• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಾಳೆ ಸಿಎಂ ಸಿದ್ದು ರಾಜಕೀಯ ಭವಿಷ್ಯದ ತೀರ್ಪು!

admin by admin
April 14, 2025 - 7:51 pm
in Flash News, ಕರ್ನಾಟಕ
0 0
0
Pti08 22 2024 000245b 0 1725780815091 1726030855746

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಬಂಧಿಸಿದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾ ಅಕ್ರಮ ನಿವೇಶನ ಹಂಚಿಕೆ ಪ್ರಕರಣದಲ್ಲಿ ಲೋಕಾಯುಕ್ತ ಸಲ್ಲಿಸಿದ್ದ ‘ಬಿ’ ವರದಿಯನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ ಇ.ಡಿ ಸಲ್ಲಿಸಿದ್ದ ತಕರಾರು ಅರ್ಜಿಯ ವಿಚಾರಣೆಗೆ ಸಂಬಂಧಿಸಿ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಅಂತಿಮ ತೀರ್ಪನ್ನು ಪ್ರಕಟಿಸಲಿದೆ.

ಈ ತೀರ್ಪು ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ರಾಜಕೀಯ ಭವಿಷ್ಯವನ್ನು ನಿರ್ಧರಿಸುವ ಜೊತೆಗೆ ಕರ್ನಾಟಕದ ರಾಜಕೀಯ ವಲಯದಲ್ಲಿ ದೊಡ್ಡ ಮಹತ್ವವನ್ನು ಪಡೆದುಕೊಂಡಿದೆ.

RelatedPosts

ಕರ್ನಾಟಕದಲ್ಲಿ H1N1 ಅಬ್ಬರ: ರಾಜ್ಯದಲ್ಲಿ 4,130ಕ್ಕೂ ಹೆಚ್ಚು ಪ್ರಕರಣಗಳು ಪತ್ತೆ

ವಿಧಾನಸೌಧದ ಎದುರು BJP ಪ್ರೊಟೆಸ್ಟ್: ಬಿಜೆಪಿ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು

ಇಂದು ದಾವಣಗೆರೆ ಬಂದ್; ನೀರಿಗಾಗಿ ರೈತರ ಹೋರಾಟ, ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

ನಕಲಿ ಔಷಧಿ ಮಾಫಿಯಾ ವಿರುದ್ಧ SIT ಆಪರೇಷನ್; ಮೆಡಿಕಲ್ ಶಾಪ್ ಮಾಲೀಕರಿಗೆ ನೋಟಿಸ್

ADVERTISEMENT
ADVERTISEMENT

ಮುಡಾ ಅಕ್ರಮ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದವರ ವಿರುದ್ಧ ಆರೋಪಗಳು ಕೇಳಿಬಂದಿದ್ದವು. ಈ ಬಗ್ಗೆ ಲೋಕಾಯುಕ್ತ ಪೊಲೀಸರು ತನಿಖೆ ನಡೆಸಿ, ಯಾವುದೇ ತಪ್ಪಿತಸ್ಥತೆ ಕಂಡುಬಂದಿಲ್ಲ ಎಂದು ‘ಬಿ’ ವರದಿಯನ್ನು ಸಲ್ಲಿಸಿದ್ದರು. ಆದರೆ, ಈ ವರದಿಯ ವಿರುದ್ಧ ಇ.ಡಿ ಆಕ್ಷೇಪ ವ್ಯಕ್ತಪಡಿಸಿ, ಏಪ್ರಿಲ್ 2, 2025 ರಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ತಕರಾರು ಅರ್ಜಿಯನ್ನು ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಗಜಾನನ ಭಟ್ ನೇತೃತ್ವದ ನ್ಯಾಯಾಲಯವು ಕೈಗೆತ್ತಿಕೊಂಡಿದೆ.

