• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, November 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ಶಾಕ್; ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 25, 2026 - 11:01 am
in ಕರ್ನಾಟಕ
0 0
0
Untitled Design 2026 11 25T110032.526

ಬೆಂಗಳೂರು: ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್ ನೀಡಿದೆ. ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಅಷ್ಟೇ ಅಲ್ಲ, ಮುಂದಿನ ಎರಡು ವಾರಗಳೊಳಗೆ ಶರಣಾಗುವಂತೆ ಸೂಚನೆ ನೀಡಿದೆ. ಇದರಿಂದ ಧಾರವಾಡ ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲು ಸೇರುವುದು ಬಹುತೇಕ ಖಚಿತವಾಗಿದೆ.

ನ್ಯಾಯಮೂರ್ತಿಗಳಾದ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ಚಂದ್ರಶೇಖರ್ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ಪೀಠ ಈ ಮಹತ್ವದ ಆದೇಶ ನೀಡಿದೆ. ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ವಿಧಿಸಲಾಗಿದ್ದ ಜೀವಾವಧಿ ಶಿಕ್ಷೆಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಜೊತೆಗೆ ಜಾಮೀನು ಮಂಜೂರು ಮಾಡಿತ್ತು. ಇದೀಗ ಹೈಕೋರ್ಟ್ ನೀಡಿದ್ದ ಈ ಆದೇಶವನ್ನೇ ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.

RelatedPosts

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 2 ದಿನ ಮಳೆ ಸಾಧ್ಯತೆ

ಪ್ರತಿಭಟನಾನಿರತ ಆಶಾ ಕಾರ್ಯಕರ್ತೆಯರ ಬೆನ್ನಿಗೆ ನಿಂತ ನಟಿ ರಮ್ಯಾ

ಹಾಸನ ಡಿಸಿ ಲಂಚದ ವಾಟ್ಸಪ್ ಚಾಟ್ ಕೇಸ್‌: ಹೆಚ್‌.ಡಿ ಕುಮಾರಸ್ವಾಮಿಗೆ ಸೈಬರ್ ಪೊಲೀಸರಿಂದ ನೋಟಿಸ್!

ಜಪಾನ್‌ನಿಂದಲೇ ಆಶಾ ಕಾರ್ಯಕರ್ತೆಯರಿಗೆ ಸಿಎಂ ಕರೆ; ಪ್ರತಿಭಟನೆ ಕೈಬಿಡುವಂತೆ ಡಿಕೆಶಿ ಮನವಿ!

ADVERTISEMENT
ADVERTISEMENT

ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ್ದ ಸಿಬಿಐ

ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ವಿಚಾರಣೆ ನಡೆಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿನಯ್ ಕುಲಕರ್ಣಿ ಸೇರಿದಂತೆ ಆರೋಪಿಗಳಿಗೆ ಶಿಕ್ಷೆ ವಿಧಿಸಿತ್ತು. ಈ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು. ಇದನ್ನು ಪ್ರಶ್ನಿಸಿ ಅವರು ಕರ್ನಾಟಕ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್, ಅವರ ಜೀವಾವಧಿ ಶಿಕ್ಷೆಗೆ ತಡೆ ನೀಡಿ ಜಾಮೀನು ಮಂಜೂರು ಮಾಡಿತ್ತು. ಇದರಿಂದ ಜೈಲಿನಲ್ಲಿದ್ದ ವಿನಯ್ ಕುಲಕರ್ಣಿಗೆ ತಾತ್ಕಾಲಿಕವಾಗಿ ಬಿಡುಗಡೆಯ ಭಾಗ್ಯ ಸಿಕ್ಕಿತ್ತು. ಆದರೆ ಹೈಕೋರ್ಟ್‌ನ ಈ ಆದೇಶವನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು.

ಇದೇ ವೇಳೆ ಕೊಲೆಯಾದ ಯೋಗೇಶ್ ಗೌಡ ಅವರ ಸಹೋದರರೂ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ವಿನಯ್ ಕುಲಕರ್ಣಿಗೆ ನೀಡಿರುವ ಜಾಮೀನು ಹಾಗೂ ಶಿಕ್ಷೆಗೆ ತಡೆಯಾಜ್ಞೆ ನೀಡಿರುವ ಆದೇಶವನ್ನು ರದ್ದುಗೊಳಿಸುವಂತೆ ಮನವಿ ಮಾಡಿದ್ದರು.

ವಾದ-ಪ್ರತಿವಾದ ಆಲಿಸಿ ಆದೇಶ ಕಾಯ್ದಿರಿಸಿದ್ದ ಪೀಠ

ಸಿಬಿಐ ಮತ್ತು ಯೋಗೇಶ್ ಗೌಡ ಅವರ ಸಹೋದರ ಸಲ್ಲಿಸಿದ್ದ ಮೇಲ್ಮನವಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ನಲ್ಲಿ ಎರಡೂ ಕಡೆಯ ವಕೀಲರು ವಾದ ಮಂಡಿಸಿದ್ದರು. ಪ್ರಕರಣದ ಗಂಭೀರತೆ, ಹೈಕೋರ್ಟ್ ಆದೇಶದ ಕಾನೂನುಬದ್ಧತೆ ಸೇರಿದಂತೆ ಹಲವು ವಿಚಾರಗಳ ಕುರಿತು ವಾದ-ಪ್ರತಿವಾದ ನಡೆದಿತ್ತು.

