀಂ ಕೋರ್ಟ್‌ ಮೊರೆ ಹೋದ ಬಳಿಕ ನ್ಯಾಯಾಲಯದ ನಿರ್ದೇಶನದ ಮೇರೆಗೆ ಪರಿಹಾರ ನೀಡಲಾಯಿತು. ಆದರೂ ಕೇವಲ ₹3,500 ಕೋಟಿ ಮಾತ್ರ ಬಿಡುಗಡೆ ಮಾಡಲಾಗಿತ್ತು. ಈ ಬಾರಿಯೂ ಅದೇ ಪರಿಸ್ಥಿತಿ ಮರುಕಳಿಸುವುದಿಲ್ಲ ಎಂಬ ವಿಶ್ವಾಸವಿದೆ. ಇದು ಕಾಂಗ್ರೆಸ್‌ ಪಕ್ಷದ ಸರ್ಕಾರ ಎಂಬ ಕಾರಣಕ್ಕೆ ಕೇಂದ್ರ ಸರ್ಕಾರ ಬೇರೆ ರೀತಿಯಲ್ಲಿ ಯೋಚಿಸಬಾರದು. ಜನರು ಸಂಕಷ್ಟದಲ್ಲಿದ್ದಾರೆ, ರೈತರು ತೊಂದರೆ ಅನುಭವಿಸುತ್ತಿದ್ದಾರೆ. ಎಲ್ಲ ರಾಜಕೀಯ ಪಕ್ಷಗಳಲ್ಲೂ ರೈತರಿದ್ದಾರೆ. ಹೀಗಾಗಿ ರೈತರ ಸಂಕಷ್ಟದ ವಿಚಾರದಲ್ಲಿ ರಾಜಕೀಯ ಮಾಡಬಾರದು ಎಂದರು.

RelatedPosts

ಎಥೆನಾಲ್‌ನಿಂದ ವಾಹನಕ್ಕೆ ಹಾನಿಯಾಗಿಲ್ಲ: ರಿಜ್ವಾನ್ ಅರ್ಷದ್ ಆರೋಪಕ್ಕೆ ನಿತಿನ್ ಗಡ್ಕರಿ ತಿರುಗೇಟು

ಗ್ರಾಹಕರಿಗೆ ಬಿಗ್ ರಿಲೀಫ್: ಗಗನಕ್ಕೇರಿದ್ದ ಅಕ್ಕಿ ಬೆಲೆ ದಿಢೀರ್ ಇಳಿಕೆ

ಬಾಗಲೂರು ಶೂಟೌಟ್ ಕೇಸ್‌: ಮಾತುಕತೆ ನೆಪದಲ್ಲಿ ಕರೆದು ಹತ್ಯೆ, ಪ್ರಮುಖ ಆರೋಪಿ ಅರೆಸ್ಟ್

3ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಪ್ರತಿಭಟನೆ: ಸರ್ಕಾರದ ವಿರುದ್ಧ ಕಿಡಿ

ADVERTISEMENT
ADVERTISEMENT

ಕೇಂದ್ರ ಸರ್ಕಾರದಿಂದ ಪರಿಹಾರ ಪಡೆಯುವ ಸಂಬಂಧ ಸರ್ವಪಕ್ಷ ಸಭೆ ಕರೆದು, ಎಲ್ಲ ಪಕ್ಷಗಳ ನಾಯಕರನ್ನು ಒಳಗೊಂಡ ನಿಯೋಗವನ್ನು ದೆಹಲಿಗೆ ಕರೆದೊಯ್ಯಬೇಕು ಎಂದು ಮುಖ್ಯಮಂತ್ರಿಗಳು ಈಗಾಗಲೇ ಹೇಳಿದ್ದಾರೆ. ಪರಿಹಾರ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್‌ ಮೊರೆ ಹೋಗುವ ಕುರಿತು ಸದ್ಯಕ್ಕೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರ ಯಾವ ರೀತಿ ನಡೆದುಕೊಳ್ಳುತ್ತದೆ ಎಂಬುದನ್ನು ಗಮನಿಸಿ ತೀರ್ಮಾನಿಸಲಾಗುವುದು ಎಂದರು.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಪರಿಹಾರದ ವಿಚಾರದಲ್ಲಿ ರಾಜ್ಯ ಸರ್ಕಾರ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸುತ್ತಿರುವ ಕುರಿತು ಪ್ರತಿಕ್ರಿಯಿಸಿ, ಅವರೂ ಈ ಹಿಂದೆ ಮುಖ್ಯಮಂತ್ರಿಗಳಾಗಿದ್ದವರು. ರಾಜ್ಯ ಸರ್ಕಾರ ತನ್ನ ಪಾಲಿನ ಪರಿಹಾರವನ್ನು ನೀಡುತ್ತಿದೆ. ಎರಡು ಹಂತಗಳಲ್ಲಿ ತಲಾ ₹1,250 ಕೋಟಿ ಪರಿಹಾರ ನೀಡುವ ಕ್ರಮ ಕೈಗೊಳ್ಳಲಾಗಿದೆ. ಒಟ್ಟು ₹5,000 ಕೋಟಿ ಪರಿಹಾರವನ್ನು ರಾಜ್ಯ ಸರ್ಕಾರವೇ ಭರಿಸುತ್ತಿದೆ. ಕೇಂದ್ರ ಸರ್ಕಾರದಿಂದ ನೆರವು ದೊರೆಯಬಹುದೆಂಬ ನಿರೀಕ್ಷೆಯೊಂದಿಗೆ ರಾಜ್ಯ ತನ್ನ ಪಾಲಿನ ಜವಾಬ್ದಾರಿಯನ್ನು ನಿರ್ವಹಿಸುತ್ತಿದೆ ಎಂದು ಹೇಳಿದರು.

