• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, November 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಬಿಸ್ಲೇರಿ ನೀರಿನಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ: ಕಂಪನಿಯ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾದ FSSAI

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 23, 2026 - 11:24 am
in ದೇಶ
0 0
0
Untitled Design (74)

ನವದೆಹಲಿ: ದೇಶದ ಜನಪ್ರಿಯ ಬಾಟಲಿ ಕುಡಿಯುವ ನೀರಿನ ಬ್ರ್ಯಾಂಡ್‌ಗಳಲ್ಲಿ ಒಂದಾದ ಬಿಸ್ಲೇರಿ (Bisleri) ಇದೀಗ ವಿವಾದಕ್ಕೆ ಸಿಲುಕಿದೆ. ಬಿಸ್ಲೇರಿ ನೀರಿನ ಮಾದರಿಗಳಲ್ಲಿ ನಿಗದಿತ ಮಿತಿಗಿಂತ ಹೆಚ್ಚಿನ ಪ್ರಮಾಣದ ರಾಸಾಯನಿಕ ಅಂಶಗಳು ಪತ್ತೆಯಾಗಿವೆ ಎಂಬ ಆರೋಪ ಕೇಳಿಬಂದಿದೆ.

ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ನಡೆಸಿದ ಎರಡು ಹಂತದ ಪರೀಕ್ಷೆಗಳಲ್ಲಿ ನೀರಿನ ಮಾದರಿ ಸುರಕ್ಷತಾ ಮಾನದಂಡಗಳನ್ನು ಪೂರೈಸಿಲ್ಲ ಎನ್ನಲಾಗಿದೆ. ಈ ಹಿನ್ನೆಲೆ ಕಂಪನಿ ವಿರುದ್ಧ ಆಹಾರ ಸುರಕ್ಷತಾ ಕಾಯ್ದೆಯಡಿ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

RelatedPosts

ಚೀನಾ-ಪಾಕಿಸ್ತಾನ ಜೊತೆ ಅಮೆರಿಕಾ ಸ್ನೇಹ: ಭಾರತಕ್ಕೆ ಇದು ಎಚ್ಚರಿಕೆಯ ಗಂಟೆಯೇ?

ಗುಜರಾತ್‌ನಲ್ಲಿ ವಾಹನಗಳ ಮೇಲೆ ಜಾತಿ ಹೆಸರು, ಸ್ಟಿಕ್ಕರ್ ಬ್ಯಾನ್‌; ಹೊಸ ರೂಲ್ಸ್ ಜಾರಿ.!

ನೇಪಾಳದ ಅಭಿವೃದ್ಧಿಗೆ ₹15 ಸಾವಿರ ಕೋಟಿ ನೆರವು ಘೋಷಿಸಿದ ಪ್ರಧಾನಿ ಮೋದಿ

2018ರ ಮಾನನಷ್ಟ ಪ್ರಕರಣ: ಯೂಟ್ಯೂಬರ್ ಧ್ರುವ್ ರಾಠೀ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ

ADVERTISEMENT
ADVERTISEMENT

ಪ್ರತಿದಿನ ಲಕ್ಷಾಂತರ ಜನರು ಬಾಟಲಿ ನೀರನ್ನು ಅವಲಂಬಿಸಿದ್ದಾರೆ. ಪ್ರಯಾಣದ ಸಮಯದಲ್ಲಿ, ಕಚೇರಿಗಳಲ್ಲಿ, ಮನೆಗಳಲ್ಲಿ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಬಾಟಲಿ ನೀರನ್ನೇ ಬಳಸುತ್ತಾರೆ. ಇಂತಹ ಸಂದರ್ಭದಲ್ಲಿ ಪ್ರತಿಷ್ಠಿತ ಬ್ರ್ಯಾಂಡ್‌ನ ನೀರಿನ ಗುಣಮಟ್ಟದ ಕುರಿತು ಗಂಭೀರ ಆರೋಪ ಕೇಳಿಬಂದಿರುವುದು ಗ್ರಾಹಕರಲ್ಲಿ ಆತಂಕ ಮೂಡಿಸಿದೆ.

ಎರಡು ಬಾರಿ ಪರೀಕ್ಷೆ, ನೀರು ಅಸುರಕ್ಷಿತ ಎಂಬ ವರದಿ!

