• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, November 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಎಥೆನಾಲ್‌ನಿಂದ ವಾಹನಕ್ಕೆ ಹಾನಿಯಾಗಿಲ್ಲ: ರಿಜ್ವಾನ್ ಅರ್ಷದ್ ಆರೋಪಕ್ಕೆ ನಿತಿನ್ ಗಡ್ಕರಿ ತಿರುಗೇಟು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 19, 2026 - 12:36 pm
in ಕರ್ನಾಟಕ
0 0
0
Untitled design 2026 11 19T123535.622

ಬೆಂಗಳೂರು, ನವೆಂಬರ್ 19: ಎಥೆನಾಲ್ ಮಿಶ್ರಿತ ಪೆಟ್ರೋಲ್ ವಿಚಾರವಾಗಿ ಕರ್ನಾಟಕದಲ್ಲಿ ಆರಂಭವಾಗಿರುವ ವಿವಾದ ಇದೀಗ ರಾಷ್ಟ್ರಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಪೆಟ್ರೋಲ್‌ನಲ್ಲಿ ನಿಗದಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಎಥೆನಾಲ್ ಮಿಶ್ರಣ ಮಾಡಲಾಗುತ್ತಿದೆ. ಇದರಿಂದ ವಾಹನಗಳ ಎಂಜಿನ್ ಹಾಗೂ ಬಿಡಿಭಾಗಗಳಿಗೆ ಹಾನಿಯಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ರಾಜ್ಯ ಸಚಿವ ರಿಜ್ವಾನ್ ಅರ್ಷದ್ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಐದು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ. ಮತ್ತೊಂದೆಡೆ, ಎಥೆನಾಲ್ ಬಳಕೆಯಿಂದ ವಾಹನಗಳಿಗೆ ಯಾವುದೇ ಹಾನಿಯಾಗಿಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಆರೋಪಗಳನ್ನು ತಳ್ಳಿಹಾಕಿದ್ದಾರೆ.

ಪೆಟ್ರೋಲ್‌ನಲ್ಲಿ ಶೇ.31.2ರಷ್ಟು ಎಥೆನಾಲ್ ಪತ್ತೆ?

ರಾಜ್ಯದ ವಿವಿಧ ಪೆಟ್ರೋಲ್ ಬಂಕ್‌ಗಳಲ್ಲಿ ಮಾರಾಟವಾಗುತ್ತಿರುವ ಇಂಧನದ ಗುಣಮಟ್ಟದ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಸಚಿವ ರಿಜ್ವಾನ್ ಅರ್ಷದ್, ಸೆಪ್ಟೆಂಬರ್ ತಿಂಗಳಲ್ಲಿ ಸಂಗ್ರಹಿಸಿದ ಇಂಧನದ ಮಾದರಿಗಳ ಪರೀಕ್ಷಾ ವರದಿಯನ್ನು ಮುಂದಿಟ್ಟಿದ್ದಾರೆ.

RelatedPosts

ಗ್ರಾಹಕರಿಗೆ ಬಿಗ್ ರಿಲೀಫ್: ಗಗನಕ್ಕೇರಿದ್ದ ಅಕ್ಕಿ ಬೆಲೆ ದಿಢೀರ್ ಇಳಿಕೆ

ಬಾಗಲೂರು ಶೂಟೌಟ್ ಕೇಸ್‌: ಮಾತುಕತೆ ನೆಪದಲ್ಲಿ ಕರೆದು ಹತ್ಯೆ, ಪ್ರಮುಖ ಆರೋಪಿ ಅರೆಸ್ಟ್

3ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಪ್ರತಿಭಟನೆ: ಸರ್ಕಾರದ ವಿರುದ್ಧ ಕಿಡಿ