ರಾಜ್ಯದಲ್ಲಿ ಗೈಡೆನ್ಸ್ ವ್ಯಾಲ್ಯೂ ಹೆಚ್ಚಿಸುವ ಕುರಿತು ಪ್ರತಿಕ್ರಿಯಿಸಿ, ಜೀವನ ವೆಚ್ಚ ಹೆಚ್ಚಾಗಿರುವುದರ ಜೊತೆಗೆ ಖಾಸಗಿ ಮಾರುಕಟ್ಟೆಯಲ್ಲಿ ಭೂಮಿಯ ಮೌಲ್ಯ ಗಣನೀಯವಾಗಿ ಏರಿಕೆಯಾಗಿದೆ. ಉದಾಹರಣೆಗೆ, ಸರ್ಕಾರದ ಮಾರ್ಗಸೂಚಿ ಮೌಲ್ಯದಲ್ಲಿ ಎಕರೆಗೆ ₹5 ಕೋಟಿ ಇದ್ದರೆ, ಖಾಸಗಿ ಮಾರುಕಟ್ಟೆಯಲ್ಲಿ ಅದರ ಮೌಲ್ಯ ₹20 ಕೋಟಿಯವರೆಗೂ ಇರಬಹುದು. ಇದರಿಂದ ಸರ್ಕಾರಕ್ಕೆ ಆದಾಯ ನಷ್ಟವಾಗುತ್ತಿದೆ. ಈ ಎಲ್ಲ ಅಂಶಗಳನ್ನು ಪರಿಗಣಿಸಿ ರಾಜ್ಯಾದ್ಯಂತ ಗೈಡೆನ್ಸ್ ಮೌಲ್ಯವನ್ನು ಅನುಪಾತದ ಆಧಾರದಲ್ಲಿ ಪರಿಷ್ಕರಿಸುವ ಕುರಿತು ವಿಶ್ಲೇಷಣೆ ನಡೆಸಲಾಗುತ್ತಿದೆ. ವಿಶ್ಲೇಷಣೆ ಪೂರ್ಣಗೊಂಡ ಬಳಿಕ ಯಾವ ಪ್ರದೇಶದಲ್ಲಿ ಎಷ್ಟು ಹೆಚ್ಚಳ ಮಾಡಬೇಕು ಎಂಬುದನ್ನು ಪ್ರದೇಶವಾರು ನಿರ್ಧರಿಸಲಾಗುವುದು. ಬೆಂಗಳೂರು ನಗರದಲ್ಲಿ ಬಿಬಿಎಂಪಿ ವ್ಯಾಪ್ತಿಯ ಪ್ರದೇಶಗಳಿಗೆ ಅನುಗುಣವಾಗಿ ಹಾಗೂ ಇತರ ಜಿಲ್ಲೆಗಳಲ್ಲಿ ತಾಲೂಕು ಅಥವಾ ಪಂಚಾಯಿತಿ ಮಟ್ಟದಲ್ಲಿ ಗೈಡೆನ್ಸ್ ಮೌಲ್ಯ ಪರಿಷ್ಕರಿಸುವ ಉದ್ದೇಶವಿದೆ ಎಂದರು.