ಕಳೆದ ಬುಧವಾರ (ಏಪ್ರಿಲ್ 9, 2025) ನಡೆದ ವಿಚಾರಣೆಯಲ್ಲಿ, ಇ.ಡಿ ಸಲ್ಲಿಸಿದ ತಕರಾರು ಅರ್ಜಿಗೆ ಲೋಕಾಯುಕ್ತ ಪೊಲೀಸರ ಪರ ವಕೀಲ ವೆಂಕಟೇಶ್ ಅರಬಟ್ಟಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. “ಇ.ಡಿ ಸಲ್ಲಿಸಿದ ಅರ್ಜಿಗೆ ಕಾನೂನಿನ ಯಾವುದೇ ಆಧಾರವಿಲ್ಲ. ಇ.ಡಿ ಒಂದು ಪತ್ರ ಮತ್ತು 27 ದಾಖಲೆಗಳನ್ನು ಲೋಕಾಯುಕ್ತಕ್ಕೆ ಒದಗಿಸಿತ್ತು. ಈ ದಾಖಲೆಗಳನ್ನು ಪರಿಶೀಲಿಸಿ, ಲೋಕಾಯುಕ್ತ ತನಿಖಾಧಿಕಾರಿಗಳು ‘ಬಿ’ ರಿಪೋರ್ಟ್‌ ಸಲ್ಲಿಸಿದ್ದಾರೆ. ಇ.ಡಿಯು ಈ ಪ್ರಕರಣದಲ್ಲಿ ನೊಂದ ವ್ಯಕ್ತಿಯಲ್ಲ, ಆದ್ದರಿಂದ ಈ ರೀತಿಯ ಮಧ್ಯಂತರ ಅರ್ಜಿಯನ್ನು ಸಲ್ಲಿಸಲು ಅವಕಾಶವಿಲ್ಲ,” ಎಂದು ಅವರು ಸುಪ್ರೀಂ ಕೋರ್ಟ್‌ನ ತೀರ್ಪುಗಳನ್ನು ಉಲ್ಲೇಖಿಸಿ ವಾದ ಮಂಡಿಸಿದ್ದರು.

ಅಲ್ಲದೆ, ಲೋಕಾಯುಕ್ತ  ತನಿಖಾಧಿಕಾರಿಗಳು ಎಲ್ಲಾ ದಾಖಲೆಗಳನ್ನು ಸಂಗ್ರಹಿಸಿ, ಪರಿಶೀಲನೆಯ ನಂತರವೇ ತಮ್ಮ ಅಭಿಪ್ರಾಯವನ್ನು ದಾಖಲಿಸಿದ್ದಾರೆ ಎಂದು ವಕೀಲರು ಒತ್ತಿ ಹೇಳಿದ್ದರು. “ಮೂರನೇ ವ್ಯಕ್ತಿಯಾದ ಇ.ಡಿಗೆ ಈ ವಿಷಯದಲ್ಲಿ ಹಸ್ತಕ್ಷೇಪ ಮಾಡಲು ಅವಕಾಶ ನೀಡಿದರೆ, ತನಿಖೆಯ ಪ್ರಕ್ರಿಯೆಗೆ ಸಮಸ್ಯೆಯಾಗಲಿದೆ,” ಎಂದು ಲೋಕಾಯುಕ್ತ ಪರ ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.

ಮತ್ತೊಂದೆಡೆ, ಇ.ಡಿ ಪರ ವಕೀಲರು, “ವಿಜಯ್ ಮದನ್ ಲಾಲ್ ಚೌಧರಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನ 2022ರ ತೀರ್ಪಿನಂತೆ, ಇ.ಡಿಗೆ ತನಿಖೆಯಲ್ಲಿ ಪೂರಕವಾಗಿ ಕೆಲಸ ಮಾಡಲು ಅಧಿಕಾರವಿದೆ. ಇ.ಡಿಯು ‘ಬಿ’ ವರದಿಯನ್ನು ಪ್ರಶ್ನಿಸಲು ಅರ್ಹವಾಗಿದೆ,” ಎಂದು ವಾದಿಸಿದ್ದರು. ಜೊತೆಗೆ, “ಲೋಕಾಯುಕ್ತ ಪೊಲೀಸರು ತನಿಖೆಯ ಅಂತಿಮ ವರದಿಯನ್ನು ಸಲ್ಲಿಸುವ ಮೊದಲು ದೂರುದಾರರಿಗೆ ಯಾವುದೇ ನೋಟಿಸ್ ನೀಡಿಲ್ಲ. ಇದರಿಂದ ತನಿಖೆಯಲ್ಲಿ ತೊಡಕು ಉಂಟಾಗಿದೆ,” ಎಂದು ಆಕ್ಷೇಪ ವ್ಯಕ್ತಪಡಿಸಿದ್ದರು.