ಎರಡೂ ಕಡೆಯ ವಾದಗಳನ್ನು ಆಲಿಸಿದ್ದ ನ್ಯಾಯಮೂರ್ತಿಗಳಾದ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ಚಂದ್ರಶೇಖರ್ ಅವರ ಪೀಠ ಆದೇಶವನ್ನು ಕಾಯ್ದಿರಿಸಿತ್ತು. ಇದೀಗ ಅರ್ಜಿಗಳ ಕುರಿತು ತೀರ್ಪು ಪ್ರಕಟಿಸಿರುವ ಸುಪ್ರೀಂ ಕೋರ್ಟ್, ವಿನಯ್ ಕುಲಕರ್ಣಿಗೆ ನೀಡಿದ್ದ ಜಾಮೀನನ್ನು ರದ್ದುಗೊಳಿಸಿ ಮಹತ್ವದ ಆದೇಶ ಹೊರಡಿಸಿದೆ.

ಎರಡು ವಾರದಲ್ಲಿ ಶರಣಾಗಲೇಬೇಕು

ಸುಪ್ರೀಂ ಕೋರ್ಟ್ ನೀಡಿರುವ ಆದೇಶದ ಪ್ರಕಾರ ವಿನಯ್ ಕುಲಕರ್ಣಿ ಮುಂದಿನ ಎರಡು ವಾರಗಳೊಳಗೆ ನ್ಯಾಯಾಲಯದ ಮುಂದೆ ಶರಣಾಗಬೇಕಿದೆ. ಶರಣಾದ ಬಳಿಕ ಅವರನ್ನು ಸೆಷನ್ಸ್ ನ್ಯಾಯಾಲಯದ ಮುಂದೆ ಹಾಜರುಪಡಿಸುವ ಪ್ರಕ್ರಿಯೆ ನಡೆಯಲಿದೆ. ನಂತರ ಅವರು ಮತ್ತೆ ಜೈಲು ಸೇರಬೇಕಾಗುತ್ತದೆ.

ಒಂದು ವೇಳೆ ನಿಗದಿತ ಅವಧಿಯೊಳಗೆ ವಿನಯ್ ಕುಲಕರ್ಣಿ ಶರಣಾಗದಿದ್ದರೆ, ಅವರನ್ನು ಬಂಧಿಸಿ ಕರೆತರಲು ಸಿಬಿಐ ಮುಂದಾಗುವ ಸಾಧ್ಯತೆಯಿದೆ. ಹೀಗಾಗಿ ಇಷ್ಟು ದಿನ ಜಾಮೀನಿನ ಮೇಲೆ ಹೊರಗಿದ್ದ ವಿನಯ್ ಕುಲಕರ್ಣಿಗೆ ಮತ್ತೆ ಜೈಲು ಸೇರುವ ಪರಿಸ್ಥಿತಿ ಎದುರಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled Design 2026 11 25T110032.526

ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ಶಾಕ್; ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

by ಶಾಲಿನಿ ಕೆ. ಡಿ
November 25, 2026 - 11:01 am
0

Untitled Design 2026 11 25T103525.451

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 2 ದಿನ ಮಳೆ ಸಾಧ್ಯತೆ

by ಶಾಲಿನಿ ಕೆ. ಡಿ
November 25, 2026 - 10:36 am
0

Untitled Design 2026 11 24T184842.951

ಪ್ರತಿಭಟನಾನಿರತ ಆಶಾ ಕಾರ್ಯಕರ್ತೆಯರ ಬೆನ್ನಿಗೆ ನಿಂತ ನಟಿ ರಮ್ಯಾ

by ಶಾಲಿನಿ ಕೆ. ಡಿ
November 24, 2026 - 6:55 pm
0

Untitled Design 2026 11 24T184216.970

‘ಸುಂದರಿ’ ಹಾಡಿನ ಮೂಲಕ ‘ಮಿಸ್‌ಮ್ಯಾಚ್’ ಚಿತ್ರದ ಪ್ರಚಾರದ ಅಬ್ಬರ

by ಶಾಲಿನಿ ಕೆ. ಡಿ
November 24, 2026 - 6:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled Design 2026 11 25T103525.451
    ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 2 ದಿನ ಮಳೆ ಸಾಧ್ಯತೆ
    November 25, 2026 | 0
  • Untitled Design 2026 11 24T184842.951
    ಪ್ರತಿಭಟನಾನಿರತ ಆಶಾ ಕಾರ್ಯಕರ್ತೆಯರ ಬೆನ್ನಿಗೆ ನಿಂತ ನಟಿ ರಮ್ಯಾ
    November 24, 2026 | 0
  • Untitled design 2026 11 24T164543.055
    ಹಾಸನ ಡಿಸಿ ಲಂಚದ ವಾಟ್ಸಪ್ ಚಾಟ್ ಕೇಸ್‌: ಹೆಚ್‌.ಡಿ ಕುಮಾರಸ್ವಾಮಿಗೆ ಸೈಬರ್ ಪೊಲೀಸರಿಂದ ನೋಟಿಸ್!
    November 24, 2026 | 0
  • Untitled design 2026 11 24T154221.092
    ಜಪಾನ್‌ನಿಂದಲೇ ಆಶಾ ಕಾರ್ಯಕರ್ತೆಯರಿಗೆ ಸಿಎಂ ಕರೆ; ಪ್ರತಿಭಟನೆ ಕೈಬಿಡುವಂತೆ ಡಿಕೆಶಿ ಮನವಿ!
    November 24, 2026 | 0
  • Untitled design 2026 11 24T145806.018
    ಮೆಟಾ ಸಂಸ್ಥೆ ವಿರುದ್ಧ ಯೂತ್ ಕಾಂಗ್ರೆಸ್ ಹೋರಾಟ: ವಿವಿಧೆಡೆ ಫ್ಲೆಕ್ಸ್, ಬ್ಯಾನರ್ ಹಾಕಿ ಆಕ್ರೋಶ
    November 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version