ಸೋನಿಯಾ ಗಾಂಧಿ ಅವರ “Belonging: A Journey of Love” ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಐದನೇ ಸಾಲಿನಲ್ಲಿ ಕೂರಿಸುವ ಮೂಲಕ ಅಗೌರವ ತೋರಲಾಗಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿ, ಕಾರ್ಯಕ್ರಮದಲ್ಲಿ ಯಾರಿಗೂ ನಿರ್ದಿಷ್ಟ ಆಸನಗಳನ್ನು ಕಾಯ್ದಿರಿಸಿರಲಿಲ್ಲ. ಯಾರಾದರೂ ಬಂದು ಕುಳಿತುಕೊಳ್ಳಬಹುದಿತ್ತು. ಸಿದ್ದರಾಮಯ್ಯ ಅವರು ತಡವಾಗಿ ಆಗಮಿಸಿದ್ದರಿಂದ ಐದನೇ ಸಾಲಿನಲ್ಲಿ ಕುಳಿತುಕೊಳ್ಳುವಂತಾಗಿದೆ. ಅವರನ್ನು ಅವಮಾನಿಸುವ ಅಥವಾ ಕಡೆಗಣಿಸುವ ಉದ್ದೇಶ ಇರಲಿಲ್ಲ. ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಹಾಗೂ ಕಾಂಗ್ರೆಸ್ ಪಕ್ಷದಲ್ಲಿ ಅತ್ಯುನ್ನತ ಸ್ಥಾನಮಾನ ಹೊಂದಿರುವ ನಾಯಕರು. ಅವರನ್ನು ಅಗೌರವದಿಂದ ನಡೆಸಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.

ವಿಧಾನಮಂಡಲ ಅಧಿವೇಶನಕ್ಕೂ ಮುನ್ನ ಮಹಿಳಾ ಸಚಿವ ಸ್ಥಾನ ನೀಡುವ ಕುರಿತು ನಡೆಯುತ್ತಿರುವ ಚರ್ಚೆಯ ಬಗ್ಗೆ ಪ್ರತಿಕ್ರಿಯಿಸಿ, ಈ ವಿಚಾರವನ್ನು ಮುಖ್ಯಮಂತ್ರಿಗಳು ಪ್ರತಿ ಬಾರಿ ದೆಹಲಿಗೆ ತೆರಳಿದಾಗ ಹೈಕಮಾಂಡ್ ನಾಯಕರೊಂದಿಗೆ ಚರ್ಚಿಸುತ್ತಾರೆ. ಈ ಬಾರಿಯೂ ಅಧಿವೇಶನಕ್ಕೂ ಮುನ್ನ ಈ ಕುರಿತು ಚರ್ಚೆ ನಡೆಯಬಹುದು ಎಂದು ನಿರೀಕ್ಷಿಸಿದ್ದೇನೆ ಎಂದರು.

ಎಥೆನಾಲ್ ಮಿಶ್ರಣದ ಕುರಿತು ಆಹಾರ ಸಚಿವ ರಿಜ್ವಾನ್ ಅರ್ಷದ್ ಅವರ ಹೇಳಿಕೆಯನ್ನು ಕೇಂದ್ರ ಸಚಿವರು ಟೀಕಿಸಿರುವ ಬಗ್ಗೆ ಪ್ರತಿಕ್ರಿಯಿಸಿ, ಪ್ರಯೋಗಾಲಯದ ಫಲಿತಾಂಶಗಳು ವೈಜ್ಞಾನಿಕ ಮಾಹಿತಿಯನ್ನು ಆಧರಿಸಿರುತ್ತವೆ. ಅಂತಹ ವೈಜ್ಞಾನಿಕ ದತ್ತಾಂಶಗಳ ಆಧಾರದ ಮೇಲೆಯೇ ಆಹಾರ ಸಚಿವರು ಮಾತನಾಡಿದ್ದಾರೆ. ಇಂಧನದಲ್ಲಿ ಶೇ.20ರಿಂದ ಶೇ.30ರಷ್ಟು ಎಥೆನಾಲ್ ಮಿಶ್ರಣವಾಗುತ್ತಿರುವ ಕುರಿತು ಪ್ರಯೋಗಾಲಯದ ವರದಿಗಳು ಬಂದಿವೆ. ಈ ವರದಿಗಳ ಆಧಾರದ ಮೇಲೆ ಕರ್ನಾಟಕದ ಪರಿಸ್ಥಿತಿಯನ್ನು ಉಲ್ಲೇಖಿಸಿ ಅವರು ಮಾತನಾಡಿದ್ದಾರೆ. ಇಡೀ ದೇಶದಲ್ಲಿ ಇದೇ ರೀತಿ ನಡೆಯುತ್ತಿದೆ ಎಂದು ಅವರು ಹೇಳಿಲ್ಲ. ಕರ್ನಾಟಕದಲ್ಲಿ ಇಂತಹ ಪರಿಸ್ಥಿತಿ ಉಂಟಾಗಬಾರದು ಹಾಗೂ ಈ ಕುರಿತು ತೈಲ ಕಂಪನಿಗಳಿಗೆ ಸೂಕ್ತ ಸೂಚನೆ ನೀಡಬೇಕು ಎಂಬುದು ಅವರ ಹೇಳಿಕೆಯ ಉದ್ದೇಶವಾಗಿದೆ. ವೈಜ್ಞಾನಿಕ ವರದಿಗಳ ಆಧಾರದ ಮೇಲೆ ನೀಡಿರುವ ಹೇಳಿಕೆಯನ್ನು ಕೇಂದ್ರ ಸಚಿವರು ಈ ರೀತಿ ಟೀಕಿಸುವುದು ಸರಿಯಲ್ಲ ಎಂದು ಹೇಳಿದರು.