ಕರ್ನಾಟಕದಲ್ಲಿ ಚಳಿ ಹೆಚ್ಚಳ: ರಾಜ್ಯಾದ್ಯಂತ ಮುಂದುವರಿದ ಒಣಹವೆ

ADVERTISEMENT
ADVERTISEMENT

ರಾಜ್ಯದ ವಿವಿಧ ಪೆಟ್ರೋಲ್ ಬಂಕ್‌ಗಳಿಂದ ಸಂಗ್ರಹಿಸಿದ್ದ 14 ಮಾದರಿಗಳನ್ನು NABL ಮಾನ್ಯತೆ ಪಡೆದ ಪ್ರಯೋಗಾಲಯಗಳಲ್ಲಿ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ಪೈಕಿ 11 ಮಾದರಿಗಳಲ್ಲಿ ಶೇ.20ಕ್ಕಿಂತ ಹೆಚ್ಚಿನ ಪ್ರಮಾಣದ ಎಥೆನಾಲ್ ಪತ್ತೆಯಾಗಿದೆ. ಕೆಲವು ಮಾದರಿಗಳಲ್ಲಿ ಗರಿಷ್ಠ ಶೇ.31.2ರಷ್ಟು ಎಥೆನಾಲ್ ಇರುವುದು ಪರೀಕ್ಷೆಯಲ್ಲಿ ದೃಢಪಟ್ಟಿದೆ ಎಂದು ರಿಜ್ವಾನ್ ಅರ್ಷದ್ ಆರೋಪಿಸಿದ್ದಾರೆ.

ಇದರ ಜತೆಗೆ, ಸುಮಾರು ಶೇ.90ರಷ್ಟು ಪೆಟ್ರೋಲ್ ಬಂಕ್‌ಗಳ ನಳಿಕೆಗಳಲ್ಲಿ ವ್ಯತ್ಯಾಸ ಕಂಡುಬಂದಿದ್ದು, ಗ್ರಾಹಕರಿಗೆ ನಿಗದಿತ ಪ್ರಮಾಣಕ್ಕಿಂತ ಕಡಿಮೆ ಇಂಧನ ವಿತರಿಸಲಾಗುತ್ತಿದೆ ಎಂಬ ಗಂಭೀರ ಆರೋಪವನ್ನೂ ಮಾಡಿದ್ದಾರೆ. ಈ ಹಿನ್ನೆಲೆ ಇಂಧನದ ಗುಣಮಟ್ಟ, ಮಿಶ್ರಣದ ಪ್ರಮಾಣ ಹಾಗೂ ಗ್ರಾಹಕರ ಹಕ್ಕುಗಳ ರಕ್ಷಣೆಗೆ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಬೇಕು ಎಂದು ಆಗ್ರಹಿಸಿದ್ದಾರೆ.

ಕೇಂದ್ರ ಪೆಟ್ರೋಲಿಯಂ ಸಚಿವರಿಗೆ 5 ಬೇಡಿಕೆ!

ಎಥೆನಾಲ್ ಮಿಶ್ರಿತ ಪೆಟ್ರೋಲ್ ವಿಚಾರದಲ್ಲಿ ಗ್ರಾಹಕರಿಗೆ ಪಾರದರ್ಶಕ ಮಾಹಿತಿ ದೊರೆಯಬೇಕು ಎಂಬ ಉದ್ದೇಶದಿಂದ ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ರಿಜ್ವಾನ್ ಅರ್ಷದ್ ಪತ್ರ ಬರೆದಿದ್ದಾರೆ. ಅದರಲ್ಲಿ ಐದು ಪ್ರಮುಖ ಬೇಡಿಕೆಗಳನ್ನು ಪ್ರಸ್ತಾಪಿಸಿದ್ದಾರೆ.