ಲಭ್ಯವಿರುವ ಮಾಹಿತಿಯ ಪ್ರಕಾರ, FSSAI ಅಧಿಕಾರಿಗಳು ಬಿಸ್ಲೇರಿ ಕಂಪನಿಯ ನೀರಿನ ಮಾದರಿಯನ್ನು ಪ್ರಯೋಗಾಲಯದಲ್ಲಿ ಪರೀಕ್ಷೆಗೆ ಒಳಪಡಿಸಿದ್ದರು. ಮೊದಲ ಹಂತದ ಪರೀಕ್ಷೆಯಲ್ಲಿ ನೀರಿನಲ್ಲಿ ನಿಗದಿತ ಮಿತಿಗಿಂತ ಹೆಚ್ಚಿನ ಪ್ರಮಾಣದ ಬ್ರೋಮೇಟ್ (Bromate) ಪತ್ತೆಯಾಗಿದೆ ಎಂದು ಆರೋಪಿಸಲಾಗಿದೆ. ಈ ಅಂಶವು ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಯಿರುವುದರಿಂದ ಅಧಿಕಾರಿಗಳು ನೀರಿನ ಗುಣಮಟ್ಟದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರು.

ಆದರೆ, ಪರೀಕ್ಷಾ ವರದಿಯನ್ನು ಬಿಸ್ಲೇರಿ ಸಂಸ್ಥೆ ಪ್ರಶ್ನಿಸಿತ್ತು. ಈ ಹಿನ್ನೆಲೆ ನೀರಿನ ಮಾದರಿಯನ್ನು ಮತ್ತೊಂದು ರೆಫರಲ್ ಪ್ರಯೋಗಾಲಯಕ್ಕೆ ಕಳುಹಿಸಿ ಮರುಪರೀಕ್ಷೆ ನಡೆಸಲಾಗಿದೆ ಎನ್ನಲಾಗಿದೆ. ಎರಡನೇ ಪರೀಕ್ಷೆಯಲ್ಲಿಯೂ ನೀರಿನ ಮಾದರಿ ಸುರಕ್ಷತಾ ಮಾನದಂಡಗಳನ್ನು ಪೂರೈಸಿಲ್ಲ ಎಂಬ ವರದಿ ಬಂದಿದೆ. ಈ ಪರೀಕ್ಷೆಯಲ್ಲಿ ಪಾಲಿಸೈಕ್ಲಿಕ್ ಅರೋಮ್ಯಾಟಿಕ್ ಹೈಡ್ರೋಕಾರ್ಬನ್‌ಗಳಾದ (PAHs) ಪ್ರಮಾಣದ ಕುರಿತು ಆಕ್ಷೇಪ ವ್ಯಕ್ತವಾಗಿದೆ.

ಎರಡೂ ಹಂತದ ಪರೀಕ್ಷೆಗಳ ವರದಿಗಳ ಆಧಾರದಲ್ಲಿ ಮುಂದಿನ ಕಾನೂನು ಪ್ರಕ್ರಿಯೆಗೆ FSSAI ಅನುಮತಿ ನೀಡಿದೆ ಎನ್ನಲಾಗಿದೆ. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006ರ ಅಡಿಯಲ್ಲಿ ಕಂಪನಿ ವಿರುದ್ಧ ವಿಚಾರಣೆ ಹಾಗೂ ಕಾನೂನು ಕ್ರಮ ಮುಂದುವರಿಯುವ ಸಾಧ್ಯತೆಯಿದೆ.

ಏನಿದು ಬ್ರೋಮೇಟ್? ಆರೋಗ್ಯಕ್ಕೆ ಎಷ್ಟು ಅಪಾಯಕಾರಿ?

ಬ್ರೋಮೇಟ್ ಎಂಬುದು ಕುಡಿಯುವ ನೀರಿನ ಶುದ್ಧೀಕರಣ ಪ್ರಕ್ರಿಯೆಯಲ್ಲಿ ಓಝೋನ್ ಬಳಕೆಯಾದಾಗ, ನೀರಿನಲ್ಲಿರುವ ಬ್ರೋಮೈಡ್‌ನೊಂದಿಗೆ ರಾಸಾಯನಿಕ ಕ್ರಿಯೆ ನಡೆದು ಉತ್ಪತ್ತಿಯಾಗಬಹುದಾದ ಸಂಯುಕ್ತವಾಗಿದೆ. ನೀರಿನಲ್ಲಿ ಇದರ ಪ್ರಮಾಣ ಹೆಚ್ಚಾದರೆ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯಿದೆ.