ಬಿಬಿಎಂಪಿ ಹಾಗೂ ಜಿಬಿಎ ಚುನಾವಣೆಗಳನ್ನು ಪದೇಪದೇ ಮುಂದೂಡುತ್ತಿರುವ ಕುರಿತು ಪ್ರತಿಕ್ರಿಯಿಸಿ, ಚುನಾವಣೆ ನಡೆಸುವ ಸಂಬಂಧ ಮತದಾರರ ಪಟ್ಟಿ ಸಿದ್ಧಪಡಿಸುವ ಪ್ರಕ್ರಿಯೆ ಪ್ರಸ್ತುತ ನಡೆಯುತ್ತಿದೆ. ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ. ಮತದಾರರ ಸೇರ್ಪಡೆ ಮತ್ತು ಕೈಬಿಡುವಿಕೆ ಸೇರಿದಂತೆ ಎಲ್ಲ ಪ್ರಕ್ರಿಯೆಗಳು ಪೂರ್ಣಗೊಂಡು ಅಂತಿಮ ಮತದಾರರ ಪಟ್ಟಿ ಸಿದ್ಧವಾದ ಬಳಿಕ ಚುನಾವಣೆ ನಡೆಸಲು ಸಾಧ್ಯವಾಗಲಿದೆ. ಇಲ್ಲವಾದಲ್ಲಿ 2011ರ ಜನಗಣತಿಯ ಆಧಾರದ ಮೇಲಾದರೂ ಚುನಾವಣೆ ನಡೆಸಲು ಅನುಮತಿ ನೀಡಬೇಕು. ಸದ್ಯ ಜನಗಣತಿ ಪ್ರಕ್ರಿಯೆ ಆರಂಭವಾಗುತ್ತಿದೆ. ಜನಗಣತಿ ಪೂರ್ಣಗೊಳ್ಳುವವರೆಗೆ ಕಾಯಬೇಕೇ ಅಥವಾ ಬೇರೆ ಯಾವುದಾದರೂ ಮಾನದಂಡದ ಆಧಾರದ ಮೇಲೆ ಚುನಾವಣೆ ನಡೆಸಬೇಕೇ ಎಂಬುದನ್ನು ನಿರ್ಧರಿಸಬೇಕು. ಚುನಾವಣೆ ಮುಂದೂಡಿಕೆಯಾಗುತ್ತಿರುವುದಕ್ಕೆ ಈ ಗೊಂದಲಗಳೇ ಕಾರಣವಾಗಿವೆ ಎಂದು ತಿಳಿಸಿದರು.

