• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, November 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಕಾಡಾನೆ ಸ್ಥಳಾಂತರ ವಿಚಾರ: ರಾಜೀನಾಮೆ ಎಚ್ಚರಿಕೆ ನೀಡಿದ ಕಾಂಗ್ರೆಸ್ ಶಾಸಕರು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 22, 2026 - 6:52 pm
in ಕರ್ನಾಟಕ, ಚಿಕ್ಕಮಗಳೂರು, ಜಿಲ್ಲಾ ಸುದ್ದಿಗಳು
0 0
0
Untitled Design (71)

ಚಿಕ್ಕಮಗಳೂರು: ಹಾಸನದಿಂದ ಕಾಡಾನೆಗಳನ್ನು ಚಿಕ್ಕಮಗಳೂರು ಜಿಲ್ಲೆಯ ಭದ್ರಾ ಅಭಯಾರಣ್ಯಕ್ಕೆ ಸ್ಥಳಾಂತರಿಸುವ ಕಾರ್ಯಾಚರಣೆಗೆ ಸ್ಥಳೀಯ ಶಾಸಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಯಾವುದೇ ಪೂರ್ವ ಮಾಹಿತಿ ನೀಡದೆ ಕಾಡಾನೆಗಳನ್ನು ಸ್ಥಳಾಂತರಿಸಲಾಗುತ್ತಿದೆ ಎಂದು ಆಕ್ರೋಶ ಹೊರಹಾಕಿರುವ ಕಾಂಗ್ರೆಸ್ ಶಾಸಕರಾದ ನಯನಾ ಮೋಟಮ್ಮ, ಎಚ್.ಡಿ. ತಮ್ಮಯ್ಯ ಮತ್ತು ಟಿ.ಡಿ. ರಾಜೇಗೌಡ, ಕಾರ್ಯಾಚರಣೆ ನಿಲ್ಲಿಸದಿದ್ದರೆ ಸಾಮೂಹಿಕವಾಗಿ ರಾಜೀನಾಮೆ ನೀಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಈ ಪೈಕಿ ಶಾಸಕಿ ನಯನಾ ಮೋಟಮ್ಮ ಅವರು ಸುದ್ದಿಗೋಷ್ಠಿಯಲ್ಲೇ ತಮ್ಮ ರಾಜೀನಾಮೆ ಪತ್ರವನ್ನು ಪ್ರದರ್ಶಿಸಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದ್ದಾರೆ.

ರಾಜ್ಯದಲ್ಲಿ ಮಾನವ-ಕಾಡಾನೆ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅದರಲ್ಲೂ ಹಾಸನ ಜಿಲ್ಲೆಯಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿರುವ ಹಿನ್ನೆಲೆ ಆನೆಗಳನ್ನು ಭದ್ರಾ ಅಭಯಾರಣ್ಯಕ್ಕೆ ಸ್ಥಳಾಂತರಿಸುವ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಆದರೆ, ಈ ನಿರ್ಧಾರ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳ ಅಸಮಾಧಾನಕ್ಕೆ ಕಾರಣವಾಗಿದೆ. ತಮ್ಮ ಕ್ಷೇತ್ರದ ಜನರ ಸುರಕ್ಷತೆಯನ್ನು ಕಡೆಗಣಿಸಿ ಕಾಡಾನೆಗಳನ್ನು ತಮ್ಮ ಭಾಗಕ್ಕೆ ಸ್ಥಳಾಂತರಿಸಲಾಗುತ್ತಿದೆ ಎಂಬುದು ಶಾಸಕರ ಪ್ರಮುಖ ಆರೋಪವಾಗಿದೆ.