  1. ಎಥೆನಾಲ್ ಪ್ರಮಾಣ ಪ್ರದರ್ಶನ: ಪ್ರತಿ ಪೆಟ್ರೋಲ್ ಬಂಕ್‌ನಲ್ಲೂ ಇಂಧನದಲ್ಲಿ ಎಷ್ಟು ಪ್ರಮಾಣದ ಎಥೆನಾಲ್ ಮಿಶ್ರಣವಾಗಿದೆ ಎಂಬುದನ್ನು ಸ್ಪಷ್ಟವಾಗಿ ಪ್ರದರ್ಶಿಸಬೇಕು.
  2. ಬಿಲ್‌ನಲ್ಲಿ ಮಾಹಿತಿ: ಗ್ರಾಹಕರಿಗೆ ನೀಡುವ ಇಂಧನ ಖರೀದಿ ಬಿಲ್‌ನಲ್ಲಿಯೂ ಎಥೆನಾಲ್ ಮಿಶ್ರಣದ ಪ್ರಮಾಣವನ್ನು ನಮೂದಿಸಬೇಕು.
  3. E-10 ಇಂಧನ ಆಯ್ಕೆ: ಕಡಿಮೆ ಪ್ರಮಾಣದ ಎಥೆನಾಲ್ ಮಿಶ್ರಣವಿರುವ E-10 ಪೆಟ್ರೋಲ್ ಖರೀದಿಸಲು ಗ್ರಾಹಕರಿಗೆ ಅವಕಾಶ ಕಲ್ಪಿಸಬೇಕು.
  4. ಸ್ವತಂತ್ರ ಪರೀಕ್ಷೆ: NABL ಮಾನ್ಯತೆ ಪಡೆದ ಪ್ರಯೋಗಾಲಯಗಳ ಮೂಲಕ ಇಂಧನದ ಗುಣಮಟ್ಟವನ್ನು ಸ್ವತಂತ್ರವಾಗಿ ಪರೀಕ್ಷಿಸುವ ವ್ಯವಸ್ಥೆ ರೂಪಿಸಬೇಕು.
  5. ಪರಿಹಾರ ನಿಧಿ: ಎಥೆನಾಲ್ ಮಿಶ್ರಿತ ಇಂಧನದಿಂದ ವಾಹನಗಳಿಗೆ ಹಾನಿಯಾದರೆ ಗ್ರಾಹಕರಿಗೆ ಪರಿಹಾರ ನೀಡಲು ಪ್ರತ್ಯೇಕ ನಿಧಿ ಸ್ಥಾಪಿಸಬೇಕು.
ಎಥೆನಾಲ್‌ನಿಂದ ವಾಹನಗಳಿಗೆ ಹಾನಿಯಾಗಿಲ್ಲ: ಗಡ್ಕರಿ!

ಇನ್ನು ರಿಜ್ವಾನ್ ಅರ್ಷದ್ ಅವರ ಆರೋಪಗಳಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಎಥೆನಾಲ್ ಮಿಶ್ರಿತ ಇಂಧನ ಬಳಕೆಯಿಂದ ವಾಹನಗಳಿಗೆ ಯಾವುದೇ ಹಾನಿಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಎಥೆನಾಲ್ ವಿರುದ್ಧ ನಡೆಯುತ್ತಿರುವ ಪ್ರಚಾರದ ಹಿಂದೆ ಪೇಯ್ಡ್ ಕ್ಯಾಂಪೇನ್‌ಗಳಿವೆ ಎಂದು ಆರೋಪಿಸಿದ್ದಾರೆ.

2022ರಿಂದ ದೇಶದಲ್ಲಿ ಸುಮಾರು ನಾಲ್ಕು ಕೋಟಿ ನಾಲ್ಕು ಚಕ್ರದ ವಾಹನಗಳು ಹಾಗೂ 20 ಕೋಟಿ ದ್ವಿಚಕ್ರ ವಾಹನಗಳು E-20 ಇಂಧನದಲ್ಲಿ ಸಂಚರಿಸುತ್ತಿವೆ ಎಂದು ಗಡ್ಕರಿ ಹೇಳಿದ್ದಾರೆ. ಕಳೆದ ಮೂರು-ನಾಲ್ಕು ತಿಂಗಳಿಂದ ವಾಹನಗಳು ಹಾಳಾಗುತ್ತಿವೆ ಎಂಬ ಆರೋಪಗಳ ಹಿನ್ನೆಲೆ ಎಥೆನಾಲ್ ವಿರುದ್ಧ ಅಭಿಯಾನ ನಡೆಸಲಾಗುತ್ತಿದೆ. ಆದರೆ, ಇಂಧನ ಬಳಕೆಯಿಂದ ವಾಹನಗಳಿಗೆ ಹಾನಿಯಾಗಿರುವುದಕ್ಕೆ ಆಧಾರವಿಲ್ಲ ಎಂಬುದು ಅವರ ವಾದವಾಗಿದೆ.

ರಿಜ್ವಾನ್‌ಗೆ ಮುರುಗೇಶ್ ನಿರಾಣಿ ಪ್ರಶ್ನೆ!