ರಾಜ್ಯದಲ್ಲಿ ಮೂರನೇ ಮುಖ್ಯಮಂತ್ರಿ ನೇಮಕವಾಗಲಿದ್ದಾರೆ ಎಂಬ ಚರ್ಚೆಗಳ ಕುರಿತು ಪ್ರತಿಕ್ರಿಯಿಸಿ, ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಮರ್ಥವಾಗಿ ಸರ್ಕಾರವನ್ನು ಮುನ್ನಡೆಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿನ ಭರವಸೆಗಳನ್ನು ಕಳೆದ ಮೂರು ವರ್ಷಗಳಲ್ಲಿ ಈಡೇರಿಸುವ ನಿಟ್ಟಿನಲ್ಲಿ ಸಿದ್ದರಾಮಯ್ಯ ಅವರು ಕಾರ್ಯನಿರ್ವಹಿಸಿದ್ದಾರೆ. ಉಳಿದ ಪ್ರಣಾಳಿಕೆಯ ಅಂಶಗಳನ್ನು ಕಾರ್ಯಗತಗೊಳಿಸುವತ್ತ ಮುಖ್ಯಮಂತ್ರಿಗಳು ಗಮನಹರಿಸಿದ್ದಾರೆ. ಇನ್ನೂ ಒಂದೂವರೆ ವರ್ಷದ ಅವಧಿಯಿದ್ದು, ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡಿ 2028ರಲ್ಲಿ ಮತ್ತೆ ಅಧಿಕಾರಕ್ಕೆ ಮರಳುವುದು ನಮ್ಮ ಗುರಿಯಾಗಿದೆ. ಹೀಗಿರುವಾಗ ಮೂರನೇ ಮುಖ್ಯಮಂತ್ರಿ ಕುರಿತು ಅನಗತ್ಯ ಚರ್ಚೆ ನಡೆಸುವುದು ಸರಿಯಲ್ಲ ಎಂದರು.

 

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design 2026 11 19T123535.622

ಎಥೆನಾಲ್‌ನಿಂದ ವಾಹನಕ್ಕೆ ಹಾನಿಯಾಗಿಲ್ಲ: ರಿಜ್ವಾನ್ ಅರ್ಷದ್ ಆರೋಪಕ್ಕೆ ನಿತಿನ್ ಗಡ್ಕರಿ ತಿರುಗೇಟು

by ಶಾಲಿನಿ ಕೆ. ಡಿ
November 19, 2026 - 12:36 pm
0

Untitled design 2026 11 19T121004.041

ಗ್ರಾಹಕರಿಗೆ ಬಿಗ್ ರಿಲೀಫ್: ಗಗನಕ್ಕೇರಿದ್ದ ಅಕ್ಕಿ ಬೆಲೆ ದಿಢೀರ್ ಇಳಿಕೆ

by ಶಾಲಿನಿ ಕೆ. ಡಿ
November 19, 2026 - 12:10 pm
0

ಕೇಸ್

ಬಾಗಲೂರು ಶೂಟೌಟ್ ಕೇಸ್‌: ಮಾತುಕತೆ ನೆಪದಲ್ಲಿ ಕರೆದು ಹತ್ಯೆ, ಪ್ರಮುಖ ಆರೋಪಿ ಅರೆಸ್ಟ್

by ಶಾಲಿನಿ ಕೆ. ಡಿ
November 19, 2026 - 11:46 am
0

Untitled Design 2026 11 19T111852.205

3ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಪ್ರತಿಭಟನೆ: ಸರ್ಕಾರದ ವಿರುದ್ಧ ಕಿಡಿ

by ಶಾಲಿನಿ ಕೆ. ಡಿ
November 19, 2026 - 11:19 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 11 19T123535.622
    ಎಥೆನಾಲ್‌ನಿಂದ ವಾಹನಕ್ಕೆ ಹಾನಿಯಾಗಿಲ್ಲ: ರಿಜ್ವಾನ್ ಅರ್ಷದ್ ಆರೋಪಕ್ಕೆ ನಿತಿನ್ ಗಡ್ಕರಿ ತಿರುಗೇಟು
    November 19, 2026 | 0
  • Untitled design 2026 11 19T121004.041
    ಗ್ರಾಹಕರಿಗೆ ಬಿಗ್ ರಿಲೀಫ್: ಗಗನಕ್ಕೇರಿದ್ದ ಅಕ್ಕಿ ಬೆಲೆ ದಿಢೀರ್ ಇಳಿಕೆ
    November 19, 2026 | 0
  • ಕೇಸ್
    ಬಾಗಲೂರು ಶೂಟೌಟ್ ಕೇಸ್‌: ಮಾತುಕತೆ ನೆಪದಲ್ಲಿ ಕರೆದು ಹತ್ಯೆ, ಪ್ರಮುಖ ಆರೋಪಿ ಅರೆಸ್ಟ್
    November 19, 2026 | 0
  • Untitled Design 2026 11 19T111852.205
    3ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಪ್ರತಿಭಟನೆ: ಸರ್ಕಾರದ ವಿರುದ್ಧ ಕಿಡಿ
    November 19, 2026 | 0
  • Untitled Design 2026 11 19T104311.338
    ಕರ್ನಾಟಕದಲ್ಲಿ ಚಳಿ ಹೆಚ್ಚಳ: ರಾಜ್ಯಾದ್ಯಂತ ಮುಂದುವರಿದ ಒಣಹವೆ
    November 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version