RelatedPosts

ಅಶಾ ಕಾರ್ಯಕರ್ತೆಯರ ಹೋರಾಟಕ್ಕೆ ಮಾಜಿ ಸಂಸದೆ ಸುಮಲತಾ ಅಂಬರೀಶ್ ಬೆಂಬಲ

ಶಿಕಾರಿ ನೆಪದಲ್ಲಿ ಬಂದು ಎಸ್ಟೇಟ್ ಮಾಲೀಕನ ಮನೆ ಮೇಲೆ ಫೈರಿಂಗ್‌!

ಪ್ರತಿಭಟನೆ ಕೈಬಿಡಿ, ಅಧಿವೇಶನದ ಬಳಿಕ ಸಿಹಿಸುದ್ದಿ ಕೊಡ್ತೀವಿ: ಆಶಾ ಕಾರ್ಯಕರ್ತೆಯರಿಗೆ ಯು.ಟಿ. ಖಾದರ್ ಮನವಿ

ಆಹಾರದಲ್ಲಿ ಹುಳುಗಳು ಪತ್ತೆ ಕೇಸ್: ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಪ್ರಿನ್ಸಿಪಾಲ್, ವಾರ್ಡನ್ ಸಸ್ಪೆಂಡ್!

ADVERTISEMENT
ADVERTISEMENT

ಸರ್ಕಾರವಲ್ಲ, ಜನ ಮುಖ್ಯ ಎಂದ ನಯನಾ ಮೋಟಮ್ಮ!

ಚಿಕ್ಕಮಗಳೂರಿನಲ್ಲಿ ಮೂವರು ಕಾಂಗ್ರೆಸ್ ಶಾಸಕರು ಜಂಟಿ ಸುದ್ದಿಗೋಷ್ಠಿ ನಡೆಸಿ ಕಾಡಾನೆ ಸ್ಥಳಾಂತರ ಕಾರ್ಯಾಚರಣೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ವೇಳೆ ಮಾತನಾಡಿದ ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ, ಹಾಸನದಲ್ಲಿ ಇಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವಲಿಂಗೇಗೌಡ ಅವರು ಕಾಡಾನೆಗಳನ್ನು ಭದ್ರಾ ಭಾಗಕ್ಕೆ ಓಡಿಸುವ ಕಾರ್ಯಾಚರಣೆ ನಡೆಸುವುದಾಗಿ ಹೇಳಿದ್ದರು. ಆದರೆ, ಈ ವಿಚಾರದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಶಾಸಕರೊಂದಿಗೆ ಯಾವುದೇ ಚರ್ಚೆ ನಡೆಸಿಲ್ಲ ಎಂದು ಆರೋಪಿಸಿದ್ದಾರೆ.

ನವೆಂಬರ್ 25ರಂದು ಅರಣ್ಯ ಸಚಿವರ ನೇತೃತ್ವದಲ್ಲಿ ಸಭೆ ನಿಗದಿಯಾಗಿತ್ತು. ಈ ಸಭೆಯಲ್ಲಿ ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಯ ಶಾಸಕರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಭಾಗವಹಿಸಬೇಕಿತ್ತು. ಆದರೆ, ಸಭೆ ನಡೆಯುವ ಮೊದಲೇ ಯಾವುದೇ ಮಾಹಿತಿ ನೀಡದೆ ಎಸಿಸಿಎಫ್ (ACCF) ನೇತೃತ್ವದಲ್ಲಿ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಅವರು ಆಕ್ಷೇಪಿಸಿದ್ದಾರೆ.

ಈ ಕುರಿತು ಪಿಸಿಸಿಎಫ್ (PCCF) ಮತ್ತು ಎಸಿಸಿಎಫ್ ಅಧಿಕಾರಿಗಳಿಗೆ ಸಂದೇಶ ಕಳುಹಿಸಿ ತಮ್ಮ ವಿರೋಧವನ್ನು ಸ್ಪಷ್ಟಪಡಿಸಿದ್ದೇನೆ. ಯಾವುದೇ ಸಮ್ಮತಿ ಇಲ್ಲದೆ ಆನೆಗಳನ್ನು ಸ್ಥಳಾಂತರಿಸುವುದನ್ನು ಒಪ್ಪಲು ಸಾಧ್ಯವಿಲ್ಲ. ಈ ಕಾರ್ಯಾಚರಣೆ ಮುಂದುವರಿದರೆ ನಾನು ರಾಜೀನಾಮೆ ನೀಡಲು ಸಿದ್ಧ ಎಂದು ತಿಳಿಸಿದ್ದೇನೆ ಎಂದು ನಯನಾ ಮೋಟಮ್ಮ ಹೇಳಿದ್ದಾರೆ.