ಅಂತಾರಾಷ್ಟ್ರೀಯ ಕ್ಯಾನ್ಸರ್ ಸಂಶೋಧನಾ ಸಂಸ್ಥೆ (IARC) ಪೊಟ್ಯಾಸಿಯಂ ಬ್ರೋಮೇಟ್ ಅನ್ನು ಮಾನವರಿಗೆ ಕ್ಯಾನ್ಸರ್ ಉಂಟುಮಾಡುವ ಸಾಧ್ಯತೆಯಿರುವ ವಸ್ತುಗಳ ಪಟ್ಟಿಯಲ್ಲಿ ವರ್ಗೀಕರಿಸಿದೆ. ಕುಡಿಯುವ ನೀರಿನಲ್ಲಿ ಬ್ರೋಮೇಟ್ ಪ್ರಮಾಣ ಪ್ರತಿ ಲೀಟರ್‌ಗೆ 10 ಮೈಕ್ರೋಗ್ರಾಂ ಮೀರದಂತೆ ವಿಶ್ವ ಆರೋಗ್ಯ ಸಂಸ್ಥೆ ಮಾರ್ಗಸೂಚಿ ನೀಡಿದೆ.

ದೀರ್ಘಕಾಲ ಹೆಚ್ಚಿನ ಪ್ರಮಾಣದಲ್ಲಿ ಬ್ರೋಮೇಟ್‌ಗೆ ಒಡ್ಡಿಕೊಳ್ಳುವುದರಿಂದ ಮೂತ್ರಪಿಂಡಗಳಿಗೆ ಹಾನಿಯಾಗುವ ಸಾಧ್ಯತೆಯಿದೆ. 

PAHs ರಾಸಾಯನಿಕಗಳೂ ಅಪಾಯಕಾರಿಯೇ?

ಪಾಲಿಸೈಕ್ಲಿಕ್ ಅರೋಮ್ಯಾಟಿಕ್ ಹೈಡ್ರೋಕಾರ್ಬನ್‌ಗಳು (PAHs) ಎಂಬುದು ವಿವಿಧ ಕೈಗಾರಿಕಾ ಪ್ರಕ್ರಿಯೆಗಳು, ಇಂಧನಗಳ ಅಪೂರ್ಣ ದಹನ ಹಾಗೂ ಪರಿಸರ ಮಾಲಿನ್ಯದಿಂದ ಉಂಟಾಗಬಹುದಾದ ರಾಸಾಯನಿಕಗಳ ಗುಂಪಾಗಿದೆ. ಈ ಗುಂಪಿನ ಕೆಲವು ರಾಸಾಯನಿಕಗಳು ಕ್ಯಾನ್ಸರ್ ಕಾರಕ ಗುಣಗಳನ್ನು ಹೊಂದಿವೆ. 

ಬಾಟಲಿ ನೀರು ಖರೀದಿಸುವಾಗ ಈ ಎಚ್ಚರಿಕೆ ಇರಲಿ!

ಬಾಟಲಿ ನೀರು ಖರೀದಿಸುವಾಗ ಗ್ರಾಹಕರು ಕೆಲವು ಮುನ್ನೆಚ್ಚರಿಕೆಗಳನ್ನು ಪಾಲಿಸುವುದು ಅಗತ್ಯ. ಮೊದಲಿಗೆ ಬಾಟಲಿಯ ಮೇಲಿರುವ FSSAI ಲೈಸೆನ್ಸ್ ಸಂಖ್ಯೆ ಮತ್ತು BIS ಪ್ರಮಾಣೀಕರಣದ ವಿವರಗಳನ್ನು ಪರಿಶೀಲಿಸಬೇಕು. ಉತ್ಪಾದನಾ ದಿನಾಂಕ, ಬ್ಯಾಚ್ ಸಂಖ್ಯೆ ಹಾಗೂ ಬಾಟಲಿಯ ಮುಚ್ಚಳದ ಸೀಲ್ ಸರಿಯಾಗಿದೆಯೇ ಎಂಬುದನ್ನು ಗಮನಿಸಬೇಕು.

