ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) 2025ರ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಶೀಘ್ರದಲ್ಲಿ ಪ್ರಕಟಿಸಲಿದೆ. ಈ ವಾರದೊಳಗೆ ಫಲಿತಾಂಶ ಘೋಷಣೆಯಾಗುವ ನಿರೀಕ್ಷೆ ಇದ್ದು, ಪತ್ರಿಕಾಗೋಷ್ಠಿ ಮೂಲಕ ಫಲಿತಾಂಶ ಬಿಡುಗಡೆಯಾಗಲಿದೆ. ಇದೇ ಜೊತೆಗೆ, ಆನ್‌ಲೈನ್ ಮೂಲಕವೂ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಪರಿಶೀಲಿಸಬಹುದು ಮತ್ತು ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.
2025ರ ದ್ವಿತೀಯ ಪಿಯುಸಿ ಪರೀಕ್ಷೆಗಳು ಮಾರ್ಚ್ 1ರಿಂದ ಮಾರ್ಚ್ 20ರವರೆಗೆ ನಡೆದಿದ್ದವು. ಪರೀಕ್ಷೆ ಮುಗಿದ ಒಂದು ದಿನದ ಬಳಿಕ, ಮಾರ್ಚ್ 21ರಂದು ಮಾಡೆಲ್ ಆನ್ಸರ್ ಕೀ ಬಿಡುಗಡೆಯಾಗಿತ್ತು. ಒಟ್ಟು 7,13,862 ವಿದ್ಯಾರ್ಥಿಗಳು ಈ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಇವರಲ್ಲಿ 6,61,474 ಹೊಸ ವಿದ್ಯಾರ್ಥಿಗಳು, 34,071 ಪುನರಾವರ್ತಿತ ವಿದ್ಯಾರ್ಥಿಗಳು ಮತ್ತು 18,317 ಖಾಸಗಿ ವಿದ್ಯಾರ್ಥಿಗಳು ಸೇರಿದ್ದಾರೆ. ರಾಜ್ಯಾದ್ಯಂತ 1,171 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು.
ಫಲಿತಾಂಶ ಎಲ್ಲಿ ನೋಡುವುದು?
ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ಗಳಾದ karresults.nic.in ಮತ್ತು kseab.karnataka.gov.in ನಲ್ಲಿ ಪರಿಶೀಲಿಸಬಹುದು. ಪತ್ರಿಕಾಗೋಷ್ಠಿಯ ನಂತರ ಆನ್‌ಲೈನ್ ಲಿಂಕ್ ಸಕ್ರಿಯಗೊಳ್ಳಲಿದೆ.
ಆನ್‌ಲೈನ್‌ನಲ್ಲಿ ಫಲಿತಾಂಶ ಪರಿಶೀಲನೆ ಹೇಗೆ?
- ಅಧಿಕೃತ ವೆಬ್‌ಸೈಟ್ karresults.nic.in ಅಥವಾ kseab.karnataka.gov.in ಗೆ ಭೇಟಿ ನೀಡಿ.
- ಹೋಂ ಪೇಜ್‌ನಲ್ಲಿ ‘Second PU Results 2025’ ಲಿಂಕ್ ಕ್ಲಿಕ್ ಮಾಡಿ.
- ನಿಮ್ಮ ರಿಜಿಸ್ಟ್ರೇಷನ್ ನಂಬರ್ ಮತ್ತು ಪಾಸ್‌ವರ್ಡ್ ನಮೂದಿಸಿ.
- ಫಲಿತಾಂಶ ಸ್ಕ್ರೀನ್‌ನಲ್ಲಿ ಕಾಣಿಸುತ್ತದೆ.
- ಅಗತ್ಯವಿದ್ದರೆ ಪಿಡಿಎಫ್ ರೂಪದಲ್ಲಿ ಡೌನ್‌ಲೋಡ್ ಮಾಡಿಕೊಳ್ಳಿ.
ಕಳೆದ ಮೂರು ವರ್ಷಗಳಿಂದ ದ್ವಿತೀಯ ಪಿಯುಸಿ ಫಲಿತಾಂಶಗಳಲ್ಲಿ ಹುಡುಗಿಯರು ಹುಡುಗರಿಗಿಂತ ಮೇಲುಗೈ ಸಾಧಿಸುತ್ತಿದ್ದಾರೆ. 2022ರಲ್ಲಿ ಹುಡುಗಿಯರು ಶೇ. 13.5ರಷ್ಟು ಅಂತರದೊಂದಿಗೆ ಉತ್ತಮ ಸಾಧನೆ ಮಾಡಿದ್ದರು. ಈ ವರ್ಷವೂ ಇದೇ ಟ್ರೆಂಡ್ ಮುಂದುವರಿಯುತ್ತದೆಯೇ ಎಂಬುದು ಕುತೂಹಲ ಕೆರಳಿಸಿದೆ.