ದೂರುದಾರ ಸ್ನೇಹಿಮಯಿ ಕೃಷ್ಣ ಅವರ ಪರ ವಕೀಲರು, “ಯಾವುದೇ ವ್ಯಕ್ತಿಯಿಂದ ಮಾಹಿತಿ ಪಡೆದರೆ, ಅವರನ್ನು ಸಾಕ್ಷಿಯಾಗಿ ಪರಿಗಣಿಸಬೇಕು. ಆದರೆ, ಲೋಕಾಯುಕ್ತ ಪೊಲೀಸರು ಇ.ಡಿಯ ದಾಖಲೆಗಳನ್ನು ಸರಿಯಾಗಿ ಪರಿಗಣಿಸಿಲ್ಲ,” ಎಂದು ಆರೋಪಿಸಿದ್ದರು. ಎರಡೂ ಕಡೆಯ ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಲಯವು, ಏಪ್ರಿಲ್ 16, 2025 ರಂದು ತೀರ್ಪನ್ನು ಕಾಯ್ದಿರಿಸಿತ್ತು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಹೆಚ್ಚು (3)

ಬಂಗಾರ ಖರೀದಿಸುವವರಿಗೆ ಬಿಗ್ ಶಾಕ್: ಇಂದು ಚಿನ್ನದ ಬೆಲೆ ಮತ್ತೆ ಏರಿಕೆ, ಇಲ್ಲಿದೆ ದರ ವಿವರ

by ಶಾಲಿನಿ ಕೆ. ಡಿ
August 24, 2026 - 12:41 pm
0

ChatGPT Image Aug 24, 2026, 11 37 11 AM

ಜೇಬಿನಲ್ಲೇ ಪವರ್ ಬ್ಯಾಂಕ್ ಬ್ಲಾಸ್ಟ್; ಯುವಕನಿಗೆ ಸುಟ್ಟ ಗಾಯ, ಆಸ್ಪತ್ರೆಗೆ ದಾಖಲು!

by ಶಾಲಿನಿ ಕೆ. ಡಿ
August 24, 2026 - 12:12 pm
0

ಹೆಚ್ಚು (1)

ಕರ್ನಾಟಕದಲ್ಲಿ H1N1 ಅಬ್ಬರ: ರಾಜ್ಯದಲ್ಲಿ 4,130ಕ್ಕೂ ಹೆಚ್ಚು ಪ್ರಕರಣಗಳು ಪತ್ತೆ

by ಶಾಲಿನಿ ಕೆ. ಡಿ
August 24, 2026 - 12:07 pm
0

ChatGPT Image Aug 24, 2026, 11 10 43 AM

ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳ ಆಯ್ಕೆ ವೀಕ್ಷಕರ ಕೈಯಲ್ಲಿ; ವೋಟಿಂಗ್ ಆರಂಭ

by ಶಾಲಿನಿ ಕೆ. ಡಿ
August 24, 2026 - 12:00 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಹೆಚ್ಚು (1)
    ಕರ್ನಾಟಕದಲ್ಲಿ H1N1 ಅಬ್ಬರ: ರಾಜ್ಯದಲ್ಲಿ 4,130ಕ್ಕೂ ಹೆಚ್ಚು ಪ್ರಕರಣಗಳು ಪತ್ತೆ
    August 24, 2026 | 0
  • ಮುನ್ಸೂಚನೆ (7)
    ವಿಧಾನಸೌಧದ ಎದುರು BJP ಪ್ರೊಟೆಸ್ಟ್: ಬಿಜೆಪಿ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು
    August 24, 2026 | 0
  • ಮುನ್ಸೂಚನೆ (5)
    ನಕಲಿ ಔಷಧಿ ಮಾಫಿಯಾ ವಿರುದ್ಧ SIT ಆಪರೇಷನ್; ಮೆಡಿಕಲ್ ಶಾಪ್ ಮಾಲೀಕರಿಗೆ ನೋಟಿಸ್
    August 24, 2026 | 0
  • ಮುನ್ಸೂಚನೆ (3)
    ಕಾವೇರಿ ನೀರು ಹಂಚಿಕೆ ವಿವಾದ: ಇಂದು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ
    August 24, 2026 | 0
  • ಮುನ್ಸೂಚನೆ (1)
    ಪತಿಯನ್ನು ಹ*ತ್ಯೆಗೈದು ಹೊಟ್ಟೆ ಸೀಳಿ ಕರುಳು ಹೊರತೆಗೆದ ಪತ್ನಿ: ಸಿಕ್ಕಿಬೀಳುವ ಭಯದಲ್ಲಿ ಕಟ್ಟಡದಿಂದ ಜಂಪ್‌!
    August 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version