ಇದೇ ವೇಳೆ ತಮ್ಮ ರಾಜೀನಾಮೆ ಪತ್ರವನ್ನು ಸುದ್ದಿಗೋಷ್ಠಿಯಲ್ಲಿ ಪ್ರದರ್ಶಿಸಿದ ಅವರು, “ನನಗೆ ಸರ್ಕಾರ ಮುಖ್ಯವಲ್ಲ, ಜನ ಮುಖ್ಯ. ಚಿಕ್ಕಮಗಳೂರು ಜನರ ಜೀವಕ್ಕೆ ಬೆಲೆ ಇಲ್ವಾ? ರಾತ್ರಿ ಎಲ್ಲಿಂದ ಕಾಡಾನೆಗಳು ಬಂದಿವೆಯೋ ಅಲ್ಲಿಗೇ ವಾಪಸ್ ಕಳುಹಿಸಬೇಕು. ಇಲ್ಲದಿದ್ದರೆ ಬೆಳಗ್ಗೆ ರಾಜೀನಾಮೆ ನೀಡುತ್ತೇನೆ” ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಶೃಂಗೇರಿ ಕ್ಷೇತ್ರದಲ್ಲಿ 13 ಸಾವು.. ಮೂಡಿಗೆರೆಯಲ್ಲಿ ಮೂವರು ಬಲಿ!

ಇನ್ನು ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ ಮಾತನಾಡಿ, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಶೃಂಗೇರಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮಾನವ-ಪ್ರಾಣಿ ಸಂಘರ್ಷ ತೀವ್ರಗೊಂಡಿದೆ. ಶೃಂಗೇರಿ ಕ್ಷೇತ್ರವೊಂದರಲ್ಲೇ ಕಾಡುಪ್ರಾಣಿಗಳ ಸಂಘರ್ಷದಿಂದ 13 ಮಂದಿ ಮೃತಪಟ್ಟಿದ್ದರೆ, ಮೂಡಿಗೆರೆ ಕ್ಷೇತ್ರದಲ್ಲಿ ಮೂವರು ಜೀವ ಕಳೆದುಕೊಂಡಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇಂತಹ ಪರಿಸ್ಥಿತಿಯಲ್ಲಿ ಹಾಸನದಿಂದ ಸುಮಾರು 54 ಕಾಡಾನೆಗಳನ್ನು ಭದ್ರಾ ಅಭಯಾರಣ್ಯಕ್ಕೆ ಸ್ಥಳಾಂತರಿಸುವ ಕಾರ್ಯಾಚರಣೆ ನಡೆಸಲಾಗುತ್ತಿದೆ. ಈಗಾಗಲೇ ಮೂಡಿಗೆರೆ ತಾಲೂಕಿನಲ್ಲಿ 50ಕ್ಕೂ ಅಧಿಕ ಕಾಡಾನೆಗಳಿವೆ. ಸ್ಥಳೀಯ ಶಾಸಕರ ಗಮನಕ್ಕೂ ತರದೆ ಆನೆಗಳನ್ನು ನಮ್ಮ ಭಾಗಕ್ಕೆ ಓಡಿಸುವುದು ಸರಿಯಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಭದ್ರಾ ಅಭಯಾರಣ್ಯಕ್ಕೆ ಆನೆಗಳ ಸ್ಥಳಾಂತರ ಬೇಡ!