ಈ ವಿವಾದಕ್ಕೆ ಮಾಜಿ ಸಚಿವ ಮುರುಗೇಶ್ ನಿರಾಣಿ ಕೂಡ ಎಂಟ್ರಿ ಕೊಟ್ಟಿದ್ದಾರೆ. ರಿಜ್ವಾನ್ ಅರ್ಷದ್ ಮಾಡಿರುವ ಆರೋಪಗಳೇ ಅವರಿಗೆ ತಿರುಗುಬಾಣವಾಗಲಿವೆ ಎಂದು ಟೀಕಿಸಿರುವ ಅವರು, ಇಂಧನದ ಮಾದರಿಗಳನ್ನು ಯಾರ ಸಮಕ್ಷಮದಲ್ಲಿ ಸಂಗ್ರಹಿಸಲಾಗಿದೆ ಎಂದು ಪ್ರಶ್ನಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ರಿಜ್ವಾನ್ ಅರ್ಷದ್, ಒಟ್ಟು 63 ಇಂಧನ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಿರುವುದಾಗಿ ತಿಳಿಸಿದ್ದಾರೆ. ಇಂಧನದಲ್ಲಿ ಅಕ್ರಮವಾಗಿ ಮಿಶ್ರಣ ಮಾಡಿ ಹಣ ಗಳಿಸುತ್ತಿರುವವರ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 11 19T123535.622

ಎಥೆನಾಲ್‌ನಿಂದ ವಾಹನಕ್ಕೆ ಹಾನಿಯಾಗಿಲ್ಲ: ರಿಜ್ವಾನ್ ಅರ್ಷದ್ ಆರೋಪಕ್ಕೆ ನಿತಿನ್ ಗಡ್ಕರಿ ತಿರುಗೇಟು

by ಶಾಲಿನಿ ಕೆ. ಡಿ
November 19, 2026 - 12:36 pm
0

Untitled design 2026 11 19T121004.041

ಗ್ರಾಹಕರಿಗೆ ಬಿಗ್ ರಿಲೀಫ್: ಗಗನಕ್ಕೇರಿದ್ದ ಅಕ್ಕಿ ಬೆಲೆ ದಿಢೀರ್ ಇಳಿಕೆ

by ಶಾಲಿನಿ ಕೆ. ಡಿ
November 19, 2026 - 12:10 pm
0

ಕೇಸ್

ಬಾಗಲೂರು ಶೂಟೌಟ್ ಕೇಸ್‌: ಮಾತುಕತೆ ನೆಪದಲ್ಲಿ ಕರೆದು ಹತ್ಯೆ, ಪ್ರಮುಖ ಆರೋಪಿ ಅರೆಸ್ಟ್

by ಶಾಲಿನಿ ಕೆ. ಡಿ
November 19, 2026 - 11:46 am
0

Untitled Design 2026 11 19T111852.205

3ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಪ್ರತಿಭಟನೆ: ಸರ್ಕಾರದ ವಿರುದ್ಧ ಕಿಡಿ

by ಶಾಲಿನಿ ಕೆ. ಡಿ
November 19, 2026 - 11:19 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 11 19T121004.041
    ಗ್ರಾಹಕರಿಗೆ ಬಿಗ್ ರಿಲೀಫ್: ಗಗನಕ್ಕೇರಿದ್ದ ಅಕ್ಕಿ ಬೆಲೆ ದಿಢೀರ್ ಇಳಿಕೆ
    November 19, 2026 | 0
  • ಕೇಸ್
    ಬಾಗಲೂರು ಶೂಟೌಟ್ ಕೇಸ್‌: ಮಾತುಕತೆ ನೆಪದಲ್ಲಿ ಕರೆದು ಹತ್ಯೆ, ಪ್ರಮುಖ ಆರೋಪಿ ಅರೆಸ್ಟ್
    November 19, 2026 | 0
  • Untitled Design 2026 11 19T111852.205
    3ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಪ್ರತಿಭಟನೆ: ಸರ್ಕಾರದ ವಿರುದ್ಧ ಕಿಡಿ
    November 19, 2026 | 0
  • Untitled Design 2026 11 19T104311.338
    ಕರ್ನಾಟಕದಲ್ಲಿ ಚಳಿ ಹೆಚ್ಚಳ: ರಾಜ್ಯಾದ್ಯಂತ ಮುಂದುವರಿದ ಒಣಹವೆ
    November 19, 2026 | 0
  • 1
    ‘ಅಮ್ಮಾ ಸಾರಿ ನನ್ನ ಸಾವಿಗೆ ನಾನೇ ಕಾರಣ’ ಡೆತ್‌ನೋಟ್ ಬರೆದಿಟ್ಟು ಬಾಲಕಿ ಸಾವು!
    November 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version