ಅಲ್ಲದೆ, ಹೆಚ್ಚು ಬಿಸಿಲಿನಲ್ಲಿ ಸಂಗ್ರಹಿಸಿಟ್ಟಿರುವ ಬಾಟಲಿ ನೀರನ್ನು ಖರೀದಿಸುವುದನ್ನು ತಪ್ಪಿಸಬೇಕು. ಬಾಟಲಿಯ ನೀರಿನ ಬಣ್ಣ, ವಾಸನೆ ಅಥವಾ ಸ್ವರೂಪದಲ್ಲಿ ಬದಲಾವಣೆ ಕಂಡುಬಂದರೆ ಅದನ್ನು ಕುಡಿಯಬಾರದು.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled Design 2026 11 24T161107.817

ಎದೆಯಾಳದ ನೆಲದಲ್ಲಿ ಧೀರೇನ್ ಹುಡುಕಾಟ..ಯಾರಿಗಾಗಿ..?!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 24, 2026 - 4:05 pm
0

Untitled design 2026 11 24T154221.092

ಜಪಾನ್‌ನಿಂದಲೇ ಆಶಾ ಕಾರ್ಯಕರ್ತೆಯರಿಗೆ ಸಿಎಂ ಕರೆ; ಪ್ರತಿಭಟನೆ ಕೈಬಿಡುವಂತೆ ಡಿಕೆಶಿ ಮನವಿ!

by ಶಾಲಿನಿ ಕೆ. ಡಿ
November 24, 2026 - 3:47 pm
0

Untitled design 2026 11 24T152934.045

‘ಕನ್ನಡ’ ಮರೆಯದ ರಶ್ಮಿಕಾ..ತೆಲುಗು ಸೊಸೆಗೆ ಶಹಬ್ಬಾಸ್‌‌ಗಿರಿ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 24, 2026 - 3:31 pm
0

Untitled design 2026 11 24T145806.018

ಮೆಟಾ ಸಂಸ್ಥೆ ವಿರುದ್ಧ ಯೂತ್ ಕಾಂಗ್ರೆಸ್ ಹೋರಾಟ: ವಿವಿಧೆಡೆ ಫ್ಲೆಕ್ಸ್, ಬ್ಯಾನರ್ ಹಾಕಿ ಆಕ್ರೋಶ

by ಶಾಲಿನಿ ಕೆ. ಡಿ
November 24, 2026 - 3:03 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled Design 2026 11 24T111245.069
    ಚೀನಾ-ಪಾಕಿಸ್ತಾನ ಜೊತೆ ಅಮೆರಿಕಾ ಸ್ನೇಹ: ಭಾರತಕ್ಕೆ ಇದು ಎಚ್ಚರಿಕೆಯ ಗಂಟೆಯೇ?
    November 24, 2026 | 0
  • Untitled design 2026 11 23T184529.124
    ಗುಜರಾತ್‌ನಲ್ಲಿ ವಾಹನಗಳ ಮೇಲೆ ಜಾತಿ ಹೆಸರು, ಸ್ಟಿಕ್ಕರ್ ಬ್ಯಾನ್‌; ಹೊಸ ರೂಲ್ಸ್ ಜಾರಿ.!
    November 23, 2026 | 0
  • ನೇಪಾಳದ ಅಭಿವೃದ್ಧಿಗೆ ₹15 ಸಾವಿರ ಕೋಟಿ ನೆರವು ಘೋಷಿಸಿದ ಪ್ರಧಾನಿ ಮೋದಿ
    ನೇಪಾಳದ ಅಭಿವೃದ್ಧಿಗೆ ₹15 ಸಾವಿರ ಕೋಟಿ ನೆರವು ಘೋಷಿಸಿದ ಪ್ರಧಾನಿ ಮೋದಿ
    November 23, 2026 | 0
  • Untitled Design (89)
    2018ರ ಮಾನನಷ್ಟ ಪ್ರಕರಣ: ಯೂಟ್ಯೂಬರ್ ಧ್ರುವ್ ರಾಠೀ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ
    November 23, 2026 | 0
  • Untitled design (82)
    ಬಿಸ್ಲೆರಿ ನೀರು ಕುಡಿಯಲು ಯೋಗ್ಯ; FSSAI ಆರೋಪಕ್ಕೆ ಕಂಪನಿ ಸ್ಪಷ್ಟನೆ
    November 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version