ಭದ್ರಾ ಅಭಯಾರಣ್ಯವು ಸುಮಾರು 492 ಚದರ ಕಿಲೋಮೀಟರ್ ವಿಸ್ತೀರ್ಣ ಹೊಂದಿದೆ. ಈಗಾಗಲೇ ಅಲ್ಲಿ ಸಾಕಷ್ಟು ವನ್ಯಜೀವಿಗಳಿವೆ. ರಾಜ್ಯದಲ್ಲಿ ಇದಕ್ಕಿಂತಲೂ ದೊಡ್ಡ ಅರಣ್ಯ ಪ್ರದೇಶಗಳಿರುವಾಗ ಭದ್ರಾ ಅಭಯಾರಣ್ಯವನ್ನೇ ಆನೆಗಳ ಸ್ಥಳಾಂತರಕ್ಕೆ ಆಯ್ಕೆ ಮಾಡಿರುವುದೇಕೆ ಎಂದು ಶಾಸಕರು ಪ್ರಶ್ನಿಸಿದ್ದಾರೆ.

ಯಾವುದೇ ಕಾರಣಕ್ಕೂ ಹೊರಗಿನಿಂದ ಕಾಡಾನೆಗಳನ್ನು ತಮ್ಮ ಕ್ಷೇತ್ರಕ್ಕೆ ಸ್ಥಳಾಂತರಿಸುವುದನ್ನು ಒಪ್ಪುವುದಿಲ್ಲ. ಕಾರ್ಯಾಚರಣೆಯನ್ನು ತಕ್ಷಣ ನಿಲ್ಲಿಸುವಂತೆ ಅರಣ್ಯ ಸಚಿವರು ಆದೇಶಿಸಬೇಕು. ಸ್ಥಳಾಂತರ ಮುಂದುವರಿದರೆ ಜನರ ಹಿತದೃಷ್ಟಿಯಿಂದ ಯಾವುದೇ ತ್ಯಾಗಕ್ಕೂ ಸಿದ್ಧ ಎಂದು ಟಿ.ಡಿ. ರಾಜೇಗೌಡ ಎಚ್ಚರಿಕೆ ನೀಡಿದ್ದಾರೆ.

ರಾಜೀನಾಮೆ ಕೊಟ್ಟೇ ಕೊಡ್ತೇವೆ ಎಂದ ಎಚ್.ಡಿ. ತಮ್ಮಯ್ಯ!

ಇದೇ ವಿಚಾರವಾಗಿ ಮಾತನಾಡಿದ ಚಿಕ್ಕಮಗಳೂರು ಶಾಸಕ ಎಚ್.ಡಿ. ತಮ್ಮಯ್ಯ ಕೂಡ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮೂವರು ಶಾಸಕರ ನಿಲುವು ಒಂದೇ ಆಗಿದ್ದು, ನಮಗೆ ಅಧಿಕಾರಕ್ಕಿಂತ ಜನರ ಜೀವ ಮುಖ್ಯ ಎಂದು ಹೇಳಿದ್ದಾರೆ.

ಹಾಸನದಿಂದ ಸ್ಥಳಾಂತರಿಸಲಾಗುತ್ತಿರುವ ಆನೆಗಳು ಮರಳಿ ಬೇಲೂರು ಭಾಗಕ್ಕೆ ಹೋಗಬೇಕು. ಇಲ್ಲವಾದರೆ ಮರುದಿನ ಮೂವರು ಶಾಸಕರು ರಾಜೀನಾಮೆ ನೀಡುವುದು ಖಚಿತ ಎಂದು ಎಚ್ಚರಿಸಿದ್ದಾರೆ. “ಸರ್ಕಾರದಿಂದ ಜನರಲ್ಲ, ಜನರಿಂದ ಸರ್ಕಾರ. ಆನೆಗಳು ವಾಪಸ್ ಹೋಗದಿದ್ದರೆ ರಾಜೀನಾಮೆ ಕೊಟ್ಟೇ ಕೊಡುತ್ತೇವೆ” ಎಂದು ಗುಡುಗಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled Design (71)

ಕಾಡಾನೆ ಸ್ಥಳಾಂತರ ವಿಚಾರ: ರಾಜೀನಾಮೆ ಎಚ್ಚರಿಕೆ ನೀಡಿದ ಕಾಂಗ್ರೆಸ್ ಶಾಸಕರು

by ಶಾಲಿನಿ ಕೆ. ಡಿ
November 22, 2026 - 6:52 pm
0

Untitled Design (70)

ಭಾರತಕ್ಕೆ ಆಗಮಿಸಿದ ನೇಪಾಳ ಪ್ರಧಾನಿ: ನಾಳೆ ಪ್ರಧಾನಿ ಮೋದಿ ಜೊತೆ ಮಹತ್ವದ ಮಾತುಕತೆ

by ಶಾಲಿನಿ ಕೆ. ಡಿ
November 22, 2026 - 6:35 pm
0

Untitled Design (69)

ನಿತೀಶ್ ಸೇತು ಉದ್ಘಾಟನೆಗೆ ತೇಜಸ್ವಿ ಯಾದವ್‌ಗೆ ಆಹ್ವಾನಿಸದಿದ್ದಕ್ಕೆ RJD ಕಾರ್ಯಕರ್ತರ ಆಕ್ರೋಶ.!

by ಶಾಲಿನಿ ಕೆ. ಡಿ
November 22, 2026 - 6:07 pm
0

Untitled Design (68)

ಭಟ್ರು ಬರೆದ ಆ ಸಾಲಿನಲ್ಲಿ ಏನಿದೆ..? ಬಿದ್ದು ಬಿದ್ದು ನಕ್ಕ ಶ್ರೀರಾಮ್

by ಶಾಲಿನಿ ಕೆ. ಡಿ
November 22, 2026 - 5:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled Design (66)
    ಅಶಾ ಕಾರ್ಯಕರ್ತೆಯರ ಹೋರಾಟಕ್ಕೆ ಮಾಜಿ ಸಂಸದೆ ಸುಮಲತಾ ಅಂಬರೀಶ್ ಬೆಂಬಲ
    November 22, 2026 | 0
  • Untitled Design (63)
    ಶಿಕಾರಿ ನೆಪದಲ್ಲಿ ಬಂದು ಎಸ್ಟೇಟ್ ಮಾಲೀಕನ ಮನೆ ಮೇಲೆ ಫೈರಿಂಗ್‌!
    November 22, 2026 | 0
  • Untitled design (60)
    ಪ್ರತಿಭಟನೆ ಕೈಬಿಡಿ, ಅಧಿವೇಶನದ ಬಳಿಕ ಸಿಹಿಸುದ್ದಿ ಕೊಡ್ತೀವಿ: ಆಶಾ ಕಾರ್ಯಕರ್ತೆಯರಿಗೆ ಯು.ಟಿ. ಖಾದರ್ ಮನವಿ
    November 22, 2026 | 0
  • Untitled Design (55)
    ಆಹಾರದಲ್ಲಿ ಹುಳುಗಳು ಪತ್ತೆ ಕೇಸ್: ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಪ್ರಿನ್ಸಿಪಾಲ್, ವಾರ್ಡನ್ ಸಸ್ಪೆಂಡ್!
    November 22, 2026 | 0
  • Untitled Design (54)
    ಶೂ, ಸಾಕ್ಸ್ ಬಗ್ಗೆ ಮನವಿ ನೀಡಲು ಬಂದವರ ಮೇಲೆ ಮಧು ಬಂಗಾರಪ್ಪ ದೌರ್ಜನ್ಯ: ಬಿ.ವೈ ವಿಜಯೇಂದ್ರ ಕಿಡಿ
    November 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version